Site icon Vistara News

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

mantralaya mutt

ರಾಯಚೂರು: ದೇವಾಲಯಗಳಿಗೆ ನಗದು, ಚಿನ್ನಾಭರಣ ಕಾಣಿಕೆಯಾಗಿ ಕೊಡುವ ಭಕ್ತರನ್ನು ಎಲ್ಲೆಡೆ ಕಾಣುತ್ತೇವೆ. ಆದರೆ, ಇಲ್ಲೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹೆಲಿಕಾಪ್ಟರ್‌ ಕೊಡುಗೆ ನೀಡಲು ಮುಂದಾಗಿದ್ದಾರೆ.

ರಾಮನಗರದ ಶ್ರೀ ಫೌಂಡೇಶನ್‌ ಸಂಸ್ಥಾಪಕ ಸುರೇಶ್‌ ಅವರು ಮಂತ್ರಾಲಯ ಮಠದ ಪೀಠಾಧಿಪತಿ ಡಾ. ಸುಬುಧೇಂದ್ರ ತೀರ್ಥರಿಗೆ ಹೆಲಿಕಾಪ್ಟರ್‌ ನೀಡುವುದಾಗಿ ತಿಳಿಸಿದ್ದು, ಶೀಘ್ರದಲ್ಲೇ ಹೆಲಿಪ್ಯಾಡ್‌ ಕಾಮಗಾರಿ ಆರಂಭಿಸಲಾಗುತ್ತದೆ. ಕಾಮಗಾರಿ ಪೂರ್ಣಗೊಂಡರೆ ಸಂಕ್ರಾಂತಿ ಹಬ್ಬಕ್ಕೆ ಮಂತ್ರಾಲಯದ ಶ್ರೀಗಳಿಗೆ ಹೆಲಿಕಾಪ್ಟರ್ ಹಸ್ತಾಂತರಿಸುವ ಪ್ರಯತ್ನ ಮಾಡಲಾಗುತ್ತದೆ. ಈ ಬಗ್ಗೆ ಶ್ರೀಗಳೊಂದಿಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ.

ಇನ್ನು ಬೆಂಗಳೂರಿನಿಂದ 50 ಕಿ.ಮೀ ದೂರದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ 253 ಅಡಿ ಎತ್ತರದ ರಾಘವೇಂದ್ರ ಸ್ವಾಮಿ ವಿಗ್ರಹ ನಿರ್ಮಿಸಲಾಗುತ್ತಿದೆ. ಡಿಸೆಂಬ‌ರ್‌ನಲ್ಲಿ ಸುಬುದೇಂದ್ರ ತೀರ್ಥರು ಮೂರ್ತಿ ಪ್ರತಿಷ್ಠಾಪನೆಗೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | ಧವಳ ಧಾರಿಣಿ ಅಂಕಣ: ಸೀತಾಪಹಾರದ ಹಿಂದಿನ ಕುತೂಹಲಕಾರಿ ವಿಷಯಗಳು

ಶಬರಿಮಲೆ ಯಾತ್ರಿಕರಿಗೆ KSRTC ವಿಶೇಷ ಬಸ್‌ ಸೇವೆ, ಬುಕಿಂಗ್‌ ಹೇಗೆ?

Shabarimale yatre KSRTC BUS

ಬೆಂಗಳೂರು: ಡಿಸೆಂಬರ್‌ ಆರಂಭವಾಗುತ್ತಿದ್ದಂತೆಯೇ ಕೇರಳದ ಪುಣ್ಯ ಕ್ಷೇತ್ರ ಶಬರಿಮಲೆಗೆ (Shabarimale yatre) ಹೋಗುವ ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಯಾತ್ರಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ವ್ಯವಸ್ಥೆಯನ್ನು ಮಾಡಲು ಮುಂದಾಗಿದೆ. ಡಿಸೆಂಬರ್‌ 1ರಿಂದ ವಿಶೇಷ ಬಸ್‌ ಸೌಲಭ್ಯವನ್ನು (Special bus Service) ಒದಗಿಸಲಾಗುತ್ತಿದ್ದು, ಯಾತ್ರಾರ್ಥಿಗಳು ಇದನ್ನು ಉಪಯೋಗ ಮಾಡಿಕೊಳ್ಳಬಹುದು (Shabarimale Bus) ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಡಿಸೆಂಬರ್‌ 1ರಿಂದ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಕಾರ್ಯಾಚರಣೆ ನಡೆಸಲಿದೆ. ಬೆಂಗಳೂರಿಂದ ನೀಲಕ್ಕಲ್ (ಪಂಪಾ, ಶಬರಿಮಲೈ) ಮಾರ್ಗವಾಗಿ ವೋಲ್ವೋ ಮತ್ತು ರಾಜಹಂಸ ಬಸ್ ಸಂಚರಿಸಲಿದೆ ಎಂದು ತಿಳಿಸಿರುವ ಕೆ.ಎಸ್‌.ಆರ್‌.ಟಿ.ಸಿಯು ವೋಲ್ವೊ ಬಸ್​​ನ ಟಿಕೆಟ್ ದರ, ಮಾರ್ಗ, ಸಂಚಾರದ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ದರ ಎಷ್ಟು, ಯಾವ ಹೊತ್ತಿಗೆ ಹೊರಡುತ್ತದೆ?

