Road Accident: ಕಾರಿಗೆ ಗುದ್ದಿ ಪರಾರಿಯಾದ ಲಾರಿ ಚಾಲಕ, ಬೈಕ್‌ಗೆ ಗುದ್ದಿ ಮೂವರ ಜೀವ ತೆಗೆದ - Vistara News

ಧಾರವಾಡ

Road Accident: ಕಾರಿಗೆ ಗುದ್ದಿ ಪರಾರಿಯಾದ ಲಾರಿ ಚಾಲಕ, ಬೈಕ್‌ಗೆ ಗುದ್ದಿ ಮೂವರ ಜೀವ ತೆಗೆದ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ಬಳಿ ಅಪಘಾತ ನಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ಲಾರಿ ಪಲ್ಟಿಯಾಗಿದೆ.

VISTARANEWS.COM


on

lorry hit to bike in bagalakote
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಬೈಕ್ ಸವಾರರಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಇದೇ ಲಾರಿ ಚಾಲಕ ವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಚಲಾಯಿಸಿ ಇನ್ನೊಂದು ಕಾರಿಗೆ ಗುದ್ದಿಗೆ ಸವಾರರನ್ನು ಗಾಯಗೊಳಿಸಿ ಪರಾರಿಯಾಗಿದ್ದೂ ಪತ್ತೆಯಾಗಿದೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ಬಳಿ ಅಪಘಾತ ನಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ಲಾರಿ ಪಲ್ಟಿಯಾಗಿದೆ. ಬೈಕ್‌ ಸವಾರ ಶ್ರೀಕಾಂತ್ ಮಾದರ್ (39) ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರರಾಗಿದ್ದ ಶಾಂತವ್ವ ಕಟ್ಟಿಮನಿ (43), ಮಾಂತವ್ವ ಮುರಡಿ (75) ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ಸಾವಿಗೀಡಾಗಿದ್ದಾರೆ. ಮೂವರೂ ಮೃತರು ರಕ್ಕಸಗಿ ಗ್ರಾಮದ ನಿವಾಸಿಗಳು. ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಅಪಘಾತಕ್ಕೂ ಮುಂಚೆ ಅಮೀನಗಡದಲ್ಲಿ ಕಾರೊಂದಕ್ಕೆ ಈ ಲಾರಿ ಚಾಲಕ ಗುದ್ದಿಸಿದ್ದಾನೆ. ಅದೃಷ್ಟವಶಾತ್ ಕಾರಲ್ಲಿದ್ದವರಿಗೆ ಏನೂ ಆಗಿರಲಿಲ್ಲ. ಸಾರ್ವಜನಿಕರಿಂದ ಧರ್ಮದೇಟು ಬೀಳುತ್ತದೆ ಎಂದು ಲಾರಿ ಚಲಾಕ ಪರಾರಿಯಾಗಿದ್ದ. ನಂತರ ಇಲ್ಲಿಂದ 3 ಕಿ.ಮೀ ದೂರದ ರಕ್ಕಸಗಿ ಬಳಿ ಬೈಕ್‌ಗೆ ಗುದ್ದಿದ್ದಾನೆ.

ಬಸ್ಸಿಗೆ ಕ್ರೂಸರ್‌ ಡಿಕ್ಕಿ, ಗಾಯ

cruiser hit

ಧಾರವಾಡ: ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ್ದು, ಭಾರಿ ಪ್ರಾಣಾಪಾಯ ಸ್ವಲ್ಪದರಲ್ಲೇ ತಪ್ಪಿದೆ. ಧಾರವಾಡ ತಾಲೂಕಿನ ತೇಗೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ನಡೆದಿದ್ದು, ಖಾಸಗಿ ಬಸ್ಸಿಗೆ ಕ್ರೂಸರ್‌ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ.

