ಧಾರವಾಡ
Amit Shah : ಕಾಂಗ್ರೆಸ್ ಹಿಡಿತದಲ್ಲಿರುವ ಕುಂದಗೋಳದಲ್ಲಿ ಅಮಿತ್ ಶಾ ರೋಡ್ ಶೋ: ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ
ಕೆಎಲ್‌ಇ ಸೊಸೈಟಿಯ ಬಿ.ವಿ. ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ಅಮೃತಮಹೋತ್ಸವದಲ್ಲಿ ಭಾಗವಹಿಸಿದ ನಂತರ ಕುಂದಗೋಳದ ರಥಯಾತ್ರೆಯಲ್ಲಿ ಅಮಿತ್ ಶಾ ಪಾಲ್ಗೊಂಡರು.
ಕುಂದಗೋಳ: ಕಾಂಗ್ರೆಸ್ ಶಾಸಕರನ್ನು ಹೊಂದಿರುವ ಧಾರವಾಡದ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಒಂದು ಕಿಲೋಮೀಟರ್ ರಥಯಾತ್ರೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಿದರು.
ವಿಶೇಷವಾಗಿ ಅಲಂಕರಿಸಲಾಗಿದ್ದ ರಥವನ್ನೇರಿದ ಅಮಿತ್ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಪ್ರಭಾರಿ ಅರುಣ್ ಸಿಂಗ್ ಸಾಥ್ ನೀಡಿದರು.
ರೋಡ್ ಶೋ ನಡೆದ ನಡೆಸುತ್ತಿರುವ ಮಾರ್ಗದಲ್ಲಿ ಪೊಲೀಸರ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪ್ರವಾಸಿ ಮಂದಿರದ ಬಳಿಯಿಂದ ಗಾಳಿ ಮಾರೆಮ್ಮ ದೇವಸ್ಥಾನದವರೆಗೆ ರೋಡ್ ಷೋ ನಡೆಯಿತು. ರಸ್ತೆಯುದ್ದಕ್ಕೂ ಬಿಜೆಪಿ ಧ್ವಜ, ಕೇಸರಿ ಬಂಟಿಂಗ್ ಕಟ್ಟಿದ್ದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ರಸ್ತೆಯ ಇಕ್ಕೆಲಗಳಲ್ಲೂ ನಿಂತು ಸಾರ್ವಜನಿಕರು ಕೈಬೀಸಿದರು.
ರೋಡ್ ಶೋ ನಂತರ ಮಾತನಾಡಿದ ಅಮಿತ್ ಶಾ, ದೇಶದಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಿದ್ದೇವೆ. ಕಾಶ್ಮೀರದಲ್ಲಿ 370 ತೆಗೆದು ಹಾಕಿದ್ದು ಮೋದಿ. ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣವಾಗುತ್ತಿದೆ. ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಶಾ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಕರ್ನಾಟಕವನ್ನು ದೆಹಲಿ ನಾಯಕರು ಎಟಿಎಮ್ ಮಾಡಿಕೊಂಡಿದ್ದರು. ಜೆಡಿಎಸ್ ಕಾಂಗ್ರೆಸ್ ಈ ರಾಜ್ಯವನ್ನು ಲೂಟಿ ಹೊಡೆದಿವೆ. ಜೆಡಿಎಸ್ ಕುಟುಂಬ ರಾಜಕಾರಣದಿಂದ ರಾಜ್ಯ ನಲುಗಿದೆ. ಇದೆಲ್ಲಕ್ಕೂ ಬಿಜೆಪಿಯೊಂದೇ ಪರಿಹಾರ.
ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಅಮಿತ್ ಶಾ ಕರೆ ನೀಡಿದರು.
ಹುಬ್ಬಳ್ಳಿಯಲ್ಲಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾದ ಅಮಿತ್ ಶಾ, ಕುಂದಗೋಳ ಪಟ್ಟಣದಲ್ಲಿರುವ ಬಸವರಾಜ್ ಹಂಚಿನಮನಿ ಅವರ ಮನೆಯ ಗೋಡೆ ಮೇಲೆ ಬರಹಕ್ಕೆ ಬಣ್ಣ ಹಚ್ಚಿದರು. ನಂತರ ಗೋಡೆಗೆ ಕರಪತ್ರ ಅಂಟಿಸಿದರು. ಹಂಚಿನಮನಿ ಅವರ ಕುಟುಂಬದವರು ಅಮಿತ್ ಶಾ ಅವರಿಗೆ ಆರತಿ ಬೆಳಗಿ, ತಿಲಕವಿಟ್ಟು ಸ್ವಾಗತಿಸಿದರು.
