DK Shivakumar: ನಾನು ರಾಜ್ಯಪಾಲ, ಲೋಕಾಯುಕ್ತದ ವಕ್ತಾರನಲ್ಲ, ಕಾಂಗ್ರೆಸ್ ಪ್ರತಿನಿಧಿ ಎಂದ ಡಿಕೆಶಿ - Vistara News

ಕರ್ನಾಟಕ

DK Shivakumar: ನಾನು ರಾಜ್ಯಪಾಲ, ಲೋಕಾಯುಕ್ತದ ವಕ್ತಾರನಲ್ಲ, ಕಾಂಗ್ರೆಸ್ ಪ್ರತಿನಿಧಿ ಎಂದ ಡಿಕೆಶಿ

DK Shivakumar: ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

VISTARANEWS.COM


on

DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಆನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನಿರಬಹುದು ಎಂಬ ಪ್ರಶ್ನೆಗೆ ಶೇಷಾದ್ರಿಪುರ ಜಂಕ್ಷನ್ ಬಳಿ ರಾಜೀವ್ ಗಾಂಧಿ ಅವರ ಪ್ರತಿಮೆಗೆ ಮಂಗಳವಾರ ಪುಷ್ಪನಮನ ಸಲ್ಲಿಸಿದ ನಂತರ ಅವರು ಉತ್ತರಿಸಿದ್ದಾರೆ.

ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, ಬಿಜೆಪಿಯವರು ಸಂವಿಧಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇವೆಲ್ಲ ಸಾಕ್ಷಿ ಎಂದು ಹೇಳಿದರು.

ಬಿಬಿಎಂಪಿಯಿಂದ ಪ್ರತಿ ವರ್ಷ ರಾಜೀವ್ ಗಾಂಧಿ ಜನ್ಮ ದಿನಾಚರಣೆ

ಮಾಜಿ ಪ್ರಧಾನ ಮಂತ್ರಿಗಳಾದ ರಾಜೀವ್ ಗಾಂಧಿ ಅವರ ಆಲೋಚನೆಗಳು ಇಂದಿನ ಯುವಪೀಳಿಗೆಗೆ ಸ್ಫೂರ್ತಿ. ಆದ ಕಾರಣ ಪ್ರತಿ ವರ್ಷ ಇವರ ಜನ್ಮದಿನವನ್ನು ಬಿಬಿಎಂಪಿಯಿಂದ ನಡೆಸಬೇಕು ಎಂದು ಆದೇಶ ನೀಡಲಾಗುವುದು ಎಂದರು.

ಪಂಚಾಯತ್ ಮಟ್ಟದಿಂದ ಪಾರ್ಲಿಮೆಂಟ್‌ವರೆಗೆ ನಾಯಕರು ರಾಜೀವ್ ಗಾಂಧಿ ಅವರನ್ನು ಮರೆಯುವಂತಿಲ್ಲ. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ತಕ್ಷಣ ರಾಜೀವ್ ಗಾಂಧಿಯವರ ನೂತನ ಪ್ರತಿಮೆ ನಿರ್ಮಾಣಕ್ಕೆ ಸಹಿ ಹಾಕಿದೆ. ದಿನೇಶ್ ಗುಂಡೂರಾವ್ ಅವರ ಇಚ್ಛೆಯಂತೆ, ಅವರ ಕ್ಷೇತ್ರ ವ್ಯಾಪ್ತಿಯ ಶೇಷಾದ್ರಿಪುರಂ ಸಿಗ್ನಲ್ ಮುಕ್ತ ಜಂಕ್ಷನ್‌ಗೆ ರಾಜೀವ್ ಗಾಂಧಿ ಹೆಸರಿಟ್ಟು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಘಾಟನೆ ಮಾಡಿಸಲಾಗಿತ್ತು ಎಂದರು.

