Site icon Vistara News

Murder case: ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ

murder dharavad zilla bjp youth wing praveen

ಧಾರವಾಡ: ಧಾರವಾಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಈ ದುಷ್ಕೃತ್ಯ ನಡೆದಿದೆ. ಪ್ರವೀಣ ಕಮ್ಮಾರ ಎಂಬವರೇ ಹತ್ಯೆಯಾದ ಯುವಕ. ನಿನ್ನೆ ತಡರಾತ್ರಿ ವೈಯಕ್ತಿಕ ಕಾರಣಕ್ಕಾಗಿ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ದುಷ್ಕರ್ಮಿಗಳು ಪ್ರವೀಣ ಕಮ್ಮಾರನ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಪ್ರವೀಣ ಚಿಕಿತ್ಸೆಗೆ ಸ್ಪಂದಿಸದೇ ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ನಗರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಪುಟ್ಟೇನಹಳ್ಳಿಯಲ್ಲಿ ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ

ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ (Puttenahalli Police) ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್‌ಮೆಂಟ್‌ನ (Apartment) 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ (Suicide Case) ಮಾಡಿಕೊಂಡಿರುವ ಘಟನೆ ಮಂಗಳವಾರ (ಏ.18) ನಡೆದಿದೆ. ಸೋನು ಪೂಜಾರಿ ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು.

ಸೋನು ಪೂಜಾರಿ ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಅಪಾರ್ಟೆಮೆಂಟ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸೋನು ಪೂಜಾರಿ ಅವರ ಪತಿ ನಿರಂಜನ್ ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಅವರು ಒಬ್ಬಂಟಿಯಾಗಿ ಇದ್ದರು ಎನ್ನಲಾಗಿದೆ.

ಇತ್ತ ತಡರಾತ್ರಿವರೆಗೂ ಸೋನು ಮೊಬೈಲ್‌ನಲ್ಲಿ ಯಾರೊಟ್ಟಿಗೋ ಮಾತನಾಡುತ್ತಾ ಜಗಳವಾಡುತ್ತಿದ್ದರು ಎಂದು ಅಕ್ಕ ಪಕ್ಕದ ಮನೆಯವರು ತಿಳಿಸಿದ್ದಾರೆ. ರಾತ್ರಿ 1 ಗಂಟೆಗೆ ಫೋನ್‌ನಲ್ಲಿ ಜೋರಾಗಿ ಕಿರುಚಾಡುತ್ತಿದ್ದರು ಎಂದು ಪೊಲೀಸರಿಗೂ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಸದ್ಯ ಮುಂಬೈನಲ್ಲಿರುವ ಪತಿ ನಿರಂಜನ್‌ಗೆ ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಯಾರ ಜತೆ ಫೋನ್ ಮಾತನಾಡುತ್ತಿದ್ದರು ಎಂದು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು (puttenahalli police station) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ; ಕೊಲೆ ಶಂಕೆ

Exit mobile version