Fire Accident : ಅನಿಲ ಸೋರಿಕೆಯಿಂದ ಬೆಂಕಿ; ಅಡುಗೆ ಮನೆಯಲ್ಲೇ ಸುಟ್ಟು ಕರಕಲಾದ ಮಹಿಳೆ - Vistara News

ಧಾರವಾಡ

Fire Accident : ಅನಿಲ ಸೋರಿಕೆಯಿಂದ ಬೆಂಕಿ; ಅಡುಗೆ ಮನೆಯಲ್ಲೇ ಸುಟ್ಟು ಕರಕಲಾದ ಮಹಿಳೆ

Fire Accident : ಧಾರವಾಡದ ಗರಗದಲ್ಲಿ ಅಡುಗೆ ಮನೆಯಲ್ಲಿ ಅನಿಲ ಸೋರಿಕೆಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ವ್ಯಾಪಾರಿಯೊಬ್ಬರನ್ನು ಸುಟ್ಟು ಹಾಕಲಾಗಿದೆ.

VISTARANEWS.COM


on

Fire Accident Gas leakage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಅಡುಗೆ ಮನೆಯಲ್ಲಿದ್ದ ಗ್ಯಾಸ್‌ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ (Gas leakage from cylinder) ಮನೆಗೆ ಬೆಂಕಿ ಹತ್ತಿಕೊಂಡು (Fire Accident at House) ಆ ಬೆಂಕಿಯಲ್ಲಿ ಮಹಿಳೆಯೊಬ್ಬರು ದಹಿಸಿ (Woman Burnt Alive) ಹೋದ ಭೀಕರ ಘಟನೆ ಧಾರವಾಡ (Dharwad News) ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದೆ.

ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಈ ಮನೆಯ ಅಡುಗೆ ಮನೆಯಲ್ಲಿ ಇದ್ದ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಗ್ಯಾಸ್‌ ಸ್ಟವ್‌ನಿಂದ ಬೆಂಕಿ ಹತ್ತಿಕೊಂಡಿತು. ಆಗ ಅಡುಗೆ ಮನೆಯಲ್ಲಿದ್ದ ಮಹಾದೇವಿ ಒಗೆನ್ನವರ(28) ಅವರಿಗೆ ಬೆಂಕಿ ಹತ್ತಿಕೊಂಡಿತು. ಬೆಳಗ್ಗೆ ಬೆಳಗ್ಗೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಆಕೆಗೆ ಹೊರಗೆ ಬರಲು ಸಾಧ್ಯವಾಗಲೇ ಇಲ್ಲ. ಹೀಗಾಗಿ ಅವರಿಗೆ ತುಂಬಾ ಸುಟ್ಟ ಗಾಯಗಳಾದವು.

ಈ ನಡುವೆ, ಆಕೆಯನ್ನು ರಕ್ಷಿಸಲು ಇನ್ನೂ ಕೆಲವು ಮಹಿಳೆಯರು ಮುಂದಾಗಿದ್ದು, ಅವರಿಗೂ ಸುಟ್ಟ ಗಾಯಗಳಾಗಿವೆ. ಮಹಾದೇವಿ ಸೇರಿದಂತೆ ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾದೇವಿ ಅವರು ಮೃತಪಟ್ಟರೆ ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ಆರಿಸುವಲ್ಲಿ ನೆರವಾದರು.

ಚಿಲ್ಲರೆ ಅಂಗಡಿ ವ್ಯಾಪಾರಿ ಶವ ಪತ್ತೆ; ಕೊಲೆ ಶಂಕೆ

ಮೈಸೂರು: ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರಿಯಾಗಿದ್ದ ಎಚ್‌.ಸಿ. ಹರೀಶ್ (40) ಎಂಬವರು ಅರೆಬೆಂದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾಲಿಗ್ರಾಮ ತಾಲೂಕಿನ ಕುಪ್ಪೆ ಅರಣ್ಯದ ಮಳಲಿ- ಹೊಸಕೋಟೆ ರಸ್ತೆಯ ಪಕ್ಕದಲ್ಲಿ ಶವ ಪತ್ತೆಯಾಗಿದೆ. ಇವರನ್ನು ಸ್ನೇಹಿತರು ಬಂದು ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆ ಎಂಬ ಸಂಶಯ ಕೇಳಿಬಂದಿದೆ. ಮಾಹಿತಿ ತಿಳಿದ ಸಾಲಿಗ್ರಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೊಲೆಯ ಹಿಂದಿನ ವಿದ್ಯಮಾನಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Murder Case : ಪತ್ನಿಯ ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ್ದ ಕಿರಾತಕ; ಪೋಸ್ಟ್‌ಮಾರ್ಟಂನಲ್ಲಿ ಸಿಕ್ಕಿಬಿದ್ದ!

