ಬೆಂಗಳೂರು-ಮೈಸೂರು ಹೆದ್ದಾರಿ ಪ್ಲಾನ್ ಮಾಡಿದ ಇಂಜಿನಿಯರ್‌ಗಳಿಗೆ ಪದ್ಮಭೂಷಣ ಕೊಡಿ ಎಂದ ಡಿ.ಕೆ. ಶಿವಕುಮಾರ್‌ - Vistara News

ಕರ್ನಾಟಕ

ಬೆಂಗಳೂರು-ಮೈಸೂರು ಹೆದ್ದಾರಿ ಪ್ಲಾನ್ ಮಾಡಿದ ಇಂಜಿನಿಯರ್‌ಗಳಿಗೆ ಪದ್ಮಭೂಷಣ ಕೊಡಿ ಎಂದ ಡಿ.ಕೆ. ಶಿವಕುಮಾರ್‌

ಬೆಂಗಳೂರು-ಮೈಸೂರು ಹೆದ್ದಾರಿಯ ಆಸುಪಾಸಿನಲ್ಲೆ ಮಳೆಯಿಂದ ಹೆಚ್ಚು ಹಾನಿಯಾಗಿದ್ದು, ಅವೈಜ್ಞಾನಿಕವಾಗಿ ಯೋಜನೆ ಅನುಷ್ಠಾನ ಮಾಡಲಾಗಿದೆ ಎಂದು ಈ ಹಿಂದೆ ಗ್ರಾಮಸ್ಥರು ಆರೋಪಿಸಿದ್ದರು.

VISTARANEWS.COM


on

DK Shivakumar rains
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯೊಂದನ್ನು ಯೋಜನೆ ಮಾಡುವಾಗ ಯಾವ ಪ್ರಾಥಮಿಕ ಸಂಗತಿಗಳನ್ನೂ ಗಮನಿಸದೇ ಮುಂದಾಗಿರುವುದೇ ಬೆಂಗಳೂರು-ಮೈಸೂರು ಹೆದ್ದಾರಿ ಆಸುಪಾಸಿನಲ್ಲಿ ಹೆದ್ದಾರಿ ಅವಾಂತರಕ್ಕೆ ಕಾರಣ ಎಂದು ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು. ಆದರೆ ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಈ ಹೆದ್ದಾರಿಯನ್ನು ಪ್ಲಾನ್ ಮಾಡಿರುವ ಇಂಜಿನಿಯರ್‌ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು ಎಂದು ವ್ಯಂಗ್ಯವಾಡಿರುವ ಶಿವಕುಮಾರ್‌, ರಸ್ತೆ ನಿರ್ಮಾಣ ಎಂದರೆ ಜಲ್ಲಿ, ಟಾರು ಅಥವಾ ಕಾಂಕ್ರೀಟ್ ಹಾಕಿ ಹಣ ಪಡೆಯುವುದಲ್ಲ. ಮಳೆ ಬಂದಾಗ ನೀರು ಹೇಗೆ ಹೋಗಬೇಕು, ಎಲ್ಲಿ ಕಾಲುವೆ ತೆಗೆಯಬೇಕು ಎಂದು ಯೋಜನೆ ರೂಪಿಸುವುದು ಸರ್ಕಾರ ಹಾಗೂ ಇಂಜಿನಿಯರ್‌ಗಳ ಕರ್ತವ್ಯ.

ರಾಷ್ಟ್ರೀಯ ಹೆದ್ದಾರಿ ಸ್ಥಿತಿ ಹೀಗಾದರೆ ಹಳ್ಳಿ ರಸ್ತೆಗಳ ಪರಿಸ್ಥಿತಿ ಏನಾಗಬೇಕು? ಒಬ್ಬಿಬ್ಬರ ಪ್ರಾಣ ಹಾನಿಯಾಗಿರುವ ಮಾಹಿತಿ ಬಂದಿದ್ದು, ರಾಮನಗರ, ಚನ್ನಪಟ್ಟಣ, ಕನಕಪುರದ ಕೆಲವು ಭಾಗಗಳಿಗೆ ಹೋಗಿ ಪರಿಸ್ಥಿತಿ ಪರಿಶೀಲಿಸುತ್ತೇನೆ. ಅವರಿಗೆ ಧೈರ್ಯ ತುಂಬುತ್ತೇನೆ. ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ ಎಂದರು.

ಈ ಸಮಯದಲ್ಲಿ ಆಡಳಿತ ವ್ಯವಸ್ಥೆ ಚುರುಕಾಗಿ ಕೆಲಸ ಮಾಡಬೇಕು. ಒಂದು ವಾರ ಅಥವಾ 10 ದಿನಗಳಲ್ಲಿ ಪರಿಹಾರ ನೀಡುತ್ತೇನೆ ಎಂದು ಹೇಳುವುದಲ್ಲ. ತಕ್ಷಣ ಸ್ಥಳದಲ್ಲೇ ಚೆಕ್ ಮೂಲಕ ಪರಿಹಾರ ನೀಡಲು ಸಮಸ್ಯೆ ಏನು? ಹಾನಿಗೆ ಒಳಗಾದವರನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕು. ರೈತನ ಮಗನಾಗಿ, ರೈತನಾಗಿ, ಇಂಧನ ಸಚಿವನಾಗಿ, ಜಲಸಂಪನ್ಮೂಲ ಸಚಿವನಾಗಿ ಮಳೆಯ ಅವಶ್ಯಕತೆ ಎಷ್ಟಿದೆ ಎಂಬುದು ನನಗೆ ಅರಿವಿದೆ. ಹೀಗಾಗಿ ಮಳೆ ಬರಬಾರದು ಎಂದು ಹೇಳುವುದಿಲ್ಲ. ಇಷ್ಟು ಮಳೆ ಬಂದು ಪ್ರವಾಹದ ಸ್ಥಿತಿ ನಿರ್ಮಾಣವಾದ ನಂತರ ಎಲ್ಲಾ ನೀರು ಸಮುದ್ರ ಸೇರುತ್ತಿದೆ. ಈ ನೀರನ್ನು ತಡೆಹಿಡಿದು ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ಮಾಡಿದೆವು ಎಂದರು.

