Next CM: ಮುಂದಿನ ಸಿಎಂ ಡಿಕೆಶಿ ಎಂದ ನೊಣವಿನಕೆರೆ ಸ್ವಾಮೀಜಿ; ಕುರ್ಚಿ ಖಾಲಿ ಇಲ್ಲ ಎಂದ ಎಂ.ಬಿ. ಪಾಟೀಲ್‌ - Vistara News

ಕರ್ನಾಟಕ

Next CM: ಮುಂದಿನ ಸಿಎಂ ಡಿಕೆಶಿ ಎಂದ ನೊಣವಿನಕೆರೆ ಸ್ವಾಮೀಜಿ; ಕುರ್ಚಿ ಖಾಲಿ ಇಲ್ಲ ಎಂದ ಎಂ.ಬಿ. ಪಾಟೀಲ್‌

Next CM:: ಮದ್ದೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀಗಳು ಮಾತನಾಡಿದ್ದಾರೆ.

VISTARANEWS.COM


on

Nonavinakere mutt Swamiji and MB Patil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕೂಗು ಕೇಳಿಬಂದಿದೆ. ದಲಿತ ಸಿಎಂ ಕೂಗು ತಣ್ಣಗಾದ ಬೆನ್ನಲ್ಲೇ ಇದೀಗ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಲಿ ಎಂದು ಸ್ವಾಮೀಜಿಯೊಬ್ಬರು ಹೇಳಿರುವುದು ಕಂಡುಬಂದಿದೆ. ಮದ್ದೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀ ಡಾ. ಕರಿ ವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಸ್ವಾಮೀಜಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶ್ರೀ ಪಟ್ಟಲದಮ್ಮ ದೇವಿಯ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ ಅವರು, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ. ಅವರು ಶ್ರೀಮಠದ ಪರಮ ಭಕ್ತ ಮುಖ್ಯಮಂತ್ರಿ ಆಗಲು ನಮ್ಮ ಆಶೀರ್ವಾದ ಕೂಡ ಇದೆ. ಅವರಿಗಾಗಿ ನಾವು ಭಗವಂತನಲ್ಲಿ ಸಂಕಲ್ಪ ಮಾಡಿದ್ದೇವೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಸರ್ಕಾರ ಮೀಸಲಾತಿ ಪ್ರಕಟಿಸುವುದು ಉತ್ತಮ. ಅದು ಎಲ್ಲರಿಗೂ ಅನುಕೂಲವಾಗಲಿದೆ.

ಡಿಕೆಶಿ ಅವರು ತುಮಕೂರು ಜಿಲ್ಲೆಯ ತಿಪಟೂರಿನ ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಪರಮ ಭಕ್ತರು. ಅವರು ಆಗಾಗ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಅಜ್ಜಯ್ಯನ ಆಶೀರ್ವಾದ ಪಡೆಯುತ್ತಾರೆ. ಹೀಗಾಗಿ ಸ್ವಾಮೀಜಿ ಅವರ ಹೇಳಿಕೆ ಮಹತ್ವ ಪಡೆದಿದೆ.

ಇದನ್ನೂ ಓದಿ | CM Siddaramaiah: ಸಿದ್ದರಾಮಯ್ಯಗೆ ಧಮ್ಮು, ತಾಕತ್ತು ಇದ್ದರೆ NIAಗೆ ಮೌಲ್ವಿ ಪ್ರಕರಣ ವಹಿಸಲಿ: ಯತ್ನಾಳ್

ಸ್ವಾಮೀಜಿ ಹೇಳಿಕೆ ಅಪ್ರಸ್ತುತ, ಕುರ್ಚಿ ಖಾಲಿ ಇಲ್ಲ ಎಂದ ಎಂ.ಬಿ. ಪಾಟೀಲ್‌

ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀಗಳ ಹೇಳಿಕೆಗೆ ಸಚಿವ ಎಂ. ಬಿ. ಪಾಟೀಲ್‌ ಪ್ರತಿಕ್ರಿಯಿಸಿ, ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕೆಂದು ನೊಣವಿನಕೆರೆ ಸ್ವಾಮೀಜಿಗಳ ಹೇಳಿಕೆ ಅಪ್ರಸ್ತುತ. ಈಗಂತೂ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದು ತಿಳಿಸಿದ್ದಾರೆ.

ಸಿಎಂ ಆಗುವುದು ನಮ್ಮ ಪಕ್ಷದ ವರಿಷ್ಠರ ಕೈಯ್ಯಲ್ಲಿರುತ್ತದೆ. ಇದಕ್ಕೆಂದೇ ಕಾಂಗ್ರೆಸ್ ಹೈಕಮಾಂಡ್ ಇದೆ. ಹೈ ಕಮಾಂಡ್‌ ನಾಯಕರು ಶಾಸಕರ ಅಭಿಪ್ರಾಯ ಪಡೆದು ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಿರ್ಧಾರ ಮಾಡುತ್ತಾರೆ. ಹೀಗಾಗಿ ಈ ಪ್ರಶ್ನೆ ಈಗ ಸದ್ಯಕ್ಕೆ ಉದ್ಭವಿಸುವುದಿಲ್ಲ. ಮೇಲಾಗಿ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದಿದ್ದಾರೆ.

