Site icon Vistara News

DK Shivakumar: ಮತದಾರರಿಗೆ ಬೆದರಿಕೆ ಪ್ರಕರಣ; ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಡಿಕೆಶಿ ಅರ್ಜಿ

DK ShivaKumar

ಬೆಂಗಳೂರು: ಚುನಾವಣೆ ಪ್ರಚಾರದ ವೇಳೆ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಬೆದರಿಕೆ ಆರೋಪದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಎಫ್‌ಐಆರ್‌ ರದ್ದು ಕೋರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಬೆಂ.ಗ್ರಾಮಾಂತರ ಕ್ಷೇತ್ರದ ರಾಜರಾಜೇಶ್ವರಿನಗರದಲ್ಲಿ ಪ್ರಚಾರದ ವೇಳೆ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡಿಕೆಶಿ ಅವರು ಮತದಾರರಿಗೆ ಬೆದರಿಸಿ, ಆಮಿಷ ಒಡ್ಡಿದ್ದಾರೆ ಆರೋಪ ಕೇಳಿಬಂದಿತ್ತು. ನಾನು ಇಲ್ಲಿ ಬ್ಯುಸಿನೆಸ್ ಡೀಲ್‌ಗೆ ಬಂದಿದ್ದೇನೆ, ನಿಮಗೆ ಹೆಚ್ಚು ಕಾವೇರಿ ನೀರು ಬೇಕೆಂದು ಕೇಳಿದ್ದೀರಿ. ನಿಮಗೆ ಅಪಾರ್ಟ್ ಮೆಂಟ್ ಪಕ್ಕದ ಸಿಎ ಸೈಟ್ ಬೇಕೆಂದು ಕೇಳಿದ್ದೀರಿ, ನೀವು ನಮಗೆ ಮತ ಹಾಕಿದ 2-3 ತಿಂಗಳಲ್ಲಿ ನಿಮಗೆ ಹಸ್ತಾಂತರಿಸುತ್ತೇನೆ ಎಂದು ಮತದಾರರಿಗೆ ಡಿಕೆಶಿ ಆಮಿಷ ಒಡ್ಡಿ, ನಿಮ್ಮ ಕೆಲಸಗಳು ಆಗಬೇಕೆಂದರೆ ತಮ್ಮ ಪಕ್ಷಕ್ಕೆ ಮತ ಹಾಕಬೇಕು ಎಂದು ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು.

ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಎಫ್ಐಆರ್ ಪ್ರಶ್ನಿಸಿ ಡಿಕೆ‌ ಶಿವಕುಮಾರ್‌ ಅವರು ಹೈಕೋರ್‌ಗೆ ಅರ್ಜಿ ಸಲ್ಲಿಸಿದ್ದು, ಎಫ್ಐಆರ್ ರದ್ದುಪಡಿಸಲು ಕೋರಿದ್ದಾರೆ.

ಇದನ್ನೂ ಓದಿ | DK Shivakumar: ಮತಯಾಚನೆ ವೇಳೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್‌ಐಆರ್‌

