ಕ್ರೈಂ
Double Murder: ಧಾರವಾಡದಲ್ಲಿ ಡಬಲ್ ಮರ್ಡರ್, ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ
ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ಘಟನೆ ನಡೆದಿದ್ದು, ಇಬ್ಬರನ್ನೂ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಮ್ಮದ್ ಕುಡಚಿ ಎಂಬವರು ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ.
ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಹತ್ಯೆ (Double Murder) ಮಾಡಲಾಗಿದೆ.
ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ಘಟನೆ ನಡೆದಿದ್ದು, ಇಬ್ಬರನ್ನೂ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಮ್ಮದ್ ಕುಡಚಿ ಎಂಬವರು ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ.
ಕುಡಚಿ ಮನೆ ಎದುರು ಘಟನೆ ನಡೆದಿದೆ. ನಿನ್ನೆ ರಾತ್ರಿ ವೇಳೆ ಕುಡಚಿ ಮನೆ ಎದುರು ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪು ದಾಳಿ ಮಾಡಿದೆ. ಕುಡಚಿ ನಿವಾಸದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಅಟ್ಟಿಸಿಕೊಂಡು ಹೋಗಿ ಕೊಚ್ಚಿರುವ ಸಾಧ್ಯತೆಯಿದೆ. ದಾಳಿಗೀಡಾದ ವ್ಯಕ್ತಿ ಕುಡಚಿ ಮನೆಯಿಂದ ಓಡುತ್ತ ಹೋದಂತಿದ್ದು, ದಾರಿಯುದ್ದಕ್ಕೂ ರಕ್ತ ಬಿದ್ದಿದೆ. ಇನ್ನೊಬ್ಬನ ಹೆಸರು ತಿಳಿದು ಬಂದಿಲ್ಲ. ರಕ್ತಸಿಕ್ತ ಸ್ಥಿತಿಯಲ್ಲಿ ಎರಡೂ ಶವಗಳು ಪತ್ತೆಯಾಗಿವೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಹತ್ಯೆ
ಬೆಂಗಳೂರು: ರಾಜಧಾನಿಯ ಮಹದೇವಪುರದಲ್ಲಿ ತಡರಾತ್ರಿ ಯುವಕನೊಬ್ಬನನ್ನು ಹುಡುಗಿ ವಿಚಾರದಲ್ಲಿ ಜಗಳ ತೆಗೆದು ಹತ್ಯೆ ಮಾಡಲಾಗಿದೆ. ರೇಣುಕುಮಾರ್ (24) ಮೃತ ದುರ್ದೈವಿ.
ಏರಿಯಾದಲ್ಲಿ ನಿಂದು ಜಾಸ್ತಿ ಆಗಿದೆ ಅಂತ ಕ್ಷುಲ್ಲಕ ಕಾರಣಕ್ಕೆ ರೇಣುಕುಮಾರ್ ಜೊತೆ ಜಗಳ ಬೆಳೆಸಿದ ಆರೋಪಿ, ಗಲಾಟೆ ವೇಳೆ ರೇಣುಕುಮಾರ್‌ಗೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯೊಬ್ಬಳ ಜತೆ ಗೆಳೆತನ ವಿಚಾರಕ್ಕೆ ಕೊಲೆ ನಡೆದಿರುವ ಅನುಮಾನವಿದೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Murder case: ಶೀಲ ಶಂಕಿಸಿ ಪತ್ನಿಯ ಕೊಲೆ ಮಾಡಿದ ಶಿಕ್ಷಕ; ಮನೆಗೆ ಬೀಗ ಹಾಕಿ ಪರಾರಿ
ಕರ್ನಾಟಕ
Road Accident: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಮರಣ; ಶಿವಮೊಗ್ಗ, ಕೊಡಗಿನಲ್ಲೂ ಹಾರಿಹೋಯ್ತು ಪ್ರಾಣ
Road Accident: ಊಟಿ ಪ್ರವಾಸಕ್ಕೆ ಹೋಗಿದ್ದ ಬಿಜೆಪಿ ಮುಖಂಡರೊಬ್ಬರ (BJP leader) ಕಾರು (Car Accident) ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಲ್ಲಿ ಆಟೋಗೆ ಬೊಲೆರೋ ವಾಹನ ಡಿಕ್ಕಿಯಾಗಿ ವೃದ್ಧ ಮೃತಪಟ್ಟಿದ್ದರೆ, 12 ಮಂದಿ ಗಾಯಗೊಂಡಿದ್ದಾರೆ.
