ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಹಾಗೂ ಪ್ರೇರಣ ದಂಪತಿಗೆ ಹೆಣ್ಣು ಮಗು ಜನಿಸಿದೆ. ಹೆರಿಗೆಗಾಗಿ ಪ್ರೇರಣರನ್ನು ಬನಶಂಕರಿ ಅಕ್ಷ ಆಸ್ಪತ್ರೆಗೆ ಶನಿವಾರ ಸಂಜೆ ದಾಖಲು ಮಾಡಲಾಗಿತ್ತು. ಭಾನುವಾರ ಆಕ್ಷ್ಯನ್ ಪ್ರಿನ್ಸ್ ಧ್ರುವ ಸರ್ಜಾ ಮನೆಗೆ ಮಹಾಲಕ್ಷ್ಮೀ ಬಂದಿದ್ದು, ಹೆಣ್ಣು ಮಗುವಿಗೆ ಧ್ರುವ ಸರ್ಜಾ ತಂದೆಯಾಗಿದ್ದಾರೆ.
ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಖುಷಿಯನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದಾರೆ. `Blessd with beautiful Daugher.. Normal delivery, thanks to our doctor jai Hanuman ಎಂದು ಬರೆದುಕೊಂಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದು, ಪ್ರೇರಣಾಗೆ ನಾರ್ಮಲ್ ಡೆಲಿವರಿ ಆಗಿದೆ ಎಂದು ತಿಳಿಸಿದ್ದಾರೆ.
ಧ್ರುವ ಸರ್ಜಾ ಮತ್ತು ಪ್ರೇರಣಾ ವಿವಾಹ 2019ರ ನವೆಂಬರ್ನಲ್ಲಿ ನಡೆದಿತ್ತು. ಬಾಲ್ಯದಿಂದಲೂ ಸ್ನೇಹಿತರಾಗಿದ್ದ ಇವರು, ಪ್ರೀತಿಸಿ ವಿವಾಹವಾಗಿದ್ದಾರೆ. ಪ್ರೇರಣಾ ಬೆಂಗಳೂರಿನ ಕಾಲೇಜೊಂದರಲ್ಲಿ ಅಧ್ಯಾಪಕಿಯಾಗಿದ್ದರು. ಇವರಿಬ್ಬರ ಮದುವೆಯಾಗಿ ಎರಡು ವರ್ಷ ಕಳೆದಿದ್ದು, ಮಗುವಿನ ನಿರೀಕ್ಷೆಯಲ್ಲಿದ್ದರು. ಸಂತೋಷ, ಕಾತುರದಿಂದ ಕಾದುಕುಳಿತಿದ್ದ ನಟ ಧ್ರುವ ಸರ್ಜಾ ಅವರು ಈಗ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ.
ಅದ್ಧೂರಿಯಾಗಿ ನಡೆದಿದ್ದ ಬೇಬಿ ಬಂಪ್
ಈ ಹಿಂದೆ ಬೇಬಿ ಬಂಪ್ ಪೋಟೋವನ್ನು ಹಂಚಿಕೊಡಿದ್ದ ಧ್ರುವ, ‘ನಾವು ಜೀವನದ ಹೊಸ ಹಂತಕ್ಕೆ ಏರುತ್ತಿದ್ದೇವೆ. ಅದೊಂದು ದೈವತ್ವದ ಹಂತ. ಶೀಘ್ರದಲ್ಲೇ ಬರುತ್ತಿರುವ ಮಗುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ, ಜೈ ಹನುಮಾನ್’ ಎಂದು ಅಡಿಬರಹದ ಮೂಲಕ ಪೋಸ್ಟ್ ಮಾಡಿ ಗಮನ ಸೆಳೆದಿದ್ದರು.
ಇದನ್ನೂ ಓದಿ | Dhurva Sarja Wife Baby Shower : ಧ್ರುವ ಸರ್ಜಾ ಪತ್ನಿ ಪ್ರೇರಣಾ ಸೀಮಂತ ಸಂಭ್ರಮ