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ; ಮೋದಿ, ಅಮಿತ್ ಶಾಗೆ ಗೋ ಬ್ಯಾಕ್‌ ಘೋಷಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಕರ್ನಾಟಕವನ್ನು ಹಾಗೂ ರೈತರನ್ನು ದ್ವೇಷಿಸುತ್ತಾರೆ. ಕರ್ನಾಟಕಕ್ಕೆ ನ್ಯಾಯ ಕೊಡಿ ಎಂದು ಕೇಳಿದ್ದರೂ, ಇಂದಿನವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಅದಕ್ಕಾಗಿ ಪ್ರತಿಭಟನೆ ಹಮ್ಮಿಕೊಂಡು ರಾಜ್ಯ ಹಾಗೂ ದೇಶದ ಜನರ ಗಮನವನ್ನು ಸೆಳೆಯುವ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಅವರು ಮಂಗಳವಾರ ವಿಧಾನಸೌಧ ಮುಂಭಾಗ ಇರುವ ಗಾಂಧಿ ಪ್ರತಿಮೆಯ ಎದುರು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ಬರ ಪರಿಹಾರದಲ್ಲಿ ತಾರತಮ್ಯವನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಧರಣಿಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಸೆಪ್ಟೆಂಬರ್ 22ರಂದು ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಕೇಂದ್ರ ತಂಡ 4 ದಿನಗಳ ಕಾಲ ಪರಿಶೀಲನೆ ಮಾಡಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಈ ಮಧ್ಯೆ ಸಚಿವ ಕೃಷ್ಣ ಬೈರೇಗೌಡ ಹಾಗೂ ಪ್ರಿಯಾಂಕ್‌ ಖರ್ಗೆ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಕರ್ನಾಟಕ ಎದುರಿಸುತ್ತಿರುವ ಬರಗಾಲದ ಬಗ್ಗೆ ವಿವರಿಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದು, 240 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಿದ್ದೇವೆ. 100 ವರ್ಷಗಳ ನಂತರ ಇಂಥ ಬರಗಾಲ ಎದುರಾಗಿದೆ. ಮನವಿ ಕೊಟ್ಟಿದ್ದರೂ ಅಮಿತ್ ಶಾ ಚನ್ನಪಟ್ಟಣಕ್ಕೆ ಬಂದಿದ್ದ ಸಂದರ್ಭದಲ್ಲಿ ಮನವಿಯನ್ನು ವಿಳಂಬವಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದರು ಎಂದರು.

ನಿರ್ಮಲಾ ಸೀತಾರಾಮನ್ ಅವರು ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿದ್ದಾರೆ, ಬರಗಾಲಕ್ಕೆ ಅಲ್ಲ ಎಂದು ಸುಳ್ಳು ಹೇಳಿದ್ದಾರೆ. ನಾವು ಗ್ಯಾರಂಟಿಗಳಿಗೆ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಅದು ಬೇಕಾಗಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ

ಗ್ಯಾರಂಟಿಗಳಿಗೆ ನಮ್ಮ ಸಂಪನ್ಮೂಲದಿಂದಲೇ ಭರಿಸಿದ್ದೇವೆ. 36000 ಕೋಟಿ ರೂಪಾಯಿಗಳನ್ನು ಕಳೆದ ವರ್ಷ ಹಾಗೂ 52009 ಕೋಟಿ ರೂಪಾಯಿಗಳನ್ನು ಮುಂದಿನ ಸಾಲಿಗೆ ಮೀಸಲಿರಿಸಿದ್ದೇವೆ. ಬರಗಾಲಕ್ಕೆ 48000 ಹೆಕ್ಟೇರ್ ಪ್ರದೇಶ ಮಳೆ ಇಲ್ಲದೇ ಬೆಳೆ ನಷ್ಟವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ನಮ್ಮ ಸರ್ಕಾರ 2000 ರೂ.ಗಳ ವರೆಗೆ 34 ಲಕ್ಷ ರೈತರಿಗೆ ನೀಡಲಾಗಿದೆ. 650 ಕೋಟಿ ರೂ.ಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗಿದೆ. ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ. ಕುಡಿಯುವ ನೀರು, ಮೇವು, ಜನರಿಗೆ ಕೆಲಸ, ಗುಳೇ ಹೋಗುವುದನ್ನು ತಪ್ಪಿಸುವುದು, ರೈತರಿಗೆ ಮೊದಲ ಕಂತಿನ ಪರಿಹಾರ ನೀಡುವುದನ್ನು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಬರುತ್ತಾರೆ?