ಮೈಸೂರು/ಶಿವಮೊಗ್ಗ/ಕೊಡಗು: ಪ್ರತ್ಯೇಕ ಕಡೆಗಳಲ್ಲಿ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಸಾವು-ನೋವಿಗೆ ಕಾರಣವಾಗಿದೆ. ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಮೃತಪಟ್ಟಿರುವ ದುರ್ಘಟನೆ ಊಟಿಯಲ್ಲಿ ನಡೆದಿದೆ. ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಮುಖಂಡ ಸ್ವಾಮಿಗೌಡ ಎಂಬುವವರು ಮೃತಪಟ್ಟಿದ್ದಾರೆ.
ಸ್ವಾಮಿಗೌಡ ಅವರು ನರಸಿಂಹರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸ್ನೇಹಿತರೊಂದಿಗೆ ಊಟಿ ಪ್ರವಾಸಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ ಸ್ವಾಮಿಗೌಡ ಅವರ ತಲೆಗೆ ಗಂಭೀರ ಪೆಟ್ಟಾಗಿದೆ. ತೀವ್ರ ರಕ್ತಸ್ರಾವವಾಗಿ ಸ್ವಾಮಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾರಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಉಳಿದ ಮೂವರಿಗೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲಗೇಜು ಆಟೋಗೆ ಡಿಕ್ಕಿ ಹೊಡೆದ ಬೊಲೆರೋ
ಶಿವಮೊಗ್ಗದ ಶಿಕಾರಿಪುರದ ಜಕ್ಕನಹಳ್ಳಿ ಸಮೀಪ ಲಗೇಜು ಆಟೋಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನವು ಡಿಕ್ಕಿ ಹೊಡೆದಿದೆ. ಪರಿಣಾಮ ವೃದ್ಧರೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಬಿದರಕೊಪ್ಪ ತಾಂಡ ವಾಸಿ ರಾಮ್‌ಜಿ ನಾಯ್ಕ (72) ಮೃತ ದುರ್ದೈವಿ.
ತೊಟ್ಟಿಲು ಶಾಸ್ತ್ರ ಕಾರ್ಯಕ್ರಮಕ್ಕಾಗಿ ಆಟೋದಲ್ಲಿ ಬಿದರಕೊಪ್ಪ ತಾಂಡದಿಂದ ಎಳನೀರುಕೊಪ್ಪ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಆಟೋದಲ್ಲಿದ್ದವರೆಲ್ಲ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಇನ್ನು ಆಟೋದಲ್ಲಿ ಕಾಲು ಹೊರಕ್ಕೆ ಹಾಕಿ ಕುಳಿತಿದ್ದವರ ಕಾಲಿಗೆ ಬೊಲೆರೋ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಹಲವರನ್ನು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇದನ್ನೂ ಓದಿ: Road Accident: ಕಾರಿಗೆ ಗುದ್ದಿ ಪರಾರಿಯಾದ ಲಾರಿ ಚಾಲಕ, ಬೈಕ್‌ಗೆ ಗುದ್ದಿ ಮೂವರ ಜೀವ ತೆಗೆದ
ಭೀಕರ ಅಪಘಾತದಲ್ಲಿ ಸವಾರ ಸಾವು
ಕೊಡಗಿನ ನಾಪೋಕ್ಲು-ಮೂರ್ನಾಡು ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೂರ್ನಾಡು ರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ (19) ಮೃತ ದುರ್ದೈವಿ. ಸ್ಕೂಟರ್‌ನ ಹಿಂಬದಿ ಸವಾರನಿಗೂ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಾಫೋಕ್ಲು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕ್ರೈಂ
Me too case: ಮೀಟೂ ಪ್ರಕರಣದಲ್ಲಿ ನಟಿ ಶೃತಿ ಹರಿಹರನ್‌ಗೆ ನೋಟಿಸ್
ತಮ್ಮ ಮೀಟೂ ಪ್ರಕರಣದಲ್ಲಿ ಪೊಲೀಸರು ನೀಡಿದ ಬಿ ರಿಪೋರ್ಟ್ ಚಾಲೆಂಜ್ ಮಾಡಿದ್ದ ಶೃತಿ ಹರಿಹರನ್‌ಗೆ, ಸಾಕ್ಷ್ಯಾಧಾರ ನೀಡುವಂತೆ ನೋಟಿಸ್ ಕೊಡಲಾಗಿದೆ.