ಕರ್ನಾಟಕ
Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ
Vinay kulkarni: ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ನಂತರ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್ ನಿರ್ಬಂಧವಿತ್ತು. ಇದಕ್ಕೆ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಧಾರವಾಡ: ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಧಾರವಾಡ ಜಿಲ್ಲೆ ಪ್ರವೇಶ ನಿರ್ಬಂಧಕ್ಕೆ ವಿನಾಯಿತಿ ಕೋರಿ ವಿನಯ್ ಕುಲಕರ್ಣಿ (Vinay kulkarni) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿರುವುದರಿಂದ ತೀವ್ರ ಹಿನ್ನಡೆಯಾಗಿದೆ.
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವಾಗಿದ್ದರು. 9 ತಿಂಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು, ಬಿಡುಗಡೆಯಾದ ಬಳಿಕ ಅವರಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿತ್ತು. ಹೀಗಾಗಿ ಧಾರವಾಡ ಜಿಲ್ಲೆ ಪ್ರವೇಶಕ್ಕಿರುವ ನಿರ್ಬಂಧ ತೆರವುಗೊಳಿಸಲು ಕೋರಿ 2 ತಿಂಗಳ ಹಿಂದೆ ಮಾಜಿ ಸಚಿವ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ತಿರಸ್ಕರಿಸಿದೆ.
ಇದನ್ನೂ ಓದಿ | Karnataka Election 2023: ಕಾಂಗ್ರೆಸ್ ತೊರೆದ ಎಂ.ಎಂ. ಹಿರೇಮಠಗೆ ಶಾಕ್; ಎಸ್‌ಸಿ ಜಾತಿ ಪ್ರಮಾಣಪತ್ರ ರದ್ದು
ಇನ್ನು ಟ್ರಯಲ್ ಕೋರ್ಟ್ (ವಿಚಾರಣಾ ನ್ಯಾಯಾಲಯದಲ್ಲಿ) ನ್ಯಾಯಾಲಯದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಗೆ ಸೂಚನೆ ನೀಡಿದ್ದು, ಯಾವ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದೆಯೋ ಅದೇ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದೆ.
2016 ಜೂನ್ 15 ರಂದು ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೀಶಗೌಡ ಅವರ ಕೊಲೆಯಾಗಿತ್ತು. ನಂತರ ಆರೋಪಿಗಳು ತಾವೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡು ಪೊಲೀಸರುಗೆ ಶರಣಾಗಿದ್ದರು. ಆದರೆ ಯೋಗೇಶಗೌಡ ಗೌಡರ ಕುಟುಂಬಸ್ಥರು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪಟ್ಟುಹಿಡಿದಿದ್ದರು. ನಂತರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಕರಣವನ್ನು ಸಿಬಿಐಗೆ ವಹಿಸಿತು. ತನಿಖೆಯಲ್ಲಿ ಯೋಗಶ್‌ಗೌಡ ಹತ್ಯೆ ಸಂಚಿನಲ್ಲಿ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕೈವಾಡವಿದೆ ಇದೆ ಎಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
ಪ್ರಕರಣದಲ್ಲಿ ಬಂಧನವಾಗಿ 9 ತಿಂಗಳು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆದಿದ್ದ ಮಾಜಿ ಸಚಿವ, ಷರತ್ತು ಬದ್ಧ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ವಿನಯ್ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಕೋರ್ಟ್ ನಿರ್ಬಂಧ ವಿಧಿಸಿತ್ತು. ಇದೀಗ ನಿರ್ಬಂಧ ವಿನಾಯಿತಿಗೆ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಇದನ್ನೂ ಓದಿ | Karnataka Election: ಎಎಪಿಯಿಂದ 300 ಯೂನಿಟ್ ವಿದ್ಯುತ್ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್ ಜಾರಿ ಗ್ಯಾರಂಟಿ
ಶಿಗ್ಗಾಂವಿಯಿಂದ ವಿನಯ್ ಕುಲಕರ್ಣಿ ಸ್ಪರ್ಧೆ?
ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ವಿನಯ್ ಕುಲಕರ್ಣಿಗೆ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಹಾವೇರಿ ಜಿಲ್ಲೆಯ ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರ ಶಿಗ್ಗಾಂವಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ 2ನೇ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆಯಾಗಲಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಟಿಕೆಟ್ ಸಿಗುವುದೋ, ಇಲ್ಲವೋ ಎಂಬ ಬಗ್ಗೆ ಕುತೂಹಲ ಮೂಡಿದೆ.
ಕರ್ನಾಟಕ
Karnataka Elections 2023 : ವಿನಯ ಕುಲಕರ್ಣಿ ಸಿಎಂ ಎದುರು ಸ್ಪರ್ಧೆ ಮಾಡ್ತಾರೆ ಅನ್ನೋದು ಸುಳ್ಳು ಎಂದ ಪತ್ನಿ ಶಿವಲೀಲಾ ಕುಲಕರ್ಣಿ
ವಿನಯ ಕುಲಕರ್ಣಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಣಕ್ಕಿಳಿಯುತ್ತಾರಾ (Karnataka Elections 2023) ಎನ್ನುವ ಪ್ರಶ್ನೆ ವಿಚಾರದಲ್ಲಿ ಮತ್ತೆ ಗೊಂದಲ ಮೂಡಿದೆ. ಅವರು ಧಾರವಾಡ ಗ್ರಾಮೀಣದಿಂದಲೇ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ ಪತ್ನಿ ಶಿವಲೀಲಾರ ಕುಲಕರ್ಣಿ.
ಧಾರವಾಡ: ಪಂಚಮಸಾಲಿ ಸಮುದಾಯದ ಪ್ರಮುಖ ಮುಖಂಡರಾದ ಮಾಜಿ ಶಾಸಕ ವಿನಯ ಕುಲಕರ್ಣಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Karnataka Elections 2023) ಅವರ ವಿರುದ್ಧ ಕಣಕ್ಕಿಳಿಸಬೇಕು ಎಂಬ ಮಹತ್ವಾಕಾಂಕ್ಷೆಯಲ್ಲಿರುವ ಕಾಂಗ್ರೆಸ್‌ಗೆ ಅವರ ಪತ್ನಿ ತಿರುಗೇಟು ನೀಡಿದ್ದಾರೆ.
ಯಾವ ಕಾರಣಕ್ಕೂ ವಿನಯ ಕುಲಕರ್ಣಿ ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ. ಅವರು ಧಾರವಾಡ ಗ್ರಾಮೀಣ ಕ್ಷೇತ್ರದಿಂದಲೇ ಕಣಕ್ಕಿಳಿಯಲಿದ್ದಾರೆ ಎಂದು ಪತ್ನಿ ಶಿವಲೀಲಾ ಕುಲಕರ್ಣಿ ಸ್ಪಷ್ಟಪಡಿಸಿದರು.
ಮಾಜಿ ಸಚಿವ ವಿನಯ ಕುಲಕರ್ಣಿ ಶಿಗ್ಗಾಂವಿ ಸ್ಪರ್ಧೆಯ ವದಂತಿಗಳ ಬಗ್ಗೆ ಮಾಧ್ಯಮಗಳ ಮುಂದೆ ಬಂದು ಸ್ಪಷ್ಟೀಕರಣ ನೀಡಿದ ಶಿವಲೀಲಾ ಕುಲಕರ್ಣಿ ಅವರು, ʻʻಹೈಮಾಂಡ್ ಹೇಳಿಲ್ಲ. ವಿನಯ ಕುಲಕರ್ಣಿ ಅವರು ಹೇಳಿಲ್ಲ. ಎಲ್ಲವನ್ನೂ ಮಾಧ್ಯಮಗಳೇ ಸೃಷ್ಟಿ ಮಾಡುತ್ತಿವೆ. ನಮ್ಮ ಸಾಹೇಬರು ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಬರ್ತಾರೆ. ಅವರಿಗೆ ಟಿಕೆಟ್ ಆಗುತ್ತದೆ. ಅವರೇ ಧಾರವಾಡ ಗ್ರಾಮೀಣ ಅಭ್ಯರ್ಥಿ ಆಗುತ್ತಾರೆʼʼ ಎಂದು ಸ್ಪಷ್ಟಪಡಿಸಿದರು.
