ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಡೆಂಗ್ಯೂ ಜ್ವರಕ್ಕೆ (Dengue Fever) ಮಹಿಳೆಯೊಬ್ಬರು ಬಲಿ ಆಗಿದ್ದಾರೆ. ತಾಳಗುಪ್ಪದ ಮಧುರಾ (31) ಮೃತ ದುರ್ದೈವಿ.
ಮಧುರಾಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸೋಂಕಿನಿಂದ ಪ್ಲೇಟ್ ಲೆಟ್ ಕಡಿಮೆ ಆಗಿದ್ದು ಚಿಕಿತ್ಸೆ ಸ್ಪಂದಿಸದೇ ಮೃತಪಟ್ಟಿದ್ದಾರೆ. 5 ತಿಂಗಳ ಹಿಂದೆಯಷ್ಟೇ ಮಧುರಾ ವಿವಾಹವಾಗಿದ್ದರು. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಡೆಂಗ್ಯೂ ಹೇಗೆ ಹರಡುತ್ತದೆ?
ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ- ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಒಳ್ಳೆಯದು.
ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಆದರೆ, ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