Site icon Vistara News

NEP Scrap: ಮಕ್ಕಳ ಭವಿಷ್ಯದ ಕುರಿತು ಚೆಲ್ಲಾಟ ಬೇಡ! ಕಾಂಗ್ರೆಸ್ ನಾಯಕರ ವಿರುದ್ದ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

31 percent increase in school enrollment of girls since 2014, Center informed to rajya Sabha

ನವದೆಹಲಿ: ಕರ್ನಾಟಕದಲ್ಲಿ (Karnataka State) ಮುಂದಿನ ಶೈಕ್ಷಣಿಕ ವರ್ಷದಿಂದ (Academic Year) ರಾಷ್ಟ್ರೀಯ ಶಿಕ್ಷಣ ನೀತಿ (National Education Policy – NEP)ಯನ್ನು ರದ್ದು ಮಾಡಲಾಗುತ್ತಿದೆ ಎಂದು ಸರ್ಕಾರ (Government of Karnataka) ಘೋಷಣೆ ಮಾಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Union Education Minister Dharmendra Pradhan) ಅವರು, ರಾಜ್ಯದ ಈ ನಿರ್ಧಾರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡಬೇಡಿ ಎಂದು ಧರ್ಮೇಂದ್ರ ಪ್ರಧಾನ್ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ತಿವಿದಿದ್ದಾರೆ. ಕರ್ನಾಟಕದ ಡಿಸಿಎಂ ಡಿ ಕೆ ಶಿವಕುಮಾರ್ (DCM D K Shivakumar) ವಿರುದ್ದ ಹರಿಹಾಯ್ದ ಪ್ರಧಾನ್ ಅವರು, ಎನ್ಇಪಿ ರದ್ದು (NEP Scrap) ಪಡಿಸುವ ಮಾತುಗಳನ್ನು ಒಪ್ಪಲಾಗುವುದಿಲ್ಲ. ಡಿ ಕೆ ಶಿವಕುಮಾರ್ ಮಾತುಗಳು ರಾಜಕಾರಣದಿಂದ ಕೂಡಿವೆ. ಅವರ ನೀತಿ ಭವಿಷ್ಯದೆಡೆಗೆ ನೋಡುವುದಿಲ್ಲ ಎಂದು ಹೇಳಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ಟ್ವೀಟ್

ರಾಷ್ಟ್ರೀಯ ಶಿಕ್ಷಣ ನೀತಿಯು ದೂರದೃಷ್ಟಿಯ ತಾತ್ವಿಕ ದಾಖಲೆಯಾಗಿದೆ ಮತ್ತು ದೇಶದ ಶಿಕ್ಷಣತಜ್ಞರು ಇದನ್ನು ರೂಪಿಸಿದ್ದಾರೆ. ಇದು ರಾಜಕೀಯ ದಾಖಲೆಯಲ್ಲ, 21 ನೇ ಶತಮಾನದ ತಾತ್ವಿಕ ದಾಖಲೆಯಾಗಿದೆ. ಎನ್ಇಪಿ ರದ್ದು ಮಾಡುವ ಹೇಳಿಕೆ ನೀಡುತ್ತಿರುವ ಡಿ ಕೆ ಶಿವಕುಮಾರ್ ಅವರು ದೇಶದ ಯುವಕರಿಗೆ ಯಾವ ಸಂದೇಶವನ್ನು ನೀಡುತ್ತಿದ್ದಾರೆ. ಅವರು ಯಾವ ರೀತಿಯ ರಾಜಕಾರಣ ಮಾಡುತ್ತಿದ್ದಾರೆ. ಬಾಲ್ಯದ ಶಿಕ್ಷಣ ಮತ್ತು ಆರೈಕೆ ವ್ಯವಸ್ಥೆಯನ್ನು ಕರ್ನಾಟಕದಲ್ಲಿ 3 ವರ್ಷದಿಂದ ಜಾರಿಗೆ ತರಲು ಅವರು ಬಯಸುವುದಿಲ್ಲವೇ? ಅವರು ಭಾರತೀಯ ಆಟಿಕೆಗಳು, ಆಟಗಳು ಮತ್ತು ನಮ್ಮ ಮಕ್ಕಳ ಆಟದ ಆಧಾರಿತ ಕಲಿಕೆಯ ಸ್ಥಳೀಕರಣವನ್ನು ಬಯಸುವುದಿಲ್ಲವೇ? ಕರ್ನಾಟಕದ ವಿದ್ಯಾರ್ಥಿಗಳ ಶಿಕ್ಷಣದ ಆರಂಭಿಕ ಹಂತದಲ್ಲಿ ಪ್ರಾದೇಶಿಕ ಚನ್ನಮ್ಮಳ ನಾಟಕಗಳನ್ನು ಕಲಿಸಲು ಬಯಸುವುದಿಲ್ಲವೇ ಎಂದು ಪ್ರಶ್ನಿಸಿದರು.