ಬೆಂಗಳೂರು: ನಟಿ ಶೃತಿ ಹರಿಹರನ್ (sruthi hariharan) ಅವರ ಮೀಟೂ ಕೇಸ್‌ಗೆ (Me too case) ಮತ್ತೆ ಟ್ವಿಸ್ಟ್ ದೊರೆತಿದೆ. ಬಿ ರಿಪೋರ್ಟ್ ಚಾಲೆಂಜ್ ಮಾಡಿದ್ದ ಶೃತಿ ಹರಿಹರನ್‌ಗೆ, ಸಾಕ್ಷ್ಯಾಧಾರ ನೀಡುವಂತೆ ನೋಟಿಸ್ ಕೊಡಲಾಗಿದೆ.
2018ರಲ್ಲಿ ಅರ್ಜುನ್ ಸರ್ಜಾ (arjun sarja) ವಿರುದ್ಧ ನಟಿ ಶೃತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು. ತನಿಖೆ ನಡೆಸಿದ್ದ ಕಬ್ಬನ್ ಠಾಣೆಯ ಪೊಲೀಸರು, ಅರ್ಜುನ್ ಸರ್ಜಾ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು.
ಪೊಲೀಸರು ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಶೃತಿ ಹರಿಹರನ್ ಅರ್ಜಿ ಸಲ್ಲಿಸಿದ್ದರು. ಕೋರ್ಟ್‌ನಲ್ಲಿ ಅರ್ಜಿ ಕುರಿತ ವಿಚಾರಣೆ ಬಳಿಕ, ಪೊಲೀಸರಿಗೆ ಈ ಬಗೆಗಿನ ಸಾಕ್ಷ್ಯಾಧಾರ ನೀಡುವಂತೆ ಸೂಚನೆ ನೀಡಲಾಗಿದೆ.
ಏನಿದು ಪ್ರಕರಣ?
‘ವಿಸ್ಮಯ’ ಸಿನಿಮಾ ಚಿತ್ರೀಕರಣ ವೇಳೆ ಲೈಂಗಿಕ ಕಿರುಕುಳ ಆಗಿತ್ತು ಎಂದು ನಟಿ ಶೃತಿ ಹರಿಹರನ್ ಅವರು ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಆರೋಪಿಸಿದ್ದರು. ವಿಸ್ಮಯ ಚಿತ್ರದಲ್ಲಿ ನಟ ಅರ್ಜುನ್ ಸರ್ಜಾ ಹಾಗೂ ನಟಿ ಶೃತಿ ಹರಿಹರನ್ ಇಬ್ಬರೂ ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ನಟಿ ಶೃತಿ ಹರಿಹರನ್ ಆರೋಪ ಹೊರಿಸಿದ ಬಳಿಕ ಸ್ಯಾಂಡಲ್ವುಡ್ನಲ್ಲಿ ವಿವಾದದ ಬೆಂಕಿ ಹೊತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ಕೆಲವರು ನಟಿ ಶೃತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್ ಸರ್ಜಾಗೆ ಬೆಂಬಲ ನೀಡಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿಯೂ ಕೂಡ ಈ ಬಗ್ಗೆ ಸಭೆ ನಡೆಸಲಾಗಿತ್ತು.
ಇದನ್ನೂ ಓದಿ: Tanushree Dutta | ಮೀಟೂ ನಂತರ ಕೊಲೆ ಯತ್ನದ ಬಗ್ಗೆ ಭಯಾನಕ ಸತ್ಯ ಬಾಯ್ಬಿಟ್ಟ ನಟಿ ತನುಶ್ರೀ ದತ್ತಾ!