ಕ್ರೂಸರ್‌ನಲ್ಲಿದ್ದ 5 ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನುಳಿದ ಜನರಿಗೆ ಅಲ್ಪ ಸ್ವಲ್ಪ ಗಾಯವಾಗಿದೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕ್ರೂಸರ್‌ನಲ್ಲಿದ್ದವರು ಹಾವೇರಿಯಿಂದ ಇಶಾಲ್‌ಘಡಕ್ಕೆ ತೆರಳುತ್ತಿರುವಾಗ ಅಪಘಾತ ನಡೆದಿದೆ. ಗದಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಾವು ಕಚ್ಚಿ ಕರ್ತವ್ಯನಿರತ ಅರಣ್ಯ ಅಧಿಕಾರಿ ಸಾವು; ಅಪ್ಪನಿಗೇನಾಯ್ತು ಎಂಬ 3 ವರ್ಷದ ಮಗಳ ಪ್ರಶ್ನೆಗೆ ಅಮ್ಮ ನಿರುತ್ತರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಜಕೀಯ

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Neha Murder Case: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

VISTARANEWS.COM


on

Koo

ಮೈಸೂರು: ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಅವರ ಕೊಲೆ ಪ್ರಕರಣವನ್ನು (Neha Murder Case) ರಾಜಕೀಯಕ್ಕೆ ಬಳಸುತ್ತಿದ್ದಾರೆ. ಆಕೆಯನ್ನು ಕೊಂದವನಿಗೆ ಉಗ್ರ ಶಿಕ್ಷೆಯನ್ನು ಕೊಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.

ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿದರು. ಇನ್ನು ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದು ಹೇಳಿದರು.

ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.

ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚೆಂಬು ಕೊಟ್ಟಿದೆ

ಕಾಂಗ್ರೆಸ್‌ನ ಚೆಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿಹ್ನೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೆಂಬು ಕೊಟ್ಟಿದೆ ಎಂದು ತಿಳಿಸಲು. ದೇಶದ ಜನರಿಗೆ 15 ಲಕ್ಷ ರೂಪಾಯಿ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ ಆಯಿತೇ? ರೈತರ ಆದಾಯ ದುಪ್ಪಟ್ಟು ಆಯಿತೇ? ಅಚ್ಚೇ ದಿನ್ ಬಂದಿದೆಯೇ? ಅದಕ್ಕೆ ಚೆಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದರು.

ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದು, 11 ತಿಂಗಳಲ್ಲಿ ಬೊಕ್ಕಸ ಖಾಲಿಯಾಗಿದೆ ನಮಗೆ ಭಿಕ್ಷೆ ಕೊಡಿ ಎಂಬ ಅರ್ಥದಲ್ಲಿ ಜಾಹೀರಾತು ನೀಡಿದೆ ಎಂದು ಬಿಜೆಪಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಕೊಟ್ಟಿರುವ ಆಶ್ವಾಸನೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚೆಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ ಎಂದರು.

ಭಯವಿರುವುದರಿಂದ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ

ಏಣಿ ಹತ್ತಿಸಿ ನಂತರ ಸರ್ವನಾಶ ಮಾಡುತ್ತಾರೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಅವರು ಕೋಮುವಾದಿಗಳಾಗಿದ್ದು, ಜನತಾ ದಳ (ಎಸ್) ಪಕ್ಷವನ್ನು ರದ್ದು ಮಾಡಬೇಕು. ನನಗೆ ಅವರ ಬಗ್ಗೆ ಭಯವಿದ್ದರೆ ಇವರಿಬ್ಬರ ವಿರುದ್ಧ ಹೋರಾಟ ಮಾಡುತ್ತಿರಲಿಲ್ಲ. ಅವರಿಗೆ ಭಯವಿರುವುದರಿಂದ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Continue Reading

ಮಳೆ

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Rain News : ಸಿಡಿಲಿನ ಹೊಡೆತಕ್ಕೆ ಮೃತಪಡುವವರ ಸಂಖ್ಯೆ ಏರಿಕೆ ಆಗುತ್ತಲೇ ಇದೆ. ಗುಡುಗು ಸಿಡಿಲಿನ ಮುನ್ನೆಚ್ಚರಿಕೆ ಕೊಟ್ಟರೂ ಮುಂಜಾಗ್ರತಾ ವಹಿಸಿದೆ ಜನರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಸದ್ಯ ಹಲವೆಡೆ ಸುರಿದ ಭಾರಿ ಗಾಳಿಮಳೆಗೆ ನಾನಾ ಅನಾಹುತಗಳು (Karnataka Weather Forecast) ಸಂಭವಿಸಿವೆ.