ʻʻಇನ್ನೂ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಿಲ್ಲ. ಪಟ್ಟಿ ಬಿಡುಗಡೆಗೂ ಮೊದಲೇ ಇಂತಹ ಊಹಾಪೋಹ ಇರುವಂತಹುದೇʼʼ ಎಂದ ಅವರು, ಗೊಂದಲವನ್ನು ಮಾಧ್ಯಮಗಳೇ ಸೃಷ್ಟಿ ಮಾಡುತ್ತಿವೆ ಎಂದೂ ದೂರಿದರು.
ಹೆಸರು ಕೇಳಿಬರುತ್ತಿರುವುದು ಸುಳ್ಳಲ್ಲ
ಶಿವಲೀಲಾ ಕುಲಕರ್ಣಿಯವರು ಹೇಳಿದರೂ ಶಿಗ್ಗಾಂವಿ ಕ್ಷೇತ್ರಕ್ಕೆ ವಿನಯ ಕುಲಕರ್ಣಿ ಹೆಸರು ಇನ್ನೂ ಕೇಳಿಬರುತ್ತಿರುವುದು ಸುಳ್ಳಲ್ಲ. ಆರಂಭಿಕ ಹಂತದಲ್ಲಿ ಇದುವರೆಗೆ ನಿರಂತರವಾಗಿ ಬೊಮ್ಮಾಯಿ ವಿರುದ್ಧ ಸೋಲು ಕಾಣುತ್ತಿದ್ದ ಅಜ್ಜಂ ಪೀರ್ ಖಾದ್ರಿ ಅವರ ಬದಲಿಗೆ ಪ್ರಬಲ ಪಂಚಮಸಾಲಿ ಲಿಂಗಾಯತ ಮುಖಂಡನನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿತ್ತು. ಒಂದು ಹಂತದಲ್ಲಿ ಈ ವಾದವನ್ನು ಒಪ್ಪದ ಖಾದ್ರಿ ಅವರು ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ಹಠ ಹಿಡಿದಿದ್ದರು. ಅದರೆ, ಯಾವಾಗ ಧಾರವಾಡದ ಮಾಜಿ ಶಾಸಕ ವಿನಯ ಕುಲಕರ್ಣಿ ಅವರನ್ನು ಶಿಗ್ಗಾಂವಿಯಿಂದ ಕಣಕ್ಕಿಳಿಸಲು ನಿರ್ಧರಿಸಿದಾಗ ಖಾದ್ರಿ ಅವರು ಬೆಂಬಲ ಘೋಷಿಸಿದರು.
ಈ ನಡುವೆ, ವಿನಯ ಕುಲಕರ್ಣಿ ಅವರು ತಾನು ಧಾರವಾಡದ ಟಿಕೆಟ್ ಆಕಾಂಕ್ಷಿಯಾಗಿದ್ದು, ಶಿಗ್ಗಾಂವಿ ಬಗ್ಗೆ ಇನ್ನೂ ಚಿಂತನೆ ನಡೆಸಿಲ್ಲ ಎಂದು ಹೇಳಿದ್ದರು. ಆಗ ಖಾದ್ರಿ ಅವರು ವಿನಯ ಕುಲಕರ್ಣಿ ಹೊರತುಪಡಿಸಿ ಬೇರೆ ಯಾರೇ ಬಂದರೂ ತಾನು ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಪ್ರಕಟಿಸಿದ್ದರು.
ಇದೆಲ್ಲದರ ಮಧ್ಯೆಯೇ ಮೂರು ಬಾರಿ ಶಾಸಕರಾಗಿದ್ದ, ಒಮ್ಮೆ ಧಾರವಾಡ ಕ್ಷೇತ್ರದ ಸಂಸದರೂ ಆಗಿದ್ದ, ಸಿಎಂ ಬೊಮ್ಮಾಯಿ ಅವರ ಬಲಗೈ ಬಂಟ ಎಂದೇ ಹೇಳಲಾಗುತ್ತಿದ್ದ, ಮಂಜುನಾಥ ಕುನ್ನೂರು ಮತ್ತು ಅವರ ಪುತ್ರ ರಾಜು ಕುನ್ನೂರು ಅವರು ಕಾಂಗ್ರೆಸ್ ಪಾಳಯ ಸೇರಿದ್ದಾರೆ. ಒಂದು ಹಂತದಲ್ಲಿ ಮಂಜುನಾಥ ಕುನ್ನೂರು ಅಥವಾ ಪುತ್ರನಿಗೆ ಶಿಗ್ಗಾಂವಿ ಟಿಕೆಟ್ ಸಿಗಬಹುದು ಎಂಬ ಚರ್ಚೆ ಇತ್ತು.