18 ವರ್ಷಕ್ಕೆ ಮತದಾನದ ಹಕ್ಕು, ಪಂಚಾಯತ್ ರಾಜ್ ತಿದ್ದುಪಡಿ, ಐಟಿ ಬಿಟಿ ಬೆಳವಣಿಗೆಗೂ ಇವರೇ ಕಾರಣ. ಇಂದು ಎಲ್ಲರ ಬಳಿ ಎರಡೆರಡು ಮೊಬೈಲ್‌ಗಳಿವೆ. ಇದಕ್ಕೆ ಕಾರಣ ರಾಜೀವ್ ಗಾಂಧಿಯವರ ದೂರದೃಷ್ಟಿಯ ಟೆಲಿಫೋನ್ ಕ್ರಾಂತಿ ಕಾರಣ ಎಂದು ಹೇಳಿದರು.

ಇದನ್ನೂ ಓದಿ | CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ದೇಶದ ಸಮಗ್ರತೆ ಐಕ್ಯತೆ ಶಾಂತಿಗಾಗಿ ನೆಹರು ಕುಟುಂಬ ದುಡಿದಿದೆ. ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ವಿಚಾರಗಳನ್ನು ನಾವು ಮರೆಯಬಾರದು ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Road Rage Incident: ಒಳಗೆ ಮಗು ಇದೆ ಅಂದ್ರೂ ಬಿಡದ ಕಿಡಿಗೇಡಿ; ಕಾರಿನ ಗ್ಲಾಸ್‌ ಒಡೆದು ದಾಂಧಲೆ!

Road Rage Incident: ಬೆಂಗಳೂರು ಹೊರವಲಯದ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ವ್ಯಕ್ತಿಯ ದೌರ್ಜನ್ಯ ಕಂಡು ಕಾರೊಳಗೆ ಇದ್ದ ಮಹಿಳೆ ಮತ್ತು ಮಗು ಕಿರುಚಾಡಿದ್ದಾರೆ. ಅಲ್ಲದೇ ಬೈಕ್ ಸವಾರನ ಗುಂಡಾ ವರ್ತನೆ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

VISTARANEWS.COM


on

Koo

ಬೆಂಗಳೂರು: ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ರಸ್ತೆಯಲ್ಲಿ ಹೋಗುವಾಗ ಸೈಡ್ ಬಿಡಲಿಲ್ಲ ಎಂದು ಗಲಾಟೆ, ಹಲ್ಲೆ, ಕಿರಿಕ್ ಸೇರಿ ಒಂದಲ್ಲಾ ಒಂದು ಪ್ರಕರಣ ನಡೆಯುತ್ತಲೇ ಇರುತ್ತವೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಪುಂಡರ ಕಾಟ ಮಾತ್ರ ತಪ್ಪುತ್ತಿಲ್ಲ. ಈ ನಡುವೆ ನಗರ ಹೊರವಲಯದ ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಶನಿವಾರ ರಾತ್ರಿ ಇಂತಹುದೇ ಘಟನೆಯೊಂದು (Road Rage Incident) ನಡೆದಿದ್ದು, ಕಾರು ತಡೆದು ಯುವಕನೊಬ್ಬ ಪುಂಡಾಟ ಮೆರೆದಿರುವ ಘಟನೆ ನಡೆದಿದೆ.

ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಬಲ ತಿರುವು ಪಡೆಯಲು ಇಂಡಿಕೇಟರ್ ಬಳಸದೆ ಕಾರು ಚಾಲಕ ಏಕಾಏಕಿ ನುಗ್ಗಿಸಿದ್ದ. ಇದರಿಂದ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಅನಿಲ್ ರೆಡ್ಡಿ ಎಂಬಾತ ರಸ್ತೆಗೆ ಬಿದ್ದಿದ್ದಾನೆ. ಹೀಗಾಗಿ ಕೋಪಗೊಂಡ ಆತ, ಕಾರನ್ನು ತಡೆದು ಹಲ್ಲೆಗೆ ಯತ್ನಿಸಿದ್ದಾನೆ.