VISTARANEWS.COM


on

By

Rain News
Koo

ಬೀದರ್: ರಾಜ್ಯದ ಹಲವೆಡೆ ಮಳೆಯು (Rain news) ಅಬ್ಬರಿಸುತ್ತಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿ ಜಿಲ್ಲೆಯ ಔರಾದ ತಾಲೂಕಿನ ಚಿಕ್ಲಿ (ಜೆ) ತಾಂಡದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಭೀಮಲಾ ಹೇಮಲು (60) ಮೃತ ದುರ್ದೈವಿ. ನಿನ್ನೆ ಶುಕ್ರವಾರ ಸಂಜೆ ಭೀಮಲಾ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಸ್ಥಳಕ್ಕೆ ಔರಾದ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗದಗದಲ್ಲಿ ವರುಣಾರ್ಭಟಕ್ಕೆ ಜಾನುವಾರು ಬಲಿ

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೆಲೂರು ಗ್ರಾಮದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲು ಬಡಿದು ಎತ್ತು ಹಾಗೂ ಎಮ್ಮೆ ಮೃತಪಟ್ಟಿವೆ. ರೈತ ಶಂಕ್ರಪ್ಪ ಸೋಂಪುರ ಅವರಿಗೆ ಸೇರಿದ ಎತ್ತು ಅನ್ನು ಮನೆ ಬಳಿ ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಎತ್ತು ಜೀವ ಬಿಟ್ಟಿತ್ತು.

ಮತ್ತೊಬ್ಬ ರೈತ ಹನುಮಪ್ಪ ಕೊಂಚಿಗೇರಿ ಎಂಬುವವರ ಎಮ್ಮೆಯೂ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ಮೃತಪಟ್ಟಿದೆ. ಹೆತ್ತ ಮಕ್ಕಳಂತೆ‌ ಜಾನುವಾರುಗಳನ್ನು ಜೋಪಾನ ಮಾಡಿದ್ದ ರೈತ ಕುಟುಂಬಗಳು ಕಣ್ಣೀರು ಹಾಕಿದರು. ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದರು.

Rain News

ಇದನ್ನೂ ಓದಿ: Boat Capsizes: ಭಾರೀ ಗಾಳಿ ಮಳೆಗೆ ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ, ನಾಲ್ವರ ರಕ್ಷಣೆ; ಇಲ್ಲಿದೆ ವಿಡಿಯೋ

ಹಾಸನದಲ್ಲಿ ಮೂರು ಮನೆಗಳಿಗೆ ಹಾನಿ

ಹಾಸನ ಜಿಲ್ಲೆಯ ವಿವಿಧೆಡೆ ನಿನ್ನೆ ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಸುರಿದ ವರ್ಷಧಾರೆಗೆ ಮೂರು ಮನೆಗಳಿಗೆ ಹಾನಿಯಾಗಿದೆ. ಸಕಲೇಶಪುರ ತಾಲೂಕಿನ ಬಿರಡಹಳ್ಳಿ ಗ್ರಾಮದಲ್ಲಿ ಭಾರಿ ಗಾಳಿಗೆ ವಾಸದ ಮನೆಯ ಹಂಚುಗಳು ಹಾರಿ ಹೋಗಿದ್ದವು. ಶೀಟ್‌ಗಳು ಮನೆಯ ಒಳಗೆ ಮುರಿದು ಬಿದ್ದಿತ್ತು. ಮನೆಯ ಮೇಲೆ ಮರ ಬಿದ್ದು ಒಂದು ಮನೆ ಜಖಂಗೊಂಡಿತ್ತು.

ಗ್ರಾಮದ ಸಲೀಂ, ಚಂದ್ರು ಎಂಬುವವರಿಗೆ ಸೇರಿದ ಮನೆಗಳು ಹಾನಿಯಾಗಿದ್ದರೆ, ಜಾಕೋಬ್ ಪಿಂಟೊ ಎಂಬುವವರ ಮನೆಯ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿತ್ತು. ಮನೆಯಲ್ಲಿದ್ದರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲಿಸುವಂತೆ ಒತ್ತಾಯಿಸಿದರು. ಮಳೆಯಿಂದ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.

Rain News

ಕೆಲವೆಡೆ ಬಾರಿ ಗಾಳಿಗೆ ಬೃಹತ್‌ ಗಾತ್ರದ ಮರ ಉರುಳಿ ಬಿದ್ದಿತ್ತು. ಜನ್ನಾಪುರ-ಹಲಸುಲಿಗೆ ರಸ್ತೆ ಮಧ್ಯೆ ಮರ ಬಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಇದರಿಂದಾಗಿ ಜನ್ನಾಪುರ, ಹಲಸುಲಿಗೆ, ಮಾಗಡಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿ, ರಾತ್ರಿಯಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರ ಪರದಾಡಿದರು.