ಸ್ವಾಮೀಜಿಗಳು ರಾಜಕೀಯದಿಂದ ದೂರವಿರಬೇಕು: ಶ್ರೀ ನಿಜಗುಣಾನಂದ ಸ್ವಾಮೀಜಿ

ಧಾರವಾಡ: ಸ್ವಾಮೀಜಿಗಳು ರಾಜಕೀಯದಿಂದ ಹೊರತಾಗಿರಬೇಕು. ನಮ್ಮದೇನಿದ್ದರೂ ಧರ್ಮ, ಸಂಸ್ಕೃತಿ, ಸಂಸ್ಕಾರದ ವಿಚಾರದಲ್ಲಿರಬೇಕು. ಮಠಾಧೀಶರು ರಾಜಕಾರಣದಲ್ಲಿದ್ದಾರೆ ಅಂತಾರೆ. ಮಾಧ್ಯಮವೂ ಸಹ ರಾಜಕಾರಣದ ವರ್ಗದಲ್ಲಿದೆ. ಮಾಧ್ಯಮಗಳೂ ರಾಜಕಾರಣ ಹೊರತುಪಡಿಸಿ ನಿಂತಿಲ್ಲ. ಒಂದೊಂದು ಚಾನಲ್‌ಗಳು ಒಬ್ಬೊಬ್ಬ ರಾಜಕಾರಣಿಯನ್ನು ವೃಭವೀಕರಿಸುತ್ತವೆ. ಮಠಾಧೀಶರು ರಾಜಕಾರಣದಲ್ಲಿ ಬರಬಾರದು ಎನ್ನುವುದು ಸತ್ಯ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಹೇಳಿದ್ದಾರೆ.

ನೊಣವಿನಕೆರೆ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಧರ್ಮ ರಾಜಕಾರಣದಲ್ಲಿ ಪ್ರವೇಶ ಮಾಡಬಾರದು. ಲಿಂಗಾಯತ ಸ್ವಾಮೀಜಿಗಳು ಮಾತ್ರವಲ್ಲ. ಮೌಲ್ವಿ, ಪಾದ್ರಿಗಳೂ ರಾಜಕಾರಣದಲ್ಲಿ ಪ್ರವೇಶ ಆಗಬಾರದು. ಯಾವ ಧರ್ಮದ ನೇತಾರರು ರಾಜಕಾರಣ ಪ್ರವೇಶಿಸಬಾರದು. ರಾಜಕಾರಣಿಗಳಿಗೆ ಸ್ವಾಮೀಜಿಗಳು ಬುದ್ಧಿ ಹೇಳಬಹುದು, ಮಾರ್ಗದರ್ಶನ ಮಾಡಬಹುದು. ಆದರೆ, ರಾಜಕಾರಣಿಗಳ ಓಲೈಕೆ ಮಾಡಬಾರದು. ಒಬ್ಬ ಸ್ವಾಮೀಜಿಯನ್ನು ಬಳಸಿಕೊಳ್ಳುವಾಗ ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

ಎಲ್ಲ ಪಕ್ಷದವರು ಮಠಗಳಿಗೆ ಬರುತ್ತಾರೆ. ಅವರ ಜೊತೆಯಲ್ಲಿ ಸ್ವಾಮೀಜಿಗಳು ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಮಠಾಧೀಶರನ್ನು ರಾಜಕಾರಣಕ್ಕೆ ದುರ್ಬಳಕೆ ಮಾಡಬಾರದು. ಈ ಅರಿವಿನ ಪ್ರಜ್ಞೆ ರಾಜಕಾರಣಿಗಳಿಗೆ ಇರಬೇಕು. ಯಾವ ಮಠಾಧೀಶರಿಗೂ ಒತ್ತಡ ಇರುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ | JDS Karnataka: ಪಕ್ಷ ವಿರೋಧಿ ಚಟುವಟಿಕೆ; ಸಿ.ಎಂ.ಇಬ್ರಾಹಿಂ, ಕೇರಳದ ಸಿ.ಕೆ. ನಾನು ಉಚ್ಚಾಟನೆ

ಸರ್ಕಾರದಿಂದ ಮಠಗಳಿಗೆ ಅನುದಾನ ಬಿಡುಗಡೆ ವಿಚಾರ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವ ಪೂರ್ವದಲ್ಲಿ ಪ್ರಭು ಪರಂಪರೆ ಇತ್ತು. ಆಗ ಮಹಾರಾಜರು ಎಲ್ಲರನ್ನೂ ಸಲಹುತ್ತಿದ್ದರು. ಮಠಗಳಲ್ಲಿ ಶೈಕ್ಷಣಿಕ ಸಂಸ್ಥೆ , ಉಚಿತ ಪ್ರಸಾದ ನಿಲಯ ಇರುತ್ತವೆ. ಅನಾಥ ಮಕ್ಕಳು ಇರುತ್ತಾರೆ. ಸಾವಿರಾರು ಪುಸ್ತಕ ಪ್ರಕಟಿಸಬೇಕಿರುತ್ತದೆ. ರಾಜಾಶ್ರಯ ಕಳೆದುಕೊಂಡ ಸಂಗೀತಗಾರರಿಗೆ ಮಠಗಳೇ ಆಶ್ರಯ ಆಗಿರುತ್ತವೆ. ಅನೇಕ ಜನರಿಗೆ ಮಠಗಳು ಅವಕಾಶ ಕಲ್ಪಿಸಿಕೊಡಬೇಕಿರುತ್ತದೆ. ಮಠಗಳಿಗೆ ಬರುವ ಅನುದಾನ ಪ್ರಜಾಪ್ರಭುತ್ವದ ತೆರಿಗೆ ಹಣವೇ ಆಗಿರುತ್ತದೆ. ಆದರೂ ಸಹ ಮಠದ ಸೇವೆ ಸಂಪೂರ್ಣ ಪ್ರಜೆಗಳಿಗೆ ಸಲ್ಲುತ್ತದೆ. ಹೀಗಾಗಿ ಸರ್ಕಾರ ಅನುದಾನ ಕೊಡುತ್ತದೆ ಎಂದು ಮಠಗಳು ಸರ್ಕಾರಿ ಅನುದಾನ ಪಡೆಯುವ ಬಗ್ಗೆ ಸಮರ್ಥಿಸಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Rajya Sabha Election: ಸಿಎಂ, ಡಿಸಿಎಂ ಭೇಟಿ ಮಾಡಿದ ಜನಾರ್ದನ ರೆಡ್ಡಿ; ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ?

