Site icon Vistara News

POCSO Case : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಾಲಕ; ಜಾಮೀನು ಕೇಳಿದ ತಾಯಿಗೆ ಕೋರ್ಟ್ 7 ಷರತ್ತು

high court gives bail to rape accused boy

ಬೆಂಗಳೂರು: ವರ್ಷದ ಹಿಂದೆ ಅಪ್ರಾಪ್ತ ವಯಸ್ಸಿನ (Minor Boy) ಏಳು ಮಂದಿ ಸ್ನೇಹಿತರು ಜತೆಗೂಡಿ ಧಾರವಾಡದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು (College Student) ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದರು (Mass sexual Harrassment). ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಘಟನೆ ಬಹಿರಗಂಪಡಿಸಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಲ್ಲದೆ ಕೊಲೆ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದರು. ಈ ಪ್ರಕರಣದಲ್ಲಿ ಪ್ರಧಾನ ಆರೋಪಿ (POCSO Case) ಎಂದು ಗುರುತಿಸಲಾದ ಹುಡುಗನಿಗೆ ಹೈಕೋರ್ಟ್‌ (Karnataka High Court) ಜಾಮೀನು (Conditional bail) ನೀಡಿದೆ. ಆದರೆ, ಅವನ ತಾಯಿಗೆ ಏಳು ಷರತ್ತುಗಳನ್ನು (7 Conditions to Mother) ವಿಧಿಸಿದೆ.

ಅಂದು ನಡೆದ ಘಟನೆ ಸಂಬಂಧ ಧಾರವಾಡ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಿ ಸಹಿತ ಪ್ರಕರಣದಲ್ಲಿನ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದರು. ಬಾಲ ನ್ಯಾಯ ಮಂಡಳಿ ಮತ್ತು ಧಾರವಾಡ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದ್ದರಿಂದ ಆರೋಪಿಯ ತಾಯಿಯು ಮಗನಿಗೆ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಆರೋಪಿಯು ತನ್ನ ತಾಯಿ ಮುಳಕ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯನ್ನು ನ್ಯಾಯಮೂರ್ತಿ ಅನಿಲ್ ಬಿ.ಕಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ ಹಲವು ಷರತ್ತುಗಳನ್ನು ಒಡ್ಡಿ ಜಾಮೀನು ಮಂಜೂರು ಮಾಡಿದೆ.

ಆರೋಪಿ ಭವಿಷ್ಯದಲ್ಲಿ ಅಪರಾಧಿಕ ಹಿನ್ನೆಲೆಯುಳ್ಳವರೊಂದಿಗೆ ಸಂಪರ್ಕ ಬೆಳೆಸದಂತೆ ಮತ್ತು ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ನೋಡಿಕೊಂಡು ಪ್ರತಿ ಮೂರು ತಿಂಗಳಿಗೊಮ್ಮೆ ಬಾಲ ನ್ಯಾಯ ಮಂಡಳಿಗೆ ವರದಿ ಸಲ್ಲಿಸಬೇಕು ಎಂದು ತಾಯಿಗೆ ವಿಧಿಸಿರುವ ಷರತ್ತುಗಳಲ್ಲಿ ಒಂದು.

ಬಾಲ ನ್ಯಾಯ (ಆರೈಕೆ ಮತ್ತು ಸಂರಕ್ಷಣೆ) ಕಾಯಿದೆ-2015ರ ಸೆಕ್ಷನ್ 12ರ ಅಡಿ ಜಾಮೀನು ಕೋರಿ ಅಪ್ರಾಪ್ತ ಆರೋಪಿ ಅರ್ಜಿಯನ್ನು ನಿರ್ಧರಿಸುವಾಗ ಅಪರಾಧ ಪ್ರಕರಣದ ಗಂಭೀರತೆ ಪರಿಗಣಿಸುವ ಅಗತ್ಯವಿಲ್ಲ ಎಂಬ ಆರೋಪಿ ಪರ ವಕೀಲರ ವಾದವನ್ನು ಹೈಕೋರ್ಟ್ ಪುರಸ್ಕರಿಸಿದೆ.