ಚಿತ್ರದುರ್ಗ: ಸಾಲಗಾರರ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ?

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆಯ ಗಂಡ ದೊಡ್ಡ ಪ್ರಮಾಣದಲ್ಲಿ ಸಾಲ ಮಾಡಿಕೊಂಡಿದ್ದು, ಅದನ್ನು ಕೇಳಲು ಸಾಲಗಾರರು ಆಗಾಗ ಬರುತ್ತಿದ್ದರು ಎನ್ನಲಾಗಿದೆ. ಅವರ ಕಿರಿಕಿರಿ ತಾಳಲಾರದೆ ಆಕೆ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ. ಪತ್ನಿಯ ಸಾವಿಗೆ ಸಾಲಗಾರರೆ ಕಾರಣ ಎಂದು ರಂಜಿತಾ ಪತಿ ದರ್ಶನ್ ಕೂಡಾ ದೂರು ನೀಡಿದ್ದಾನೆ.

ಸಣ್ಣ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದ ದರ್ಶನ್ ಜತೆ ಐದು ವರ್ಷಗಳ ಹಿಂದೆ ರಂಜಿತಾ ಮದುವೆ ನಡೆದಿತ್ತು. ದರ್ಶನ್‌ಗೆ ಒಳ್ಳೆಯ ಉದ್ಯೋಗವಿದ್ದರೂ ದರ್ಶನ್‌ ಖಾಸಗಿಯಾಗಿ ಕೋಟಿಗಟ್ಟಲೆ ಸಾಲ ಮಾಡಿಕೊಂಡಿದ್ದ.

ಹೀಗಾಗಿ ಸಾಲಗಾರರು ದಿನನಿತ್ಯ ಮನೆಗೆ ಬಂದು ಹಣ ನೀಡುವಂತೆ ಬಲವಂತ ಮಾಡುತ್ತಿದ್ದರು. ಹಣಕ್ಕಾಗಿ ಮನೆ ಹತ್ತಿರ ಬಂದು ದಂಪತಿಗಳಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಸಾಲಗಾರರ ಕಿರುಕುಳಕ್ಕೆ ಬೇಸತ್ತು ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪತಿ ಹೇಳಿದ್ದು, ಪೊಲೀಸರು ಎಲ್ಲ ದಿಕ್ಕಿನಲ್ಲೂ ತನಿಖೆ ನಡೆಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಒಳನಾಡಿನಲ್ಲಿ ತಗ್ಗಿದ ಮಳೆ; ಕರಾವಳಿ, ಮಲೆನಾಡಲ್ಲಿ ಭಾರಿ ವರ್ಷಧಾರೆ

Karnataka Weather Forecast : ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ (Rain News) ಸಾಧಾರಣವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿರಲಿದೆ. ರಾಜ್ಯಾದ್ಯಂತ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ (Yellow alert) ಮಾಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Karnataka Rain) ಅಬ್ಬರ ಕಡಿಮೆ ಆಗಿದೆ. ಇಂದು ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದ್ದರೆ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಹುಬ್ಬಳ್ಳಿ, ರಾಯಚೂರು, ಧಾರವಾಡ, ಚಿಕ್ಕೋಡಿ, ಗದಗ, ಕೊಪ್ಪಳದಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರಲ್ಲಿ ಮಧ್ಯಮ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಲಘು ಮಳೆಯಾಗಲಿದೆ.

ಇದನ್ನೂ ಓದಿ: Kolar News : ಕೋಲಾರದ ಒಂಟಿ ಮನೆಯಲ್ಲಿ ವೇಶ್ಯಾವಾಟಿಕೆ; ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಳು ರೈತ ಸಂಘದ ಮುಖ್ಯಸ್ಥೆ!

