Street dog attack | ಮಲಗಿದ್ದ ಭಿಕ್ಷುಕಿಯನ್ನು ಕಚ್ಚಿ ಕೊಂದ ಬೀದಿನಾಯಿಗಳು - Vistara News

ಧಾರವಾಡ

Street dog attack | ಮಲಗಿದ್ದ ಭಿಕ್ಷುಕಿಯನ್ನು ಕಚ್ಚಿ ಕೊಂದ ಬೀದಿನಾಯಿಗಳು

ರಾತ್ರಿ ಮಲಗಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿ ಕಚ್ಚಿ ಸ್ಥಳದಲ್ಲೇ ಕಚ್ಚಿ ಸಾಯಿಸಿದ ಘಟನೆ ಧಾರವಾಡದ ಉಪ್ಪಿನ ಬೆಟಗೇರಿಯಲ್ಲಿ ನಡೆದಿದೆ.

VISTARANEWS.COM


on

street dogs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ರಾತ್ರಿ ಮಲಗಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿ ಕಚ್ಚಿ ಸ್ಥಳದಲ್ಲೇ ಕಚ್ಚಿ ಸಾಯಿಸಿದ ಘಟನೆ ನಡೆದಿದೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಖಬರಸ್ತಾನ್ ಬಳಿ ಘಟನೆ ನಡೆದಿದೆ. ಮಲಗಿದ್ದ ಅನಾಥ ಭಿಕ್ಷುಕಿಯನ್ನು ಡೆಡ್ಲಿ ಬೀದಿ ನಾಯಿಗಳು ಕಚ್ಚಿ ಎಳೆದಾಡಿವೆ. ಗಂಭೀರ ಗಾಯಗೊಂಡ ಭಿಕ್ಷುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತಪಟ್ಟ ಮಹಿಳೆಯ ಹೆಸರು, ವಿಳಾಸ ಪತ್ತೆಯಾಗಿಲ್ಲ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇತ್ತೀಚೆಗೆ ಮಕ್ಕಳ ಮೇಲೂ ದಾಳಿ ಸೇರಿದಂತೆ ಭಯಾನಕ ಆತಂಕ ಸೃಷ್ಟಿಸಿರುವ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ | BlackBuck | ಕಾಡಿನಿಂದ ನಾಡಿಗೆ ಬಂದಿದ್ದ ಕೃಷ್ಣ ಮೃಗವನ್ನು ಬೇಟೆಯಾಡಿದ ಬೀದಿನಾಯಿಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

karnataka Weather : ಕರಾವಳಿಗೆ ವರ್ಷಧಾರೆಯ ಎಚ್ಚರಿಕೆ; ಬೆಂಗಳೂರಿನಲ್ಲಿ ಹೇಗೆ?

Rain News : ಕರಾವಳಿ ಹಾಗೂ ಒಳನಾಡಿನ ಭಾಗದಲ್ಲಿ ಮಳೆಯು ಅಬ್ಬರಿಸಲಿದ್ದು, ಹವಾಮಾನ ಇಲಾಖೆ (karnataka Weather Forecast) ಮುನ್ನೆಚ್ಚರಿಕೆಯನ್ನು ನೀಡಿದೆ. ವಿವಿಧೆಡೆ ಮಳೆಯೊಂದಿಗೆ ಬಿರುಗಾಳಿ ಬೀಸಲಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸುತ್ತಮುತ್ತ ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ (Heavy Rain) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಸಾಕಷ್ಟು ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ ಮತ್ತು ಕಲಬುರಗಿಯಲ್ಲಿ ಭಾರಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Theft case : ಕಳ್ಳತನ ಮಾಡುತ್ತಿರುವಾಗಲೇ ಕಳ್ಳ ಲಾಕ್‌; ಸಿಸಿ ಕ್ಯಾಮೆರಾ ಲೈವ್ ಸ್ಟ್ರೀಮ್ ಆಧರಿಸಿ ಅರೆಸ್ಟ್‌