ಸರ್ಜಾಪುರ ಮುಖ್ಯರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ಶನಿವಾರ ರಾತ್ರಿ ಕಾರು ತಡೆದು ಯುವಕನೋರ್ವ ಪುಂಡಾಟ ಮೆರೆದಿರುವ ಘಟನೆ ನಡೆದಿದೆ. ಕಾರಿನಲ್ಲಿ ಮಗು ಮತ್ತು ಮಹಿಳೆ ಇದ್ದರೂ ಯೋಚಿಸದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಬೈಕ್‌ ಸವಾರ, ಕಲ್ಲು ಹಿಡಿದು ಕಾರಿನಲ್ಲಿದ್ದವರಿಗೆ ಬೆದರಿಸಿ ವೈಪರ್ ಕಿತ್ತು ಗ್ಲಾಸ್ ಒಡೆದಿದ್ದಾನೆ. ಈ ಸನ್ನಿವೇಶವನ್ನು ಕಾರಿನಲ್ಲಿದ್ದ ದಂಪತಿ ವಿಡಿಯೊ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ. ಬೆಳ್ಳಂದೂರು ಪೊಲೀಸರು ಎಫ್ಐಆರ್ ದಾಖಲಿಸಿ, ಕಾರಿನ ಗ್ಲಾಸ್ ಒಡೆದು ಹಾಕಿದ್ದ ಆರೋಪಿ ಅನಿಲ್ ರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ.

ಇಂಡಿಕೇಟರ್‌ ಹಾಕದೆ ಕಾರು ಚಾಲಕ ಯಡವಟ್ಟು

ಘಟನೆ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಆರೋಪಿ ಅನಿಲ್ ರೆಡ್ಡಿ ಎಂಬಾತನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಬಲ ತಿರುವ ಪಡೆಯಲು ಇಂಡಿಕೇಟರ್ ಬಳಸದೆ ಏಕಾಏಕಿ ನುಗ್ಗಿದ್ದ. ಈ ವೇಳೆ ಬೈಕ್ ಸವಾರನಿಗೆ ಕಾರ್ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದ. ಸಾವರಿಸಿಕೊಂಡು ಮೇಲೆ ಎದ್ದ ಅನಿಲ್ ರೆಡ್ಡಿ ಕಾರಿನಿಂದ ಕೆಳಗೆಇಳಿಯುವಂತೆ ಚಾಲಕನಿಗೆ ಹೇಳಿದ್ದ. ಆದರೆ ಕಾರಿನಿಂದ ಚಾಲಕ ಕೆಳಗೆ ಇಳಿಯದೆ ಕುಳಿತಿದ್ದರಿಂದ ಕೋಪಗೊಂಡು ಕಲ್ಲಿನಿಂದ ಗ್ಲಾಸ್ ಪುಡಿಗಟ್ಟಿದ್ದ. ಘಟನೆ ಸಂಬಂಧ ಕಾರು ಚಾಲಕನಿಂದ ಬೆಳ್ಳಂದೂರು ಠಾಣೆಗೆ ದೂರು ದೂರಿನ ಹಿನ್ನಲೆ ಕೇಸ್ ದಾಖಲಾಗಿತ್ತು. ಕಾರಿನಿಂದ ಚಾಲಕ ಕೆಳಗೆ ಇಳಿಯದೆ ಕುಳಿತಿದ್ದರಿಂದ ಕೋಪಗೊಂಡು ಅನಿಲ್ ರೆಡ್ಡಿ ಗ್ಲಾಸ್ ಪುಡಿಗಟ್ಟಿದ್ದ ಎಂಬುದು ವಿಚಾರಣೆ ವೇಳೆ ಬಯಲಾಗಿದೆ.

Continue Reading

ಕರ್ನಾಟಕ

KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

KEA : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನವಾಗಿದೆ.