ರೈತರ ಪಂಪ್‌ಸೆಟ್‌ಗಾಗಿ ನಮ್ಮ ಸರ್ಕಾರ 12 ರಿಂದ 15 ಸಾವಿರ ಕೋಟಿ ನೀಡಿತ್ತು. ಸರ್ಕಾರ ವಿದ್ಯುತ್ ಕಂಪನಿಗಳಿಂದ ಕರೆಂಟ್ ಖರೀದಿ ಮಾಡಿ ಅದನ್ನು ಕಡಿಮೆ ಬೆಲೆಗೆ ರೈತರಿಗೆ ನೀಡುತ್ತದೆ. ಅಣೆಕಟ್ಟುಗಳು ತುಂಬಿದಾಗ ಕಡಿಮೆ ದರದಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡಬಹುದು. ಒಂದು ದಿನ ಮಳೆ ಹೆಚ್ಚಾಗಿ ಸುರಿದರೆ ರೈತರ ಪಂಪ್‌ಸೆಟ್ ಆನ್ ಮಾಡದೆ, ಜನ ಎಸಿ ಬಳಸದೆ ಇದ್ದರೆ ಹಾಗೂ ಇತರ ಮಾರ್ಗಗಳಿಂದ ಸರ್ಕಾರದ ಬೊಕ್ಕಸಕ್ಕೆ 1 ಸಾವಿರ ಕೋಟಿ ರೂ. ಉಳಿಯುತ್ತದೆ. ಹೀಗಾಗಿ ಮಳೆಯಿಂದ ಈ ಎಲ್ಲಾ ಲಾಭದಾಯಕ ಅಂಶಗಳು ಇವೆ. ಆದರೆ ನೋವಿನ ಸಂಗತಿ ಎಂದರೆ ಅತಿಯಾದ ಮಳೆಗೆ ಆಸ್ತಿಪಾಸ್ತಿಗಳು ನಷ್ಟವಾಗುತ್ತಿವೆ. ಹೀಗಾಗಿ ಸರ್ಕಾರ ಸಂತ್ರಸ್ತರ ನೆರವಿಗೆ ನಿಲ್ಲಬೇಕು. ತಗ್ಗು ಪ್ರದೇಶದಲ್ಲಿ ಇರುವ ಜನರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Rain News | ಬೆಂಗಳೂರು-ಮೈಸೂರು ಹೆದ್ದಾರಿ ಕಾಲುವೆಗಳು ಮುಚ್ಚಿದ್ದಕ್ಕೆ ಪ್ರವಾಹ; ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Kumaraswamy: ಚನ್ನಪಟ್ಟಣ ಜನರನ್ನು ಯಾರೂ ಭಯಪಡಿಸಲು ಆಗಲ್ಲ; ಡಿಕೆ ಬ್ರದರ್ಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಚನ್ನಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ ಕಾರ್ಯಕರ್ತರು ಅದ್ಧರಿ ಸ್ವಾಗತ ಕೋರಿದರು.

VISTARANEWS.COM


on

HD Kumaraswamy
Koo

ರಾಮನಗರ: ನನಗೆ ಎರಡು ಖಾತೆಗಳನ್ನು ಕೊಟ್ಟಿದ್ದಾರೆ. ನಿರುದ್ಯೋಗ ನಿವಾರಣೆಗೆ ಇಡೀ ದೇಶದಲ್ಲಿ ಕೆಲಸ ಮಾಡಬೇಕಿದೆ. ಹೊರರಾಜ್ಯಗಳಲ್ಲಿ ಕೆಲಸ ಮಾಡೋದಕ್ಕೂ ಯುವಕರು ಮಾನಸಿಕವಾಗಿ ಸಿದ್ಧರಾಗಬೇಕು. ಚನ್ನಪಟ್ಟಣ ಜನರನ್ನು ಭಯಪಡಿಸಲು ಆಗಲ್ಲ. ಮಂಡ್ಯ ಸೀಮೆಯ ಗಾಳಿ ಈ ಭಾಗದಲ್ಲಿ ಇದೆ ಎಂದು ಪರೋಕ್ಷವಾಗಿ ಡಿಕೆ ಬ್ರದರ್ಸ್‌ ವಿರುದ್ಧ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಚನ್ನಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಈ ಹಿಂದೆ ಯೋಗೇಶ್ವರ್ ಸಚಿವರಾಗಿ ದೇವೇಗೌಡರು ಕಟ್ಟಿದ ಇಗ್ಗಲೂರಿನಿಂದ ನೀರು ತಂದರು. ನಾವು ಜಾಹೀರಾತಿನಿಂದ ಪ್ರಚಾರ ತೆಗೆದುಕೊಳ್ಳಲಿಲ್ಲ. ಜನರ ಕಷ್ಟ ಅರ್ಥ ಮಾಡಿಕೊಂಡು ಬಂದಿದ್ದೇನೆ. ಈ ರಾಜ್ಯದಲ್ಲಿ ಮತ್ತೆ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ನಾನು ಕೃಷಿ ಸಚಿವ ಆಗದೇ ಇರಬಹುದು. ದೇವೇಗೌಡರಿಗೆ ಪ್ರಧಾನಿ ಕೂಡ ಗೌರವ ಕೊಡುತ್ತಾರೆ. ಅದರಂತೆ ನನಗೂ ಸ್ವಲ್ಪ ಗೌರವ ಇದೆ. ಸ್ಮಾರ್ಟ್ ಸಿಟಿ ಯೋಜನೆ ತರುವ ನಿಟ್ಟಿನಲ್ಲಿ ಕೆಲಸ ಮಾಡುವೆ ಎಂದು ಹೇಳಿದರು.