ಆದರೆ, ಈ ಹಂತದಲ್ಲಿ ವಿನಯ ಕುಲಕರ್ಣಿ ಮತ್ತು ಫುಲ್ ಆಕ್ಟಿವ್ ಆಗಿದ್ದಾರೆ. ಅವರು ಸೋಮವಾರ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದು, ಮಠಕ್ಕೆ ಭೇಟಿ, ಮದುವೆ ಸಮಾರಂಭಗಳಲ್ಲಿ ಭಾಗಿಯಾಗಿದ್ದರು. ಕ್ಷೇತ್ರದಲ್ಲಿ ಒಂದೇ ದಿನ ನಾಲ್ಕು ಮದುವೆಗಳಲ್ಲಿ ಭಾಗವಹಿಸಿದ್ದ ಕುಲಕರ್ಣಿ ಅವರು, ಸಂಜೆ ವೇಳೆ ಮಾಜಿ ಶಾಸಕ ಅಜ್ಜಂ ಪೀರ ಖಾದ್ರಿ ಜೊತೆ ಎರಡು ಗಂಟೆಗಳ ಕಾಲ ಗೌಪ್ಯ ಸಭೆ ಮಾಡಿದ್ದರು ಎಂದು ಹೇಳಲಾಗಿದೆ.
ಈಗ ವಿನಯ ಕುಲಕರ್ಣಿ ಪತ್ನಿ ಯಾವ ಕಾರಣಕ್ಕೂ ಧಾರವಾಡ ಬಿಟ್ಟು ಹೋಗುವುದಿಲ್ಲ ಎನ್ನುತ್ತಿದ್ದಾರೆ. ಎಲ್ಲವೂ ಕಾಂಗ್ರೆಸ್ ಟಿಕೆಟ್ ಪಟ್ಟಿ ಬಿಡುಗಡೆಯ ದಿನ ಸ್ಪಷ್ಟವಾಗಲಿದೆ.
ಕರ್ನಾಟಕ
ಗುಡಿಸಾಗರದಲ್ಲಿ ಬಿಸಿಯೂಟ ಸೇವಿಸಿ 35 ಮಕ್ಕಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು, ಪ್ರಾಣಾಪಾಯದಿಂದ ಪಾರು
mid day meal: ಗುಡಿಸಾಗರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಮಕ್ಕಳು ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರದಲ್ಲಿ ಬಿಸಿಯೂಟ (mid day meal) ಸೇವಿಸಿ 35 ಮಕ್ಕಳು ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ.
ಗುಡಿಸಾಗರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ ಮಕ್ಕಳು ಅಸ್ವಸ್ಥರಾಗಿದ್ದಾರೆ. ಬಿಸಿಯೂಟ ಸೇವಿಸಿದ ಮಕ್ಕಳಲ್ಲಿ ವಾಂತಿ ಕಂಡುಬಂದಿದೆ. ತಕ್ಷಣವೇ ಅಡುಗೆಯನ್ನು ಪರಿಶೀಲನೆ ನಡೆಸಿದಾಗ ಬಿಸಿಯೂಟದ ಅನ್ನದಲ್ಲಿ ಹಲ್ಲಿಯಂತಹ ಪ್ರಾಣಿಯೊಂದು ಬಿದ್ದಿರುವುದು ಕಂಡು ಬಂದಿದೆ. ತಕ್ಷಣವೇ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ: SC ST Reservation: ಮಾರ್ಚ್ 30ರಂದು ಶಿವಮೊಗ್ಗದಲ್ಲಿ ಬಂಜಾರ ಸಮುದಾಯದ ಬೃಹತ್ ಪ್ರತಿಭಟನೆ; ಶಿಕಾರಿಪುರ ಚಲೋಗೆ ನಿರ್ಧಾರ
ಧಾರವಾಡ ಡಿಎಚ್ಒ ಡಾ. ಶಶಿ ಪಾಟೀಲ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚನೆ ನೀಡಿದ್ದಾರೆ. ಇನ್ನು ಯಾವುದೇ ಮಕ್ಕಳಿಗೆ ಅಪಾಯವಿಲ್ಲ ಎಂದು ತಪಾಸಣೆ ನಡೆಸಿದ ವೈದ್ಯರು ತಿಳಿಸಿದ್ದಾರೆ.