VISTARANEWS.COM


on

By

KEA
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತ ವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ.26ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಈ ಬಗ್ಗೆ ಸೂಚನೆ ನೀಡಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ ಎಂದಿದ್ದಾರೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು.

ಕಡ್ಡಾಯ ಕನ್ನಡ ಪರೀಕ್ಷೆ

ಗ್ರಾಮ ಆಡಳಿತ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆಪ್ಟೆಂಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು.

ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಈ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕೆಂದು ಸೂಚಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 ರ ಅನ್ವಯ, ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ- 1 ಮತ್ತು ಪತ್ರಿಕೆ-2 ಇವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕಲಬುರಗಿ

DK Shivakumar: ಆರ್ಟಿಕಲ್ 371 ಜೆ ಜಾರಿಗೆ 10 ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ಧತೆ

ಆರ್ಟಿಕಲ್ 371 ಜೆ ಜಾರಿಯಾಗಿ ಹತ್ತು ವರ್ಷಗಳಾಗುತ್ತಿದ್ದು, ಇದರ ಸಂಭ್ರಮಾಚರಣೆಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಸಂಭ್ರಮಾಚರಣೆ ನೆನಪಿಗೆ 371 ಹಾಸಿಗೆಗಳನ್ನು ಒಳಗೊಂಡ ಜಯದೇವ ಆಸ್ಪತ್ರೆಯನ್ನು ಮುಂದಿನ ತಿಂಗಳು ಲೋಕಾರ್ಪಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

VISTARANEWS.COM


on

DK Shivakumar
ಕಲಬುರಗಿಯಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ ಶರಣ್ ಪ್ರಕಾಶ್ ಪಾಟೀಲ್, ಸಂಸದ ರಾಧಾಕೃಷ್ಣ ಮತ್ತಿತರರು ಭಾಗವಹಿಸಿದ್ದರು.
Koo

ಕಲಬುರಗಿ: ಆರ್ಟಿಕಲ್ 371 ಜೆ ಜಾರಿಯಾಗಿ ಹತ್ತು ವರ್ಷಗಳಾಗುತ್ತಿದ್ದು, ಇದರ ಸಂಭ್ರಮಾಚರಣೆಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಸಂಭ್ರಮಾಚರಣೆ ನೆನಪಿಗೆ 371 ಹಾಸಿಗೆಗಳನ್ನು ಒಳಗೊಂಡ ಜಯದೇವ ಆಸ್ಪತ್ರೆಯನ್ನು ಮುಂದಿನ ತಿಂಗಳು ಲೋಕಾರ್ಪಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಕಲಬುರಗಿಯಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಗೆ ಅಂತಾರಾಷ್ಟೀಯ ಗುಣಮಟ್ಟದ ಇಎಸ್‌ಐ ಆಸ್ಪತ್ರೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರು ತಂದರು. ಕಲಬುರಗಿ ರಾಜ್ಯದಲ್ಲಿ ಮೂರನೇ ಆರೋಗ್ಯ ಹಬ್ ಆಗಿ ರೂಪುಗೊಳ್ಳುತ್ತಿದೆ. ಇಂದಿರಾಗಾಂಧಿ ತಾಯಿ- ಮಕ್ಕಳ ಆಸ್ಪತ್ರೆ, ಕಿದ್ವಾಯಿ, ಜಯದೇವ ಆಸ್ಪತ್ರೆಗಳು ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿವೆ. ಇದರಿಂದ ಈ ಭಾಗದ ಜನರು ಬೆಂಗಳೂರು, ಹೈದರಾಬಾದ್‌ಗೆ ಹೋಗುವುದು ತಪ್ಪಲಿದೆ. ಸಂಭ್ರಮಾಚರಣೆ ಕಾರ್ಯಕ್ರಮದ ಬಗ್ಗೆ ವಿರೋಧ ಪಕ್ಷದ ಇಬ್ಬರು ನಾಯಕರ ಜತೆ ಚರ್ಚೆ ನಡೆಸಿ, ದಿನಾಂಕ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ಆರ್ಟಿಕಲ್ 371 ಜೆ ಯನ್ನು ಕಲ್ಯಾಣ ಕರ್ನಾಟಕದ ಅಭಿವೃದ್ದಿಗಾಗಿ ಮಲ್ಲಿಖಾರ್ಜುನ ಖರ್ಗೆ ಅವರು ಮುಂದಾಳತ್ವವಹಿಸಿ ಜಾರಿಗೆ ತಂದರು. ಈ ಭಾಗದಲ್ಲಿ ಶೈಕ್ಷಣಿಕ, ಔದ್ಯೋಗಿಕ ಮತ್ತು ಸಾಮಾಜಿಕ ಕ್ರಾಂತಿಗೆ ಮುನ್ನಡಿ ಬರೆದಿದೆ ಎಂದರು.

