ಬೆಂಗಳೂರು: ಕಬ್ಬು ಮತ್ತು ಹಾಲಿಗೆ ವೈಜ್ಞಾನಿಕ ಬೆಲೆ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಮಂಡ್ಯದಲ್ಲಿ ಕಳೆದ 41 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ರೈತರು ಸೋಮವಾರ (ಡಿ.೧೯) ನಡೆಸುತ್ತಿರುವ ಮಂಡ್ಯ ಬಂದ್‌ಗೆ (Mandya Bandh) ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮಧು ಜಿ. ಮಾದೇಗೌಡ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿಯೂ ಹೇಳಿದ್ದಾರೆ.
ನಮ್ಮ ಹೊಟ್ಟೆಯನ್ನು ತುಂಬಿಸುವ ರೈತರು ಇಂದು ಸಂಕಷ್ಟದಲ್ಲಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆಗೆ ಉತ್ತಮ ಬೆಲೆ ಕಂಗಾಲಾಗಿದ್ದಾರೆ. ಕಬ್ಬು ಬೆಳೆಗೆ 4500 ರೂಪಾಯಿ ಬೆಲೆ ನಿಗದಿ ಹಾಗೂ ಕರಾವಳಿ ಭಾಗದ ಭತ್ತ ಬೆಳೆಗಾರರಿಗೆ ನೀಡುತ್ತಿರುವ 500 ರೂಪಾಯಿ ಬೆಂಬಲ ಬೆಲೆಯನ್ನು ಎಲ್ಲ ರೈತರಿಗೂ ನೀಡಬೇಕು. ಹಾಲಿಗೆ ರೂ.40 ದರವನ್ನು ನಿಗದಿಪಡಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಂಡ್ಯ ಜಿಲ್ಲೆಯಲ್ಲಿ ರೈತರು ಬಂದ್ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಇದೆ ಎಂದು ತಿಳಿಸಿದ್ದಾರೆ.
ಸದನದಲ್ಲೂ ಪ್ರಸ್ತಾಪ
ರೈತರು ಇಂತಹ 10 ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಸರ್ಕಾರ ಪರಿಹಾರವನ್ನು ಕಲ್ಪಿಸಬೇಕಿದೆ. ಈ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶಾಸಕರು ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ದಿನೇಶ್ ಗೂಳಿಗೌಡ, ರೈತರು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ. ರೈತರು ನ್ಯಾಯಯುತ ಬೇಡಿಕೆಯನ್ನು ಇಟ್ಟಿದ್ದು, ಇದನ್ನು ಸರ್ಕಾರ ಈಡೇರಿಸಲೇಬೇಕಿದೆ. ಹೀಗಾಗಿ ರೈತರ ಮನವಿಗೆ ಸರ್ಕಾರ ಸ್ಪಂದಿಸಬೇಕೆಂದು ನಾವು ಸಹ ಪಟ್ಟು ಹಿಡಿದು ಕೇಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ | Border Dispute | ಎಂಇಎಸ್ ಮಹಾಮೇಳಾವ್‌ಗೆ ರಾಜ್ಯ ಸರ್ಕಾರ ಬ್ರೇಕ್; ನಿಪ್ಪಾಣಿ ಗಡಿಗೆ ಬಂದಿದ್ದ ಮಹಾ ನಾಯಕರ ಹಿಮ್ಮೆಟ್ಟಿದ ಪೊಲೀಸರು