Rajya Sabha Election: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಈಗ ಅವರು ಕಾಂಗ್ರೆಸ್‌ ಪಾಳೆಯದಲ್ಲಿ ಕಾಣಿಸಿಕೊಂಡಿದ್ದಾರೆ. ಅವರನ್ನು ಕರೆತರುವಲ್ಲಿ, ಅವರ ಬೆಂಬಲ ಪಡೆಯುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

VISTARANEWS.COM


on

Janardhana Reddy meets CM Siddaramaiah and DCM DK Shivakumar
Koo

ಬೆಂಗಳೂರು: ರಾಜ್ಯಸಭಾ ಚುನಾವಣೆ (Rajya Sabha Election) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ತಂತ್ರಗಾರಿಕೆ ಜೋರಾಗಿದೆ. ಬಹುಮತ ಇರುವ ಕಾಂಗ್ರೆಸ್‌ ಶತಾಯಗತಾಯ ಗೆಲ್ಲಲೇಬೇಕು ಎಂದು ಪಣ ತೊಟ್ಟಿದೆ. ಈ ನಡುವೆ ಭಾನುವಾರ ತಮ್ಮ ಪಕ್ಷದ ಶಾಸಕ ರಾಜವೆಂಕಟಪ್ಪ ನಾಯಕ (Raja Venkatappa Nayaka) ಅವರ ನಿಧನ ಕೈಪಡೆಗೆ ತಲೆಬಿಸಿ ತಂದೊಡ್ಡಿದೆ. ಹೀಗಾಗಿ ಗೆಲ್ಲಲು ಇನ್ನೊಂದು ಮತದ ಅವಶ್ಯಕತೆ ಇದೆ. ಈ ನಡುವೆ ಅಡ್ಡ ಮತದಾನದ ಭೀತಿ ಇರುವುದರಿಂದ ಪಕ್ಷೇತರ ಶಾಸಕರತ್ತ ಕೈಪಡೆ ಕಣ್ಣಿಟ್ಟಿದೆ. ಇದರ ಭಾಗವಾಗಿ ಈ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhana Reddy) ಅವರನ್ನು ತನ್ನತ್ತ ಸೆಳೆದುಕೊಂಡಿತೇ ಎಂಬ ಅನುಮಾನ ಮೂಡಿದೆ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ರೆಡ್ಡಿ ಅವರು ಸಿಎಂ ನಿವಾಸ ಕಾವೇರಿಯಲ್ಲಿ ಸೋಮವಾರ ಭೇಟಿ ಮಾಡಿರುವುದು ಇದನ್ನು ಪುಷ್ಟೀಕರಿಸುತ್ತದೆ.

ಸಿಎಂ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿದ ಜನಾರ್ದನ ರೆಡ್ಡಿ ಕೆಲಕಾಲ ಸಮಾಲೋಚನೆ ನಡೆಸಿದರು. ಈ ವೇಳೆ ಸಚಿವ ಶಿವರಾಜ್ ತಂಗಡಗಿ ಜತೆಗಿದ್ದರು.

ಈ ವರೆಗೂ ಜನಾರ್ದನ ರೆಡ್ಡಿ ಅವರು ಬಿಜೆಪಿ ಪರವಾಗಿಯೇ ಮಾತನಾಡುತ್ತಿದ್ದರು. ಅವರು ಬಿಜೆಪಿಗೆ ಇಲ್ಲವೇ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಗೆ ಮತ ಹಾಕುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಈಗ ಅವರು ಕಾಂಗ್ರೆಸ್‌ ಪಾಳೆಯದಲ್ಲಿ ಕಾಣಿಸಿಕೊಂಡಿದ್ದಾರೆ. ಅವರನ್ನು ಕರೆತರುವಲ್ಲಿ, ಅವರ ಬೆಂಬಲ ಪಡೆಯುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ನಮಗೆ ನೀವು-ನಿಮಗೆ ನಾವು

ರೆಡ್ಡಿ ಪಕ್ಷೇತರ ಶಾಸಕರಾಗಿರುವ ಕಾರಣ ಅವರಿಗೆ ಇಂಥದ್ದೇ ಪಕ್ಷವನ್ನು ಬೆಂಬಲಿಸಬೇಕು ಎನ್ನುವ ನಿಯಮ ಇಲ್ಲ. ಅಲ್ಲದೆ, ಅವರು ಪಕ್ಷೇತರರಾಗಿರುವುದರಿಂದ ಆಡಳಿತ ಪಕ್ಷದವರನ್ನು ಚೆನ್ನಾಗಿ ಇಟ್ಟುಕೊಂಡರೆ ಕ್ಷೇತ್ರ ಅಭಿವೃದ್ಧಿಯಾಗುತ್ತದೆ. ಅದಕ್ಕೆ ಹೆಚ್ಚಿನ ಅನುದಾನವನ್ನು ತರಬಹುದಾಗಿದೆ. ಇದನ್ನೇ ದಾಳವಾಗಿ ಬಳಸಿಕೊಂಡ ಡಿಸಿಎಂ ಡಿ.ಕೆ. ಶಿವಕುಮಾರ್‌ ಶುಕ್ರವಾರ ವಿಧಾನಸಭೆಯಲ್ಲಿ ರೆಡ್ಡಿ ಅವರ ಕೆಲಸವನ್ನು ಮಾಡಿಕೊಟ್ಟಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಾನು ಸಹಕಾರ ಕೊಡುವೆ, ಪಕ್ಷಕ್ಕೆ ನಿಮ್ಮ ಸಹಕಾರ ಇರಲಿ ಎಂದು ಹೇಳಿದ್ದಾರೆನ್ನಲಾಗಿದೆ.

ಕೆಲಸ ಮಾಡಿಕೊಟ್ಟಿರುವ ಡಿಕೆಶಿ!

