ಬೆಂಗಳೂರು: ಪೊಲೀಸ್ ಸಿಬ್ಬಂದಿ ಸುರಕ್ಷತೆಯ ದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖೆಗಳಿಗೆ ಹೋಗುವ ಸಿಬ್ಬಂದಿ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರಯಾಣ ಮಾಡದಂತೆ ಡಿಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಆಂಧ್ರಪ್ರದೇಶದ ಚಿತ್ತೂರು ಬಳಿ ನಡೆದ ಅಪಘಾತದಲ್ಲಿ ಸಬ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್ ಸೇರಿ ಮೂವರು ಮೃತಪಟ್ಟಿದ್ದರು. ಹೀಗಾಗಿ ಸಿಬ್ಬಂದಿ ಸುರಕ್ಷತೆ ದೃಷ್ಟಿಯಿಂದ ಪೊಲೀಸ್ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, ಕರ್ತವ್ಯದ ಸಂದರ್ಭದಲ್ಲಿ ಅಥವಾ ಕರ್ತವ್ಯ ಮುಗಿದ ಮೇಲೆಯೂ ರಾತ್ರಿ ವೇಳೆ ಪ್ರಯಾಣಿಸಬಾರದು ಎಂದು ಸೂಚಿಸಿದ್ದಾರೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಮಾಹಿತಿ ಪ್ರಕಾರ ದೇಶದಲ್ಲಿ 2021ರಲ್ಲಿ ವಿವಿಧ ದರ್ಜೆಯ 427 ಪೊಲೀಸ್ ಅಧಿಕಾರಿ, ಸಿಬ್ಬಂದಿ ರಾತ್ರಿ ಪ್ರಯಾಣದ ವೇಳೆಯಲ್ಲಿ ಅಪಘಾತಗಳಿಂದಾಗಿ ಮೃತಪಟ್ಟಿದ್ದು, ಕರ್ನಾಟಕದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. 25 ಮಂದಿ ರಾತ್ರಿ ಕರ್ತವ್ಯದ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಗಾಯಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರ ಹಿತದೃಷಷ್ಟಿಯಿಂದ ರಾತ್ರಿ ಪ್ರಯಾಣ ನಿರ್ಬಂಧಿಸಿ, ಪೊಲೀಸ್ ಇಲಾಖೆಯಿಂದ ಆದೇಶಿಸಲಾಗಿದೆ.
ಇದನ್ನೂ ಓದಿ | ಮಾತೃಭಾಷೆ ಉಳಿಸಲು ಪ್ರತಿಯೊಬ್ಬ ಕನ್ನಡಿಗನೂ ರಾಯಭಾರಿಯಾಗಲಿ ಎಂದ ಡಾ.ಮಹೇಶ ಜೋಶಿ