ತುಂಗಭದ್ರಾ ಗೇಟ್ ದುರಸ್ತಿ ಮಾಡಿದ ಪ್ರತಿ ಕಾರ್ಮಿಕರಿಗೂ ಗೌರವ ಸಲ್ಲಿಕೆ

70 ವರ್ಷಗಳ ಹಳೆಯ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟಿನ ಚೈನ್ ಲಿಂಕ್ ದುರಾದೃಷ್ಟವಶಾತ್ ತುಂಡಾಯಿತು. ಇದಕ್ಕೆ ಬಿಜೆಪಿ, ದಳದವರು ನಮ್ಮ ಮೇಲೆ ಗದಾಪ್ರಹಾರ ಮಾಡಿದರು. ನಾವು ಹಗಲು, ರಾತ್ರಿ ನಿದ್ದೆ ಮಾಡದೆ ಕಾರ್ಯಪ್ರವೃತ್ತರಾದೆವು. ಕೂಡಲೇ ಎಂಜಿನಿಯರ್‌ಗಳು, ತಂತ್ರಜ್ಞರನ್ನು ಕರೆಸಿ ಗೇಟನ್ನು ಮತ್ತೆ ಅಳವಡಿಸಲಾಯಿತು. ಪ್ರತಿಯೊಬ್ಬ ಕೆಲಸಗಾರನೂ ಪಣತೊಟ್ಟು ಕೆಲಸ ಮಾಡಿದ್ದಾರೆ. ಈ ಕೆಲಸಕ್ಕೆ ಶ್ರಮಿಸಿದ ಚಿಕ್ಕ ಕಾರ್ಮಿಕರು, ಎಂಜಿನಿಯರ್‌ಗಳು, ತಂತ್ರಜ್ಞರು, ಅಧಿಕಾರಿಗಳನ್ನು ಸನ್ಮಾನ ಮಾಡುವ ಕೆಲಸವನ್ನು ಸರ್ಕಾರ ಮುಂದಿನ ದಿನಗಳಲ್ಲಿ ಮಾಡುತ್ತದೆ ಎಂದು ತಿಳಿಸಿದರು.

ಅಣೆಕಟ್ಟನ್ನು ಉಳಿಸಿಕೊಂಡಿದ್ದೇ ದೊಡ್ಡ ಪವಾಡ. ಗೇಟ್ ದುರಸ್ತಿ ಮಾಡಿ ರೈತರ ಪಾಲಿನ ನೀರು ಉಳಿಸಿದಂತಾಯಿತು. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ. ಅದಕ್ಕೆ ನಾನು ಪದೇ, ಪದೇ ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ ಎಂದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಗೇಟ್ ದುರಸ್ತಿ ಮಾಡಲು ಒಂದಷ್ಟು ನೀರನ್ನು ನದಿಗೆ ಬಿಡಬೇಕಾದ ಅನಿವಾರ್ಯತೆಯಿತ್ತು. ಈಗ ವರುಣನ ಕೃಪೆಯಿಂದ ಮಳೆ ಬರುತ್ತಿದೆ. ರೈತರ ಪಾಲಿನ ನೀರನ್ನು ಅವರಿಗೆ ಬಿಡಲಾಗುವುದು, ರೈತರನ್ನು ಉಳಿಸಿಕೊಳ್ಳುವ ಕೆಲಸ ನಾವು ಮಾಡುತ್ತೇವೆ ಎಂದು ಹೇಳಿದರು.