ಬೆಂಗಳೂರಲ್ಲಿ ಮರೆಯಾಗುವ ಸೂರ್ಯ

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರಿ ಮಳೆಗೆ ಗುಡುಗು ಸಾಥ್‌ ನೀಡಲಿದ್ದು, ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Karnataka Weather Forecast : ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain Effect ) ಅಬ್ಬರಿಸುತ್ತಿದ್ದು, ನಾನಾ ಅವಾಂತರವೇ ಸೃಷ್ಟಿಯಾಗಿದೆ. ಮೊಟಕಾಲಿನಷ್ಟು ನಿಂತಿದ್ದ ನೀರಲ್ಲಿ ಗಾಡಿ ಚಲಾಯಿಸಲು ಹೋಗಿ ಸವಾರರು ಮುಗ್ಗರಿಸಿ ಬಿದ್ದಿದ್ದಾರೆ. ಮತ್ತೊಂದೆಡೆ ಕರ್ನಾಟಕ-ಗೋವಾ ಗಡಿ ಅನಮೋಡ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾದರೆ, ಶಿರಸಿ-ಕುಮಟಾ ರಸ್ತೆಯಲ್ಲಿ ಗುಡ್ಡ ಕುಸಿತ ಪ್ರಕರಣ ಮುಂದುವರಿದಿದೆ.

VISTARANEWS.COM


on

By

karnataka Rain Effect
Koo

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ (Karnataka weather Forecast) ಮುಂದುವರಿದಿದ್ದು, ಗೋವಾ ಲೋಂಡಾ ಬೆಳಗಾವಿ ಸಂಪರ್ಕಿಸುವ ರಸ್ತೆ (Karnataka Rain Effect) ಮುಳುಗಡೆಯಾಗಿದೆ. ಕಾಡಿನಿಂದ ಏಕಾಏಕಿ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ಇದರಿಂದಾಗಿ ರಸ್ತೆ ಮೇಲೆ ಮೂರ್ನಾಲ್ಕು ಅಡಿ ನೀರು ನಿಂತಿದೆ. ಇನ್ನೂ ಅಪಾಯ ಲೆಕ್ಕಿಸದೇ ಕೆರೆಯಂತಾಗಿದ್ದ ರಸ್ತೆಯಲ್ಲಿ ಬೈಕ್ ಚಲಾಯಿಸಿಕೊಂಡು ಬಂದ ಸವಾರರು ನೀರಲ್ಲಿ ಬಿದ್ದಿದ್ದರು. ಬಳಿಕ ಬೈಕ್‌ನಿಂದ ಇಳಿದು ನೀರಿನಲ್ಲೇ ಬೈಕ್‌ ತಳ್ಳಿಕೊಂಡು ರಸ್ತೆ ದಾಟ್ಟಿದ್ದಾರೆ. ಇತ್ತ ತುಂಬಿದ್ದ ನೀರಲ್ಲಿ ಬಂದ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಸದ್ಯ ನೀರು ಹೋಗುವಂತೆ ಜೆಸಿಬಿಯಿಂದ ಸ್ಥಳೀಯರಿಂದ ಕಾಮಗಾರಿ ನಡೆಯುತ್ತಿದೆ.

ಕರ್ನಾಟಕ-ಗೋವಾ ಗಡಿ ಅನಮೋಡ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿ

ಕರಾವಳಿಯ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಕರ್ನಾಟಕ-ಗೋವಾ ಗಡಿ ಅನಮೋಡ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಅನಮೋಡ್-ಗೋವಾ ರಸ್ತೆಯಲ್ಲಿ ನೀರು ನಿಂತ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.

ರಾಮನಗರದ ಅನಮೋಡ್ ರಸ್ತೆಯ ಎಲಿಫೆಂಟ್ ಬ್ರಿಡ್ಜ್ ಬಳಿ ನೀರು ತುಂಬಿ ನಿಂತಿದೆ. ಓವರ್ ಬ್ರಿಡ್ಜ್ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಸಂಚಾರಕ್ಕೆ ತೊಡಕಾಗಿದೆ. ನೀರು ತುಂಬಿದ್ದ ರಸ್ತೆಯಲ್ಲಿ ಕಂಟೇನರ್ ಪಲ್ಟಿ ಹೊಡೆದ ಪರಿಣಾಮ ಬೆಳಗಾವಿ-ರಾಮನಗರ-ಗೋವಾ ಮಾರ್ಗದ ಸಂಚಾರ ಅಸ್ತವ್ಯಸ್ತವಾಗಿದೆ.