ಕರ್ನಾಟಕ
SC ST Reservation: ಕಾಂಗ್ರೆಸ್ ಅಧಿಕಾರಕ್ಕೂ ಬರಲ್ಲ, ಮೀಸಲಾತಿ ಬದಲಾಯಿಸಲೂ ಆಗಲ್ಲ: ಪ್ರಲ್ಹಾದ್ ಜೋಶಿ
Pralhad Joshi: ಒಕ್ಕಲಿಗರು, ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ ಕಾಂಗ್ರೆಸ್‌ಗೆ ಇಷ್ಟವಿಲ್ಲ. ಹೀಗಾಗಿ ಅವರು ವಿರೋಧಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ: ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಮೀಸಲಾತಿ (SC ST Reservation) ಪರಿಷ್ಕರಣೆ ಮಾಡಲಾಗಿದೆ. ಆ ಮೂಲಕ ಲಿಂಗಾಯತರು, ಒಕ್ಕಲಿಗರಿಗೆ ನ್ಯಾಯ ಕೊಡಿಸುವ ಕಾರ್ಯ ಮಾಡಿದ್ದೇವೆ. ಬಹು ವರ್ಷಗಳ ಬೇಡಿಕೆಯಾಗಿದ್ದ ಒಳ ಮೀಸಲಾತಿ ಜಾರಿಗೆ ತಂದಿದ್ದೇವೆ. ಕಾಂಗ್ರೆಸ್ ಕಾಲದಲ್ಲಿಯೇ ಆಯೋಗ ರಚಿಸಲಾಗಿತ್ತು. ಆದರೆ, ಅವರ ಅಧಿಕಾರದಲ್ಲಿ ಜಾರಿಗೆ ತರಲಿಲ್ಲ.. ನಾವು ಮೀಸಲಾತಿ ಬದಲಾಯಿಸಿದ್ದಕ್ಕೆ ಕೈ ನಾಯಕರಿಗೆ ಹೊಟ್ಟೆಕಿಚ್ಚು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ತಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ಪರಿಷ್ಕರಣೆ ರದ್ದು ಮಾಡುತ್ತೇವೆ ಎಂದು ಕೈ ನಾಯಕರು ಹೇಳುತ್ತಾರೆ. ಅದರ ಅರ್ಥ ಒಕ್ಕಲಿಗರು, ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ ಕಾಂಗ್ರೆಸ್ ಸಹಮತ ಇಲ್ಲ. ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮಾತ್ರ ಕಾಂಗ್ರೆಸ್ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಎಲ್ಲರಿಗೂ ಮೀಸಲಾತಿ ಹೆಚ್ಚಿಸುವ ತಾಕತ್ತು ಕಾಂಗ್ರೆಸ್‌ಗೆ ಇರಲಿಲ್ಲ ಎಂದು ಕಿಡಿಕಾರಿದರು.