18172 ಕೋಟಿ ರೂಪಾಯಿಗಳನ್ನು ಕೇಂದ್ರಕ್ಕೆ ಎನ್.ಡಿ.ಆರ್.ಎಫ್‌ನಿಂದ ಬಿಡುಗಡೆ ಮಾಡುವಂತೆ ಕೋರಿ ಒತ್ತಾಯ ಮಾಡಿದ್ದೇವೆ. ಇದನ್ನು ಮಂಡಿಸಿ 7 ತಿಂಗಳಾಗಿವೆ. ನಾನೇ ಸ್ವತಃ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿದ್ದೇನೆ. ಸಂಬಂಧಪಟ್ಟವರಿಗೆ ತಿಳಿಸಿ ಕೂಡಲೇ ಬಿಡುಗಡೆ ಮಾಡುವಂತೆ ಹೇಳುವುದಾಗಿ ಹೇಳಿದ್ದರು. ನಂತರ ನಾನು ಕೃಷ್ಣಬೈರೇಗೌಡ ಡಿಸೆಂಬರ್ 20 ತಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದಾಗ ಡಿಸೆಂಬರ್ 23ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿ ಈವರೆಗೆ ಏನೂ ಮಾಡಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ. ರಾಜ್ಯಕ್ಕೆ ಮೇಲಿನಿಂದ ಮೇಲೆ ಬರಲು ಯಾವುದೇ ನೈತಿಕತೆ ಇಲ್ಲ ಎಂದು ಹೇಳಿ ಪ್ರತಿಭಟಿಸಿ ಅವರ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಗೊ ಬ್ಯಾಕ್ ನರೇಂದ್ರ ಮೋದಿ, ಅಮಿತ್ ಶಾ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್‌ನಲ್ಲಿಯೇ ಹೇಳಿದರು. ಬಜೆಟ್ ಸಂಸತ್ತಿನಲ್ಲಿ ಅನುಮೋದನೆಯಾಗಿದೆ. ಅಂದಿನ ಸಿಎಂ ಬಸವರಾಜ ಬೊಮ್ಮಾಯಿಯವರೂ ಕೂಡ ತಮ್ಮ ಬಜೆಟ್ ನಲ್ಲಿ ಧನ್ಯವಾದ ಹೇಳಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿ ಇಂದಿನವರೆಗೆ ಯಾವುದೂ ಆಗಿಲ್ಲ. ಅದರ ಜೊತೆಗೆ 15 ನೆ ಹಣಕಾಸು ಆಯೋಗ 5495 ಕೋಟಿ ವಿಶೇಷ ಅನುದಾನವನ್ನು ಕೊಡಲಿಲ್ಲ. ಕೊಡದೇ ಇರಲು ಕಾರಣ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ಮೋದಿ ಅವರು. ಪೆರಿಫೆರಲ್ ರಿಂಗ್ ರೋಡ್‌ಗೆ 3000 ಕೋಟಿ ರೂ. ಹಾಗೂ ಬೆಂಗಳೂರಿನ ಅಭಿವೃದ್ಧಿಗೆ 3000 ಕೋಟಿ ರೂ. ಕೊಡಿ ಎಂದು ಶಿಫಾರಸು ಮಾಡಿದ್ದರೂ ಕೊಡಲಿಲ್ಲ. ಬರ ಪರಿಹಾರಕ್ಕೂ ಒಂದು ರೂಪಾಯಿಯನ್ನು ನೀಡಿಲ್ಲ. ನರೇಂದ್ರ ಮೋದಿ ಅವರಿಗೆ ಕರ್ನಾಟಕ ನೆನಪಾಗುವುದು ಚುನಾವಣೆ ಸಂದರ್ಭದಲ್ಲಿ ಮಾತ್ರ. ಪ್ರವಾಹ, ಭೀಕರ ಬರಗಾಲದಲ್ಲಿ ಬರಲಿಲ್ಲ. ಕರ್ನಾಟಕದ ಮತದಾರರನ್ನು ಮತ ಕೇಳಲು ಬರುತ್ತಿದ್ದಾರೆ ಅದಕ್ಕಾಗಿ ಗೋ ಬ್ಯಾಕ್ ನರೇಂದ್ರ ಮೋದಿ, ಗೂ ಬ್ಯಾಕ್ ಅಮಿತ್ ಶಾ ಎಂದು ಹೇಳುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

ಅಮಿತ್ ಶಾ ಬರಪರಿಹಾರ ಕೊಟ್ಟು ರಾಜ್ಯಕ್ಕೆ ಬರಲಿ

ಇಂದು ಬರುತ್ತಿರುವ ಅಮಿತ್ ಶಾ ಅವರು ಸಭೆ ನಡೆಸಿ 18171 ಕೋಟಿ ರೂಪಾಯಿ ಕೊಟ್ಟು ಆಮೇಲೆ ರಾಜ್ಯಕ್ಕೆ ಬರಲಿ. ನಿಮಗೆ ಯಾವುದೇ ಮತ ಕೇಳುವ ಹಕ್ಕು ಇಲ್ಲ ಎಂದು ಅವರಿಗೆ ಹೇಳುತ್ತೇವೆ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Exit mobile version