Continue Reading

ಕಲಬುರಗಿ

DK Shivakumar: ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ ಎಂದ ಡಿ.ಕೆ.ಶಿವಕುಮಾರ್!

ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ ಎಂದು ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್‌ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಕಲಬುರಗಿ: ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.

ಕಲಬುರಗಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಪ್ಪು ಮಾಡದಿದ್ದರೇ ಸಿಎಂ ಏಕೆ ಹೆದರಬೇಕು ಎನ್ನುವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಯಾರು ಹೆದರಿದ್ದಾರೆ. ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ. ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್‌ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ ಎಂದು ತಿಳಿಸಿದರು.

ಐದು ವರ್ಷವೂ ಸಿದ್ದರಾಮಯ್ಯ ಐದು ವರ್ಷದ ಅವಧಿ ಪೂರ್ಣಗೊಳಿಸುತ್ತಾರೆಯೇ ಎಂದು ಪ್ರಶ್ನಿಸಿದಾಗ “ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ 10 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತದೆ” ಎಂದರು.

ಇದನ್ನೂ ಓದಿ: CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ರಾಜ್ಯಪಾಲರು ದಲಿತ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಕೇಳಿದಾಗ “ಅವರನ್ನು ರಾಜ್ಯಪಾಲರ ಹುದ್ದೆಗೆ ಕೂರಿಸಿರುವುದು ಸಂವಿಧಾನವೇ ಹೊರತು ಜಾತಿಯಲ್ಲ” ಎಂದು ತಿಳಿಸಿದರು.

ರಾಜ್ಯಪಾಲರನ್ನು ನಿಂದಿಸಿದವರ ಮೇಲೆ ಪೊಲೀಸರು ಸ್ವಯಂಪ್ರೇರಿತರಾಗಿ ಎಸ್‌ಸಿ, ಎಸ್‌ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎನ್ನುವ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಕಲಬುರ್ಗಿಯಲ್ಲಿ ನಿರ್ಮಾಣವಾಗಿರುವ ಹೊಸ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಬಂದು ಸೇರಿಸಲು ಹೇಳಿ ಎಂದು ಹೇಳಿದರು.

2011 ರಲ್ಲಿ ಯಡಿಯೂರಪ್ಪ ಅವರನ್ನು ಜೈಲಿಗೆ ಹಾಕಿಸಲಾಯಿತು ಈಗ ಅದೇ ಸನ್ನಿವೇಶ ಸೃಷ್ಟಿಯಾಗಿದೆ ಎನ್ನುವ ಬಿಜೆಪಿ ಸಾಮಾಜಿಕ ಜಾಲತಾಣದ ಪೋಸ್ಟಿನ ಬಗ್ಗೆ ಕೇಳಿದಾಗ “ಅವರನ್ನು ಜೈಲಿಗೆ ಹಾಕಿಸಿದ್ದು ಕಾಂಗ್ರೆಸ್ ಅಲ್ಲ. ಇದೇ ದೇವೇಗೌಡರು, ಕುಮಾರಸ್ವಾಮಿ ನಾವಲ್ಲ” ಎಂದು ಹೇಳಿದರು.