Rain News

ಜಲಾವೃತಗೊಂಡ ಬ್ರಿಡ್ಜ್‌

ಗದಗನಲ್ಲಿ ವರುಣದೇವನ ಆರ್ಭಟ ಜೋರಾಗಿದೆ. ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಗದಗನಿಂದ ಬೆಟಗೇರಿಗೆ ಸಂಪರ್ಕಿಸುವ ಬಳ್ಳಾರಿ ಗೇಟ್ ಅಂಡರ್ ಬ್ರಿಡ್ಜ್‌ ಸಂಪೂರ್ಣ ಜಲಾವೃತಗೊಂಡಿದೆ. ಸುಮಾರು 8 ಅಡಿಗಳಷ್ಟು ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಪರದಾಡಿದರು. ಇತ್ತ ಬೆಟಗೇರಿ ಹಾಗೂ ಗದಗ ನಗರ ಸಂಪರ್ಕಿಸಬೇಕಾದರೆ ಸುತ್ತು ಹಾಕಿಕೊಂಡು ಹೋಗುವ ಪರಿಸ್ಥಿತಿ ಸೃಷ್ಟಿಯಾಗಿದೆ. ರಸ್ತೆ ಬದಿ ಪಾರ್ಕ್‌ ಮಾಡಿದ್ದ ಮಿನಿ ಬಸ್ ಜಲಾವೃತವಾಗಿತ್ತು. ನೀರಿನಲ್ಲಿಯೇ ಬಸ್ ಚಲಾಯಿಸಿಕೊಂಡು ಬರಲಾಯಿತು.

ಮುರಿದು ಬಿದ್ದ ಸಿಗ್ನಲ್‌ ಕಂಬ

ಧಾರವಾಡದಲ್ಲಿ ಜೋರಾಗಿ ಬೀಸಿದ ಗಾಳಿಗೆ ಸಿಗ್ನಲ್ ಕಂಬ ಮುರಿದು ಬಿದ್ದಿತ್ತು. ಧಾರವಾಡದ ಯುಬಿ ಹಿಲ್ ಸರ್ಕಲ್‌ನಲ್ಲಿದ್ದ ಕಂಬದ ಕೆಳಭಾಗದಲ್ಲಿ ತುಕ್ಕು ಹಿಡಿದಿತ್ತು. ರಭಸವಾಗಿ ಬೀಸಿದ ಗಾಳಿಗೆ ರಸ್ತೆ ಮೇಲೆಯೇ ಕಂಬ ಬಿದ್ದಿತ್ತು. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದರು. ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Neha Murder Case : ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆ ಪ್ರಕರಣದ ಬಗ್ಗೆ ಆರೋಪಿ ಫಯಾಜ್‌ ತಾಯಿ ಮಮ್ತಾಜ್ ಪ್ರತಿಕ್ರಿಯಿಸಿದ್ದು, ನನ್ನ ಮಗ ಫಯಾಜ್‌ ಮಾಡಿದ ಕೃತ್ಯಕ್ಕೆ ತಕ್ಕ ಶಿಕ್ಷೆ ಆಗಬೇಕು. ಆತನ ತಪ್ಪಿಗೆ ನಾನು ರಾಜ್ಯಕ್ಕೆ ಕ್ಷಮೆಯಾಚಿಸುತ್ತೆನೆ ಎಂದಿದ್ದಾರೆ.

VISTARANEWS.COM


on

By

Neha Murder Case
Koo

ಧಾರವಾಡ: ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ (Neha Murder Case) ಕೊಲೆಯಾಗಿದ್ದಳು. ಪಾಗಲ್‌ ಪ್ರೇಮಿಯ ಕೃತ್ಯಕ್ಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಆರೋಪಿಯನ್ನು ಎನ್‌ಕೌಂಟರ್ ಮಾಡಿ ಬಿಸಾಕಿ ಎಂದು ಆಕ್ರೋಶಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಾಯಿ ಮಮ್ತಾಜ್ ಪ್ರತಿಕ್ರಿಯಿಸಿದ್ದು, ಫಯಾಜ್‌ಗೆ ಶಿಕ್ಷೆ ಆಗಬೇಕೆಂದು ಕಣ್ಣೀರು ಹಾಕಿದ್ದಾರೆ.