ನಿನ್ನೆ ಬುಧವಾರ ಸಂಜೆಯಿಂದಲೂ ರಸ್ತೆಯಲ್ಲೇ ಲಾರಿ, ಬಸ್‌ಗಳು ಸಾಲುಗಟ್ಟಿ ನಿಂತಿವೆ. ಇತ್ತ ಪ್ರಯಾಣಿಕರು ರಾತ್ರಿಯಿಡೀ ಬಸ್‌ನಲ್ಲೇ ಕಾಲಕಳೆದಿದ್ದಾರೆ. ಸಾಲುಗಟ್ಟಿ ವಾಹನಗಳು ನಿಂತ ಪರಿಣಾಮ ವಾಪಸ್ ಹೋಗಲಾಗದೇ ಪರದಾಟ ಅನುಭವಿಸಿದರು. ಸ್ಥಳೀಯಾಡಳಿತ ಜೆಸಿಬಿ ಬಳಸಿ ನೀರು ಹರಿದುಹೋಗಲು ವ್ಯವಸ್ಥೆ ಮಾಡುತ್ತಿದ್ದಾರೆ. ರಾಮನಗರ-ಅನಮೋಡ್-ಗೋವಾ ರಸ್ತೆಯಲ್ಲಿ ವಾಹನ ಸವಾರರ ಪರದಾಟ ಹೇಳತೀರದಾಗಿದೆ.

ಇದನ್ನೂ ಓದಿ: UGCET 2024: ಅರ್ಹತಾ ಅಂಕ ಶೇ 45ಕ್ಕೆ ಇಳಿಕೆ ; ಆರ್ಕಿಟೆಕ್ಚರ್ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಜು. 13ರವರೆಗೆ ಅವಕಾಶ

ಶಿರಸಿ-ಕುಮಟಾ ರಸ್ತೆಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766EEಯ ಕತಗಾಲ ಗ್ರಾಮದ ಬಳಿ ಗುಡ್ಡ ಕುಸಿದಿದೆ. ಭಾರತ್‌ಮಾಲಾ ಯೋಜನೆಯಡಿ ನಡೆಯುತ್ತಿರುವ ಶಿರಸಿ ಕುಮಟಾ ಹೆದ್ದಾರಿ ಅಗಲೀಕರಣಕ್ಕಾಗಿ ಮಣ್ಣು ಕೊರೆಯಲಾಗಿದೆ. ಇದರಿಂದಲೇ ಗುಡ್ಡ ಕುಸಿದಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಗುಡ್ಡ ಕುಸಿಯುತ್ತಲೇ ಇದೆ. ರಸ್ತೆಗೆ ಮಣ್ಣು ಬಿದ್ದ ಪರಿಣಾಮ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

ಮುಳುಗಡೆಯಾಗಿದ್ದ ಸೇತುವೆಗಳು ಸಂಚಾರಕ್ಕೆ ಮುಕ್ತ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಕೃಷ್ಣಾ, ದೂದಗಂಗಾ ಹಾಗೂ ವೇದಗಂಗಾ ನದಿ ನೀರಿನ ಒಳ ಹರಿವಿನಲ್ಲಿ ಗಣನೀಯ ಇಳಿಕೆ ಆಗಿದೆ. ಒಂದೆ ದಿನದಲ್ಲಿ 20 ಸಾವಿರ ಕ್ಯೂಸೇಕ್ ಒಳ ಹರಿವಿನಲ್ಲಿ ಇಳಿಕೆ ಆಗಿದೆ. ಇನ್ನೂ ಚಿಕ್ಕೋಡಿ ವ್ಯಾಪ್ತಿಯ ಮುಳುಗಡೆಯಾಗಿದ್ದ 3 ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ ಭೋಜವಾಡಿ-ಕುಣ್ಣೂರ ಸೇತುವೆಗಳು ಹಾಗೂ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಸೇತುವೆ ಸಂಚಾರಕ್ಕೆ ಮುಕ್ತವಾಗಿವೆ. ಇನ್ನು ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗುವ ಸಾದ್ಯತೆ ಇದೆ.