ಕ್ರೈಂ
Murder Case: ಕೋಪದಿಂದ ಅಜ್ಜಿಯ ಕೊಲೆ ಮಾಡಿದ, ಹೆಣ ಕಾರಿನಲ್ಲಿ ಇಟ್ಟುಕೊಂಡು ಮಿಸ್ಸಿಂಗ್ ಕಂಪ್ಲೇಂಟ್ ನೀಡಿದ!
ಅಜ್ಜಿಯನ್ನು ಕೊಲೆ ಮಾಡಿದ ಮೊಮ್ಮಗ ಹೆಣವನ್ನು ಪ್ಯಾಕ್ ಮಾಡಿ ಕಾರಿನಲ್ಲಿಟ್ಟುಕೊಂಡು ದಿನವಿಡೀ ಓಡಾಡಿದ್ದು, ಪೊಲೀಸ್ ಠಾಣೆಗೂ ಹೋಗಿ ಕಂಪ್ಲೇಂಟ್ ನೀಡಿದ್ದಾನೆ! ಶವ ಸುಡಲು ಕೊರಿಯನ್ ವೆಬ್ ಸೀರಿಸ್ ನೋಡಿ ಪ್ರೇರಣೆ ಪಡೆದಿದ್ದಾನೆ.
ಮೈಸೂರು: ಕೆಆರ್‌ಎಸ್ ಹಿನ್ನಿರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಸಿಕ್ಕಿದ ಪ್ರಕರಣವನ್ನು ಮೈಸೂರು ಪೊಲೀಸರು ಭೇದಿಸಿದ್ದಾರೆ. ಸ್ವಂತ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ.
ಮೈಸೂರಿನ ಗಾಯತ್ರಿಪುರಂ ನಿವಾಸಿ ಸುಲೋಚನ (75) ಮೃತ ಮಹಿಳೆ. ಸುಪ್ರೀತ್ (23) ಅಜ್ಜಿಯನ್ನು ಕೊಂದ ಮೊಮ್ಮಗನಾಗಿದ್ದಾನೆ. ಮೈಸೂರು ತಾಲೂಕಿನ ಸಾಗರಕಟ್ಟೆ ಗ್ರಾಮದ ಬಳಿ ಮೇ 30ರಂದು ಶವ ಪತ್ತೆಯಾಗುವ ಮೂಲಕ ಘಟನೆ ತನಿಖೆಗೆ ಚಾಲನೆ ನೀಡಲಾಗಿತ್ತು. ಗುರುತು ಸಿಗದಂತೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.
ಮೃತ ದೇಹದ ತಲೆ ಕೂದಲು ಹಾಗೂ ಕನ್ನಡಕದಿಂದ ಮೈಸೂರು ದಕ್ಷಿಣ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ನಜರ್‌ಬಾದ್ ಠಾಣೆಯಲ್ಲಿ ದಾಖಲಾಗಿದ್ದ ಮಿಸ್ಸಿಂಗ್ ಕಂಪ್ಲೇಂಟ್ ಜೊತೆಗೆ ಸಾಮ್ಯತೆ ಕಂಡುಬಂದಿತ್ತು. ಕೊಲೆ ಮಾಡಿದ ಮೊಮ್ಮಗನೇ ಮಿಸ್ಸಿಂಗ್ ಕಂಪ್ಲೇಂಟ್ ಕೂಡ ನೀಡಿದ್ದ. ಆತನನ್ನು ವಿವರವಾದ ತನಿಖೆಗೆ ಒಳಪಡಿಸಿದಾಗ ಸತ್ಯ ಹೊರಬಂದಿದೆ.
ಅಜ್ಜಿ ಬೈಯುತ್ತಿದ್ದರು, ಹಾಗಾಗಿ ಕೊಲೆ ಮಾಡಿದೆ ಎಂದು ಹೇಳಿದ್ದಾನೆ ಈ ಕೊಲೆಗಾರ ಮೊಮ್ಮಗ. ಮೇ 28ರಂದು ಮನೆಯಲ್ಲಿ ಮಾತಿಗೆ ಮಾತು ಬೆಳೆದು, ಬೈದ ಅಜ್ಜಿ ಸುಲೋಚನ ಅವರನ್ನು ಸುಪ್ರೀತ್ ತಳ್ಳಿದ್ದಾನೆ. ಹೊಡೆದು ಬೀಳಿಸಿ ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ, ರಟ್ಟಿನ ಬಾಕ್ಸ್‌ನಲ್ಲಿ ಹಾಕಿದ್ದ. ಶವವನ್ನು ಏನು ಮಾಡುವುದು ಎಂಬುದಕ್ಕೆ ಕೊರಿಯನ್ ವೆಬ್ ಸೀರಿಸ್ ನೋಡಿ ಪ್ರೇರಣೆ ಪಡೆದಿದ್ದಾನೆ. ಹೆಣ ಸುಟ್ಟು ಬಚಾವಾಗಲು ಯತ್ನಿಸಿದ್ದಾನೆ.