ಒಟ್ಟು ನಾಲ್ಕೂ ಪಕ್ಷೇತರರ ಮತಗಳನ್ನು ಸಹ ಕಾಂಗ್ರೆಸ್‌ಗೆ ಹಾಕಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ತಂತ್ರಗಾರಿಕೆ ನಡೆಸಿದ್ದಾರೆ. ‌ಇದರ ಭಾಗವಾಗಿ ಶುಕ್ರವಾರ ವಿಧಾನಸಭೆಯಲ್ಲಿ ಜನಾರ್ದನ ರೆಡ್ಡಿಗೆ ನಗರಾಭಿವೃದ್ಧಿ ಇಲಾಖೆಯ ಕೆಲಸ ಮಾಡಿಕೊಟ್ಟು ಚುನಾವಣೆಯಲ್ಲಿ ತಮ್ಮ ಪರ ಇರುವಂತೆ ಡಿಕೆಶಿ ಹೇಳಿದ್ದಾರೆನ್ನಲಾಗಿದೆ. ಈಗ ಸೋಮವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ರೆಡ್ಡಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿಗೆ ಪರೋಕ್ಷ ಸಂದೇಶವನ್ನು ರವಾನೆ ಮಾಡಲಾಗಿದೆ ಎಂದೇ ವಿಶ್ಲೇಷಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: Rajya Sabha Election: ನಾಳೆ ರಾಜ್ಯಸಭಾ ಕದನ; ಅಡ್ಡಮತದಾನ ಭೀತಿ, ಕೈಗೆ ಫಜೀತಿ! ಲೆಕ್ಕಾಚಾರ ಹೇಗೆ?

ಯಾರು ಕೈಕೊಡುತ್ತಾರೆ? ಯಾರು ಕೈ ಹಿಡಿಯುತ್ತಾರೆ?

ಅಡ್ಡ ಮತದಾನದ ಭೀತಿಯೂ ಇರುವುದರಿಂದ ಕಾಂಗ್ರೆಸ್‌ ತನ್ನ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್‌ ಮಾಡಲು ನಿರ್ಧಾರ ಮಾಡಿದೆ. ಅಲ್ಲಿಂದಲೇ ನೇರವಾಗಿ ಕರೆತಂದು ಮತದಾನವನ್ನು ಮಾಡಿಸಲಿದೆ. ಇತ್ತ ಜೆಡಿಎಸ್ – ಬಿಜೆಪಿ ಅಭ್ಯರ್ಥಿಗಳಿಂದಲೂ ಪಕ್ಷೇತರ ಅಭ್ಯರ್ಥಿಗಳನ್ನು ಸಂಪರ್ಕ ಮಾಡಲಾಗುತ್ತಿದೆ. ಜೆಡಿಎಸ್ ಅಭ್ಯರ್ಥಿಗೆ ಇನ್ನೂ ಐದು ಮತಗಳ ಕೊರತೆ ಇದೆ. ಹೀಗಾಗಿ ಪಕ್ಷೇತರ ಮತ ಸೆಳೆಯಲು ಮೈತ್ರಿ ಪಕ್ಷಗಳ ನಾಯಕರು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಕೊನೇ ಘಳಿಗೆಯಲ್ಲಿ ಯಾರು ಯಾರಿಗೆ ಕೈಕೊಡಲಿದ್ದಾರೆ? ಕೈ ಹಿಡಿಯಲಿದ್ದಾರೆ ಎಂಬುದು ಮಾತ್ರ ನಿಗೂಢವಾಗಿದೆ.

Continue Reading

ಬೆಂಗಳೂರು

Namma Metro : ಬಟ್ಟೆ ಕ್ಲೀನ್‌ ಇಲ್ಲ ಎಂದು ರೈತನಿಗೆ ಪ್ರವೇಶ ನಿರಾಕರಿಸಿದ ಮೆಟ್ರೋ; ನೆಟ್ಟಿಗರ ಆಕ್ರೋಶ

Namma Metro : ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹರಿದ ಬಟ್ಟೆಯ ರೈತನಿಗೆ ಪ್ರವೇಶ ನೀಡದೆ ಇರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಸಹ ಪ್ರಯಾಣಿಕರೇ ಇದರ ವಿರುದ್ಧ ಧ್ವನಿ ಎತ್ತಿದ್ದು, ನೆಟ್ಟಿಗರು ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Namma Metro Farmer
Koo

ಬೆಂಗಳೂರು: ಹಾಕಿಕೊಂಡಿರುವ ಬಟ್ಟೆ ಕ್ಲೀನ್‌ ಇಲ್ಲ ಎಂಬ ಕಾರಣಕ್ಕಾಗಿ ರೈತರೊಬ್ಬರನ್ನು ಮೆಟ್ರೋ (Namma Metro) ಪ್ರವೇಶಿಸಲು (Metro denies entry to Farmer) ಅವಕಾಶ ನೀಡದೆ ಅಪಮಾನ ಮಾಡಿದ ಘಟನೆ ಬೆಂಗಳೂರಿನಲ್ಲಿ (Bangalore News) ನಡೆದಿದ್ದು, ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ (Netizens fumes) ಕಾರಣವಾಗಿದೆ.

ನಮ್ಮ ಮೆಟ್ರೋ ಸಿಬ್ಬಂದಿ ಮಾನವೀಯತೆಯನ್ನೇ ಮರೆತು ದೇಶದ ಬೆನ್ನೆಲುಬಾಗಿರುವ ರೈತನಿಗೆ ಅಪಮಾನ ಮಾಡಿದ್ದಾರೆ ಎಂಬ ಆಕ್ರೋಶ ಈಗ ಭುಗಿಲೆದ್ದಿದೆ. ಬೆಂಗಳೂರಿನ ರಾಜಾಜಿ ನಗರದ ಮೆಟ್ರೋ ಸ್ಟೇಷನ್‌ನಲ್ಲಿ ಮೆಟ್ರೋ ಸಿಬ್ಬಂದಿ ನಡೆಸಿರುವ ಈ ಅತಿರೇಕದ ವರ್ತನೆ ಸಹಪ್ರಯಾಣಿಕರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಆಗಿದ್ದೇನು?