ಇತ್ತ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಕೃಷ್ಣಾ ನದಿಗೆ ಅಡ್ಡವಾಗಿ ಕಟ್ಟಲಾಗಿರುವ ಆಲಮಟ್ಟಿ ಜಲಾಶಯಕ್ಕೆ ದಿನೆದಿನೇ ಒಳಹರಿವು ಹೆಚ್ಚಾಗುತ್ತಿದೆ. ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ನದಿಪಾತ್ರದ ಜನರಿಗೆ ಸುರಕ್ಷಿತವಾಗಿರಲು ಕೆಬಿಜೆಎನ್ಎಲ್ ಅಧಿಕಾರಿಗಳು ಮುನ್ಸೂಚನೆ ಜತೆಗೆ ಎಚ್ಚರಿಕೆಯನ್ನು ನೀಡಿದೆ. 3,500 ಕ್ಯೂಸೆಕ್ ನೀರು ಹೊರಹರಿವಿನ ಸೂಚನೆ ನೀಡಿದ್ದು, ಕ್ರಮೇಣ ಅದನ್ನು 7,500 ಕ್ಯೂಸೆಕ್‌ಗೆ ಹೆಚ್ಚಿಸಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Weather: ಇಂದು ಉಡುಪಿ, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ!

Karnataka Weather: ಜುಲೈ 16ರವರೆಗೆ ಕರ್ನಾಟಕದ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

ಮುಂಗಾರು ಮಳೆ ಸಿಂಚನಕ್ಕೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಭೂಲೋಕದ ಸ್ವರ್ಗದಂತಾಗಿದೆ. ಗಿರಿ ಸೌಂದರ್ಯ ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.
Koo

ಬೆಂಗಳೂರು: ಜುಲೈ 11ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ. ಅದೇ ರೀತಿ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಗುಡುಗು, ಬಿರುಗಾಳಿ ಸಹಿತ (30-40 kmph ವೇಗ) ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ

ಉತ್ತರ ಒಳ ಕರ್ನಾಟಕದ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೇಗ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮಾಹಿತಿ ನೀಡಿದೆ.

ಇನ್ನು ಜುಲೈ 12ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಪ್ರತ್ಯೇಕ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಜುಲೈ 16ರವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದ್ದು, ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ದಕ್ಷಿಣ ಕನ್ನಡ: ಕರ್ನಾಟಕ ಕರಾವಳಿಗೆ ಮುಲ್ಕಿಯಿಂದ ಮಂಗಳೂರಿನವರೆಗೆ ಹೈ ವೇವ್ ವಾಚ್: ಜುಲೈ 11ರಂದು ರಾತ್ರಿ 11:30 ಗಂಟೆಗಳವರೆಗೆ 2.1 – 2.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.
ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಗೆ ಹೈ ವೇವ್ ವಾಚ್: ರಾತ್ರಿ 11:30 ಗಂಟೆಗಳವರೆಗೆ 2.2-2.4 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.
ಉತ್ತರ ಕನ್ನಡ: ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ವಾಚ್: ರಾತ್ರಿ 11:30 ಗಂಟೆಗಳವರೆಗೆ 2.4 2.5 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Karnataka Rain: ಭಾರಿ ಮಳೆಗೆ ಬೈಂದೂರು ಬಳಿ ಗುಡ್ಡ ಕುಸಿತ; ನಾಳೆ ಬೆಳಗಾವಿ, ಧಾರವಾಡ, ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20° C ಆಗಿರಬಹುದು.

Continue Reading

ಕರ್ನಾಟಕ

Karnataka Rain: ಭಾರಿ ಮಳೆಗೆ ಬೈಂದೂರು ಬಳಿ ಗುಡ್ಡ ಕುಸಿತ; ನಾಳೆ ಬೆಳಗಾವಿ, ಧಾರವಾಡ, ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ!

Karnataka Rain: ಜುಲೈ 11ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Koo

ಉಡುಪಿ: ನಿರಂತರವಾಗಿ ಸುರಿದ ಭಾರಿ ಮಳೆಯಿಂದ (Karnataka Rain) ಬೈಂದೂರು ಸೋಮೇಶ್ವರ ದೇವಳದ ಮೇಲ್ಭಾಗದಲ್ಲಿ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಖಾಸಗಿ ರೆಸಾರ್ಟ್‌ ಕಾಮಗಾರಿಯ ಹಿನ್ನೆಲೆಯಲ್ಲಿ ಗುಡ್ಡ ಕುಸಿದಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಕಟ್ಟಡ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಪರವಾನಗಿ ನೀಡಿದ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದಿದೆ. ಮಣ್ಣು ರಸ್ತೆಗೆ ಬಿದ್ದಿದ್ದರೂ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.