ಕುಮಾರಸ್ವಾಮಿ ಅವರ ವಿರುದ್ದ Kannada Newsಲೋಕಾಯುಕ್ತ ದೋಷಾರೋಪ ಪಟ್ಟಿ ಸಲ್ಲಿಕೆಗೆ ರಾಜ್ಯಪಾಲರ ಅನುಮತಿ ಕೇಳಿರುವ ವಿಚಾರದ ಬಗ್ಗೆ ಪ್ರಶ್ನಿಸಿದಾಗ, ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ಸ್ವತಃ ನನ್ನ ಕಣ್ಣಿನಿಂದ ನೋಡಬೇಕು. ಯಾವುದಾದರೂ ದಾಖಲೆ ಇದ್ದರೆ ನೀಡಿ. ನಾನು (ಮಾಧ್ಯಮದವರನ್ನು) ನಿಮ್ಮನ್ನು ಆಶ್ರಯಿಸಲು ಆಗುವುದಿಲ್ಲ ಎಂದರು.

ಸಿಎಂ ದೆಹಲಿ ಭೇಟಿಯ ಬಗ್ಗೆ ಕೇಳಿದಾಗ “ಹೈಕಮಾಂಡಿಗೆ ವಾಸ್ತವಾಂಶ ತಿಳಿಸಬೇಕು ಎಂದು ಇಬ್ಬರೂ ಮಾತನಾಡಿಕೊಂಡಿದ್ದೆವು. ಅದಕ್ಕೆ ದೆಹಲಿಗೆ ಇಬ್ಬರೂ ತೆರಳೋಣ ಎಂದು ಮಾತುಕತೆ ನಡೆಸಿದ್ದೇವೆ” ಎಂದರು.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ಬಿಜೆಪಿ ಹೊರತಾದ ಪಕ್ಷಗಳು ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪದ ವಿರುದ್ದ ಹೋರಾಟ ರೂಪಿಸಲು ಎಲ್ಲರನ್ನು ಒಗ್ಗೂಡಿಸಲು ದೆಹಲಿಗೆ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ ಎಂದಾಗ, ಮಾಧ್ಯಮಗಳಲ್ಲಿಯೇ ಎಲ್ಲವೂ ಬರುತ್ತಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಎಲ್ಲೆಲ್ಲಿ ಏನಾಗುತ್ತಿದೆ ಎಂಬುದು ನೀವು (ಮಾಧ್ಯಮಗಳು) ನೋಡಿದಲ್ಲವೇ? ಎಂದು ಮರು ಪ್ರಶ್ನಿಸಿದರು.

ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು ಎನ್ನುವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ, ಇಡೀ ಪಕ್ಷ, ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಗಾಂಧಿ ಅವರು ಎಲ್ಲಾ ನಾಯಕರು ಅವರ ಪರವಾಗಿ ನಿಂತಿದ್ದೇವೆ ಎಂದರು.

ಇದನ್ನೂ ಓದಿ: Banking Recruitment 2024: ರಾಷ್ಟ್ರೀಯ ಬ್ಯಾಂಕ್‌‌ಗಳಲ್ಲಿ 4455 ಹುದ್ದೆಗೆ ನೇಮಕ: ಅರ್ಜಿ ಸಲ್ಲಿಸಲು ನಾಳೆಯೇ ಅಂತಿಮ ದಿನ

ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ಎಲ್ಲಿಗೆ ತಲುಪಲಿದೆ ಎಂಬ ಪ್ರಶ್ನಿಸಿದಾಗ, ನಮ್ಮ ಮುಖ್ಯಮಂತ್ರಿಗಳು ತಪ್ಪು ಮಾಡಿಲ್ಲ. ಎಲ್ಲಿ ನ್ಯಾಯ ಇದೆಯೋ ಅದಕ್ಕೆ ಜಯ ದೊರಕಲಿದೆ. ಮುಡಾದವರು ಸಿಎಂ ಪತ್ನಿ ಅವರ ಜಮೀನು ಆಕ್ರಮಿಸಿಕೊಂಡರು, ಅದಕ್ಕೆ ಅವರು ಪರಿಹಾರ ಪಡೆದರು. ಪರಿಹಾರ ನೀಡಿ ಎಂದು ಸಿದ್ದರಾಮಯ್ಯ ಅವರು ಪತ್ರ ಬರೆದಿಲ್ಲ ಹಾಗೂ ಇವರ ಕಾಲದಲ್ಲಿ ಇದು ನಡೆದಿಲ್ಲ. ಬಿಜೆಪಿಯವರ ಕಾಲದಲ್ಲಿಯೇ ಸೈಟುಗಳ ಹಂಚಿಕೆಯಾಗಿದೆ ಎಂದರು.