ಇಲ್ಲೆಲ್ಲ ಸಿಕ್ಕಾಪಟ್ಟೆ ಮಳೆ

ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸದಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ನಾಳೆಗೆ ಹೈವೇವ್‌ ಅಲರ್ಟ್‌- ಬಿರುಗಾಳಿ ಸಹಿತ ಮಳೆಯೊಂದಿಗೆ ಅಪ್ಪಳಿಸಲಿದೆ ರಕ್ಕಸ ಅಲೆ

karnataka Weather Forecast : ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಕಡಲತೀರದಲ್ಲಿ ಅಲೆಗಳು ಅಪ್ಪಳಿಸಲಿದೆ. ಹಲವಡೆ ಹೈವೇವ್‌ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಬಿರುಗಾಳಿಯೊಂದಿಗೆ (Rain News) ಮಳೆಯಾಗಲಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಜೂನ್‌ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Heavy rain) ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಸುತ್ತಮುತ್ತ ವ್ಯಾಪಕ (Rain News) ಮಳೆಯಾಗಲಿದ್ದು, ಬಲವಾದ ಗಾಳಿಯು ಬೀಸಲಿದೆ. ಕೆಲವೆಡೆ ಭೂ ಕುಸಿತವಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಬಿರುಗಾಳಿ ಸಹಿತ (40-50 ಕಿ.ಮೀ) ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ವೇಗವು 40-50 ಕಿ,ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆಯಲ್ಲೂ ವಿಪರೀತ ಮಳೆಯಾಗಲಿದೆ.

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Bengaluru Power Cut: ತುರ್ತು ನಿರ್ವಹಣಾ ಕೆಲಸ; ಜೂ.25ರಂದು ಬೆಂಗಳೂರಿನಲ್ಲಿ ವಿದ್ಯುತ್‌ ಕಡಿತ

ಕರಾವಳಿಯಲ್ಲಿ ಮಳೆಯಾಟ

ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡದ ಪಣಂಬೂರು, ಬೀದರ್‌ನ ಭಾಲ್ಕಿಯಲ್ಲಿ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರದಲ್ಲಿ 4 ಸೆಂ.ಮೀ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆ ಸುರಿದಿದೆ.

ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆಯಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ , ಉಪ್ಪಿನಂಗಡಿ , ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Traffic Violation : ಶಿವಮೊಗ್ಗದಲ್ಲಿ ಅಪ್ರಾಪ್ತ ಮಕ್ಕಳ ಕೈಗೆ ವಾಹನ ಕೊಟ್ಟವರಿಗೆ ಬಿತ್ತು ಭಾರಿ ದಂಡ

Traffic rules : ಅಪ್ರಾಪ್ತ ವಯಸ್ಸಿನ ಬಾಲಕ ಗಾಡಿ ಓಡಿಸಿದ್ದಕ್ಕೆ ಶಿವಮೊಗ್ಗ ಕೋರ್ಟ್‌ ನಂದಿನಿ ಹಾಲಿನ ವಾಹನದ ಮಾಲೀಕನಿಗೆ 25,500 ದಂಡವನ್ನು (Traffic Violation) ವಿಧಿಸಿದೆ. ಮತ್ತೊಂದು ಕಡೆ ಮಗನಿಗೆ ಬೈಕ್‌ ಕೊಟ್ಟ ತಂದೆಗೂ ಕೋರ್ಟ್‌ ದಂಡ ಹಾಕಿದೆ.

VISTARANEWS.COM


on

By

Traffic Violation
Koo

ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿದ್ದಕ್ಕೆ ಭಾರಿ ದಂಡ (Traffic Violation) ಹಾಕಲಾಗಿದೆ. ನಂದಿನಿ ಹಾಲಿನ ವಾಹನದ ಮಾಲೀಕನಿಗೆ ಶಿವಮೊಗ್ಗದ 4ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಬರೋಬ್ಬರಿ 25,500 ರೂ. ದಂಡವನ್ನು ವಿಧಿಸಿದೆ.