ಕಾರಿನಲ್ಲಿ ಕೆಆರ್‌ಎಸ್ ಹಿನ್ನೀರು ಪ್ರದೇಶಕ್ಕೆ ಶವ ಕೊಂಡೊಯ್ದು ಗುಂಡಿಯಲ್ಲಿ ಹಾಕಿ ಶವವನ್ನು ಸುಟ್ಟು ಹಾಕಿದ್ದಾನೆ. ಅದಕ್ಕೂ ಮುನ್ನ ಹೆಣವನ್ನು ಪ್ಯಾಕ್ ಮಾಡಿ ಕಾರಿನಲ್ಲಿಟ್ಟುಕೊಂಡು ದಿನವಿಡೀ ಓಡಾಡಿದ್ದು, ಹಾಗೇ ಪೊಲೀಸ್ ಠಾಣೆಗೂ ಹೋಗಿ ಕಂಪ್ಲೇಂಟ್ ನೀಡಿದ್ದಾನೆ!
ಇದನ್ನೂ ಓದಿ: Crime News : ಹಾಸ್ಟೆಲ್‌ನಲ್ಲೇ ಯುವತಿಯ ಅತ್ಯಾಚಾರ, ಕೊಲೆ; ಹಳಿ ಮೇಲೆ ಪತ್ತೆಯಾಯ್ತು ಮತ್ತೊಂದು ಶವ!
ಕರ್ನಾಟಕ
Medical Negligence: ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ತಿಂಗಳ ಮಗು ಸಾವು? ಲಸಿಕೆ ಹಾಕಿ ಗಂಟೆಯೊಳಗೇ ಮರಣ!
Child Death: ಮೂರು ತಿಂಗಳ ಮಗುವನ್ನು ಚುಚ್ಚುಮದ್ದು ಹಾಕಿಸಿಕೊಂಡು ಹೋಗಲು ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದು, ವೈದ್ಯರು ನೀಡಿದ ಚುಚ್ಚುಮದ್ದಿನಿಂದ ಕೆಲವೇ ಗಂಟೆಯಲ್ಲಿ ಮಗು ಮೃತಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪೋಷಕರು, ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹೊಯ್ಸಳಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ (Medical Negligence) ಮೂರು ತಿಂಗಳ ಮಗುವೊಂದು ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಲಸಿಕೆ ಹಾಕಿದ ಒಂದು ಗಂಟೆಯೊಳಗೆ ಮಗು ಮೃತಪಟ್ಟಿದ್ದು, ಪೋಷಕರು, ಸಂಬಂಧಿಕರು ಪ್ರತಿಭಟನೆ (Protest) ನಡೆಸಿದ್ದಾರೆ.
ಚುಚ್ಚುಮದ್ದು ಪಡೆದು ಮನೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಮಗು ಮೃತಪಟ್ಟಿದೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಆಗಿದೆ. ಮಗು ಅಲ್ಲಿಯವರೆಗೆ ಆರೋಗ್ಯವಾಗಿಯೇ ಇತ್ತು ಎಂದು ಆರೋಪಿಸಿ ಆಸ್ಪತ್ರೆ ಎದುರು ಮೃತ ಮಗುವಿನ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಭೇಟಿ ನೀಡಿ ಮೃತ ಮಗುವಿನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!