ನನ್ನ ಮಗ ಫಯಾಜ್‌ ಮಾಡಿದ ಕೃತ್ಯಕ್ಕೆ ತಕ್ಕ ಶಿಕ್ಷೆ ಆಗಬೇಕು. ಆತನ ತಪ್ಪಿಗೆ ನಾನು ರಾಜ್ಯದ ಜನತೆಗೆ ಹಾಗೂ ನೇಹಾಳ ತಂದೆ-ತಾಯಿಗೂ ಕ್ಷಮೆಯಾಚಿಸುತ್ತೆನೆ. ಅವರಿಗೆ ಎಷ್ಟು ದುಃಖ ಆಗಿದ್ದೀಯೋ ಅಷ್ಟೇ ನೋವಾನ್ನು ನಾವು ಅನುಭವಿಸುತ್ತಿದ್ದೇವೆ. ಯಾವ ಮಕ್ಕಳು ತಪ್ಪು ಮಾಡಿದರೂ ತಪ್ಪೇ.. ನನ್ನ ಮಗ ಮಾಡಿದ ತಪ್ಪಿಗೆ ಈ ನೆಲದ ಕಾನೂನು ಏನು ಶಿಕ್ಷೆ ವಿಧಿಸುತ್ತೋ ಆ ಪ್ರಕಾರ ಶಿಕ್ಷೆ ಆಗಲಿ ಎಂದರು.

ಫಯಾಜ್‌ನಿಗೆ ಪ್ರಪೋಸ್‌ ಮಾಡಿದ್ದಳಾ ನೇಹಾ?

ನೇಹಾ ಹಾಗೂ ಫಯಾಜ್‌ ಪ್ರೀತಿ ಬಗ್ಗೆಯೂ ಮಮ್ತಾಜ್‌ ಪ್ರತಿಕ್ರಿಯಿಸಿದ್ದಾರೆ. ಫಯಾಜ್‌ ಓದಿನಲ್ಲಿ ಜಾಣನಾಗಿದ್ದ, ಜಿಮ್‌ ಬಾಡಿ ಬಿಲ್ಡರ್‌ನಲ್ಲಿ ಯೂನಿವರ್ಸಿಟಿ ಬ್ಲ್ಯೂ ಆಗಿದ್ದ. ಆತನಿಗೆ ಹಲವಾರು ಸನ್ಮಾನಗಳು ನಡೆಯುತ್ತಿದ್ದವು. ಇದರಿಂದ ಖುಷಿಯಾದ ನೇಹಾ ಫಯಾಜ್‌ ಕ್ಯಾಂಟಿನ್‌ನಲ್ಲಿದ್ದಾಗ ಆಕೆಯೇ ಫೋನ್‌ ನಂಬರ್‌ ಪಡೆದಿದ್ದಳು. ಅವಳೇ ಫಯಾಜ್‌ಗೆ ಪ್ರಪೋಸ್ ಮಾಡಿದ್ದಳು. ಈ ಬಗ್ಗೆ ಒಂದು ವರ್ಷದ ಹಿಂದೆಯೇ ಫಯಾಜ್‌ ನನ್ನ ಬಳಿ ಹೇಳಿಕೊಂಡಿದ್ದ. ನೇಹಾ ಎಂಬಾಕೆ ನನ್ನ ತುಂಬಾ ಲೈಕ್‌ ಮಾಡುತ್ತಾಳೆ, ಪ್ರೀತಿ ಮಾಡುತ್ತಿದ್ದಾಳೆ ಎಂದಿದ್ದ. ಆದರೆ ನಾನು ಈ ಲವ್ ಎಲ್ಲ ಬೇಡ ಎಂದು ಹೇಳಿದ್ದೆ. ಆದರೆ ಅವರಿಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

ಫಯಾಜ್‌ ಭವಿಷ್ಯದಲ್ಲಿ ಕೆಎಎಸ್ ಆಫೀಸರ್ ಆಗಬೇಕೆಂದು ಕನಸು ಕಂಡಿದ್ದೆ. ಆದರೆ ಈ ರೀತಿ ಆಗಿದ್ದು ಬಹಳ ಸಂಕಟ ಆಗುತ್ತೆ. ನೇಹಾ ಸಹ ತುಂಬಾ ಒಳ್ಳೆಯ ಹುಡುಗಿ, ಅವರಿಬ್ಬರೂ ಮದುವೆ ಆಗಬೇಕು ಎಂದುಕೊಂಡಿದ್ದರು. ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು ಎಂದರು.