ಶಿವಮೊಗ್ಗದಲ್ಲಿ ಮಾಲೀಕ ಧನುಷ್‌ ಎಂಬಾತ 17 ವರ್ಷದ ಬಾಲಕನಿಗೆ ವಾಹನ ಚಲಾಯಿಸಲು ಕೊಟ್ಟಿದ್ದ. ಇದೇ ವೇಳೆ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸರು, ಸಮವಸ್ತ್ರ ಧರಿಸದೇ ವಾಹನ ಚಾಲನೆ ಮಾಡುತ್ತಿದ್ದ ವಾಹನಗಳ ತಪಾಸಣೆ ಮಾಡುವಾಗ ಅಪ್ರಾಪ್ತ ಬಾಲಕ ಸಿಕ್ಕಿಬಿದ್ದಿದ್ದ. ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದ ಅಪ್ರಾಪ್ತ ಬಾಲಕನಿಗೆ ದಂಡ ವಿಧಿಸಿ ಶಿವಮೊಗ್ಗದ 4ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಮಗನ ಕೈಗೆ ಬೈಕ್‌ ಕೊಟ್ಟ ತಂದೆಗೆ 25 ಸಾವಿರ ರೂ. ದಂಡ

ನಮ್ಮ ಮಕ್ಕಳು ಸಣ್ಣ ವಯಸ್ಸಲ್ಲೇ ಗಾಡಿ ಓಡಿಸ್ತಾರೆ (Minors driving) ಅಂತ ಹೇಳಿಕೊಳ್ಳುವುದು ಕೆಲವು ಹೆತ್ತವರಿಗೆ ಹೆಮ್ಮೆ ವಿಷಯ. ಬೈಕ್‌, ಕಾರುಗಳನ್ನು ಮಕ್ಕಳ ಕೈಯಲ್ಲಿ ಕೊಟ್ಟು ಓಡಿಸೋದು ಒಂಥರಾ ಖುಷಿ. ಇನ್ನು ಕೆಲವು ಮಕ್ಕಳು ಹಠ ಮಾಡಿ ಗಾಡಿ ಓಡಿಸ್ತಾರೆ.. ಈ ಎರಡೂ ಕೆಟಗರಿಯವರಿಗೆ ಎಚ್ಚರಿಕೆ (traffic rules) ನೀಡೊ ಒಂದು ಘಟನೆ ಶಿವಮೊಗ್ಗದಲ್ಲಿ (Shivamogga news) ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ದ್ವಿಚಕ್ರ ವಾಹನ ಚಲಾಯಿಸಿದ್ದಕ್ಕೆ (Minor boy rides scooter) ಅವನ ಅಪ್ಪನಿಗೆ 25 ಸಾವಿರ ರೂ. ದಂಡ (Father gets 25000 penalty) ಬಿದ್ದಿದೆ!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೊಹಮ್ಮದ್ ಹಯಾನ್ (42) ಎಂಬುವವರು ದಂಡ ತೆತ್ತವರು. ಮೊಹಮ್ಮದ್‌ ಅವರು ತಮ್ಮ 17 ವರ್ಷದ ಮಗನಿಗೆ ದ್ವಿಚಕ್ರ ವಾಹನವನ್ನು ಓಡಿಸಿಕೊಂಡು ಹೋಗುತ್ತಿದ್ದಾಗ ತೀರ್ಥಹಳ್ಳಿ ಟೌನ್ ದೊಡ್ಮನೆ ಕೇರಿ ಬಳಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ವಾಹನ ಚಾಲನಾ ಪರವಾನಿಗೆ ಇಲ್ಲದೆ ಇರುವುದು, ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದಕ್ಕೆ 25 ಸಾವಿರ ದಂಡ ವಿಧಿಸಿ ತೀರ್ಥಹಳ್ಳಿ ಪಿಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: Self Harming : ಜಮೀನಿನಲ್ಲಿ ನೇತಾಡುತ್ತಿತ್ತು ಪೊಲೀಸ್‌ ಕಾನ್ಸ್‌ಟೇಬಲ್‌ ಡೆಡ್‌ ಬಾಡಿ