Continue Reading
Advertisement
ವೈರಲ್ ನ್ಯೂಸ್2 mins ago

Road Rage Incident: ಒಳಗೆ ಮಗು ಇದೆ ಅಂದ್ರೂ ಬಿಡದ ಕಿಡಿಗೇಡಿ; ಕಾರಿನ ಗ್ಲಾಸ್‌ ಒಡೆದು ದಾಂಧಲೆ!

Fashion Show news
ಫ್ಯಾಷನ್15 mins ago

Fashion Show news: ವೈವಿಧ್ಯಮಯ ವಜ್ರಾಭರಣ ಧರಿಸಿ ಫ್ಯಾಷನ್‌ ಶೋನಲ್ಲಿ ಮಿಂಚಿದ ರೂಪದರ್ಶಿಯರು

Manu Bhaker Dance
ಕ್ರೀಡೆ21 mins ago

Manu Bhaker Dance: ‘ಕಾಲಾ ಚಷ್ಮಾ’ ಹಾಡಿಗೆ ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದ ಒಲಿಂಪಿಯನ್​ ಮನು ಭಾಕರ್​

KEA
ಕರ್ನಾಟಕ36 mins ago

KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

badlapur tension vistara explainer
EXPLAINER58 mins ago

Vistara Explainer: ಪುಟ್ಟ ಹೆಣ್ಣುಮಕ್ಕಳ ಮೇಲೆ ಕಾಮುಕ ಅಟೆಂಡರ್‌ನಿಂದ ಅತ್ಯಾಚಾರದ ಬಳಿಕ ಬದ್ಲಾಪುರ ಉದ್ವಿಗ್ನ; ಏನಾಗ್ತಿದೆ ಅಲ್ಲಿ?

DK Shivakumar
ಕಲಬುರಗಿ1 hour ago

DK Shivakumar: ಆರ್ಟಿಕಲ್ 371 ಜೆ ಜಾರಿಗೆ 10 ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ಧತೆ

DK Shivakumar
ಕಲಬುರಗಿ1 hour ago

DK Shivakumar: ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ ಎಂದ ಡಿ.ಕೆ.ಶಿವಕುಮಾರ್!

Congress Protest
ಕರ್ನಾಟಕ1 hour ago

Congress Protest: ಪ್ರಧಾನಿ, ಗವರ್ನರ್‌ಗೆ ಬೆದರಿಕೆ; ಐವನ್ ಡಿಸೋಜಾ, ಜಮೀರ್‌, ರಕ್ಷಿತ್ ಶಿವರಾಮ್ ವಿರುದ್ಧ ದೂರು

Mosquitoes Bite
ಆರೋಗ್ಯ1 hour ago

World Mosquito Day: ಸೊಳ್ಳೆಗಳಿಗೂ ಒಂದು ದಿನ! ಇವುಗಳ ಕುರಿತ 7 ಸುಳ್ಳುಗಳಿಗೆ ಇಲ್ಲಿದೆ ಉತ್ತರ!

Naga Chaitanya Sobhita Dhulipala
ಸಿನಿಮಾ1 hour ago

Naga Chaitanya Sobhita Dhulipala: ನಾಗ ಚೈತನ್ಯ, ಶೋಭಿತಾ ಧೂಳಿಪಾಲ ನಿಶ್ಚಿತಾರ್ಥದಿಂದ ಅಕ್ಕಿನೇನಿ- ದಗ್ಗುಬಾಟಿ ಕುಟುಂಬದಲ್ಲಿ ಬಿರುಕು?

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