ಆರೋಪಿಯ ದೈಹಿಕ, ಮಾನಸಿಕ, ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿಯ ಬಗ್ಗೆ ಧಾರವಾಡದ ನಿಮಾನ್ಸ್ ಆಸ್ಪತ್ರೆಯಿಂದ ವರದಿ ತರಿಸಿಕೊಂಡು ಪರಿಶೀಲನೆ ನಡೆಸಿದಅಗ ಅರ್ಜಿದಾರನಿಗೆ 17 ವರ್ಷವಾಗಿದ್ದು ಮತ್ತು ಆರೋಪಿಯನ್ನು ತನ್ನ ಸುಪರ್ದಿಯಲ್ಲಿಟ್ಟುಕೊಳ್ಳಲು ತಾಯಿ ಸಮರ್ಥಳಾಗಿರುವ ಅಂಶವನ್ನು ಪರಿಗಣಿಸಿ ಜಾಮೀನಿನಲ್ಲಿ ಬಿಡುಗಡೆ ಮಾಡಿದೆ.

ಕೋರ್ಟ್‌ ತಾಯಿಗೆ ವಿಧಿಸಿರುವ ಷರತ್ತುಗಳು

  1. ತಾಯಿಯು ಆರೋಪಿಯ ಯೋಗಕ್ಷೇಮ ಮತ್ತು ಕಲ್ಯಾಣವನ್ನು ನೋಡಿಕೊಳ್ಳಬೇಕು.
  2. ಧಾರವಾಡದ ಬಾಲ ನ್ಯಾಯ ಮಂಡಳಿಗೆ ಮಗನ ಪರವಾಗಿ ಒಂದು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಬ್ಬರ ಭದ್ರತಾ ಖಾತರಿ ಒದಗಿಸಬೇಕು.
  3. ಯಾವುದೇ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳೊಂದಿಗೆ ಆರೋಪಿ ಸಂಪರ್ಕ ಬೆಳೆಸಲು ಬಿಡದಂತೆ ಹಾಗೂ ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು.
  4. ಆತ ವ್ಯಾಸಂಗ ಮುಂದುವರಿಸುವ ಅಥವಾ ರಚನಾತ್ಮಕ ಚಟುವಟಿಕೆಗಳನ್ನು ಪಾಲ್ಗೊಳ್ಳುವುದನ್ನು ಖಾತರಿಪಡಿಸಬೇಕು.
  5. ಅನುತ್ಪಾದಕ ಮತ್ತು ಮನೋರಂಜನಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಮಯ ವ್ಯರ್ಥಮಾಡದಂತೆ ನೋಡಿಕೊಳ್ಳಬೇಕು. ಅದನ್ನು ದೃಢಪಡಿಸಿ ಅಫಿಡವಿಟ್‌ ಸಲ್ಲಿಸಬೇಕು.
  6. ಆರೋಪಿ ಮತ್ತು ತಾಯಿ 2023ರ ಆಗಸ್ಟ್ 1ರಿಂದ ಪ್ರತಿ ಮೂರು ತಿಂಗಳಿಗೆ ಒಮ್ಮೆ ಬಾಲ ನ್ಯಾಯಮಂಡಳಿ ಪ್ರೊಬೆಷನರಿಗೆ ಅಧಿಕಾರಿಗೆ ವರದಿ ಸಲ್ಲಿಸಬೇಕು.
  7. ಪ್ರೊಬೆಷನರಿಗೆ ಅಧಿಕಾರಿ ಸಹ ಬಾಲಕನ ಚಟುವಟಿಕೆ ಮೇಲೆ ದೃಷ್ಟಿ ಹರಿಸಬೇಕು. ನಿರಂತರವಾಗಿ ಆತನ ಕುರಿತು ಸಾಮಾಜಿಕ ತನಿಖಾ ವರದಿ ಸಿದ್ಧಪಡಿಸಿ ಬಾಲ ನ್ಯಾಯ ಮಂಡಳಿಗೆ ಸಲ್ಲಿಸಬೇಕು.

ಈ ಪ್ರಕರಣದಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಕೂಡಾ ಆಗ ಅಪ್ರಾಪ್ತ ವಯಸ್ಸಿನವಳಾಗಿದ್ದಳು. ಆಕೆಗೆ 17 ವರ್ಷವಾಗಿತ್ತು. ಆಕೆಯ ಮೇಲೆ ನಡೆದ ಈ ಘೋರ ಕೃತ್ಯ ಅಂದು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇದನ್ನೂ ಓದಿ:16 ವರ್ಷದ ಗರ್ಭಿಣಿಗೆ ಅತ್ಯಾಚಾರ ಆರೋಪಿಯೊಂದಿಗೆ ಸಂಧಾನಕ್ಕೆ ಮುಂದಾದ ಹೈಕೋರ್ಟ್ ನ್ಯಾಯಾಧೀಶ

Exit mobile version