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಯುವಕನ ಹುಚ್ಚಾಟ

ಧಾರವಾಡದ ಜುಬಲಿ ವೃತ್ತದಲ್ಲಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಯುವಕನೊಬ್ಬ ಹುಚ್ಚಾಟ ಮೆರೆದಿದ್ದಾನೆ. ಕುಡಿದು ಕಾರು ಚಾಲನೆ ಮಾಡಿ, ಖಾಸಗಿ ಬಸ್ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಕೆಸಿಡಿ ಕಾಲೇಜು ಕಡೆಯಿಂದ ಅತಿವೇಗವಾಗಿ ಚಾಲನೆ ಮಾಡಿ ಬೈಕ್‌ಗೆ ಮೊದಲು ಡಿಕ್ಕಿ ಹೊಡೆದಿದ್ದಾನೆ. ಬಳಿಕ ಖಾಸಗಿ ಬಸ್‌ಗೆ ಗುದ್ದಿ ನಂತರ ತನ್ನದೇ ಕಾರಿನ ಮೇಲೆ ನಿಂತು ಹುಚ್ಚಾಟ ತೋರಿದ್ದಾನೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಹೈ ಅಲರ್ಟ್‌ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಗದಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಶುರುವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಸುಮಾರು 31 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

9 ಜಿಲ್ಲೆಗಳಿಗೆ ಹೈ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವುದರ ಜತೆಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Health Tips: ನಮ್ಮ ದೇಹಕ್ಕೆ ಪ್ರೊಟೀನ್‌ ಪುಷ್ಟಿ ನೀಡಲು ಯಾವ ಮೊಳಕೆ ಕಾಳುಗಳು ಸೂಕ್ತ?

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌!

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌! (Dogs Monsoon Fashion) ಅರರೆ., ಇದೇನಿದು ಶ್ವಾನಗಳಿಗೂ ಮಳೆಗಾಲದ ಫ್ಯಾಷನ್‌ ಎಂದು ಹುಬ್ಬೇರಿಸಬಹುದು. ಹೌದು, ಇದೀಗ ಶ್ವಾನಗಳ ಮಾನ್ಸೂನ್‌ ಡ್ರೆಸ್‌ ಹಾಗೂ ರೈನ್‌ಕೋಟ್‌, ಮತ್ತಿತರೇ ಆಕ್ಸೆಸರೀಸ್‌ ಪೆಟ್‌ ಲೋಕದಲ್ಲಿ ಕಾಲಿಟ್ಟಿವೆ. ಆಯಾ ಜಾತಿಯ ಮುದ್ದು ಶ್ವಾನಗಳಿಗೆ ಹೊಂದುವಂತಹ, ನಾನಾ ವೆರೈಟಿ ಮಾನ್ಸೂನ್‌ ಡ್ರೆಸ್‌ಗಳು ಹಾಗೂ ವಾಟರ್‌ಪ್ರೂಫ್‌ ರೈನ್‌ಕೋಟ್‌ಗಳು ನಾಯಿಮರಿಗಳನ್ನು ಅಲಂಕರಿಸುತ್ತಿವೆ.