ಕೊಲೆ ಸುದ್ದಿ ಕೇಳಿ ಕುಸಿದು ಬಿದ್ದುಬಿಟ್ಟೆ

ಗುರುವಾರ ಸಂಜೆ ಪರಿಚಯಸ್ಥರು ಫೋನ್‌ ಮಾಡಿ ಟಿವಿ ನೋಡಲು ಹೇಳಿದ್ದರು. ಫಯಾಜ್‌ ಸಂಬಂಧ ಬ್ರೇಕಿಂಗ್‌ ನ್ಯೂಸ್‌ ಬರುತ್ತಿದೆ ಎಂದಿದ್ದರು. ಮಗನಿಗೆ ಏನಾಯಿತು ಎಂದು ಆತಂಕದಲ್ಲೇ ಟಿವಿ ನೋಡಿದಾಗ, ಫಯಾಜ್‌ ನೇಹಾಳನ್ನು ಕೊಲೆ ಮಾಡಿದ್ದಾನೆ ಎಂಬ ಸುದ್ದಿ ಬಂದಿತ್ತು. ಈ ಕೊಲೆ ಸುದ್ದಿ ಕೇಳಿ ನಾನು ಕುಸಿದು ಬಿದ್ದು ಬಿಟ್ಟೆ ಎಂದು ಫಯಾಜ್‌ ತಾಯಿ ಮಮ್ತಾಜ್‌ ಪ್ರತಿಕ್ರಿಯಿಸಿದರು.

ಇದು ಒನ್‌ಸೈಡ್‌ ಲವ್‌ ಅಲ್ಲ

ಸತ್ಯಾಸತ್ಯತೆ ಪರಿಶೀಲಿಸಿ ಅವನಿಗೆ ಶಿಕ್ಷೆ ನೀಡಬೇಕು. ಅವರು ಏನೇ ಶಿಕ್ಷೆ ಕೊಟ್ಟರೂ ಸಹ ನಾನು ಒಪ್ಪಿಕೊಳ್ಳುತ್ತೇನೆ. ತಪ್ಪು ಒಬ್ಬರಿಂದ ಆಗಲೂ ಸಾಧ್ಯವೇ ಇಲ್ಲ, ತಪ್ಪು ಇಬ್ಬರಲ್ಲೂ ಇರುತ್ತೆ. ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು, ಅದು ಹೇಗೆ ಒನ್ ಸೈಡ್ ಲವ್ ಆಗುತ್ತೆ ಎಂದು ಪ್ರಶ್ನೆ ಮಾಡಿದರು.

