ಕಾರವಾರ: ನ್ಯಾಯಾಲಯದಲ್ಲಿ ಪ್ರಕರಣಗಳ ವಿಚಾರಣೆ ಅವಧಿ ಕಡಿತಗೊಳಿಸಲು ಪ್ರಯತ್ನಿಸಲಾಗುತ್ತಿದ್ದು, ನ್ಯಾಯಾಂಗ ವ್ಯವಸ್ಥೆಯನ್ನು ಡಿಜಿಟಲೀಕರಿಸಲೂ (Digitization of Judiciary) ಚಿಂತನೆ ನಡೆದಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶೆಟಗೇರಿಯಲ್ಲಿ ಶನಿವಾರ ಆಯೋಜಿಸಿದ್ದ 13ನೇ ರಾಜ್ಯ ನೋಟರಿಗಳ ಸಮ್ಮೇಳನದಲ್ಲಿ ಮಾತನಾಡಿ, ಲೋಕ ಅದಾಲತ್ ಮೂಲಕ ಸಣ್ಣಪುಟ್ಟ ಪ್ರಕರಣಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಗೊಳಿಸಲಾಗುವುದು. ಈ ಹಿಂದೆ ಇದ್ದ ನ್ಯಾಯ ಪಂಚಾಯಿತಿ ಮಾದರಿಯನ್ನು ಮತ್ತೆ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೆಳಹಂತದ ಪ್ರಕರಣಗಳನ್ನು ಅಲ್ಲಿಯೇ ಇತ್ಯರ್ಥಗೊಳಿಸಲು ನ್ಯಾಯ ಪಂಚಾಯಿತಿ ಸಹಕಾರಿಯಾಗುತ್ತಿದೆ. ಈ ಕುರಿತು ನ್ಯಾಯಾಧೀಶರು, ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ನ್ಯಾಯಾಲಯಗಳ ಮೇಲಿನ ಹೊರೆಯನ್ನು ಕಡಿಮೆಗೊಳಿಸಲು ಹೊಸ ಮಾದರಿ ಅಳವಡಿಕೆಗೆ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | Karwar News | ಕೂಲ್ ಡ್ರಿಂಕ್ಸ್ ವಾಹನದಲ್ಲಿ ಗೋವಾ ಮದ್ಯ; ಇಬ್ಬರು ಆರೋಪಿಗಳ ಸೆರೆ