ಚನ್ನಪಟ್ಟಣ ನಗರಸಭೆ ಜನ ಹೆಚ್ಚು ಮತ ಕೊಟ್ಟರೂ ಅಭಿವೃದ್ಧಿ ಕುಂಠಿತವಾಯಿತು. ನಮ್ಮ ಎದುರಾಳಿಗಳು ನಮ್ಮನ್ನು ಸೋಲಿಸುವುದಕ್ಕೆ ಆಗಲ್ಲ ಎಂದಿದ್ದರು. ಬಹಳ ಅಭಿವೃದ್ಧಿ ಕೆಲಸ ಮಾಡಿದ್ದೇನೆ, ಕೂಲಿ ಕೊಡುತ್ತಾರೆ ಎಂತಿದ್ದರು. ಅದೇನೋ ಮಾತು ಎತ್ತಿದರೆ ಸಾಕ್ಷಿ ಗುಡ್ಡೆ ಎನ್ನುತ್ತಾರೆ. ಸಾಕ್ಷಿ ಗುಡ್ಡೆ ನೋಡಬೇಕು ಎಂದರೆ ಕನಕಪುರ ಮಾತ್ರ ಸಾಧ್ಯ. ಉಳಿದಂತೆ ಜಿಲ್ಲೆಯ ಯಾವ ಕ್ಷೇತ್ರವು ಅಭಿವೃದ್ಧಿ ಆಗಿಲ್ಲ. ಇದೀಗ ಚನ್ನಪಟ್ಟಣ ಕ್ಷೇತ್ರದ ಮೇಲೆ ವಕ್ರ ದೃಷ್ಟಿ ಬಿದ್ದಿದೆ ಎಂದು ಡಿಕೆ ಸಹೋದರರನ್ನು ಟೀಕಿಸಿದರು.

3 ಕೋಟಿ ಮನೆಗಳನ್ನು ಕಟ್ಟುವ ನಿರ್ಧಾರವನ್ನು ಪ್ರಧಾನಮಂತ್ರಿ ಮಾಡಿದ್ದಾರೆ. ನಾನು ಹುಟ್ಟಿದ್ದು ಹಾಸನ ಜಿಲ್ಲೆಯಾದರೂ ರಾಜಕೀಯ ಶಕ್ತಿ ಕೊಟ್ಟಿದ್ದು ಈ ಜಿಲ್ಲೆಯ ಜನ. ಮಂಡ್ಯ ಜಿಲ್ಲೆಯ ಜನ ಅತ್ಯಂತ ಮುಗ್ಧರು. 50 ವರ್ಷಗಳ ಹಿಂದೆ ಹೇಗಿತ್ತೋ, ಅದೇ ರೀತಿಯಲ್ಲಿ ಆ ಜಿಲ್ಲೆ ಇನ್ನೂ ಉಳಿದಿದೆ. ಕುಮಾರಣ್ಣ ಬಂದ್ರೆ ಏನೋ ಒಳ್ಳೆ ಕೆಲಸ ಮಾಡುತ್ತಾರೆ ಅಂದುಕೊಂಡಿದ್ದಾರೆ, ಹೀಗಾಗಿ ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲರ ಒಪ್ಪಿಗೆ ಪಡೆದು ಅನಿವಾರ್ಯವಾಗಿ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾದೆ. ಈ ಬಗ್ಗೆ ಹಲವಾರು ನಾಯಕರಿಗೆ ಅಸಮಾಧಾನವಾಗಿದೆ. ನಾನು ರಾಮನಗರದಲ್ಲಿ ಶಾಸಕನಾಗಿದ್ದಾಗ ಚನ್ನಪಟ್ಟಣಕ್ಕೆ ಬರಬೇಕು ಎಂದಿದ್ದರು. ಅಭಿಮಾನಿಗಳು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚನ್ನಪಟ್ಟಣದ ಶಾಸಕನಾದೆ. ಈ ಬಾರಿ ಲೋಕಸಭೆ ಚುನಾವಣೆಗೆ ನಿಲ್ಲಬೇಕು ಅಂದುಕೊಂಡಿರಲಿಲ್ಲ. ಈ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಇರಬೇಕೋ ಬೇಡವೋ ಅನ್ನೋ ಪರಿಸ್ಥಿತಿಯಾಗಿತ್ತು. ಮಂಡ್ಯದಲ್ಲಿಯೂ ನಾನು ಹೋಗದೇ ಇದ್ದರೂ ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.