Dogs Monsoon Fashion

ಮುದ್ದು ಶ್ವಾನಗಳಿಗೂ ಮಾನ್ಸೂನ್‌ ಫ್ಯಾಷನ್‌

“ಇಂದು ಕಾಲ ಬದಲಾಗಿದೆ. ಮನೆಯಲ್ಲಿ ಮುದ್ದು ಶ್ವಾನಗಳಿಗೂ ಮಕ್ಕಳ ಸ್ಥಾನ ಮಾನ ದೊರಕಿದೆ. ಪ್ರತಿಯೊಬ್ಬರು ಅವರು ಸಾಕಿದ ನಾಯಿಮರಿಗಳನ್ನು ಯಾವ ಮಟ್ಟಿಗೆ ಇಷ್ಟ ಪಡುತ್ತಾರೆಂದರೇ, ಅವಕ್ಕೆ ಇತ್ತೀಚೆಗೆ ನಾನಾ ಬಗೆಯಲ್ಲಿ ಸ್ಟೈಲಿಂಗ್‌ ಕೂಡ ಮಾಡುತ್ತಾರೆ. ಇನ್ನು, ಹಿರಿಯರು ಕಿರಿಯರೆನ್ನದೇ ಎಲ್ಲರೂ ವಾಕಿಂಗ್‌ ಹಾಗೂ ಜಾಕಿಂಗ್‌ ಸಮಯದಲ್ಲೂ ಶ್ವಾನಗಳನ್ನು ಜೊತೆಯಲ್ಲಿಯೇ ಕರೆದೊಯ್ಯುತ್ತಾರೆ. ಇದಕ್ಕೆ ಪೂರಕ ಎಂಬಂತೆ, ಪೆಟ್‌ ಲೋಕದಲ್ಲೂ ನಾನಾ ಬಗೆಯ ಆಕ್ಸೆಸರೀಸ್‌ಗಳು ಹಾಗೂ ಉಡುಗೆಗಳು ಬಂದಿವೆ. ಆಯಾ ಸೀಸನ್‌ಗೆ ಮ್ಯಾಚ್‌ ಆಗುವಂತೆ ದೊರಕುತ್ತಿವೆ. ಅವುಗಳಲ್ಲಿ ಇದೀಗ ಮಾನ್ಸೂನ್‌ ಸೀಸನ್‌ಗೆ ಹೊಂದುವಂತಹ ಫ್ಯಾಷನ್‌ ಉಡುಗೆ ಹಾಗೂ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ” ಎನ್ನುತ್ತಾರೆ ಪೆಟ್‌ ಸ್ಪಾನ ಸ್ಟೈಲಿಂಗ್‌ ಎಕ್ಸ್‌ಫರ್ಟ್ ಜಾಕಿ. ಅವರ ಪ್ರಕಾರ, ಶ್ವಾನಗಳು ಇದೀಗ ಸ್ಟೈಲಿಶ್‌ ಆಗಿ ಕಾಣಿಸಲು ಈ ಆಕ್ಸೆಸರೀಸ್‌ಗಳು ಸಹಕರಿಸುತ್ತಿವೆಯಂತೆ.

Dogs Monsoon Fashion

ಮಾನ್ಸೂನ್‌ಗೆ ಮ್ಯಾಚಿಂಗ್‌

ಶ್ವಾನಗಳಿಗೆ ಬಂದಿರುವ ಕಲರ್‌ಫುಲ್‌ ಉಡುಗೆ ಹಾಗೂ ರೈನ್‌ಕೋಟ್‌ ಮತ್ತು ಅವುಗಳ ಕಾಲಿನ ಪಾದಗಳಿಗೆ ಹಾಕಬಹುದಾದ ಪೆಟ್‌ ವೆಲ್ಲೈಸ್‌, ರೈನ್‌ ಬೂಟ್ಸ್ ಹಾಗೂ ಟವೆಲ್‌ ಮತ್ತು ವೈಪ್ಸ್ ಈ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ.