ವೈದ್ಯರು ಹಾಗೂ ಸಿಬ್ಬಂದಿ ಸೇರಿ ಐವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಡಾ. ಮಧು, ಸಿಬ್ಬಂದಿ ಸಾನಿಯಾ, ಮಮತಾ, ಶೋಭಾ, ಲಕ್ಷ್ಮೀದೇವಿ, ಚಂದ್ರಪ್ರಭಾ ವಿರುದ್ಧ ದೂರು ದಾಖಲು ಮಾಡಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿಯಲ್ಲಿ ಗರ್ಭಿಣಿಗೆ ಸಿಗದ ಚಿಕಿತ್ಸೆ; ಹೊಟ್ಟೆಯಲ್ಲೇ ಶಿಶು ಸಾವು
ಯಾದಗಿರಿ: ತಾಲೂಕಿನ ಹೊನಗೇರಾದಲ್ಲಿನ ಪ್ರಾಥಮಿಕ ಆಸ್ಪತ್ರೆಗೆ ಹೆರಿಗೆಗೆಂದು ತೆರಳಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ದೊರೆಯದ ಹಿನ್ನೆಲೆಯಲ್ಲಿ ಅವರ ಹೊಟ್ಟೆಯಲ್ಲಿಯೇ ಶಿಶು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿತ್ತು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಯಾದಗಿರಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದರು. ಸೂಕ್ತ ನ್ಯಾಯಕ್ಕಾಗಿ ಒತ್ತಾಯಿಸಿದ್ದರು.
ಇದನ್ನೂ ಓದಿ: Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ
ಆಶನಾಳ ಗ್ರಾಮದ ಗರ್ಭಿಣಿ ಲಕ್ಷ್ಮಿ ಎಂಬುವವರಿಗೆ ಸರಿಯಾದ ಚಿಕಿತ್ಸೆ ಸಿಕ್ಕಿಲ್ಲ. ವೈದ್ಯರ ನಿರ್ಲಕ್ಷ್ಯದಿಂದಲೇ ಹೀಗೆ ಆಗಿದೆ ಎಂದು ಆರೋಪ ಮಾಡಲಾಗಿತ್ತು. ಮೊದಲಿಗೆ ಆಶಾ ಕಾರ್ಯಕರ್ತೆಯು ಇವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು. ಅಲ್ಲಿ ವೈದ್ಯರು ಇರದ ಹಿನ್ನೆಲೆಯಲ್ಲಿ ಯಾದಗಿರಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆನ್ನಲಾಗಿದೆ. ಗರ್ಭಿಣಿ ಲಕ್ಷ್ಮಿಯ ಸ್ಕ್ಯಾನಿಂಗ್ ಮಾಡಿಸಿದಾಗ ಹೊಟ್ಟೆಯಲ್ಲಿ ಶಿಶು ಮೃತಪಟ್ಟಿದ್ದ ಬಗ್ಗೆ ತಿಳಿದುಬಂದಿದೆ. ಕೊನೆಗೆ ಮೃತ ಶಿಶುವನ್ನು ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಹೊರ ತೆಗೆದಿದ್ದಾರೆ. ಬಳಿಕ ಬಾಣಂತಿ ಲಕ್ಷ್ಮಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ.
-
ಸುವಚನ12 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ19 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema23 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema23 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ಪ್ರಮುಖ ಸುದ್ದಿ24 hours ago
ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ
-
ಕರ್ನಾಟಕ22 hours ago
Fraud Case: ಬೆಳದಿಂಗಳ ಬಾಲೆ ಪ್ರಕರಣಕ್ಕೆ ಟ್ವಿಸ್ಟ್; ಸ್ವಾಮೀಜಿ ವಂಚನೆ ಕೇಸಲ್ಲಿ ಎ2 ಆರೋಪಿ ಈಗ ಎ1!
-
ದೇಶ21 hours ago
ಸಹಕಾರಿ ಬ್ಯಾಂಕ್ಗಳು ಕೂಡ ಸುಸ್ತಿದಾರರ ಜತೆ ರಾಜಿ, ಸಾಲ ರೈಟ್-ಆಫ್ ಮಾಡಬಹುದು; ಆರ್ಬಿಐ ಮಹತ್ವದ ಘೋಷಣೆ
-
South Cinema22 hours ago
Corset Fashion: ಬಣ್ಣ ಬಣ್ಣದ ಕಾರ್ಸೆಟ್ ಕ್ರಾಪ್ ಟಾಪ್ ಜಾದೂ…