ಧಾರವಾಡ: ರಾಜ್ಯಾದ್ಯಂತ ಅನಧಿಕೃತ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಕೈ ಬಿಡಲಾಗುತ್ತಿದೆ (Voter Data)ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಪ್ರತಿಕ್ರಿಯಿಸಿ, ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು ಭಾರತ ಮತ್ತು ರಾಜ್ಯ ಚುನಾವಣಾ ಆಯೋಗ ಕಾಳಜಿ ವಹಿಸಿದೆ ಎಂದರು.
ಇದನ್ನೂ ಓದಿ | ಮಲ್ಲಿಕಾರ್ಜುನ್ ಖರ್ಗೆಗೆ ಇನ್ನೊಂದು ಹುದ್ದೆ?; ಇಬ್ಬರು ಪ್ರಮುಖ ನಾಯಕರನ್ನು ಬಿಟ್ಟು ಸೋನಿಯಾ ಗಾಂಧಿ ನಡೆಸಿದ ಸಭೆಯ ಗುಟ್ಟೇನು?
ಮತದಾರರ ಪರಿಷ್ಕರಣೆ ಸಂಬಂಧಿತ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂತಹವರನ್ನು ಪಟ್ಟಿಯಿಂದ ತೆಗೆಯುವ ಕೆಲಸ ಆಯೋಗ ಮಾಡಬೇಕು. ಎಲ್ಲರಿಗೂ ಅಧಿಕೃತ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದರು.
ಕನ್ನಡಿಗ ವಿದ್ಯಾರ್ಥಿ ಮೇಲೆ ಹಲ್ಲೆ; ತನಿಖೆಗೆ ಆದೇಶ
ಬೆಳಗಾವಿ ಕಾಲೇಜಿನಲ್ಲಿ ಕನ್ನಡ ಧ್ವಜ ಹಾರಿಸಿದ ಕನ್ನಡಿಗ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಇದನ್ನೂ ಓದಿ | ಇತ್ತ ಜೆಡಿಎಸ್ ಜತೆಗೆ ನಂಟು; ಅತ್ತ ಜಮೀರ್ ಅಹ್ಮದ್ ಜತೆಗೂ ಮಾತು: ಕುತೂಹಲ ಕೆರಳಿಸಿದ KCR ನಡೆ