ಇಬ್ಬರೂ ಕ್ಲಾಸ್ ಮೇಟ್ ಆಗಿದ್ದವರು, ಅವರಲ್ಲಿ ಏನು ನಡೆಯಿತು ಅದು ಗೊತ್ತಿಲ್ಲ. ಫೋನ್‌ನಲ್ಲಿ ಅವಳ ಜತೆ ಮಾತನಾಡಿದ ಎಲ್ಲ ರೆಕಾರ್ಡ್‌ಗಳಿವೆ. ಇದರ ಮೇಲೆ ಕಾನೂನು ಯಾವ ರೀತಿ ಕ್ರಮ ಕೈಗೊಳ್ಳುತ್ತೋ ತೆಗೆದುಕೊಳ್ಳಲಿ. ಇರುವೆಯನ್ನು ಸಾಯಿಸಿದ ಅವನು ಇಷ್ಟೊಂದು ಧೈರ್ಯ ಹೇಗೆ ಬಂತು ಎಂದು ನಮಗೆ ಗೊತ್ತಿಲ್ಲ. ಜಿಮ್ ಮಾಡಿ ಒಳ್ಳೆಯ ಬಾಡಿ ಇಟ್ಟುಕೊಂಡಿದ್ದ. ಅವಳ ಜತೆಗಿನ ಪ್ರೀತಿ-ಸ್ನೇಹದಿಂದಲೇ ಅವನು ಡಿಪ್ರೆಶನ್ ಹೋಗಿದ್ದ. ಊಟ ಸಹ ಸರಿಯಾಗಿ ಮಾಡುತ್ತಿರಲಿಲ್ಲ. ನಾವು ನೂರಾರು ಮಕ್ಕಳಿಗೆ ಶಿಕ್ಷಣ ಕೊಟ್ಟಿದ್ದೇವೆ, ಅವರು ತಪ್ಪು ಮಾಡಿದಾಗ ಹೊಡೆದು ಬುದ್ಧಿ ಹೇಳುತ್ತೇವೆ. ಆದರೆ ನನ್ನ ಮಗನೆ ಈಗ ತಪ್ಪು ಮಾಡಿದ್ದಾನೆ ಅದು ತಪ್ಪು ತಪ್ಪೇ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕೋ ಅದು ಆಗಲಿ. ಒಬ್ಬನೇ ಮಗ ಎಂದು ಉತ್ತಮ ಶಿಕ್ಷಣ ಕೊಡಿಸಿದ್ದೆವು. ಅವನ ತಪ್ಪಿನಿಂದ ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Rain News: ಬೆಂಗಳೂರಿನಲ್ಲಿ ಮಳೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಹವಾಮಾನ ಇಲಾಖೆಯಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಹಲವೆಡೆ ವಾರಾಂತ್ಯದಲ್ಲಿ ಗುಡುಗು ಸಹಿತ ಗಾಳಿ, ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವಾರಾಂತ್ಯದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ವರುಣನ ಸಿಂಚನವಾಗಲಿದೆ.

ಇದನ್ನೂ ಓದಿ: Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನೂ ಮಳೆಯಿಲ್ಲದೇ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗೂ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ಸೂಚನೆ

ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Case of bringing gun to CM Siddaramaiah Four policemen suspended
Lok Sabha Election 20245 mins ago

‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

Elon Musk
ವಿದೇಶ13 mins ago

Elon Musk: ಮೋದಿ ಭೇಟಿಗಾಗಿ ಈ ತಿಂಗಳು ಭಾರತಕ್ಕೆ ಬರಲ್ಲ ಎಲಾನ್‌ ಮಸ್ಕ್;‌ ಕೊಟ್ಟ ಕಾರಣ ಇದು

IPL 2024
ಕ್ರೀಡೆ24 mins ago

IPL 2024 : ಡಿಆರ್​ಎಸ್ ಅಕ್ರಮ; ಟಿಮ್ ಡೇವಿಡ್, ಕೀರನ್ ಪೊಲಾರ್ಡ್​ಗೆ ದಂಡ

KKR vs RCB
ಕ್ರಿಕೆಟ್36 mins ago

KKR vs RCB: ತವರಿನ ಸೋಲಿಗೆ ಸೇಡು ತೀರಿಸೀತೇ ಆರ್​ಸಿಬಿ?

Surabhi Jain
ಪ್ರಮುಖ ಸುದ್ದಿ60 mins ago

Surabhi Jain : 30 ವರ್ಷಕ್ಕೆ ಮೃತಪಟ್ಟ ಫ್ಯಾಷನ್ ಐಕಾನ್​ ಸುರಭಿ ಜೈನ್

RCB vs KKR
ಕ್ರೀಡೆ2 hours ago

RCB vS KKR: ಗ್ರೀನ್​ ಜೆರ್ಸಿಯಲ್ಲಿ ಆರ್​ಸಿಬಿ ಅದೃಷ್ಟ ಹೇಗಿದೆ; ಎಷ್ಟು ಗೆಲುವು ಎಷ್ಟು ಸೋಲು?

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Modi in Karnataka today Cm Siddaramaiah asks 11 questions to PM Modi
Lok Sabha Election 20242 hours ago

Modi in Karnataka: ಇಂದು ಕರ್ನಾಟಕಕ್ಕೆ ಮೋದಿ; ಪ್ರಧಾನಿಗೆ 11 ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ

Uttarakaanda Movie bande kaaka rangayana Raghu
ಸ್ಯಾಂಡಲ್ ವುಡ್2 hours ago

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

India Economy
ಪ್ರಮುಖ ಸುದ್ದಿ2 hours ago

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ4 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

ಟ್ರೆಂಡಿಂಗ್‌