ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಹಾಲಕುಸಗಲ್ ಗ್ರಾಮದಲ್ಲಿ ಮಳೆ ಬರುತ್ತಿದ್ದರಿಂದ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಮೃತಪಟ್ಟಿದ್ದಾರೆ. ವಿರೂಪಾಕ್ಷಪ್ಪ (46) ಮೃತರು. ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಿದ್ದಾಗ ಧಾರಾಕಾರ ಮಳೆ ಸುರಿಯುತ್ತಿತ್ತು. ಈ ವೇಳೆ ವಿರೂಪಾಕ್ಷಪ್ಪ ಮರವೊಂದರ ಕೆಳಗೆ ಆಶ್ರಯ ಪಡೆಯುತ್ತಿದ್ದಾಗ ಸಿಡಿಲು ಬಡಿದಿದೆ.
ಇದನ್ನೂ ಓದಿ | Rain News | ಸವದತ್ತಿಯಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಯುವತಿ ಸಾವು