ತಲೆಯ ಮೇಲೆ ಬಟ್ಟೆಯ ಮೂಟೆಯೊಂದನ್ನು ಹೊತ್ತುಕೊಂಡು ಬಂದ ವ್ಯಕ್ತಿಯೊಬ್ಬರನ್ನು ಮೆಟ್ರೋ ಸುರಕ್ಷತಾ ತಪಾಸಣೆ ಸಿಬ್ಬಂದಿ ತಡೆದಿದ್ದಾರೆ. ಆಗ ಅದನ್ನು ನೋಡಿದ ಸಹಪ್ರಯಾಣಿಕರೊಬ್ಬರು ಅವರನ್ನು ಯಾಕೆ ಒಳಗೆ ಬಿಡುತ್ತಿಲ್ಲ ಎಂದು ಕೇಳಿದ್ದಾರೆ. ಆಗ ಸಿಬ್ಬಂದಿ ಅವರ ಬಟ್ಟೆ ಗಲೀಜಾಗಿದೆ, ಹೀಗಿದ್ದರೆ ಸಹ ಪ್ರಯಾಣಿಕರಿಗೆ ಅಸಹ್ಯವಾಗುತ್ತದೆ. ಆ ಕಾರಣಕ್ಕಾಗಿ ಒಳಗೆ ಬಿಡಲಾಗುತ್ತಿಲ್ಲ ಎಂದು ಹೇಳಿದರು.

ಇದಕ್ಕೆ ಸಹಪ್ರಯಾಣಿಕರು ಭದ್ರತಾ ಸಿಬ್ಬಂದಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮೆಟ್ರೋ ಪ್ರಯಾಣಿಕರು ಯಾವ ರೀತಿಯ ಬಟ್ಟೆ ಧರಿಸಬೇಕು ಎಂದು ಎಲ್ಲಾದರೂ ನಿಯಮವಿದೆಯಾ ಎಂದು ಕೇಳಿದ ಸಹಪ್ರಯಾಣಿಕರು ರೈತರಿಗೆ ಈ ರೀತಿ ಅಪಮಾನ ಮಾಡಿದ್ದು ಸರಿಯಾ ಎಂದು ಕೇಳಿದ್ದಾರೆ.

ಬಟ್ಟೆ ಕೊಳಕಾಗಿದೆ ಎಂಬ ಕಾರಣಕ್ಕೆ ಒಳಗೆ ಬಿಡುವುದಿಲ್ಲ ಅಂತೀರಲ್ಲಾ.. ನನ್ನ ಬಟ್ಟೆ ಲಕಲಕ ಹೊಳೆಯುತ್ತಿದೆ. ಹಾಗಿದ್ದರೆ ನನ್ನನ್ನು ಫ್ರೀ ಆಗಿ ಕರೆದುಕೊಂಡು ಹೋಗುತ್ತೀರಾ ಎಂದು ಕೇಳಿದ್ದಾರೆ. ಕೊನೆಗೆ ಸಿಬ್ಬಂದಿಯ ಯಾವ ಮಾತಿಗೂ ಕ್ಯಾರೇ ಅನ್ನದೆ ರೈತನನ್ನು ಮೆಟ್ರೋ ರೈಲಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಅವರ ಮೂಟೆಯಲ್ಲಿ ಏನಾದರೂ ವಸ್ತುಗಳಿವೆ ಎಂಬ ಕಾರಣಕ್ಕಾಗಿ ಅವರನ್ನು ತಡೆದರೆ ನಾನೇನೂ ಮಾತನಾಡುವುದಿಲ್ಲ. ಆದರೆ, ಒಬ್ಬ ರೈತನ ಬಟ್ಟೆ ಕೊಳಕಾಗಿದೆ ಎಂಬ ಕಾರಣಕ್ಕಾಗಿ ಆತನನ್ನು ಅಪಮಾನಿಸಬಾರದು ಎಂದು ಸಹಪ್ರಯಾಣಿಕ ಲೈವ್‌ ವಿಡಿಯೊದಲ್ಲಿ ಹೇಳುತ್ತಾರೆ.

ಇದನ್ನೂ ಓದಿ: Namma Metro : ಮೆಟ್ರೋ ಪ್ರಯಾಣಿಕರಿಗೆ ‌Good News; ಈಗ 3 ನಿಮಿಷಕ್ಕೊಂದು ರೈಲು!

ಟ್ವಿಟರ್‌ನಲ್ಲಿ ಭಾರಿ ಸದ್ದು ಮಾಡಿದ ವಿಡಿಯೊ

ಸಹಪ್ರಯಾಣಿಕರು ಈ ಘಟನೆಯ ವಿಡಿಯೊ ಮಾಡಿದ್ದಲ್ಲದೆ, ಅದನ್ನು ಬಿಎಂಆರ್ ಸಿಎಲ್ ಗೆ ಟ್ಯಾಗ್ ಮಾಡಿ ವಿಐಪಿಗಳಿಗೆ ಮಾತ್ರನಾ ಮೆಟ್ರೋ ಅಂತ ಕಿಡಿಕಾರಿದ್ದಾರೆ. ಇದಕ್ಕೆ ಸಾರ್ವಜನಿಕರು ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Namma Metro netizens fuming

ರೈತ ಬೆಳೆ ಬೆಳೆದಿಲ್ಲ ಅಂದ್ರೆ ಏನೂ ನೀವು ಏನೂ ತಿಂತೀರಾ ಎಂದು ಜನರು ಪ್ರಶ್ನೆ ಮಾಡಿದ್ದಾರೆ. ಈ ರೀತಿ ಪ್ರಯಾಣಿಕರ ಮೇಲೆ ದಬ್ಬಾಳಿಕೆ ನಡೆಸಿದ ಮೆಟ್ರೋ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಟ್ವಿಟರ್ ಬಳಕೆದಾರರು ಆಗ್ರಹಿಸಿದ್ದಾರೆ.

