Site icon Vistara News

ಡಿಕೆಶಿ ವಿರುದ್ಧದ ಆಕ್ರಮ ಆಸ್ತಿ ಪ್ರಕರಣ; ಹೈಕೋರ್ಟ್‌ನಲ್ಲೇ ಅರ್ಜಿ ಇತ್ಯರ್ಥವಾಗಲಿ ಎಂದ ಸುಪ್ರೀಂ

DCM DK Shivakumar

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ಅರ್ಜಿಯನ್ನು ಹೈಕೋರ್ಟ್‌ನಲ್ಲೇ ಇತ್ಯರ್ಥಪಡಿಸಿಕೊಳ್ಳುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ನೇತೃತ್ವದ ದ್ವಿಸದನ ನ್ಯಾಯಪೀಠ, ಅರ್ಜಿ ವಿಚಾರಣೆ ನಡೆಸಿ, ಪ್ರಕರಣ ಹೈಕೋರ್ಟ್‌ನಲ್ಲೇ ಇತ್ಯರ್ಥವಾಗಲಿ ಎಂದು ನಿರ್ದೇಶನ ನೀಡಿದೆ.

ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠವು ತಡೆ ನೀಡಿದ್ದರ ಬಗ್ಗೆಯೂ ವಿಚಾರಣೆ ನಡೆಯಿತು. ಅಲ್ಲದೇ ತಡೆ ರದ್ದು ಕೋರಿ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದ್ದಲ್ಲದೇ, ಸುಪ್ರೀಂ ಕೋರ್ಟ್‌ನಲ್ಲಿಯೂ ಮೇಲ್ಮನವಿ ಸಲ್ಲಿಸಿತ್ತು. ಹೀಗಾಗಿ ಹೈಕೋರ್ಟ್‌ನಲ್ಲೇ ಪ್ರಕರಣದ ಅರ್ಜಿಯ ವಿಚಾರಣೆ ನಡೆಯಲಿ ಎಂದು ಸುಪ್ರೀಂ ಕೋರ್ಟ್‌ ಸಿಬಿಐಗೆ ಸೂಚಿಸಿದೆ.

ಇದನ್ನೂ ಓದಿ | CM Siddaramaiah: ಪಂಚರಾಜ್ಯ ಚುನಾವಣಾ ಕಣಕ್ಕೆ ಸಿದ್ದರಾಮಯ್ಯ ಎಂಟ್ರಿ, ಇಂದು ತೆಲಂಗಾಣದಲ್ಲಿ ಪ್ರಚಾರ

2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿತ್ತು. ನಂತರ ಇ.ಡಿ. ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಬಳಿಕ ಡಿ.ಕೆ ಶಿವಕುಮಾರ್ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಹೈಕೋರ್ಟ್​ ವಿಭಾಗೀಯ ಪೀಠ, ಸಿಬಿಐ ತನಿಖೆಗೆ ತಡೆ ನೀಡಿತ್ತು. ಹೀಗಾಗಿ ಡಿಕೆಶಿ ಅವರಿಗೆ ಬಿಗ್ ರಿಲೀಫ್​ ಸಿಕ್ಕಿತ್ತು.

ನಂತರ ಹೈಕೋರ್ಟ್​ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ಮಾಡಲು ಹೈಕೋರ್ಟ್ ವಿಧಿಸಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸುಪ್ರೀಂಕೋರ್ಟ್​ಗೂ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿತತು.

ಇದನ್ನೂ ಓದಿ | ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ! ಸಂಪುಟ ಸಭೆಯಲ್ಲಿ ಚರ್ಚೆಯೇ ಆಗಿಲ್ಲ

BJP-JDS ಬರ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರಲಿ ಎಂದ ಡಿಕೆಶಿ

ಬೆಂಗಳೂರು: “ರಾಜ್ಯದ 200ಕ್ಕೂ ಹೆಚ್ಚು ತಾಲೂಕು ಬರಕ್ಕೆ ಸಿಲುಕಿದ್ದು, ಬರ ಪರಿಹಾರ (Drought Compensation) ಹಾಗೂ ನರೇಗಾ ಉದ್ಯೋಗ ದಿನಗಳ ಹೆಚ್ಚಳ (MNrega jobs) ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ನಾಯಕರು (BJP-JDS Leaders) ಕೇಂದ್ರದ ಮೇಲೆ ಒತ್ತಡ ತಂದು ತಮ್ಮ ಬದ್ಧತೆ ಪ್ರದರ್ಶಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸವಾಲು ಹಾಕಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