Dogs Monsoon Fashion

ಕಲರ್‌ಫುಲ್‌ ಡಾಗ್ಗಿ ರೈನ್‌ ಕೋಟ್ಸ್

ಪಿರಿ ಪಿರಿ ಸಣ್ಣ ಮಳೆಯಲ್ಲೂ ಡಾಗ್ಗಿಯಿಲ್ಲದೇ ವಾಕ್‌ ಮಾಡಲಾಗುವುದಿಲ್ಲ ಎನ್ನುವ ಶ್ವಾನಗಳ ಪೋಷಕರು, ಈ ಮಾನ್ಸೂನ್‌ ಡಾಗ್‌ ರೈನ್‌ಕೋಟ್ಸ್‌ಗಳ ಖರೀದಿ ಮಾಡತೊಡಗಿದ್ದಾರೆ. ಬೇಡಿಕೆ ಹೆಚ್ಚಾದಂತೆ, ಸಿಂಥಟಿಕ್‌, ಪಾಲಿಸ್ಟರ್‌ ಸೇರಿದಂತೆ ವಾಟರ್‌ ಪ್ರೂಫ್‌ ಫ್ಯಾಬ್ರಿಕ್‌ನಲ್ಲಿ ಇವು ನಾನಾ ಡಿಸೈನ್‌ನಲ್ಲಿ ಆಗಮಿಸಿವೆ.

Dogs Monsoon Fashion

ಪೆಟ್ಸ್ ರೈನ್‌ ಬೂಟ್ಸ್

ನಾಯಿ ಮರಿಗಳಿಗೆ ರಸ್ತೆಯ ಹಾಗೂ ನೆಲದ ಕೊಚ್ಚೆ, ಕೆಸರು ಹತ್ತದಂತೆ ಕಾಪಾಡಬಹುದಾದ ಪುಟ್ಟ ಪುಟ್ಟ ರೈನ್‌ ಬೂಟ್ಸ್‌ಗಳು ಕೂಡ ನಾನಾ ವಿನ್ಯಾಸದಲ್ಲಿ ಪೆಟ್‌ ಶಾಪ್‌ಗಳಿಗೆ ಬಂದಿವೆ. ಇನ್ನು, ಡಾಗ್‌ ಟವೆಲ್ಸ್ ಹಾಗೂ ವೈಪ್ಸ್ ಸೇರಿದಂತೆ, ಬೋ ಹಾಗೂ ಬೆಲ್ಟ್‌ಗಳು ಕೂಡ ಪೆಟ್‌ ಶಾಪ್‌ಗಳಿಗೆ ಲಗ್ಗೆ ಇಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
JP Nadda
ದೇಶ1 min ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

LKG UKG in Anganwadis
ಪ್ರಮುಖ ಸುದ್ದಿ2 mins ago

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Monsoon Trench Coat Fashion
ಫ್ಯಾಷನ್11 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್26 mins ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

tumkur Shoot out
ಕ್ರೈಂ34 mins ago

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

LKG UKG In Govt Schools
ಕರ್ನಾಟಕ39 mins ago

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

Sex Doll
ದೇಶ47 mins ago

AI Sex Dolls: ಶೀಘ್ರವೇ ಬರಲಿವೆ ಎಐ ಆಧಾರಿತ ‘ಸೆಕ್ಸ್‌’ ಬೊಂಬೆಗಳು; ನೈಜ ‘ಸುಖ’ಕ್ಕೆ ಇನ್ನು ಮನುಷ್ಯರೇ ಬೇಕಿಲ್ಲ!

Job Alert
ಉದ್ಯೋಗ48 mins ago

Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

Unusual Story
Latest49 mins ago

Unusual Story: 15 ವರ್ಷದ ವಿದ್ಯಾರ್ಥಿಯಿಂದ ಶಿಕ್ಷಕಿ ಗರ್ಭಿಣಿ! ಜೈಲು ಶಿಕ್ಷೆ

Suraj Revanna Case
ಕರ್ನಾಟಕ1 hour ago

Suraj Revanna Case: ಅಣ್ಣ ಸೂರಜ್‌ 8 ದಿನ ಸಿಐಡಿ ಕಸ್ಟಡಿಗೆ; ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