ಧಾರವಾಡ: ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ನಡುರಸ್ತೆಯಲ್ಲೇ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ಧಾರವಾಡ ತಾಲೂಕಿನ ಕನಕೂರ ಗ್ರಾಮದಲ್ಲಿ ಘಟನೆ ನಡೆದಿದೆ. ಮಾರುತಿ ಪವಾರ್ ಎಂಬ ಗ್ರಾಮ ಪಂಚಾಯತಿ ಸದಸ್ಯನೇ ಯುವತಿ ಮೇಲೆ ಹಲ್ಲೆ (Assault Case) ಮಾಡಿದವನು.
ಹಲ್ಲೆ ಮಾಡುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧ ಪಟ್ಟಂತೆ ಮಾರುತಿ ತನ್ನ ಅಕ್ಕನ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಮಾರುತಿ ಜತೆಗೆ ಮತ್ತೊಬ್ಬ ಸಂಬಂಧಿ ಸಹೋದರ ರಾಮಚಂದ್ರ ಕೂಡ ಸಾಥ್ ನೀಡಿದ್ದಾನೆ. ಆಸ್ತಿ ವಿಚಾರವಾಗಿ ಯುವತಿ ಪ್ರಶ್ನೆ ಮಾಡಿದ್ದಕ್ಕೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧದಿಂದ ನಿಂದಿಸಿದ ಹಲ್ಲೆ ಮಾಡಿದ್ದಾರೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ
ಕೋಲಾರದಲ್ಲಿ ಬಿಯರ್ ಬಾಟೆಲ್‌ಗಳಲ್ಲಿ ಬಡಿದಾಟ
ಕ್ಷುಲ್ಲಕ ಕಾರಣಕ್ಕೆ ಯುವಕರು ಬಿಯರ್ ಬಾಟೆಲ್‌ಗಳಿಂದ ಬಡಿದಾಡಿಕೊಂಡಿದ್ದಾರೆ. ಕೋಲಾರದ ಗಾಂಧಿನಗರ ಮತ್ತು ಶ್ರೀನಿವಾಸಪುರ ತಾಲೂಕಿನ ಮೊಗಿಲಹಳ್ಳಿ ಗ್ರಾಮಕ್ಕೆ ಸೇರಿದ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ. ಶ್ರೀನಿವಾಸಪುರ ಪಟ್ಟಣದ ತಾಲೂಕು ಕಚೇರಿ ಎದುರು ಬಿಯರ್ ಬಾಟೆಲ್‌ನಿಂದ ಕಿತ್ತಾಡಿಕೊಂಡಿದ್ದಾರೆ.
ಇವರ ಬಡಿದಾಟಕ್ಕೆ ಸ್ಥಳೀಯರು ಮೂಕ ಪ್ರೇಕ್ಷಕರಾಗಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿ ಭಂಗ ಪ್ರಕರಣ ದಾಖಲಿಸಿ, ಇಬ್ಬರ ಮೇಲೆ ಎಫ್‌ಐಆರ್ ದಾಖಲಾಗಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಮಂಜುನಾಥ್ ಹಾಗೂ ಹರೀಶ್ ಬಂಧಿತ ಆರೋಪಿಗಳಾಗಿದ್ದಾರೆ.
ಬಾಯ್‌ಫ್ರೆಂಡನ್ನು ಹೆದರಿಸಲು ರೈಲ್ವೇ ಟ್ರ್ಯಾಕ್‌ಗೆ ಇಳಿದಳು.. ಆಮೇಲೆ ಆಗಿದ್ದೇ ಬೇರೆ! ಶಾಕಿಂಗ್ ವಿಡಿಯೋ ನೋಡಿ
ಆಗ್ರಾ: ಸಣ್ಣ ಪುಟ್ಟ ಕೋಪ, ಜಗಳದಿಂದ ಮಾಡು ತಪ್ಪು ಎಂಥಾ ದೊಡ್ಡ ಅನಾಹುತವನ್ನು ತಂದೊಡ್ಡುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬಾಯ್‌ಫ್ರೆಂಡ್ ಜೊತೆ ಜಗಳ ಮಾಡಿಕೊಂಡು ಸಾಯುತ್ತೇನೆ ಎಂದು ಹೆಸರಿಸಲು ರೈಲ್ವೇ ಹಳಿ(Railway Track)ಗಿಳಿದ್ದಿದ್ದ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಭೀಕರ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ಸೋಶಿಯಲ್ ಮೀಡಿಯಾ(Social Media)ದಲ್ಲಿ ವೈರಲ್(Viral Video) ಆಗುತ್ತಿದೆ.
