Site icon Vistara News

ಚುನಾವಣಾ ಹೊಸ್ತಿಲಲ್ಲಿ ಮಂಗಳೂರಲ್ಲಿ ಮತ್ತೆ ಧರ್ಮ ದಂಗಲ್;‌ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

Dharmangal again in Mangaluru on the eve of elections Ban on Muslim traders at Bappanadu Durgaparameshwari fair

ಮಂಗಳೂರು: ವಿಧಾನಸಭಾ ಚುನಾವಣಾ (Karnataka Election 2023) ಹೊಸ್ತಿಲಲ್ಲಿ ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗಿದೆ. ಮುಸ್ಲಿಂ ವ್ಯಕ್ತಿಯೇ ನಿರ್ಮಿಸಿದ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಮಾಡಲಾಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಇತಿಹಾಸ ಪ್ರಸಿದ್ಧ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಈಗ ಧರ್ಮದ ಕಾದಾಟ ಆರಂಭವಾಗಿದೆ.

800 ವರ್ಷಗಳ ಇತಿಹಾಸವಿರುವ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯನ್ನು ನಡೆಸಲಾಗುತ್ತಿದ್ದು, ಏಪ್ರಿಲ್‌ 12ರಂದು ರಥೋತ್ಸವ ಬಳಿಕ ಜಾತ್ರೆ ಕೊನೆಗೊಳ್ಳಲಿದೆ. ಇಲ್ಲಿ ಈಗ ಮುಸ್ಲಿಂ ವ್ಯಾಪಾರಿಗಳಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ. ಹಿಜಾಬ್ ಗಲಾಟೆ ಬಳಿಕ ಬಪ್ಪನಾಡು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ.

Dharmangal again in Mangaluru on the eve of elections Ban on Muslim traders at Bappanadu Durgaparameshwari fair

ಇದನ್ನೂ ಓದಿ: Modi in Karnataka: ಬಂಡೀಪುರ ಕಾಡಲ್ಲಿ 22 ಕೀ.ಮೀ. ದೂರ 2 ಗಂಟೆ ಸುತ್ತಿದರೂ ಮೋದಿಗೆ ಕಾಣದ ಹುಲಿ!

ಈ ಬಾರಿಯೂ ಮುಜರಾಯಿ ಇಲಾಖೆಯ ಆದೇಶ ಮುಂದಿಟ್ಟಿರುವ ದೇವಸ್ಥಾನದ ಆಡಳಿತ ಮಂಡಳಿಯು ವ್ಯಾಪಾರವನ್ನು ನಿಷೇಧ ಮಾಡಿದೆ. ಜಾತ್ರೋತ್ಸವದ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಲ್ಲಿಗೆಯು ಮಾರಾಟವಾಗುತ್ತದೆ.

ಈ ಹಿಂದೆ ಹಿಂದು-ಮುಸ್ಲಿಂ ವ್ಯಾಪಾರಿಗಳು ಒಟ್ಟಿಗೆ ವ್ಯಾಪಾರವನ್ನು ಮಾಡುತ್ತಿದ್ದರು. ಆದರೆ ಹಿಜಾಬ್ ಗಲಾಟೆಯ ಬಳಿಕ ಸಹಬಾಳ್ವೆಯಲ್ಲಿ ಬಿರುಕು ಮೂಡಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಜಾತ್ರೋತ್ಸವದ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ.

ಖಾಸಗಿ ಜಮೀನಿನಲ್ಲಿ ಮುಸ್ಲಿಮರಿಂದ ವ್ಯಾಪಾರ

ಆದರೆ, ದೇವಸ್ಥಾನದ ಪಕ್ಕದ ಖಾಸಗಿ ಜಮೀನಿನಲ್ಲಿ ವ್ಯಾಪಾರಕ್ಕೆ ನಿರ್ಬಂಧವನ್ನು ವಿಧಿಸಲಾಗಿಲ್ಲ. ಅಲ್ಲಿ ಬೇಕಿದ್ದರೆ ವ್ಯಾಪಾರವನ್ನು ಮಾಡಿಕೊಳ್ಳಲು ಅವಕಾಶವಿರುವುದರಿಂದ ಖಸಾಗಿ ಜಮೀನಿನಲ್ಲಿ ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಹಾಕಲಿದ್ದಾರೆ. ಅಲ್ಲಿ ಯಾರು ಬೇಕಾದರೂ ಖರೀದಿ ಮಾಡಬಹುದಾಗಿದೆ.

ಜನವರಿಯಲ್ಲಿ ಕಾವೂರು ಜಾತ್ರೆಗೂ ತಟ್ಟಿದ್ದ ಬಿಸಿ

ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಜನವರಿಯಲ್ಲಿ ವ್ಯಾಪಾರಿ ಧರ್ಮ ದಂಗಲ್ (Dharma Dangal‌) ಪ್ರಾರಂಭವಾಗಿತ್ತು. ದೇವಸ್ಥಾನದಲ್ಲಿ ಅನ್ಯಧರ್ಮೀಯರ ವ್ಯಾಪಾರವನ್ನು ಬಹಿಷ್ಕರಿಸಿ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಮಂಗಳೂರಿನ ಕಾವೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಪ್ರವೇಶ ನಿರ್ಬಂಧಿಸಿ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ದೇವಸ್ಥಾನದ ಆಡಳಿತ ಮಂಡಳಿ ಅನುಮತಿ ಪಡೆದು ವಿಎಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು ಬ್ಯಾನರ್ ಹಾಕಿದ್ದರು.

ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಗಳಲ್ಲಿ ವಿಶ್ವಾಸವುಳ್ಳ ಹಿಂದು ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಿಕೊಳ್ಳಲಾಗಿತ್ತು. ವಿಗ್ರಹಾರಾಧನೆ ಹರಾಂ ಎಂದು ನಂಬಿದ ಯಾರಿಗೂ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬ್ಯಾನರ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: Modi in Karnataka: ನಮ್ಮ ಸಂಸ್ಕೃತಿಯಲ್ಲೇ ಪ್ರಕೃತಿ ಸಂರಕ್ಷಣೆಯ ಭಾವವಿದೆ: ಹುಲಿ ಸಂರಕ್ಷಣೆ ಸುವರ್ಣ ಸಂಭ್ರಮದಲ್ಲಿ ಪ್ರಧಾನಿ ಮೋದಿ ಮಾತು

ಈ ಜಾತ್ರಾ ಮಹೋತ್ಸವದಲ್ಲಿ ಹಲವು ವರ್ಷಗಳಿಂದ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಾ ಬಂದಿದ್ದರು. ಆದರೆ, ಬಜರಂಗದಳದ ಕಾರ್ಯಕರ್ತರಿಗೆ ಸ್ಟಾಲ್‌ಗಳ ನಿರ್ವಹಣೆ ಉಸ್ತುವಾರಿಯನ್ನು ಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಡೆದಿದ್ದ ದೇವಸ್ಥಾನದ ಆಡಳಿತ ಮಂಡಳಿ ಸಭೆಯಲ್ಲೇ ವ್ಯಾಪಾರ ಬಹಿಷ್ಕಾರದ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.

Exit mobile version