ಕಳೆದ ವಿಧಾಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತಾರೆ ಅಂದುಕೊಂಡಿದ್ದಿರಿ. ಈಗ ನಾನು ಲೋಕಸಭೆಯಲ್ಲಿ ನಿಲ್ಲಬೇಕಾಯ್ತು‌. ಕೇಂದ್ರದಲ್ಲಿ ಕೃಷಿ ಸಚಿವನಾದರೆ ರೈತರಿಗೆ ಅನುಕೂಲವಾಗುತ್ತೆ ಅಂದುಕೊಂಡಿದ್ದಿರಿ. ಎಲ್ಲೇ ಹೋದರೂ ಕೃಷಿ ಸಚಿವ ಅಂತ ಘೋಷಣೆ ಮಾಡುತ್ತಿದ್ದರು. ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ ವ್ಯವಸ್ಥೆ ಮಾಡಲಾಗುತ್ತದೆ. ದೇವೇಗೌಡರ ಮಾರ್ಗದರ್ಶನದಲ್ಲಿ ಹಳ್ಳಿಗಳ ಅಭಿವೃದ್ಧಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಹಿಂದೆ ಎರಡು ಬಾರಿ ಸಿಎಂ ಆದಾಗ ಈ ರಾಜ್ಯದ ಜನ ಗುರುತಿಸಿದ್ದಾರೆ. ಇಲ್ಲಿ ಸಭೆ ಮಾಡಿದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಅಂದುಕೊಂಡೆ. ಹಲವು ನಾಯಕರು ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ಮಾಡಿದ್ದೀರಿ, ಉದ್ಘಾಟನೆ ನಾನೇ ಮಾಡುವಂತೆ ಒತ್ತಡ ಹಾಕಿದ್ದರು. ಹೀಗಾಗಿ ಈ ಕಾರ್ಯಕ್ರಮ ಬಳಿಕ ಸಂಜೆ ರಾಜೀನಾಮೆ ಅಂಗೀಕಾರ ಮಾಡುವಂತೆ ಸ್ಪೀಕರ್‌ಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

Continue Reading

ಪ್ರಮುಖ ಸುದ್ದಿ

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಘೋಷಣೆ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ. ಒಟ್ಟು 23 ಸಾಹಿತಿಗಳಿಗೆ ಪ್ರಶಸ್ತಿ ನೀಡಲಾಗಿದ್ದು, ಕರ್ನಾಟಕದ ಇಬ್ಬರಿಗೂ ಪ್ರಶಸ್ತಿ ದೊರೆತಿದೆ.

VISTARANEWS.COM


on

Kendra Sahitya Akademi Award
Koo

ನವದೆಹಲಿ/ಬೆಂಗಳೂರು: ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award) ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.

ಶ್ರುತಿ ಬಿ.ಆರ್.‌ ಅವರು ಚಿಕ್ಕಮಗಳೂರಿನ ತರೀಕೆರೆಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಕೆಎಎಸ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕವಯತ್ರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇವರ ಮೊದಲ ಕವನ ಸಂಕಲನವಾದ ‘ಜೀರೋ ಬ್ಯಾಲೆನ್ಸ್’‌ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕಗಳೊಂದಿಗೆ ಪಡೆದಿದ್ದು, ಪಿಎಚ್‌.ಡಿಯನ್ನೂ ಪಡೆದಿದ್ದಾರೆ. ಇವರ ಲೇಖನಗಳು, ಕವಿತೆಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿಳಿಗೆರೆ ಅವರು ಇದೇ ಜಿಲ್ಲೆಯ ಹುಳಿಯಾರಿನ ಬಿಎಂಎಸ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾವಯವ ಕೃಷಿ, ಬೀಜ ನಾಟಿ, ನೀರು ಸಂಗ್ರಹ ಸೇರಿ ಹಲವು ಚಳವಳಿಗಳಲ್ಲೂ ಸಕ್ರಿಯರಾಗಿರುವ ಇವರು, ಸಾಹಿತ್ಯ ಕೃಷಿಯಲ್ಲೂ ನಾಡಿನಾದ್ಯಂತ ಹೆಸರು ಗಳಿಸಿದ್ದಾರೆ. ಕಾವ್ಯ, ಕತೆ, ನಾಟಕಗಳ ರಚನೆ ಮೂಲಕ ಇವರು ನಾಡಿನ ಮನೆಮಾತಾಗಿದ್ದಾರೆ. ಇವರಿಗೆ ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ದೊರೆತಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Continue Reading

ಮಳೆ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಪ್ರಮಾಣ ತಗ್ಗಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ (Karnataka Weather Forecast) ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯ ಸಿಂಚನ

ಉತ್ತರ ಒಳನಾಡು, ಕರಾವಳಿಯ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ರಾಯಚೂರಿನ ಗಬ್ಬೂರಿನಲ್ಲಿ 6 ಸೆಂ.ಮೀ, ಉಡುಪಿ, ಶೋರಾಪುರ, ಸೈದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅಂಕೋಲಾ, ಗೋಕರ್ಣ, ಕುಮಟಾ , ಕೆಂಭಾವಿ , ತಾವರಗೇರಾ , ಮುದಗಲ್, ಮಂಠಾಳದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕೋಟ, ಹೊನಾವರ ವೀಕ್ಷಣಾಲಯ , ಕಾರ್ಕಳ, ಸಿದ್ದಾಪುರ, ಮಂಕಿ, ಯಲ್ಲಾಪುರ, ಯಡ್ರಾಮಿ ಸೇರಿದಂತೆ ದೇವದುರ್ಗ, ಕವಡಿಮಟ್ಟಿ ಎ.ಆ‌ರ್.ಜಿ, ಮಸ್ಕಿ, ಕಲಬುರಗಿ ವೀಕ್ಷಣಾಲಯ , ಕಕ್ಕೇರಿ, ಕಮಲಾಪುರ, ಮಾನ್ವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 16ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಒಳನಾಡಿನ ಕೆಲವು ಸ್ಥಳಗಳಲ್ಲಿ ಕೆಲವೊಮ್ಮೆ ಗುಡುಗು ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ತಗ್ಗಿದೆ. ಮೀನುಗಾರರಿಗೆ ನೀಡಲಾಗಿದ್ದ ಸೂಚನೆಯು ಮುಗಿದಿದೆ.

