Site icon Vistara News

DK Shivakumar : ಡಿಕೆಶಿ ಅಕ್ರಮ ಅಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಪ್ರಶ್ನಿಸಿದ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

dk shivakumar next CM

ಬೆಂಗಳೂರು: ಗೊತ್ತಾದ ಆದಾಯ ಮೂಲಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆಪಾದನೆ ಸಂಬಂಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಸೋಮವಾರ ಪೂರ್ಣಗೊಂಡಿದೆ. ಇದೀಗ ಕರ್ನಾಟಕ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.

ಸಿಬಿಐ ಪರ ವಕೀಲರ ವಾದದ ಮುಖ್ಯಾಂಶವೇನು?

ಸಿಬಿಐ ಪರ ವಕೀಲ ಪಿ. ಪ್ರಸನ್ನ ಕುಮಾರ್‌ ಅವರು ಈ ಅರ್ಜಿ ಯಾಕೆ ಊರ್ಜಿತವಲ್ಲ ಎಂಬ ವಿಚಾರದಲ್ಲಿ ಹಲವು ಅಂಶಗಳನ್ನು ಮುಂದಿಟ್ಟರು.

  1. ಇಂಥದ್ದೇ ತನಿಖಾ ಸಂಸ್ಥೆ ತನಿಖೆ ನಡೆಸಬೇಕು ಎಂದು ಹೇಳುವುದು ಅಥವಾ ಇಂಥದ್ದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸುವ ಹಕ್ಕನ್ನು ಆರೋಪಿ ಹೊಂದಿಲ್ಲ.
  2. ವಿಶೇಷ ಅಧಿನಿಯಮವಾದ, ದೆಹಲಿ ಪೊಲೀಸ್‌ ಸ್ಥಾಪನಾ ಕಾಯಿದೆ–1947ರ ಸೆಕ್ಷನ್‌ 6ರ ಅಡಿಯಲ್ಲಿ ತನಿಖೆಗೆ ನೀಡಲಾದ ಒಪ್ಪಿಗೆಯ ಕಾರಣಗಳನ್ನು ಸಿಬಿಐ ವಿವರಿಸುವ ಅಗತ್ಯವೇ ಇಲ್ಲ.
  3. ಈಗಾಗಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಇಂತಹುದೇ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್‌ನ ವಿಭಾಗೀಯ ಪೀಠವು 2020ರಲ್ಲೇ ವಜಾಗೊಳಿಸಿದೆ. ಈ ಅರ್ಜಿಯನ್ನು 2020ರಲ್ಲೇ ಸಲ್ಲಿಸಿದ್ದರೂ ಇದಕ್ಕೆ ತಡೆ ಸಿಕ್ಕಿಲ್ಲ. ಆದಕಾರಣ ಕಾನೂನುರೀತಿಯಲ್ಲಿ ಶಿವಕುಮಾರ್‌ ಅವರ ಈ ಅರ್ಜಿ ಊರ್ಜಿತವಾಗುವುದಿಲ್ಲ.
  4. ಎರಡೂವರೆ ವರ್ಷಗಳಲ್ಲಿ ಸಿಬಿಐ ಈಗಾಗಲೇ ಶೇ 90ರಷ್ಟು ತನಿಖೆ ಪೂರ್ಣಗೊಳಿಸಿದೆ. ಈ ಕುರಿತಂತೆ ತನಿಖೆಯ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೂ ಸಲ್ಲಿಸಲಾಗಿದೆ. ಇಷ್ಟೆಲ್ಲಾ ಸಮಯ ಕಳೆದ ಮೇಲೆ ಅರ್ಜಿದಾರರು ಅಧಿಸೂಚನೆ ಪ್ರಶ್ನಿಸುವುದಾಗಲೀ ಅಥವಾ ರದ್ದುಗೊಳಿಸಿ ಎಂದು ಕೋರುವುದಾಗಲಿ ಕಾನೂನು ಪ್ರಕಾರ ಸಾಧ್ಯವಿಲ್ಲ.
  5. ಇದು ಆದಾಯ ತೆರಿಗೆ ಕಾನೂನುಗಳ ಪ್ರಕಾರ ದಾಖಲಾಗಿಸಿರುವ ವಿಶೇಷ ಕ್ರಿಮಿನಲ್‌ ಪ್ರಕರಣ. ಹೀಗಾಗಿ, ಡಿ ಕೆ ಶಿವಕುಮಾರ್ ಸಿಬಿಐ ಮುಂದೆ ಹಾಜರಾಗಿ ಕೋಟ್ಯಂತರ ರೂಪಾಯಿಗಳನ್ನು ಎಲ್ಲಿಂದ, ಹೇಗೆ ಸಂಪಾದಿಸಿದರು ಎಂಬುದನ್ನು ವಿವರಿಸಲೇಬೇಕು.

ಡಿಕೆ ಶಿವಕುಮಾರ್‌ ಪರ ವಕೀಲರ ವಾದವೇನು?

ಶಿವಕುಮಾರ್ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು ಉಲ್ಲೇಖಿಸಿದ ಅಂಶಗಳು ಹೀಗಿವೆ.

ಇದನ್ನೂ ಓದಿ : Karnataka Elections 2023 : 1414 ಕೋಟಿ ರೂ. ತಲುಪಿದ ಡಿಕೆಶಿ ಆಸ್ತಿ ಮೌಲ್ಯ, 2018ಕ್ಕಿಂತ 68% ಹೆಚ್ಚು! ಇರುವುದು ಒಂದೇ ಕಾರು!

Exit mobile version