ಧಾರವಾಡ: ಗಂಟಲಿನಲ್ಲಿ ಒಂದು ರೂಪಾಯಿ ನಾಣ್ಯ ಸಿಲುಕಿ 2 ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದ ಕೋಳಿಕೇರಿ ಬಡಾವಣೆಯಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು ಬಾಯಿಗೆ ಹಾಕಿಕೊಂಡಿದ್ದ ಮಗು, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದೆ.
ನಗರದ ಕೋಳಿಕೇರಿ ಬಡಾವಣೆಯ ಮಹ್ಮದ ಜುಬೇರ್ ಸಾಲಿ (2) ಮೃತ ಮಗು. ಆಟವಾಡುತ್ತಿದ್ದಾಗ ಬಾಯಿಯಲ್ಲಿ ಒಂದು ರೂಪಾಯಿ ನಾಣ್ಯ ಹಾಕಿಕೊಂಡಿದೆ. ಅದು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಮಗು ಒದ್ದಾಡುತ್ತಿದ್ದದ್ದನ್ನು ಕಂಡು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದಲ್ಲಿ Big breaking; ಬಳ್ಳಾರಿಯ ಶಬ್ಬೀರ್ NIA ವಶಕ್ಕೆ
ಕೊಡಗಿನಲ್ಲಿ ಆನೆ ದಾಳಿಗೆ ಮತ್ತೊಂದು ಬಲಿ, ಕಾಫಿ ತೋಟದಲ್ಲಿ ಮಹಿಳೆ ದಾರುಣ ಸಾವು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ (Kodagu News) ಆನೆ ದಾಳಿಗೆ (Elephant Attack) ಮತ್ತೊಂದು ಸಾವು ಸಂಭವಿಸಿದೆ. ಜಿಲ್ಲೆ ಹಲವು ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿಯಿಂದ ಜನರು ಕಂಗಾಲಾಗಿರುವ ನಡುವೆಯೇ ಕಾಫಿ ತೋಟದಲ್ಲಿ (Coffee Plantation) ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಆನೆ ಬಲಿ ಪಡೆದಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಚೆನ್ನಂಗಿ ಬಳಿಯ ಅಬ್ಬೂರು ಗ್ರಾಮದ ಬೀಚ್ ಲ್ಯಾಂಡ್ ಕಾಫಿ ತೋಟಕ್ಕೆ ನುಗ್ಗಿದ ಆನೆ ಅಸ್ಸಾಂ ಮೂಲದ ಮಹಿಳೆ (Woman from Assam dead) ಅಜಬಾನು(37) ಎಂಬವರ ಮೇಲೆ ದಾಳಿ ಮಾಡಿದೆ. ಅಜಬಾನು ಅವರು ಇತರ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸುತ್ತಿದ್ದರು. ಆಗ ಆನೆ ದಾಳಿ ಮಾಡಿದೆ. ದಾಳಿ ಮಾಡಿದಾಗ ಅಜಬಾನು ಆನೆಯ ದಾಳಿಗೆ ಸಿಲುಕಿದ್ದಾರೆ. ದಾಳಿ ಮಾಡಿದ ಆನೆ ಬಳಿಕ ಅಲ್ಲಿಂದ ಹೋಗಿದೆ.
ಕೂಡಲೇ ಗಾಯಾಳು ಮಹಿಳೆಯನ್ನು ಪಾಲಿಬೆಟ್ಟ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಅವರು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಹಿಳೆ ಸಾವನ್ನಪ್ಪುತ್ತಿದ್ದಂತೆಯೇ ಅಲ್ಲಿನ ಜನರು ಆಕ್ರೋಶಿತರಾಗಿದ್ದಾರೆ. ಆನೆಗಳು ನಿರಂತರ ದಾಳಿ ನಡೆಸಿ ಪ್ರಾಣಗಳನ್ನೇ ಕಿತ್ತುಕೊಳ್ಳುತ್ತಿದ್ದರೂ ಅರಣ್ಯ ಇಲಾಖೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | Inhuman Behaviour : ಹಣಕ್ಕಾಗಿ ರಾಕ್ಷಸಿ ಕೃತ್ಯ; ಬಾಲಕಿಯ ತೊಡೆಗೆ ಇಸ್ತ್ರಿ ಪೆಟ್ಟಿಗೆ ಇಟ್ಟು ಸುಟ್ಟ ದೊಡ್ಡಮ್ಮ
ಪಾಲಿಬೆಟ್ಟ ಆಸ್ಪತ್ರೆ ಮುಂದೆ ಜಮಾಯಿಸಿರುವ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದ್ದಾರೆ.
ಆಗರ ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು
ಬೆಂಗಳೂರು: ನಗರದ ಹೊರವಲಯದ ತಾತಗುಣಿ ಬಳಿಯ ಆಗರ ಕೆರೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ (Drown In Lake) ಮೃತಪಟ್ಟಿದ್ದಾರೆ. ಸ್ನೇಹಿತರ ಜತೆ ಈಜಲು ತೆರಳಿದ್ದಾಗ ದುರ್ಘಟನೆ ನಡೆದಿದೆ.
ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಾದ ಪೃಥ್ವಿರಾಜ್, ನವೀನ್ ಮೃತರು. ಇವರು ದೊಡ್ಡಬೆಲೆ ಮೂಲದವರು ಎನ್ನಲಾಗಿದ್ದು, ಒಟ್ಟು 11 ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ತೆರಳಿದ್ದಾಗ, ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ.
ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಮತ್ತು ಅಗ್ನಿ ಶಾಮಕ ದಳ ಆಗಮಿಸಿ ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.