ಅವೈಜ್ಞಾನಿಕ, ಅಸಾಂವಿಧಾನಿಕವಾಗಿ ಮುಸ್ಲಿಮರಿಗೆ ಇವರು ಮೀಸಲಾತಿ ಕೊಟ್ಟಿದ್ದರು. ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಡಲು ಸಾಧ್ಯವಿಲ್ಲ. ಹೀಗಾಗಿ ಮುಸ್ಲಿಮರ ಮೀಸಲಾತಿಯನ್ನು ನಾವು ರದ್ದು ಮಾಡಿದ್ದೇವೆ. ಬಿಜೆಪಿ ಸರ್ಕಾರ ನಿರ್ಣಾಯಕ ಸರ್ಕಾರ, ಈ ನಿರ್ಣಯ ತೆಗೆದುಕೊಂಡ ಮೇಲೆ ಅವರು ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಆದರೆ ಬಿಜೆಪಿ ಸರ್ವರೂ ಸಮಾನರು ಎಂಬ ತತ್ವದಡಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಮೀಸಲಾತಿ ವಿಚಾರದಲ್ಲಿ ಸ್ವಾಮೀಜಿಗಳ ಮೇಲೆ ಒತ್ತಡ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಹೇಳಿಕೆ ಅತ್ಯಂತ ಬಾಲಿಶ, ಧಮ್ಕಿ ಹಾಕುವುದು ಡಿಕೆಶಿ ಸಂಸ್ಕೃತಿ. ನಾವು ಯಾರ ಮೇಲೂ ಒತ್ತಡ ಹೇರಿಲ್ಲ. ಕಾರ್ಯಕರ್ತರಿಗೆ ಹೊಡೆಯುವುದು ಸಿದ್ದರಾಮಯ್ಯ ಸಂಸ್ಕೃತಿ. ಡಿ.ಕೆ.ಶಿವಕುಮಾರ್ ಅವರದ್ದು ಗೂಂಡಾ ಸಂಸ್ಕೃತಿ ಆಗಿರುವುದರಿಂದ ಧಮ್ಕಿ ಹಾಕುತ್ತಾರೆ. ನಾವು ಯಾಕೆ ಶ್ರೀಗಳಿಗೆ ಧಮ್ಕಿ ಹಾಕೋಣ. ಈ ಹೇಳಿಕೆ ಮೂಲಕ ಶ್ರೀಗಳಿಗೆ ಡಿಕೆಶಿ ಅಪಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಎಸ್‌ವೈ ಮೇಲೆ ಕಲ್ಲು ತೂರಾಟ ರಾಜಕೀಯ ಪ್ರೇರಿತ
ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ಎಸೆತ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪನವರ ಮನೆ ಮೇಲೆ ದಾಳಿ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಸದಾಶಿವ ಆಯೋಗ ವರದಿ ಯಾರು ವಿರೋಧ ಮಾಡುತ್ತಾರೋ ಅವರಿಗೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲರೂ ಒಪ್ಪುವಂತಹ ರೀತಿಯಲ್ಲಿ ತೀರ್ಮಾನ ತೆಗೆದುಕೊಂಡಿರುವುದಾಗಿ ಸಿಎಂ ಹೇಳಿದ್ದು, ಸಂಬಂಧಪಟ್ಟವರನ್ನು ಕರೆದು ಮಾತನಾಡಿ ಎಲ್ಲರಿಗೂ ಮನವರಿಕೆ ಮಾಡುತ್ತಾರೆ ಎಂದು ತಿಳಿಸಿದರು.
ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದು ನಾನು ಮನವಿ ಮಾಡುತ್ತೇನೆ. ಯಡಿಯೂರಪ್ಪನವರು ರಾಜ್ಯ ಕಂಡ ಅತ್ಯಂತ ಮುತ್ಸದ್ದಿ ಹಿರಿಯ ರಾಜಕಾರಣಿ. ಅವರ ಮನೆ ಮೇಲೆ ಈ ರೀತಿ ಮಾಡುವುದು ಸರಿಯಲ್ಲ. ಎಲ್ಲರನ್ನೂ ಕರೆದು ಸದಾಶಿವ ಆಯೋಗದ ಬಗ್ಗೆ ಮಾತನಾಡಿದ್ದಾರೆ. ಅಧಿಕಾರಿಗಳು, ಪ್ರಮುಖರ ಜತೆ ಸಿಎಂ ಮಾತನಾಡಿದ್ದಾರೆ. ಇದನ್ನೆಲ್ಲ ಮಾಡದೇ ವರದಿ ಜಾರಿಗೆ ತರಲು ಸಾಧ್ಯವಿಲ್ಲ. ಈ ಪ್ರತಿಭಟನೆ, ಗಲಾಟೆ ರಾಜಕೀಯ ಪ್ರೇರಿತ ಕೂಡ ಆಗಿರಬಹುದು. ಅದರ ಬಗ್ಗೆ ನಾನೂ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಸಿದ್ದರಾಮಯ್ಯಗೆ ಮತ್ತೊಮ್ಮೆ ಸೋಲಿನ ಭೀತಿ ಕಾಡುತ್ತಿದೆ
ಹುಬ್ಬಳ್ಳಿ: ಸೋಲಿನ ಭೀತಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಬಾದಾಮಿಯಲ್ಲಿ ಕೆಲವೇ ಮತಗಳ ಅಂತರದಿಂದ ಗೆದ್ದಿದ್ದರು. ಆದರೆ ಈಗ ಅವರಿಗೆ ಮತ್ತೊಮ್ಮೆ ಸೋಲಿನ ಭೀತಿ ಕಾಡುತ್ತಿದೆ. ಕೋಲಾರ ಆಯ್ತು, ರಾಜ್ಯದ ವಿವಿಧ ಕ್ಷೇತ್ರಗಳಾಯ್ತು, ಈಗ ವರುಣಾ ಟಿಕೆಟ್ ಅಂತಿಮವಾಗಿದೆ. ಮುಂದೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ನಡೆದುಕೊಂಡ ರೀತಿಯೇ ಕಾರಣ ಎಂದರು.