ರಾಜಧಾನಿ ಬೆಂಗಳೂರಿನಲ್ಲಿ ತಣ್ಣನೆಯ ವಾತಾವರಣ ಇರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಪ್ರತ್ಯೇಕ ಸ್ಥಳದಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 31 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Anekal News : ಯುವತಿ ಕೈ ಬಲಿ ಪಡೆದ ಅಕ್ರಮ ಡ್ರೈ ಕ್ಲೀನಿಂಗ್ ಕಾರ್ಖಾನೆ; ಚಿಕಿತ್ಸೆ ಕೊಡಿಸದೆ ಮಾಲೀಕ ಎಸ್ಕೇಪ್‌

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

ಮುಂಗಾರು ಚುರುಕಾಗುತ್ತಿದೆ. ಮಳೆಗಾಲವನ್ನು ಸಿಕ್ಕಾಪಟ್ಟೆ ಪ್ರೀತಿಸುವವರು ಇದ್ದಷ್ಟೇ ಮುಖ ಹಿಂಡುವವರೂ ಇದ್ದಾರೆ. ಇದಕ್ಕೆ ಕಾರಣಗಳು ಬಹಳಷ್ಟಿದ್ದರೂ, ಈ ಒದ್ದೆ-ಥಂಡಿ-ಶೀತದ ದಿನಗಳಲ್ಲಿ ಕಾಡುವ ಸೋಂಕುಗಳು ಅವುಗಳಲ್ಲಿ ಒಂದು ಪ್ರಮುಖ ಕಾರಣ. ಹೊರಗೆ ಮೋಡ ಕಟ್ಟಿದಂತೆಯೇ ಒಳಗೆ ಮೂಗು ಕಟ್ಟಿ, ಹೊರಗಿನಂತೆ ಒಳಗೂ ಧಾರಾಕಾರ ಹರಿದು, ಗುಡುಗು-ಸಿಡಿಲಿನಂತೆ ಕೆಮ್ಮು ಪ್ರಾರಂಭವಾದರೆ- ಮಳೆಯನ್ನು ಪ್ರೀತಿಸಲು ಹೇಗೆ ಸಾಧ್ಯ? ರೋಗಾಣುಗಳನ್ನು ತಡೆಯಲು ಸಾಧ್ಯವಿಲ್ಲದಿದ್ದರೂ, ನಮ್ಮ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಬಹುದಲ್ಲ. ರೋಗ ನಿರೋಧಕ ಶಕ್ತಿಗೆ ಬಲ ಬರುವುದೇ ನಮ್ಮ ಆಹಾರದಿಂದ. ಸೋಂಕು ದೂರ ಇರಿಸುವುದಕ್ಕೆ (Tips For Rainy Season) ಎಂಥ ಆಹಾರ ಒಳ್ಳೆಯದು?

Vitamin C foods

ವಿಟಮಿನ್‌ ಸಿ ಆಹಾರಗಳು

ದೇಹದ ರೋಗ ನಿರೋಧಕ ಶಕ್ತಿಯನ್ನು ಉದ್ದೀಪಿಸುವಲ್ಲಿ ಸಿ ಜೀವಸತ್ವ ಪ್ರಧಾನವಾಗಿ ಬೇಕು. ಅದರಲ್ಲೂ ನೆಗಡಿ, ಕೆಮ್ಮು, ಜ್ವರದಂಥ ಮಳೆಗಾಲದ ಸೋಂಕು ರೋಗಗಳನ್ನು ದೂರ ಇಡುವುದಕ್ಕೆ ವಿಟಮಿನ್‌ ಸಿ ಅಗತ್ಯವಾಗಿ ಬೇಕು. ಹಾಗಾಗಿ ಕಿತ್ತಳೆ, ನಿಂಬೆ, ದಾಳಿಂಬೆ, ಪಪ್ಪಾಯ, ಪೇರಳೆ, ಬ್ರೊಕೊಲಿ, ದಪ್ಪಮೆಣಸು, ಮೊಳಕೆ ಕಟ್ಟಿದ ಕಾಳುಗಳನ್ನು ತಪ್ಪದೆ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ginger

ಶುಂಠಿ

ಇದಕ್ಕೆ ಹಲವಾರು ಔಷಧೀಯ ಗುಣಗಳಿವೆ. ಅದರಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ಬ್ಯಾಕ್ಟೀರಿಯ ನಿರೋಧಕ ಮತ್ತು ಉರಿಯೂತ ಶಾಮಕ ಗುಣಗಳು ಇದರಲ್ಲಿ ಧಾರಾಳವಾಗಿವೆ. ಕೆಮ್ಮು, ನೆಗಡಿ, ಕಫದಂಥ ಸಮಸ್ಯೆಗಳಿಗೆ ಶುಂಠಿ ಚಹಾ, ಶುಂಠಿ ಕಷಾಯಗಳು ಉಪಶಮನ ನೀಡಬಲ್ಲವು. ಗಂಟಲು ಕಟ್ಟಿದ್ದರೆ, ಗಂಟಲಲ್ಲಿ ನೋವಿದ್ದರೆ ಬೆಚ್ಚಗಿನ ಶುಂಠಿಯ ಕಷಾಯಕ್ಕೆ ಕೊಂಚ ಜೇನುತುಪ್ಪ ಸೇರಿಸಿ ಕುಡಿದರೆ ಆರಾಮ ದೊರೆತೀತು.

