ಕೊಪ್ಪಳ: ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ (Karnataka election 2023) ಮತದಾನಕ್ಕೆ ಕೊಪ್ಪಳ ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿ ಸುಂದರೇಶಬಾಬು, ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 10ರಂದು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ 1322 ಮತಗಟ್ಟೆಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಹೇಳಿದರು.
ಇದನ್ನೂ ಓದಿ: WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್; ರಾಹುಲ್ ಸ್ಥಾನಕ್ಕೆ ಇಶಾನ್ ಕಿಶನ್ ಆಯ್ಕೆ
1322 ಮತಗಟ್ಟೆಗಳ ಸ್ಥಾಪನೆ
ಜಿಲ್ಲೆಯಲ್ಲಿ ಒಟ್ಟು 1322 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಈ ಪೈಕಿ ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ 278, ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ 264, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ 235, ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ 256 ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 289 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 69 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 11,36,838 ಮತದಾರರಿದ್ದು, 566281 ಪುರುಷ ಮತದಾರರು 570407 ಮಹಿಳಾ ಮತದಾರರು ಹಾಗೂ ಇತರೆ 50 ಮತದಾರರು ಇದ್ದಾರೆ.
ಇದನ್ನೂ ಓದಿ: ಯಾವ ಬೂತ್‌ನಲ್ಲಿ ಮತ ಹಾಕಬೇಕು? ರೂಟ್ ಯಾವುದು? ಎಲ್ಲ ಮಾಹಿತಿಗೂ ಇದೊಂದು App ಸಾಕು
ಐದು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕೆ 6226 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಈ ಪೈಕಿ 1528 ಪಿಆರ್‌ಒ, 1534 ಎಪಿಆರ್‌ಒ ಹಾಗೂ ಪಿಒ 3164 ಸೇರಿ 6226 ಸಿಬ್ಬಂದಿಯನ್ನು ನೇಮಕಾತಿ ಮಾಡಲಾಗಿದೆ.
263 ವಾಹನ ನಿಯೋಜನೆ
ಮತದಾನದ ಕರ್ತವ್ಯಕ್ಕೆ 263 ವಾಹನ ನಿಯೋಜನೆ ಮಾಡಲಾಗಿದೆ. 185 ಬಸ್‌ಗಳು, 9 ಮಿನಿ ಬಸ್‌ಗಳು, 69 ಕ್ರೂಸರ್‌ಗಳು ಸೇರಿ ಒಟ್ಟು 263 ವಾಹನಗಳನ್ನು ಬಳಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ತಿಳಿಸಿದರು.
ಇದನ್ನೂ ಓದಿ: Shubman Gill: ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದ ಕ್ರಿಕೆಟಿಗ ಶುಭಮನ್ ಗಿಲ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, ಚುನಾವಣಾ ಬಂದೋಬಸ್ತ್‌ಗಾಗಿ 3187 ಪೊಲೀಸ್, ಹೋಮ್ ಗಾರ್ಡ್, ಕೆಎಸ್ಆರ್‌ಪಿ ಹಾಗೂ ಐಟಿಬಿಪಿ ಸಿಬ್ಬಂದಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.