ಕೆ.ಎಸ್‌.ಆರ್‌.ಟಿಸಿ ವೋಲ್ವೋ ಬಸ್‌ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಹೊರಡಲಿದೆ. ಮರುದಿನ ಬೆಳಿಗ್ಗೆ 6.45ಕ್ಕೆ ಪಂಪಾ ತಲುಪಲಿದೆ. ಅದೇ ದಿನ ಸಂಜೆ ಪಂಪಾದಿಂದ ಹೊರಟು ಮರುದಿನ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ವೋಲ್ವೋ ಬಸ್‌ನಲ್ಲಿ ಒಂದು ಟಿಕೆಟ್‌ನ ದರ 1600 ರೂ. ಆಗಿರುತ್ತದೆ.

ರಾಜಹಂಸ ಬಸ್ (ನಾನ್‌ಎಸಿ) ಬಸ್‌ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 8.15ಕ್ಕೆ ಪಂಪಾ ತಲುಪಲಿದೆ. ಆ ದಿನ ಸಂಜೆ 5 ಗಂಟೆಗೆ ಪಂಪಾದಿಂದ ಹೊರಟು ಮರುದಿನ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ. ರಾಜಹಂಸದಲ್ಲಿ ಬೆಂಗಳೂರಿನಿಂದ ಶಬರಿಮಲೆಗೆ ಪ್ರತಿ ಟಿಕೆಟ್ ಬೆಲೆ 940 ರೂ. ಆಗಿದೆ.

ಡಿಸೆಂಬರ್‌ ತಿಂಗಳಲ್ಲಿ ಶಬರಿಮಲೆ ಸನ್ನಿಧಿಯಲ್ಲಿ ಮಂಡಲೋತ್ಸವ ನಡೆಯಲಿದ್ದು, ಆ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಯಾತ್ರಿಕರು ಶಬರಿಮಲೆಗೆ ಭೇಟಿ ನೀಡುತ್ತಾರೆ. ಆ ಬಳಿಕ ಜನವರಿ 14ರಂದು ಮಕರ ವಿಳಕ್ಕು (ಮಕರ ಜ್ಯೋತಿ) ನಡೆಯುತ್ತದೆ. ಆ ಸಂದರ್ಭದಲ್ಲಿ 48 ದಿನಗಳ ಕಾಲ ಮಾಲಾ ಧಾರಣೆ ಮಾಡಿ ವ್ರತಧಾರಿಗಳಾದ ಭಕ್ತರು ದೇವರ ದರ್ಶನಕ್ಕೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಹೊಸ ಬಸ್‌ ಸೇವೆ ಅನುಕೂಲಕರವಾಗಲಿದೆ.

ಇದನ್ನೂ ಓದಿ : Shobha Karandlaje: ಶಬರಿಮಲೆಗೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಬಸ್​ ಟಿಕೆಟ್ ಬುಕಿಂಗ್ ಹೇಗೆ?

ಶಬರಿಮಲೆಗೆ ಹೋಗುವ ಬಸ್‌ಗಳ ಬುಕಿಂಗ್‌ನ್ನು ಕೆಎಸ್​ಆರ್​ಟಿಸಿ ಅಧಿಕೃತ ವೆಬ್​ಸೈಟ್ (www.ksrtc.in) ಮೂಲಕ ಮಾಡಬಹುದು. ಅದಲ್ಲದೆ ಎಲ್ಲಾ ಜಿಲ್ಲಾ ಮತ್ತು ತಾಲೂಕು ಮಟ್ಟದ ಕೆಎಸ್‌ಆರ್‌ಟಿಸಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ಕರ್ನಾಟಕ ರಾಜ್ಯದಾದ್ಯಂತ ಮತ್ತು ನೆರೆಯ ರಾಜ್ಯಗಳ ಪ್ರಮುಖ ಕಡೆಗಳಲ್ಲಿ ಒಟ್ಟು 707 ಟಿಕೆಟ್ ಕೌಂಟರ್‌ಗಳು ಇವೆ.

Exit mobile version