ಭೂಲೋಕದ ಸ್ವರ್ಗದಂತಾದ ಮುಳ್ಳಯ್ಯನಗಿರಿ

ಚಿಕ್ಕಮಗಳೂರು: ಮುಂಗಾರು ಮಳೆ ಸಿಂಚನಕ್ಕೆ ಮುಳ್ಳಯ್ಯನಗಿರಿ ಭೂಲೋಕದ ಸ್ವರ್ಗದಂತಾಗಿದೆ. ಗಿರಿ ಸೌಂದರ್ಯ ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಮುಳ್ಳಯ್ಯನಗಿರಿ ತಪ್ಪಲನ್ನು ಮಂಜಿನ ರಾಶಿ ಆವರಿಸೋ ದೃಶ್ಯ ಪ್ರವಾಸಿಗರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಶಿಖರದಲ್ಲಿ ಮಂಜು ಮತ್ತು ಮಳೆಯ ಸಿಂಚನಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಹಸಿರ ತಪ್ಪಲಿಗೆ ಮಂಜು ಆವರಿಸಿರುವ ಅದ್ಭುತ ದೃಶ್ಯ ಗಮನ ಸೆಳೆಯುತ್ತಿದೆ.

ಬೆಳಗಾವಿಯಲ್ಲಿ ಭಾರಿ ಮಳೆ ಕುಸಿದ ಮುಖ್ಯ ರಸ್ತೆ

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಸಾವಗಾಂವ ಬಳಿ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿದೆ. ಬೆಳಗಾವಿ ನಗರದಿಂದ ಸಾವಗಾಂವಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಅರ್ಧ ಕಿ.ಮೀ.ಗೂ ಹೆಚ್ಚು ಬಿರುಕು ಬಿಟ್ಟಿದೆ.

ನಿರಂತರ ಮಳೆ ಹಾಗೂ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿತವಾಗಿದೆ. ಎರಡು ವರ್ಷದ ಹಿಂದೆ ನಿರ್ಮಿಸಿದ್ದ ಕಾಂಕ್ರೀಟ್ ರಸ್ತೆ ಇದಾಗಿದೆ. ಈ ರಸ್ತೆಯಲ್ಲಿ ಅತೀ ಹೆಚ್ಚು ಶಾಲಾ ವಾಹನಗಳೇ ಓಡಾಡುತ್ತವೆ, ವಾಹನ ಸವಾರರು ಜೀವ ಭಯದಲ್ಲಿ ಓಡಾಡುತ್ತಿದ್ದಾರೆ.

ನಾಳೆ ರಾಜ್ಯದ ವಿವಿಧೆಡೆ ಭಾರಿ ಮಳೆ

ಜುಲೈ 11ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ. ಅದೇ ರೀತಿ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಗುಡುಗು, ಬಿರುಗಾಳಿ ಸಹಿತ (30-40 kmph ವೇಗ) ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ

ಉತ್ತರ ಒಳ ಕರ್ನಾಟಕದ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೇಗ (30-40 kmph) ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮಾಹಿತಿ ನೀಡಿದೆ.

ಇನ್ನು ಜುಲೈ 12ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಪ್ರತ್ಯೇಕ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅದೇ ರೀತಿ ಜುಲೈ 16ರವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದ್ದು, ಹಗುರದಿಂದ ಸಾಧಾರಣ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ದಕ್ಷಿಣ ಕನ್ನಡ: ಕರ್ನಾಟಕ ಕರಾವಳಿಗೆ ಮುಲ್ಕಿಯಿಂದ ಮಂಗಳೂರಿನವರೆಗೆ ಹೈ ವೇವ್ ವಾಚ್: ಜುಲೈ 11ರಂದು ರಾತ್ರಿ 11:30 ಗಂಟೆಗಳವರೆಗೆ 2.1 – 2.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.
ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಗೆ ಹೈ ವೇವ್ ವಾಚ್: ರಾತ್ರಿ 11:30 ಗಂಟೆಗಳವರೆಗೆ 2.2-2.4 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.
ಉತ್ತರ ಕನ್ನಡ: ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ವಾಚ್: ರಾತ್ರಿ 11:30 ಗಂಟೆಗಳವರೆಗೆ 2.4 2.5 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20° C ಆಗಿರಬಹುದು.