iamge of Zinc Foods

ಜಿಂಕ್‌ ಆಹಾರಗಳು

ನಮ್ಮ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸತುವಿನಂಶ ಇರುವ ಆಹಾರಗಳು ಸಹ ಅಗತ್ಯ. ಇದನ್ನು ಸಿ ಜೀವಸತ್ವದಂತೆ ಹೇರಳವಾಗಿ ಪಡೆಯಲಾಗದು. ಬದಲಿಗೆ, ಹಲವಾರು ಆಹಾರಗಳಿಂದ ಮಿಲಿ ಗ್ರಾಂ ಗಳ ಲೆಕ್ಕದಲ್ಲಿಯೇ ಪಡೆಯಬೇಕು ನಾವು. ಇದಕ್ಕಾಗಿ ಅಣಬೆಗಳು, ಪಾಲಕ್‌ ಸೊಪ್ಪು, ದ್ವಿದಳ ಧಾನ್ಯಗಳು, ಮೊಸರು, ಹಾಲು, ಗೋಡಂಬಿ, ಕುಂಬಳಕಾಯಿ ಬೀಜ, ಶೇಂಗಾ, ಬಾದಾಮಿಯಂಥ ಆಹಾರಗಳ ಮೂಲಕ ಈ ಸತ್ವವನ್ನು ಪಡೆಯಬಹುದು.

ಒಮೇಗಾ 3 ಕೊಬ್ಬಿನಾಮ್ಲ

ಇದು ನಮ್ಮ ಮೆದುಳು ಮತ್ತು ಹೃದಯದ ಯೋಗಕ್ಷೇಮ ನೋಡಿಕೊಳ್ಳುವುದಷ್ಟೇ ಅಲ್ಲ, ಸೋಂಕುಗಳನ್ನು ದೂರ ಮಾಡುವ ಸಾಮರ್ಥ್ಯವನ್ನೂ ಹೊಂದಿದೆ. ಇದಕ್ಕಾಗಿ ಮಳೆಗಾಲದ ಆರಂಭದಲ್ಲಿ ದೊರೆಯುವ ಬೆಣ್ಣೆ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿ. ಜೊತೆಗೆ ವಾಲ್‌ನಟ್‌, ಬಾದಾಮಿ, ಅಗಸೆಬೀಜ, ಕೊಬ್ಬಿರುವ ಮೀನುಗಳನ್ನು ಸೇವಿಸುವುದರಿಂದ ಒಮೇಗಾ ೩ ಕೊಬ್ಬಿನಾಮ್ಲ ವಿಫುಲವಾಗಿ ಲಭಿಸುತ್ತದೆ.

Probiotic foods

ಪ್ರೊಬಯಾಟಿಕ್‌ ಆಹಾರಗಳು

ನಮ್ಮ ಜೀರ್ಣಾಂಗಗಳ ಆರೋಗ್ಯ ಚೆನ್ನಾಗಿದ್ದರೆ ಮಾತ್ರವೇ ದೇಹದ ಪ್ರತಿರೋಧಕ ಶಕ್ತಿ ಬಲವಾಗಿರುತ್ತದೆ. ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆ ಭರಪೂರ ಇದ್ದಷ್ಟೂ ದೇಹ ರೋಗಮುಕ್ತವಾಗಿರುತ್ತದೆ ಎನ್ನುತ್ತವೆ ಅ‍ಧ್ಯಯನಗಳು. ಹಾಗಾಗಿ ಪ್ರೊಬಯಾಟಿಕ್‌ ಆಹಾರಗಳು ನಮ್ಮ ದೇಹಕ್ಕೆ ಬೇಕೇಬೇಕು. ಇದಕ್ಕಾಗಿ ಮೊಸರು, ಮಜ್ಜಿಗೆಯಂಥ ಹುದುಗು ಬರಿಸಿದ ಆಹಾರಗಳನ್ನು ಪ್ರತಿದಿನ ಸೇವಿಸಿ.

infusions

ಕಷಾಯಗಳು

ಶೀತದ ದಿನಗಳಲ್ಲಿ ದೇಹವನ್ನು ಬೆಚ್ಚಗೆ ಇರಿಸಿಕೊಳ್ಳುವುದಕ್ಕೆ ತರಹೇವಾರಿ ಕಷಾಯಗಳನ್ನು ಮಾಡಿಕೊಳ್ಳಬಹುದು. ಇದರಿಂದಲೂ ನಮ್ಮ ದೇಹದ ಸೋಂಕು ನಿರೋಧಕ ಶಕ್ತಿ ಪ್ರಬಲವಾಗುತ್ತದೆ. ಇದಕ್ಕಾಗಿ ಯಾವೆಲ್ಲ ವಸ್ತುಗಳನ್ನು ಉಪಯೋಗಿಸಬಹುದು ಎನ್ನುವುದಕ್ಕೆ ಉಪಯುಕ್ತ ವಿವರಗಳು ಇಲ್ಲಿವೆ. ಈ ಯಾವುದೇ ವಸ್ತುಗಳನ್ನು ಬಳಸಿ ಕಷಾಯ ಮಾಡಿಕೊಳ್ಳಬಹುದು.

