‌Self Harming : ಅಯ್ಯೋ ವಿಧಿಯೇ!; ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಂದು ತಾಯಿಯೂ ಆತ್ಮಹತ್ಯೆ - Vistara News

ಧಾರವಾಡ

‌Self Harming : ಅಯ್ಯೋ ವಿಧಿಯೇ!; ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಂದು ತಾಯಿಯೂ ಆತ್ಮಹತ್ಯೆ

Self Harming : ತಾಯಿಯೊಬ್ಬಳು ತನ್ನಿಬ್ಬರು ಪುಟ್ಟ ಮಕ್ಕಳನ್ನು ಕತ್ತು ಹಿಸುಕಿ ತಾನೂ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಗೇನು ಕಷ್ಟವಿತ್ತೋ ಗೊತ್ತಿಲ್ಲ. ತಾನೂ ಸಾಯಬೇಕು, ಸತ್ತ ಬಳಿಕ ಮಕ್ಕಳು ಉಳಿಯಬಾರದು ಎಂಬ ನಿರ್ಧಾರಕ್ಕೆ ಆಕೆ ಬಂದಂತಿದೆ.

VISTARANEWS.COM


on

Self Harming Dharwad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಧಾರವಾಡ: ತಾಯಿಯೊಬ್ಬರು ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ (Mother kills two children) ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ (Self Harming) ಭಯಾನಕ ಘಟನೆಯೊಂದು ನಡೆದಿದೆ. ಧಾರವಾಡ ಜಿಲ್ಲೆಯ (Dharwad News) ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಸಾಮೂಹಿಕ ಸಾವು ಸಂಭವಿಸಿದೆ.

ಸಾವಿತ್ರಿ ಸರಕಾರ (32) ಎಂಬವರೇ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡವರು. ಐದು ವರ್ಷದ ಮಗಳು ಸುಮಾ ಮತ್ತು ನಾಲ್ಕು ವರ್ಷದ ಮಗು ದರ್ಶನ್ ತಾಯಿಯ ಕೈಯಿಂದಲೇ ಕೊಲೆಯಾದ ದುರ್ದೈವಿ ಮಕ್ಕಳು. ಮಕ್ಕಳನ್ನು ಕೊಂದ ಬಳಿಕ ಆಕೆ ತಾನೇ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿ ತಾಯಿಯೊಬ್ಬಳು ಮಕ್ಕಳನ್ನು ಕೊಂದು ತಾನೂ ಪ್ರಾಣ ಕಳೆದುಕೊಳ್ಳಲು ಕಾರಣವಾದ ಅಂಶ ಏನು ಎನ್ನುವುದು ತಿಳಿದುಬಂದಿಲ್ಲ. ಸ್ಥಳಕ್ಕೆ ನವಲಗುಂದ ಪೋಲಿಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಮನೆಯವರೆಲ್ಲರೂ ಜಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : Self Harming : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 1 ವರ್ಷದ ಪುಟ್ಟ ಮಗುವಿನ ತಾಯಿ ಆತ್ಮಹತ್ಯೆ

ಎರಡು ವರ್ಷದ ಮಗಳನ್ನು ಕೊಂದು ಪ್ರಾಣ ಕಳೆದುಕೊಂಡಿದ್ದ ಮಹಿಳೆ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ತಾಯಿಯೊಬ್ಬಳು ತನ್ನ ಎರಡು ವರ್ಷದ ಪುಟ್ಟ ಮಗಳನ್ನು ನೇಣಿಗೆ ಹಾಕಿ ಬಳಿಕ ತಾನೂ ನೇಣು ಹಾಕಿಕೊಂಡು ಪ್ರಾಣ ಕಳೆದುಕೊಂಡ ಘಟನೆ ಫೆಬ್ರವರಿ 14ರಂದು ನಡೆದಿತ್ತು. ಶಿವಲೀಲಾ ಆನಂದ(24) ಎಂಬಾಕೆಯೇ ತನ್ನ ಪುಟ್ಟ ಮಗಳು, ಎರಡು ವರ್ಷದ ವರ್ಷಿತಾಳನ್ನು ಕೊಂದು ತಾನೂ ಜೀವನ ಮುಗಿಸಿಕೊಂಡವಳು. ಮೊದಲು ಎರಡು ವರ್ಷದ ಮಗಳನ್ನು ನೇಣಿಗೆ ಹಾಕಿ ಬಳಿಕ ತಾನೂ ನೇಣಿಗೆ ಕೊರಳೊಡ್ಡಿದ್ದಾಳೆ ತಾಯಿ ಶಿವಲೀಲಾ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕೆ ಸಾವಿಗೆ ಶರಣಾಗಿದ್ದಾಳೆ.

ಗಂಡ ಮತ್ತು ಅತ್ತೆಯ ಕಿರುಕುಳದಿಂದ ಬೇಸತ್ತು ಶಿವಲೀಲಾ ಮಗುವನ್ನು ಕೊಂದು ತಾನೂ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಚಿಂಚೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಂಡ ಆನಂದ ನನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : Self Harming : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 1 ವರ್ಷದ ಪುಟ್ಟ ಮಗುವಿನ ತಾಯಿ ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

Karnataka Rain

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading
Advertisement
Latest2 ಗಂಟೆಗಳು ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ3 ಗಂಟೆಗಳು ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ3 ಗಂಟೆಗಳು ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ವರ್ಷ ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ವರ್ಷ ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ವರ್ಷ ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು1 ವರ್ಷ ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