ಆಗ್ರಾದ ರಾಜಾ ಕಿ ಮಂಡಿ ಸ್ಟೇಷನ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು38 ವರ್ಷದ ರಾಣಿ ಎಂದು ಗುರುತಿಸಲಾಗಿದೆ. ಸ್ಟೇಷನ್‌ನಲ್ಲಿ ಕುಳಿತಿದ್ದ ರಾಣಿ ಮತ್ತು ಆಕೆಯ ಲಿವಿಂಗ್ ಪಾರ್ಟನರ್ ಕಿಶೋರ್ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆಯುತ್ತದೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರುತ್ತದೆ. ಕೊನೆಗೆ ಕೋಪದ ಭರದಲ್ಲಿ ರೈಲ್ವೇ ಹಳಿಗೆ ಹಾರಿದ ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಿಶೋರ್‌ಗೆ ಬೆದರಿಕೆಯೊಡ್ಡಿದ್ದಾಳೆ. ರಾಣಿ ಸುಮ್ಮನೆ ಹೆದರಿಸಲು ಈ ರೀತಿ ಮಾಡುತ್ತಿರುವುದು ಎಂದು ಆತನೂ ಕುಳಿತ ಜಾಗದಿಂದ ಕದಡಲಿಲ್ಲ.
ಹಳಿಯಲ್ಲಿ ನಿಂತು ರಾಣಿ ಕಿಶೋರ್ ಜೊತೆ ವಾಗ್ವಾದ ನಡೆಸುತ್ತಾಳೆ. ಆಗ ಅದೇ ಹಳಿಯಲ್ಲಿ ರೈಲು ಬಂದಿದ್ದು, ರೈಲನ್ನು ನೋಡುತ್ತಿದ್ದಂತೆ ರಾಣಿ ಫ್ಲ್ಯಾಟ್‌ಫಾರ್ಮ್‌ಗೆ ಹತ್ತಲ್ಲು ಓಡಿ ಬಂದಿದ್ದಾಳೆ. ಆಗ ರೈಲಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡಿದ್ದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೊನೆಯುಸಿರೆಳೆದಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗಿದೆ. ಇನ್ನು ರಾಣಿ ಮತ್ತು ಕಿಶೋರ್ ಲಿವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದು, ಲೋಹಾಮಂಡಿ ಪ್ರದೇಶದಲ್ಲಿ ವಾಸವಾಗಿದ್ದರು. ಕಿಶೋರ್‌ಗೆ ಕುಡಿಯುವ ಚಟ ಇರುವ ಕಾರಣ ಇದೇ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳ ಆಗುತ್ತಿರುತ್ತಿತ್ತು. ಸೋಮವಾರವೂ ಇದೇ ರೀತಿ ಜಗಳ ಆಗಿತ್ತು ಎನ್ನಲಾಗಿದೆ.
लिविंग में रह रही थी आगरा लोहा मंडी की शादीशुदा महिला, प्रेमी से हुई तकरार और राजा मंडी रेलवे स्टेशन केरला एक्सप्रेस के सामने लगा दी छलांग. 30 सेकंड का बेहद दर्दनाक वीडियो ।@agrapolice @spgrpagra pic.twitter.com/mdDLZAeXei
— Journalist Harikant sharma (@harikantsharmaG) May 27, 2024
ಇನ್ನು ಕಿಶೋರ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆಕೆಯ ಮಾಜಿ ಪತಿ ಸಾವಿನ ಬಳಿಕ ರಾಣಿ ಬಹಳ ನೊಂದಿದ್ದಳು. ಅದೂ ಅಲ್ಲದೇ ಆಕೆ ಮಾನಸಿಕ ಖಿನ್ನತೆಗೊಳಗಾಗಿದ್ದಳು ಎಂಬುದು ವಿಚಾರಣೆ ವೇಳೆ ಬಯಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