Raw Turmeric with Powder Cutout

ಅರಿಶಿನ

ಇದರಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಸೋಂಕುಗಳನ್ನು ಹೊಡೆದೋಡಿಸುತ್ತದೆ

Benefits Of Ginger

ಶುಂಠಿ

ಇದರ ಜಿಂಜರಾಲ್‌ ಅಂಶದಲ್ಲಿ ಉರಿಯೂತ ಶಮನ ಮಾಡಿ, ಪ್ರತಿರೋಧಕ ಶಕ್ತಿ ಹೆಚ್ಚಿಸುತ್ತದೆ

Garlic

ಬೆಳ್ಳುಳ್ಳಿ

ಇದರ ಅಲ್ಲಿಸಿನ್‌ ಅಂಶದಲ್ಲಿ ವೈರಸ್‌ ಮತ್ತು ಬ್ಯಾಕ್ಟೀರಿಯ ನಿರೋಧಕ ಗುಣವಿದೆ

Cinnamon sticks Anti Infective Foods

ದಾಲ್ಚಿನ್ನಿ ಚಕ್ಕೆ

ಇದರಲ್ಲಿರುವ ಉರಿಯೂತ ಶಾಮಕ ಸತ್ವಗಳು ರೋಗನಿರೋಧಕವೂ ಹೌದು

black pepper

ಕಾಳು ಮೆಣಸು

ಇದರ ಕ್ಯಾಪ್ಸೈಸಿನ್‌ನಲ್ಲಿ ದೇಹದ ಪ್ರತಿರೋಧಕತೆಯನ್ನು ವೃದ್ಧಿಸುವ ಸಾಮರ್ಥ್ಯವಿದೆ

cumin

ಜೀರಿಗೆ

ಇದರ ಉತ್ಕರ್ಷಣ ನಿರೋಧಕಗಳು ಸೋಂಕಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ

coriander Coriander Benefits

ಧನಿಯ

ಇದರ ಉತ್ಕರ್ಷಣ ನಿರೋಧಕ ಸತ್ವಗಳು ಸೋಂಕುಗಳನ್ನು ನಿವಾರಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಇತರ ಆರೋಪಿಗಳಿಗೆ ಈ ಮೊದಲು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಇದೀಗ ಜೂನ್‌ 20ರವರೆಗೆ ಪೊಲೀಸ್‌ ಕಸ್ಟಡಿ ವಿಸ್ತರಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸ್‌ ಕಸ್ಟಡಿಯಲ್ಲಿದ್ದ ನಟ ದರ್ಶನ್‌ (Actor Darshan) ಸೇರಿ ಇತರ ಆರೋಪಿಗಳನ್ನು ಮತ್ತೆ 5 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ಆದೇಶ ನೀಡಿದರು.

ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು ಕೇಸ್‌ನ ಬಗ್ಗೆ ನ್ಯಾಯಾಧೀಶರಿಗೆ ಮಾಹಿತಿ ನೀಡಿ, ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಕೋರಿದರು. ಮತ್ತೊಂದೆಡೆ ಪೊಲೀಸರು ಸ್ಥಳ ಮಹಜರು, ಸಾಕ್ಷ್ಯಗಳ ಕುರಿತ ವರದಿಯನ್ನು ಮುಚ್ಚಿನ ಲಕೋಟೆಯಲ್ಲಿ ನ್ಯಾಯಾಧೀಶರಿಗೆ ಸಲ್ಲಿಸಿದರು. ಬೆಂಗಳೂರು, ಚಿತ್ರದುರ್ಗದಲ್ಲಿ ಮಹಜರು ನಡೆದಿದೆ, ಆದರೆ, ಮೈಸೂರಿನಲ್ಲಿ ಮಹಜರು ಬಾಕಿ ಇದೆ. ಹೀಗಾಗಿ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ದರ್ಶನ್‌ ಪರ ವಕೀಲ ಅನಿಲ್ ಬಾಬು ವಾದ ಮಂಡಿಸಿ, ಆರೋಪಿಗಳಿಗೆ ವಿಚಾರಣೆ ವೇಳೆ ಹಿಂಸೆ ಕೊಟ್ಟಿದ್ದಾರೆ. ಮಹಿಳಾ ಆರೋಪಿ ಪವಿತ್ರಾ ಗೌಡಳನ್ನೂ 6 ದಿನ ವಿಚಾರಣೆ ನಡೆಸಲಾಗಿದೆ. ಎಲ್ಲದಕ್ಕೂ ದರ್ಶನ್‌ ಕಾರಣ ಎಂದರೆ ಹೇಗೆ? ವಿಚಾರಣೆ ಹಂತದಲ್ಲಿದ್ದಾಗಲೇ ದರ್ಶನ್‌ ಮೇಲೆ ಎಲ್ಲಾ ಅರೋಪಗಳನ್ನು ಮಾಡುವುದು ಎಷ್ಟು ಸರಿ? ಪವಿತ್ರಾ ಗೌಡ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಆರೋಪಿಗಳ ಹೇಳಿಕೆಗಳೂ ಸೋರಿಕೆಯಾಗುತ್ತಿವೆ. ಹೀಗಾಗಿ ಮತ್ತೆ ಕಸ್ಟಡಿಗೆ ನೀಡುವುದು ಬೇಡ ಹೇಳಿದರು.