ಶಿವಕುಮಾರ್ ಹೇಳಿಕೆ ಕೇವಲ ರಾಜಕೀಯ ಹೇಳಿಕೆಯಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ರಾಜಕೀಯ ಮಾಡಲು ಹೋಗಬಾರದು. ರಾಷ್ಟ್ರೀಯ ಶಿಕ್ಷಣ ನೀತಿಯು ನಮ್ಮ ಮಕ್ಕಳನ್ನು ಜಾಗತಿಕ ಸ್ಪರ್ಧಾತ್ಮಕತೆಗೆ ಪ್ರೇರೇಪಿಸುತ್ತದೆ. ನಮ್ಮ ಮಕ್ಕಳು ಭವಿಷ್ಯದೆಡೆಗೆ ಇದು ಉತ್ತಮ ಹೆಜ್ಜೆಯಾಗಿದೆ. ಎನ್‌ಪಿಇ ರದ್ದು ಮಾಡುತ್ತೇನೆ ಎನ್ನುವ ಮೂಲಕ ಡಿ ಕೆ ಶಿವಕುಮಾರ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಧರ್ಮೇಂದ್ರ ಪ್ರಧಾನ್ ಅವರು ಟೀಕಿಸಿದರು.

ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (National Education Policy – NEP) ಅಧಿಕೃತವಾಗಿ ರದ್ದು ಮಾಡುವ ತೀರ್ಮಾನವನ್ನು ರಾಜ್ಯ ಸರ್ಕಾರ ಸೋಮವಾರ (ಆಗಸ್ಟ್‌ 21) ಪ್ರಕಟಿಸಿದೆ. ಅಲ್ಲದೆ, ನೂತನ ರಾಜ್ಯ ಶಿಕ್ಷಣ ನೀತಿಯನ್ನು (State Education Policy -SEP) ಕರ್ನಾಟಕದಲ್ಲಿ ಅಳವಡಿಸುವುದಾಗಿಯೂ ಘೋಷಣೆ ಮಾಡಿದೆ. ಆದರೆ, ರಾಜ್ಯ ಶಿಕ್ಷಣ ನೀತಿಯು ಸಿಬಿಎಸ್‌ಇ, ಐಸಿಎಸ್‌ಇ ಬೋರ್ಡ್‌ಗೆ (CBSE, ICSE Board)ಅನ್ವಯ ಆಗುವುದಿಲ್ಲ. ಅದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಅದರಲ್ಲಿ ಯಾವುದೇ ಹಸ್ತಕ್ಷೇಪ ಮಾಡಲು ರಾಜ್ಯಕ್ಕೆ ಅಧಿಕಾರ ಇಲ್ಲ. ಇದರ ಜತೆಗೆ ಕೇಂದ್ರೀಯ ವಿವಿಗಳು, ಖಾಸಗಿ ವಿವಿಗಳಿಗೂ ಈ ನೀತಿ ಅನ್ವಯ ಆಗುವುದಿಲ್ಲ. ಹಾಗಾಗಿ ನೂತನ ಶೈಕ್ಷಣಿಕ ನೀತಿ (Education Policy) ಬಗ್ಗೆ ಎಲ್ಲರೂ ಭಯ ಬೀಳಬೇಕಿಲ್ಲ.

ಈ ಸುದ್ದಿಯನ್ನೂ ಓದಿ: New Education Policy: ಕರ್ನಾಟಕಕ್ಕೆ ಪ್ರತ್ಯೇಕ ಶಿಕ್ಷಣ ನೀತಿ: ಎನ್‌ಇಪಿ ತಿರಸ್ಕಾರ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್‌

ಈ ಬಗ್ಗೆ ರಾಜ್ಯ ಸರ್ಕಾರ ಸಹ ಸ್ಪಷ್ಟವಾಗಿ ಹೇಳಿದೆ. ಉನ್ನತ ಶಿಕ್ಷಣ ಸಚಿವ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನಮ್ಮ ರಾಜ್ಯದಲ್ಲಿ ಎನ್ಇಪಿ ಅನ್ನು ಅಳವಡಿಕೆ ಮಾಡುವುದಿಲ್ಲ. ಈಗ ಇರುವ ವ್ಯವಸ್ಥೆಯನ್ನು ರದ್ದು ಮಾಡುತ್ತಿದ್ದೇವೆ. ಇದರಿಂದ ಅನುಕೂಲಕ್ಕಿಂತ ತೊಂದರೆಯೇ ಹೆಚ್ಚಾಗಿದೆ. ಹಾಗಾಗಿ ಈಗಾಗಲೇ ರಾಜ್ಯ ಶಿಕ್ಷಣ ನೀತಿ ಅಳವಡಿಕೆಗೆ ಸಮಿತಿ ರಚನೆಗೆ ಸೂಚನೆ ನೀಡಲಾಗಿದ್ದು, ಇನ್ನೊಂದು ವಾರದಲ್ಲಿ ರಚನೆಯಾಗಲಿದೆ. ಆದರೆ, ರಾಜ್ಯ ಶಿಕ್ಷಣ ನೀತಿಯು ಸಿಬಿಎಸ್‌ಇ, ಐಸಿಎಸ್‌ಇ ಬೋರ್ಡ್‌ಗೆ ಅನ್ವಯ ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version