Site icon Vistara News

ಕೆಎಫ್‌ಡಿ ಟೆಸ್ಟಿಂಗ್‌ನಲ್ಲಿ ವಿಳಂಬ ಆಗದಂತೆ ಕ್ರಮವಹಿಸಿ; ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ

dinesh gundu rao

ಬೆಂಗಳೂರು: ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೋಮವಾರ ಮಹತ್ವದ ಸಭೆ ನಡೆಸಿದರು. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಸಚಿವರು, ಕಾಯಿಲೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳ ಕುರಿತು ಶಾಸಕರ ಅಭಿಪ್ರಾಯ ಆಲಿಸಿದರು.

ಮಂಗನ ಕಾಯಿಲೆ ರೋಗಲಕ್ಷಣಗಳು ಕಂಡುಬಂದ ತಕ್ಷಣ ಶೀಘ್ರಗತಿಯಲ್ಲಿ ಟೆಸ್ಟಿಂಗ್ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಕೆಎಫ್.ಡಿ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು. ಶಿರಸಿಯಲ್ಲಿ ಕೆಎಫ್‌ಡಿ ಟೆಸ್ಟಿಂಗ್‌ಗೆ ಪ್ರಯೋಗಾಲಯ ಸ್ಥಾಪನೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಇದನ್ನೂ ಓದಿ | Janaspandana 2.0 : ಇನ್ನು ಮುಂದೆ ವಿಭಾಗ ಮಟ್ಟದಲ್ಲೂ ಸಿಎಂ ಜನಸ್ಪಂದನ, ಮೊದಲು ಕಲಬುರಗಿ

ಮಂಗನಕಾಯಿಲೆ ನಿಯಂತ್ರಣ ಕುರಿತ ಸಭೆಯ ಪ್ರಮುಖ ಅಂಶಗಳು

ಸಭೆಯಲ್ಲಿ ಸಚಿವರಾದ ಮಧು ಬಂಗಾರಪ್ಪ, ಮಂಕಾಳ ಎಸ್‌. ವೈದ್ಯ, ಶಾಸಕರಾದ ಆರಗ ಜ್ಞಾನೇಂದ್ರ, ಎಚ್‌.ಡಿ.ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ನಯನ ಮೋಟಮ್ಮ ಸೇರಿದಂತೆ ಜನಪ್ರತಿನಿಧಿಗಳು, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version