Continue Reading

ಬೆಂಗಳೂರು

Bike Wheeling : ಮಕ್ಕಳ ವ್ಹೀಲಿಂಗ್‌ ಶೋಕಿಗೆ ಪೋಷಕರಿಗೆ ದಂಡ

Wheeling Stunt : ಮಕ್ಕಳಿಗೆ ಆಟ, ಪೋಷಕರಿಗೆ ಪ್ರಾಣ ಸಂಕಟವಾಗಿದೆ. ಮಕ್ಕಳ ವ್ಹೀಲಿಂಗ್‌ ಶೋಕಿಗೆ ಪೋಷಕರು ಠಾಣೆ ಮೆಟ್ಟಿಲೇರುವಂತೆ ಮಾಡಿದೆ. ಸದ್ಯ ಅಪ್ರಾಪ್ತನೊಬ್ಬ ರೋಡ್‌ನಲ್ಲಿ ವ್ಹೀಲಿಂಗ್‌ ಮಾಡಿದ್ದಕ್ಕೆ ಬಾಲಕನ ಪೋಷಕರ ವಿರುದ್ಧ ಎಫ್‌ಐಆರ್‌ (Bike Wheeling) ದಾಖಲಾಗಿದೆ.

VISTARANEWS.COM


on

By

FIR against parents of children for bike wheeling
Koo

ಬೆಂಗಳೂರು: ಮಗನ ವ್ಹೀಲಿಂಗ್‌ ಶೋಕಿಗೆ (Bike Wheeling) ಪೋಷಕರು ಶಿಕ್ಷೆ ಅನುಭವಿಸುವಂತಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹೊರವಲಯದಲ್ಲಿ ಬೈಕ್ ವ್ಹೀಲಿಂಗ್ (Wheeling Stunt) ಮಿತಿ ಮೀರಿದೆ. ಮೀಸೆ ಚಿಗುರದ ಯುವಕರ ಹುಚ್ಚಾಟಕ್ಕೆ ವಾಹನ ಸವಾರರು ಕಿರಿಕಿರಿ ಅನುಭವಿಸುತ್ತಿದ್ದು ಮಾತ್ರವಲ್ಲ, ಅದೆಷ್ಟೋ ಅಮಾಯಕರು ಪ್ರಾಣಬಿಟ್ಟಿದ್ದಾರೆ.

ನಗರದಲ್ಲಿ ಪುಂಡರ ವ್ಹೀಲಿಂಗ್ ಶೋಕಿ ಇನ್ನೂ ನಿಂತಿಲ್ಲ. ಮುಖ್ಯ ರಸ್ತೆಯಲ್ಲೇ ಯುವಕರು ವ್ಹೀಲಿಂಗ್ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್​ ಮಾಡುವುದು ಹೆಚ್ಚಾಗಿದೆ. ವ್ಹೀಲಿಂಗ್‌ ಮಾಡುವ ಸವಾರರ ವಿರುದ್ಧ ಪೊಲೀಸರು ಅದೆಷ್ಟೇ ಕಾರ್ಯಾಚರಣೆ ನಡೆಸಿದರೂ, ಪುಂಡರು ಡೋಂಟ್‌ ಕೇರ್‌ ಅಂತಿದ್ದರು.

ಬೈಕ್ ಜತೆ ಸರ್ಕಸ್ ಮಾಡುತ್ತಾ, ಜನಸಂದಣಿಯಿರುವ ರಸ್ತೆಯಲ್ಲೇ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಟಾರ್ಚರ್ ಕೊಡುತ್ತಿದ್ದರು. ವ್ಹೀಲಿಂಗ್ ಮಾಡುತ್ತಿರುವ ಪುಂಡರ ಹಾವಳಿಗೆ ಸಾರ್ವಜನಿಕರು ಭಯಭೀತರಾಗಿದ್ದರು. ಸದ್ಯ ಬೆಂಗಳೂರಿನ ಬಾಣಸವಾಡಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ವ್ಹೀಲಿಂಗ್‌ ಪುಂಡಾಟ ಮಾಡುತ್ತಿದ್ದವರಿಗೆ ಖಾಕಿ ಶಾಕ್ ಕೊಟ್ಟಿದೆ.

ಇದನ್ನೂ ಓದಿ: Shah Rukh Khan: ಬಟ್ಟೆ ಬಿಚ್ಚಿ ಮಗನ ಬ್ರ್ಯಾಂಡ್ ಪ್ರಚಾರ ಮಾಡಿದ ಶಾರುಖ್‌ ಖಾನ್‌!

ವ್ಹೀಲಿಂಗ್‌ ಮಾಡುತ್ತಿದ್ದ ಕಾರಣಕ್ಕೆ ಮೂರು ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇಬ್ಬರು ಯುವಕರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಬಾಲಕನೊಬ್ಬ ಬೈಕ್‌ ವ್ಹೀಲಿಂಗ್‌ ಮಾಡಿದ್ದು, ಆತ ಅಪ್ರಾಪ್ತನಾಗಿರುವ ಹಿನ್ನೆಲೆಯಲ್ಲಿ ಪೋಷಕರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಮಕ್ಕಳ ತಪ್ಪಿಗೆ ಪೋಷಕರು ಶಿಕ್ಷೆಯನ್ನು ಅನುಭವಿಸುವಂತಾಗಿದೆ.

ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಿ ಸಿಕ್ಕಸಿಕ್ಕ ರೋಡ್‌ಗಳಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುವ ಚಟ ಹಲವು ಯುವಕರಲ್ಲಿ ಕಂಡುಬರುತ್ತಿದೆ. ರಿಂಗ್ ರೋಡ್, ಹೈವೇ, ಸಿಟಿ ಸೆಂಟರ್ ರೋಡ್‌ಗಳಲ್ಲಿ ಭಯಾನಕ ವ್ಹೀಲಿಂಗ್ ಕಂಡುಬರುತ್ತಿದೆ. ಡ್ರ್ಯಾಗ್ ರೇಸ್, ವ್ಹೀಲಿಂಗ್ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಯುವಕರಿಬ್ಬರು ಅರೆಸ್ಟ್‌

ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಇಬ್ಬರನ್ನು ಜೆ.ಬಿ ನಗರ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಸುರಂಜನ್ ದಾಸ್ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ಬೈಕ್ ವ್ಹೀಲಿಂಗ್‌ ಮಾಡುತ್ತಿದ್ದರು. ಇಬ್ಬರು ವಾಹನ ಸವಾರರನ್ನು ಬಂಧಿಸಿ ಬೈಕ್ ಜಪ್ತಿ ಮಾಡಿದ್ದಾರೆ. ಇಬ್ಬರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣವನ್ನು ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Rajya Sabha Election: ನಾಳೆ ರಾಜ್ಯಸಭಾ ಕದನ; ಅಡ್ಡಮತದಾನ ಭೀತಿ, ಕೈಗೆ ಫಜೀತಿ! ಲೆಕ್ಕಾಚಾರ ಹೇಗೆ?