ಮತ್ತೊಂದೆಡೆ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮುಂದುವರಿಸಿ‌, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿ ಹಿಂಸೆ ನೀಡಲಾಗಿದೆ. ಆರೋಪಿಗಳು ಯಾವೆಲ್ಲಾ ಡಿವೈಸ್‌ ಬಳಿಸಿದ್ದಾರೋ, ಅವುಗಳನ್ನು ವಶಕ್ಕೆ ಪಡೆಯಬೇಕು. ಇದಕ್ಕೆ ಸಮಯಾವಕಾಶ ಬೇಕು. ಹೀಗಾಗಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ಈ ವೇಳೆ ಪವಿತ್ರಾ ಗೌಡ ಪರ ವಕೀಲ ನಾರಾಯಾಣಸ್ವಾಮಿ ಎಂಟ್ರಿಯಾಗಿ, ನನ್ನ ಕಕ್ಷಿದಾರರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ಕೊಟ್ಟಿಲ್ಲ ಎಂದು ಅಸಮಾಧಾನ ಹೊರಹಾಕಿದರು. ವಾದ-ಪ್ರತಿವಾದ ಅಲಿಸಿದ ಬಳಿಕ ನ್ಯಾಯಾಧೀಶರು, ಆರೋಪಿಗಳನ್ನು ಜೂನ್‌ 20ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ಹೀಗಾಗಿ ಅನ್ನಪೂರ್ಣೆಶ್ವರಿ ಠಾಣೆಗೆ ಆರೋಪಿಗಳಿಗೆ ಕರೆದುಕೊಂಡು ಹೋಗಲಾಯಿತು.

ಇದಕ್ಕೂ ಮುನ್ನ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಂತರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ಹಿಂದೆ ಕಸ್ಟಡಿಗೆ ನೀಡುವಾಗ ದರ್ಶನ್‌ ಕಣ್ಣೀರು ಹಾಕಿದ್ದರು. ಇದೀಗ ಕೋರ್ಟ್‌ಗೆ ಹಾಜರಾಗುತ್ತಿದ್ದಂತೆ ಎ 1 ಪವಿತ್ರಾ ಗೌಡ ಗಳಗಳನೆ ಅತ್ತಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಠಾಣೆಯಿಂದ ಎರಡು ಜೀಪ್‌ ಹಾಗೂ ಎರಡು ಕೆಎಸ್‌ಆರ್‌ಪಿ ಮಿನಿ ವ್ಯಾನ್‌ನಲ್ಲಿ ಆರೋಪಿಗಳನ್ನು ಕರೆದುಕೊಂಡು ಬರಲಾಗಿತ್ತು. ಆರೋಪಿಗಳನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಠಾಣೆ ಮುಂಭಾಗ ಹಾಗೂ ಕೋರ್ಟ್‌ ಬಳಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿತ್ತು.

ಏನಿದು ಪ್ರಕರಣ?

ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಜೂನ್‌ 9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಇದನ್ನೂ ಓದಿ | Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟ ದರ್ಶನ್‌ ಸೇರಿ 16 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್‌ ಎ2 ಆಗಿದ್ದಾರೆ.

Continue Reading
Advertisement
HD Kumaraswamy
ಕರ್ನಾಟಕ2 mins ago

HD Kumaraswamy: ಚನ್ನಪಟ್ಟಣ ಜನರನ್ನು ಯಾರೂ ಭಯಪಡಿಸಲು ಆಗಲ್ಲ; ಡಿಕೆ ಬ್ರದರ್ಸ್‌ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Father's Day Fashion
ಫ್ಯಾಷನ್5 mins ago

Father’s Day Fashion: ಅಪ್ಪಂದಿರ ದಿನಕ್ಕೂ ಉಂಟು ಫ್ಯಾಷನ್‌ ಸ್ಟೇಟ್‌ಮೆಂಟ್ಸ್!

Kendra Sahitya Akademi Award
ಪ್ರಮುಖ ಸುದ್ದಿ25 mins ago

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

Period Pain Relief Food
ಆರೋಗ್ಯ33 mins ago

Period Pain Relief Food: ಪೀರಿಯಡ್‌ನ ನೋವು ನಿವಾರಣೆಗೆ ಈ ಆಹಾರಗಳು ಸೂಕ್ತ

karnataka Weather Forecast
ಮಳೆ41 mins ago

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ತಗ್ಗಿದ ಮಳೆ; ಕರಾವಳಿಯಲ್ಲಿ ಮುಂದುವರಿಯಲಿದೆ ಅಬ್ಬರ

Actor Darshan
ಕರ್ನಾಟಕ49 mins ago

Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Kendra Sahitya Akademi Award
ಪ್ರಮುಖ ಸುದ್ದಿ57 mins ago

Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

New Fashion
ಫ್ಯಾಷನ್1 hour ago

New Fashion: ಬ್ಲ್ಯಾಕ್‌ ಡೆನಿಮ್‌ ಕೋ ಆರ್ಡ್ ಸೆಟ್‌ನಲ್ಲಿ ಟ್ರೆಂಡಿಯಾದ ಜಿಪ್ಪರ್‌ ಸ್ಟೈಲ್‌

Trent Boult
ಕ್ರೀಡೆ2 hours ago

Trent Boult: ಕೊನೆಯ ಟಿ20 ವಿಶ್ವಕಪ್​ ಆಡಲು ಸಿದ್ಧರಾದ ಟ್ರೆಂಟ್​ ಬೌಲ್ಟ್

Actor Darshan pavithra gowda relationship secrete
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ ಬಲೆಗೆ ಪವಿತ್ರಾ ಗೌಡ ಬಿದ್ದಿದ್ದು ಹೇಗೆ? ಇವರು ಹೀರೋಯಿನ್‌ ಆಗಿದ್ದು ಯಾವಾಗ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ5 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