Continue Reading
Advertisement
Akshay Kumar tests positive for COVID-19 will miss Anant Ambani wedding
ಬಾಲಿವುಡ್11 mins ago

Akshay Kumar:  ಅಕ್ಷಯ್ ಕುಮಾರ್‌ಗೆ ಕೋವಿಡ್‌ ಪಾಸಿಟಿವ್; ಅನಂತ್ ಅಂಬಾನಿ ಮದುವೆಗೆ ಗೈರು!

Anant Radhika Wedding
ವಾಣಿಜ್ಯ12 mins ago

Anant Radhika Wedding: ಮಗನ ಮದುವೆ ಸಂದರ್ಭದಲ್ಲಿ ಕಾಶಿಗೆ ಗೌರವ; ನೀತಾ ಅಂಬಾನಿಯ ಈ ವಿಡಿಯೊ ನೋಡಿ

Arvind Kejriwal
ದೇಶ20 mins ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಶಾಕ್‌! ಜು.25ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Drowned in water
ಕಲಬುರಗಿ31 mins ago

Drowned In Water : ಭೀಮಾ ನದಿಯಲ್ಲಿ ಪುಣ್ಯಸ್ನಾನಕ್ಕೆ ಇಳಿದಾಗ ಕೊಚ್ಚಿ ಹೋದ ಯುವತಿ

Monsoon session
ಕರ್ನಾಟಕ32 mins ago

Monsoon session: ಜು.15ರಿಂದ ಮುಂಗಾರು ಅಧಿವೇಶನ: ನಾಗೇಂದ್ರ ಬಂಧನಕ್ಕೆ ಇಡಿ ನನ್ನ ಅನುಮತಿ ಪಡೆಯಲೇಬೇಕು ಎಂದ ಸ್ಪೀಕರ್‌

John Cena
ಕ್ರೀಡೆ36 mins ago

John Cena: ಅನಂತ್‌ ಅಂಬಾನಿ-ರಾಧಿಕಾ ಮದುವೆಗೆ ಆಗಮಿಸಿದ ಖ್ಯಾತ ರಸ್ಲರ್​ ಜಾನ್ ಸೀನ; ವಿಡಿಯೊ ವೈರಲ್​

Actor Yash Changed Rocky Bhai Hair Style
ಸ್ಯಾಂಡಲ್ ವುಡ್46 mins ago

Actor Yash: ಬದಲಾಯ್ತುʻ ರಾಕಿ ಭಾಯ್ʼ ಹೇರ್ ಸ್ಟೈಲ್:  ಅಬ್ಬಾ..! ಏನ್​ ಲುಕ್‌ ಗುರು.. ಅಂದ್ರು ಫ್ಯಾನ್ಸ್‌!

Gold Rate Today
ಕರ್ನಾಟಕ58 mins ago

Gold Rate Today: ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಹೀಗಿದೆ ನೋಡಿ

muda scam r ashok in mysore
ಪ್ರಮುಖ ಸುದ್ದಿ1 hour ago

MUDA Scam: ಪೊಲೀಸರಿಂದ ಬಂಧನ ತಪ್ಪಿಸಲು ಗೂಡ್ಸ್‌ ಆಟೋದಲ್ಲಿ ಮೈಸೂರಿಗೆ ಬಂದ ಆರ್‌. ಅಶೋಕ್!

Dream Budget
ಬಜೆಟ್ 20241 hour ago

Central Budget 2024: 1997ರಲ್ಲಿ ʼಕ್ರಾಂತಿಕಾರಿ ಬಜೆಟ್ʼ ಮಂಡಿಸಿದ್ದ ಪಿ ಚಿದಂಬರಂ; ಆಗ ಪ್ರಧಾನಿಯಾಗಿದ್ದವರು ದೇವೇಗೌಡರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effect
ಮಳೆ23 hours ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ3 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ3 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ3 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ4 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ4 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು4 days ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ5 days ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