Site icon Vistara News

DK Shivakumar: ಹಿರಿಯ ನಟಿ ಡಾ.ಲೀಲಾವತಿ, ವಿನೋದ್ ರಾಜ್ ಮನವಿಗೆ ಸ್ಪಂದಿಸಿದ ಡಿಕೆಶಿ

DK Shivakumar with Vinod Raj

ಬೆಂಗಳೂರು: ಸೋಲದೇವನಹಳ್ಳಿಯಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟನೆ ಹಾಗೂ ನಿವೇಶನ ನೋಂದಣಿ ವಿಚಾರವಾಗಿ ಹಿರಿಯ ನಟಿ ಲೀಲಾವತಿ ಹಾಗೂ ಅವರ ಮಗ ವಿನೋದ್ ರಾಜ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದ ನಟಿ ಲೀಲಾವತಿ ಹಾಗೂ ವಿನೋದ್ ರಾಜ್ ಅವರ ಭೇಟಿ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್‌ ಅವರು, ಪ್ರಾಣಿಗಳ ರಕ್ಷಣೆ ಈ ತಾಯಿ, ಮಗನ ನೆಚ್ಚಿನ ಹವ್ಯಾಸ. ಪಶು ವೈದ್ಯಕೀಯ ಕಾಲೇಜು ಉದ್ಘಾಟನೆಗೆ ದಿನಾಂಕ ನೀಡಿ ಎಂದು ಅವರು ನನಗೆ ಕೇಳಿದ್ದಾರೆ. ನಾನು ಸಮಯ ನೋಡಿ ದಿನಾಂಕ ನೀಡುತ್ತೇನೆ. ಇನ್ನು ಅವರಿಗೆ ನಿಗದಿಯಾಗಿರುವ ನಿವೇಶನ ನೋಂದಣಿ ವಿಚಾರವಾಗಿಯೂ ಅವರು ಮನವಿ ಸಲ್ಲಿಸಿದ್ದಾರೆ. ಈ ವಿಚಾರಗಳ ಬಗ್ಗೆ ಅವರಿಗೆ ಅಗತ್ಯ ಸಹಕಾರ ನೀಡುತ್ತೇವೆ ಎಂದರು.

ಇದನ್ನೂ ಓದಿ | IT Raid in Bangalore : ಇದು ಸಿದ್ದರಾಮಯ್ಯ, ಡಿಕೆಶಿಗೆ ಸೇರಿದ ಕಮಿಷನ್‌ ಹಣ; ಬಿಜೆಪಿ ಆರೋಪ

ಹಿರಿಯರಾದ ಲೀಲಾವತಿ ಅವರನ್ನು ಕರೆದುಕೊಂಡು ಬರುವುದು ಬೇಡ, ಆರೋಗ್ಯ ಸರಿಯಿಲ್ಲ ಎಂದು ಹೇಳಿದ್ದೆ. ಆದರೂ ಅವರು ನನ್ನ ಮೇಲೆ ಅಭಿಮಾನವಿಟ್ಟು ಬಂದಿದ್ದಾರೆ. ಅವರಿಗೆ ಉತ್ತಮವಾದ ಆರೋಗ್ಯ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಡಿಸಿಎಂ

ಡಿ.ಕೆ.ಶಿವಕುಮಾರ್ ಅವರು ಹಿರಿಯ ನಟಿ ಲೀಲಾವತಿ ಅವರ ಕಾರಿನ ಬಳಿ ಹೋಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ನಿಮ್ಮ ಆರೋಗ್ಯ ಸರಿ ಇಲ್ಲದ ಕಾರಣ ಇಷ್ಟು ದೂರ ಬರುವುದು ಬೇಡ ಎಂದು ಹೇಳಿದ್ದೆ, ಆದರೂ ನೀವು ಬಂದಿದ್ದು ಸಂತಸವಾಯಿತು. ನೀವು ಹೇಳಿದ ದಿನಾಂಕದಂದು ಬಂದು ಪಶುವೈದ್ಯಕೀಯ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ ಶಿವಕುಮಾರ್ ಅವರು ಹಿರಿಯ ನಟಿ ಲೀಲಾವತಿ ಅವರ ಕ್ಷೇಮ ವಿಚಾರಿಸಿದರು.

ಇದನ್ನೂ ಓದಿ | World Egg Day: ಪಶು ವೈದ್ಯಕೀಯ ಕಾಲೇಜುಗಳ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಕೆಶಿ

ಡಿಸಿಎಂ ಭೇಟಿಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ನಟ ವಿನೋದ್ ರಾಜ್ ಅವರು, ನಾವು ಸುಸಜ್ಜಿತವಾದ ಪಶು ಚಿಕಿತ್ಸೆ ಆಸ್ಪತ್ರೆ ನಿರ್ಮಾಣ‌ ಮಾಡಿದ್ದು, ಸಿಬ್ಬಂದಿಯನ್ನು ಸರ್ಕಾರದ ಕಡೆಯಿಂದ ನಿಯೊಜಿಸಬೇಕಾಗಿ ಮನವಿ ಸಲ್ಲಿಸಿದ್ದೇವೆ. ಸೊಂಡೆಕೊಪ್ಪ ಬಳಿ ವಿದ್ಯುತ್ ಸಬ್‌ಸ್ಟೇಷನ್ ಕಾಮಗಾರಿ ಶೇ. 99 ನಿರ್ಮಾಣವಾಗಿ ನಿಂತು ಹೋಗಿದ್ದು, ಅದನ್ನು ಕಾರ್ಯಗತಗೊಳಿಸಿದರೆ ಆ ಭಾಗದ ರೈತರಿಗೆ ಉಪಯೋಗವಾಗುತ್ತದೆ ಎಂದು ಡಿಸಿಎಂ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದರು.

Exit mobile version