Rajya Sabha Election: ಶಾಸಕ ರಾಜವೆಂಕಟಪ್ಪ ನಾಯಕ ಅವರ ನಿಧನದಿಂದ ಈಗ ಕಾಂಗ್ರೆಸ್‌ ಸಂಖ್ಯಾಬಲ 134ಕ್ಕೆ ಇಳಿದಿದೆ. ಗೆಲ್ಲಲು 135 ಸೀಟುಗಳು ಬೇಕಿದೆ. ಇದು ಕೈಪಡೆ ಇಕ್ಕಟ್ಟಿಗೆ ಕಾರಣವಾಗಿದೆ. ಆದರೆ, ಪಕ್ಷೇತರ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಕಾಂಗ್ರೆಸ್‌ಗೆ ಮತ ಹಾಕುವುದಾಗಿ ಹೇಳಿದ್ದರೂ ಅವರಿಗೆ ಈಗ ಡಿಮ್ಯಾಂಡ್‌ ಜಾಸ್ತಿ ಇದೆ.

VISTARANEWS.COM


on

Rajya Sabha Election tomorrow cross voting Fear for congress
Koo

ಬೆಂಗಳೂರು: ರಾಜ್ಯದಲ್ಲಿ ರಾಜ್ಯಸಭಾ ಕದನ (Rajya Sabha Election) ಕುತೂಹಲ ಕೆರಳಿಸಿದೆ. “ನಂಬರ್‌ ಗೇಮ್‌” ಆರಂಭವಾಗಿರುವ ಹಿನ್ನೆಲೆಯಲ್ಲಿ ಮೂರೂ ರಾಜಕೀಯ ಪಕ್ಷಗಳೂ ತಂತ್ರಗಾರಿಕೆಯಲ್ಲಿ ತೊಡಗಿವೆ. ಒಟ್ಟು ನಾಲ್ಕು ಸ್ಥಾನಕ್ಕೆ ಐವರು ಅಭ್ಯರ್ಥಿಗಳು ಇರುವುದರಿಂದ ಚುನಾವಣಾ ಕಣ ರೋಚಕವಾಗಿದೆ. ಈ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಕಾಂಗ್ರೆಸ್‌ ತನ್ನ ಶಾಸಕರನ್ನು (Congress MLAs) ರೆಸಾರ್ಟ್‌ಗೆ (Resort Politics) ಶಿಫ್ಟ್‌ ಮಾಡಲು ಪ್ಲ್ಯಾನ್‌ ಮಾಡಿದೆ. ಈ ಸಂಬಂಧ ಈಗಾಗಲೇ ಸೂಚನೆಯನ್ನೂ ನೀಡಿದೆ.

ಆಡಳಿತ ಪಕ್ಷ ಕಾಂಗ್ರೆಸ್‌ಗೆ ಮೂವರನ್ನು ಗೆಲ್ಲಿಸಿಕೊಂಡು ಬರಲು ಸ್ಪಷ್ಟ ಬಹುಮತ ಇತ್ತು. ಆದರೆ, ಭಾನುವಾರ ಶಾಸಕ ರಾಜವೆಂಕಟಪ್ಪ ನಾಯಕ ಅವರ ನಿಧನದಿಂದ ಈಗ ಕಾಂಗ್ರೆಸ್‌ ಸಂಖ್ಯಾಬಲ 134ಕ್ಕೆ ಇಳಿದಿದೆ. ಗೆಲ್ಲಲು 135 ಸೀಟುಗಳು ಬೇಕಿದೆ. ಇದು ಕೈಪಡೆ ಇಕ್ಕಟ್ಟಿಗೆ ಕಾರಣವಾಗಿದೆ. ಆದರೆ, ಪಕ್ಷೇತರ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಕಾಂಗ್ರೆಸ್‌ಗೆ ಮತ ಹಾಕುವುದಾಗಿ ಹೇಳಿದ್ದರೂ ಅವರಿಗೆ ಈಗ ಡಿಮ್ಯಾಂಡ್‌ ಜಾಸ್ತಿ ಇದೆ.

ಮಂಗಳವಾರ ಬೆಳಗ್ಗೆ 9ರಿಂದ ಸಂಜೆ ನಾಲ್ಕು ಗಂಟೆಯವರೆಗೂ ವಿಧಾನಸೌಧದಲ್ಲಿ ಮತದಾನ ನಡೆಯಲಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಾಂಗ್ರೆಸ್‌ಗೆ ತಲೆಬಿಸಿ ಇರುತ್ತಿರಲಿಲ್ಲ. ಆದರೆ, ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಐದನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ ಇಳಿದಿದ್ದಾರೆ. ಹಾಗಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ.

ಕಾಂಗ್ರೆಸ್‌ನಿಂದ ಅಜಯ್ ಮಾಕೇನ್, ನಾಸಿರ್ ಹುಸೇನ್, ಚಂದ್ರಶೇಖರ್ ಕಣದಲ್ಲಿದ್ದಾರೆ. ಬಿಜೆಪಿಯಿಂದ ನಾರಾಯಣ್ ಸಾ ಬಾಂಡಗೆ ಕಣದಲ್ಲಿದ್ದಾರೆ. ಇಲ್ಲಿ ಬಿಜೆಪಿಯ ಹೆಚ್ಚುವರಿ ಮತಗಳು ಹಾಗೂ ಪಕ್ಷೇತರ ಮತಗಳ ಮೇಲೆ ಜೆಡಿಎಸ್‌ನ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಕಣ್ಣಿಟ್ಟಿದ್ದಾರೆ.