ಇದನ್ನೂ ಓದಿ | Karnataka Election: ಕಾಂಗ್ರೆಸ್‌ನಲ್ಲಿ ಸಿಎಂ ಆಗೋಕೆ ಮೂರು ಜನ ಚಡ್ಡಿ ಹೊಲಿಸ್ಕೊಂಡು ಕೂತಾರ: ಗೋವಿಂದ ಕಾರಜೋಳ ವ್ಯಂಗ್ಯ
ಕೆ.ಎಚ್.ಮುನಿಯಪ್ಪ, ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಸಿದ್ದರಾಮಯ್ಯ ಕಾರಣ. ಹೀಗಾಗಿ ಅವರೆಲ್ಲರೂ ಸಿದ್ದರಾಮಯ್ಯರನ್ನು ಸೋಲಿಸುವ ಪಣತೊಟ್ಟಿದ್ದಾರೆ. ಸಿದ್ದರಾಮಯ್ಯ ದಲಿತ ವಿರೋಧಿ, ಐದು ವರ್ಷ ಸಿಎಂ ಆಗಿದ್ದವರಿಗೆ ನಿಲ್ಲುವುದಕ್ಕೆ ಒಂದು ಕ್ಷೇತ್ರವಿಲ್ಲ. ಅವರು ಯಾವ ಕ್ಷೇತ್ರದಲ್ಲಿಯೂ ಗೆಲ್ಲುವುದಿಲ್ಲ. 25 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಬೇಡಿಕೆ ಇದೇ ಎಂಬುವುದು ಡ್ರಾಮಾ. ನಮ್ಮ ಸಿಎಂ ಸೇರಿ ಉಳಿದ ನಾಯಕರು ಒಂದೇ ಕಡೆ ಸ್ಪರ್ಧಿಸುತ್ತಾರೆ. ಗೆಲ್ಲುತ್ತಾರೆ ಎಂಬುದಾದರೆ ಒಂದು ಕಡೆ ಫೈನಲ್ ಮಾಡಲಿ ಎಂದು ಹೇಳಿದರು.
-
ದೇಶ20 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ21 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಗ್ಯಾಜೆಟ್ಸ್10 hours ago
Aadhaar Update: ಆನ್‌ಲೈನ್‌ನಲ್ಲಿ ಆಧಾರ್ ಅಪ್ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ
-
ಅಂಕಣ21 hours ago
ಗೋ ಸಂಪತ್ತು: ಆಹಾರವಾಗಿ ಮಾತ್ರವಲ್ಲ, ಔಷಧವಾಗಿಯೂ ಮಜ್ಜಿಗೆಗೆ ಮಹತ್ವವಿದೆ!
-
ಅಂಕಣ21 hours ago
Brand story : ಚೀನಾದ ಇ-ಕಾಮರ್ಸ್ ದಿಗ್ಗಜ ಅಲಿಬಾಬಾ, 6 ಕಂಪನಿಗಳಾಗಿ ವಿಭಜನೆಯಾಗುತ್ತಿರುವುದೇಕೆ?
-
ಕರ್ನಾಟಕ11 hours ago
B.Y. Vijayendra: ಯಾವುದೇ ಕಾರಣಕ್ಕೆ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ: ಗೊಂದಲಕ್ಕೆ ತೆರೆಯೆಳೆದ ಯಡಿಯೂರಪ್ಪ
-
ದೇಶ12 hours ago
Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್ಗೆ 25 ಸಾವಿರ ರೂ. ದಂಡ!
-
ಕರ್ನಾಟಕ15 hours ago
SSLC Exam 2023: ಕಲಬುರಗಿಯಲ್ಲಿ ಎಸ್ಎಸ್ಎಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ವಾಟ್ಸಾಪ್ನಲ್ಲಿ ಹರಿದಾಡಿದ ಕನ್ನಡ ಪೇಪರ್