ಕೇಂದ್ರ ಸರ್ಕಾರದಿಂದ ಬರದ ವಿಚಾರದಲ್ಲಿ ತಾರತಮ್ಯ

ಬಿಜೆಪಿ ಹಾಗೂ ದಳದವರು ಬಹಳ ಅನುಕಂಪದಿಂದ ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಬರ ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕೇಳಿತ್ತು. ನಂತರ ಕೇಂದ್ರ ಸರ್ಕಾರ ವರದಿ ಸ್ವೀಕರಿಸಿ ಕೇಂದ್ರ ಬರ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳಿಸಿತ್ತು. ರಾಜ್ಯದಿಂದ ಆಯ್ಕೆಯಾದ 25 ಸಂಸದರು ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮಾಡಲಿ. ಕೇವಲ ಪ್ರಚಾರಕ್ಕೆ ಪ್ರವಾಸ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರ ಸರ್ಕಾರ ಕಾನೂನು ಪ್ರಕಾರ ಬರಕ್ಕೆ ಬಿಡುಗಡೆ ಮಾಡಬೇಕಾದ ಪರಿಹಾರ ಹಣ ನೀಡಲಿ ಎಂದು ಅವರು ಒತ್ತಾಯಿಸಿದರು.

ನರೇಗಾ ಉದ್ಯೋಗ ದಿನ ವಿಸ್ತರಣೆಗೆ ಕೇಂದ್ರದ ಮುಂದೆ ಮನವಿ

ಬರ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರ್ಕಾರ 800 ಕೋಟಿ ಹಣ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಕುಡಿಯುವ ನೀರು, ಪಶುಗಳಿಗೆ ಮೇವು ಪೂರೈಕೆಗೆ ಆದ್ಯತೆ ನೀಡಲು ತಿಳಿಸಿದ್ದೇವೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲೂಕು ಬರಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ನರೇಗಾ ಯೋಜನೆಯ ಮೂಲಕ ಸೀಮಿತ ಇರುವ ಉದ್ಯೋಗ ದಿನವನ್ನು 100ರಿಂದ 150 ದಿನಕ್ಕೆ ವಿಸ್ತರಣೆ ಮಾಡಲು ಪ್ರಸ್ತಾಪ ಇಟ್ಟಿದ್ದು ಕೇಂದ್ರ ಸರ್ಕಾರ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಅವರು ವಿವರಿಸಿದರು.

ರಾಜ್ಯದ ಹಿತಕ್ಕಾಗಿ ಸಂಸದರು ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಶಾಸಕರು ಕೇಂದ್ರ ಸರ್ಕಾರದ ಬಳಿ ಒತ್ತಡ ಹೇರಲಿ. ಆನಂತರ ಅವರು ರಾಜಕಾರಣ ಮಾಡಲಿ. ಅವರ ರಾಜಕಾರಣಕ್ಕೆ ನಾವು ಬೇಡ ಎನ್ನುವುದಿಲ್ಲ ಎಂದರು.

ಇದನ್ನೂ ಓದಿ | DK Shivakumar : ಕಾಂಗ್ರೆಸ್‌ ಶಾಸಕರು, ಕಾರ್ಯಕರ್ತರ ಭೇಟಿಗೆ ಡಿಕೆಶಿ ಟೈಮ್‌ ಫಿಕ್ಸ್‌

ಕೇಂದ್ರ ಹೆಚ್ಚಿಸದಿದ್ದರೆ, ನಾವೇ ಹೆಚ್ಚಳ ಮಾಡುತ್ತೇವೆ

ʻʻನಾವು ಕೇಂದ್ರದ ಬಳಿ ಭಿಕ್ಷೆ ಬೇಡುತ್ತಿಲ್ಲ. ಕಾನೂನು ಪ್ರಕಾರ ಬರ ಪರಿಸ್ಥಿತಿ ಇದ್ದಾಗ ನರೇಗಾ ಯೋಜನೆಯಡಿ ನೀಡುವ ಉದ್ಯೋಗ ದಿನಗಳನ್ನು 150 ದಿನಗಳಿಗೆ ಹೆಚ್ಚಳ ಮಾಡಬೇಕು. ಈ ಉದ್ಯೋಗ ದಿನ ಹೆಚ್ಚಳ ಮಾಡಲು ಆಗದಿದ್ದರೆ ಕೇಂದ್ರ ಸರ್ಕಾರ ಅದನ್ನು ಸ್ಪಷ್ಟವಾಗಿ ತಿಳಿಸಲಿ. ಆ ಕೆಲಸವನ್ನು ರಾಜ್ಯ ಸರ್ಕಾರವೇ ಮಾಡಲಿದೆ ಎಂದು ಅವರು ಹೇಳಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version