ಇಂದು ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ಗೆ ಶಿಫ್ಟ್

ಕಾಂಗ್ರೆಸ್‌ನಿಂದ ಅಡ್ಡ ಮತದಾನವಾಗುವ ಸಾಧ್ಯತೆ ‌ಇರುವ ಹಿನ್ನೆಲೆಯಲ್ಲಿ ಆ ಪಕ್ಷದ ಎಲ್ಲ ಶಾಸಕರನ್ನು ಇಂದು ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗುತ್ತಿದೆ. ಅಲ್ಲಿಂದ ನೇರವಾಗಿ ಕರೆತಂದು ಮತದಾನ ಮಾಡಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ.

ದರ್ಶನ್‌ ಪುಟ್ಟಣ್ಣಯ್ಯ ಮತ ಕಾಂಗ್ರೆಸ್‌ ಮುಖ್ಯ

ಸುರುಪುರ ಶಾಸಕ ರಾಜವೆಂಕಟಪ್ಪ ನಾಯಕ ನಿಧನದಿಂದ ಕಾಂಗ್ರೆಸ್ ಶಾಸಕರ ಸಂಖ್ಯಾ ಬಲ 134ಕ್ಕೆ ಇಳಿಕೆಯಾಗಿರುವುದರಿಂದ ಕಾಂಗ್ರೆಸ್ ಬೆಂಬಲದೊಂದಿಗೆ ಗೆದ್ದಿರುವ ದರ್ಶನ್ ಪುಟ್ಟಣ್ಣಯ್ಯ ಅವರ ಮತ ಬಹಳ ಮುಖ್ಯವಾಗಿದೆ. ಈಗಾಗಲೇ ಅವರು ತಮ್ಮ ಮತ ಕಾಂಗ್ರೆಸ್‌ಗೆ ಎಂದು ಹೇಳಿದ್ದಾರೆ. ಆದರೆ, ಒಬ್ಬ ಶಾಸಕರ ನಿಧನದಿಂದ ಈಗ ದರ್ಶನ್ ಪುಟ್ಟಣ್ಣಯ್ಯ‌ ಅವರಿಗೆ ಬೇಡಿಕೆ ಹೆಚ್ಚಿದೆ.

ಒಬ್ಬ ಅಭ್ಯರ್ಥಿ ಗೆಲ್ಲಲು 45 ಮತಗಳು ಅನಿವಾರ್ಯವಾಗಿವೆ. ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ಗೆಲ್ಲಲು ಕನಿಷ್ಠ 135 ಮತಗಳ ಅಗತ್ಯವಿದೆ. ಒಂದು ಮತದ ಕೊರತೆ ಎದುರಾಗಲಿರುವ ಹಿನ್ನೆಲೆಯಲ್ಲಿ ಪುಟ್ಟಣ್ಣಯ್ಯ ಅವರ ಮತ ಕಾಂಗ್ರೆಸ್‌ಗೆ ಬೇಕೇ ಬೇಕು.

ರೆಡ್ಡಿಗೆ ಕೆಲಸ ಮಾಡಿಕೊಟ್ಟಿರುವ ಡಿಕೆಶಿ

ಇತ್ತ ಜನಾರ್ದನ ರೆಡ್ಡಿ ಸೇರಿದಂತೆ ಪಕ್ಷೇತರರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಪರ್ಕ ಮಾಡಿದ್ದಾರೆ. ಒಟ್ಟು ನಾಲ್ಕು ಪಕ್ಷೇತರರ ಮತಗಳನ್ನೂ ಕಾಂಗ್ರೆಸ್‌ಗೆ ಹಾಕಿಸಿಕೊಳ್ಳಲು ತಂತ್ರಗಾರಿಕೆ ನಡೆಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಜನಾರ್ದನ ರೆಡ್ಡಿಗೆ ನಗರಾಭಿವೃದ್ಧಿ ಇಲಾಖೆಯ ಕೆಲಸ ಮಾಡಿಕೊಟ್ಟು ಚುನಾವಣೆಯಲ್ಲಿ ತಮ್ಮ ಪರ ಇರುವಂತೆ ಡಿಕೆಶಿ ಹೇಳಿದ್ದಾರೆನ್ನಲಾಗಿದೆ.

ಇದನ್ನೂ ಓದಿ: Karnataka Weather : ಬೆಂಗಳೂರಲ್ಲಿ ಮುಂಜಾನೆ ಮಂಜು; ಹಲವೆಡೆ ಹಗುರ ಮಳೆ ಸಾಧ್ಯತೆ

ಯಾರು ಕೈಕೊಡುತ್ತಾರೆ? ಯಾರು ಕೈ ಹಿಡಿಯುತ್ತಾರೆ?

ಇತ್ತ ಜೆಡಿಎಸ್ – ಬಿಜೆಪಿ ಅಭ್ಯರ್ಥಿಗಳಿಂದಲೂ ಪಕ್ಷೇತರ ಅಭ್ಯರ್ಥಿಗಳನ್ನು ಸಂಪರ್ಕ ಮಾಡಲಾಗುತ್ತಿದೆ. ಜೆಡಿಎಸ್ ಅಭ್ಯರ್ಥಿಗೆ ಇನ್ನೂ ಐದು ಮತಗಳ ಕೊರತೆ ಇದೆ. ಹೀಗಾಗಿ ಪಕ್ಷೇತರ ಮತ ಸೆಳೆಯಲು ಮೈತ್ರಿ ಪಕ್ಷಗಳ ನಾಯಕರು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಕೊನೇ ಘಳಿಗೆಯಲ್ಲಿ ಯಾರು ಯಾರಿಗೆ ಕೈಕೊಡಲಿದ್ದಾರೆ? ಕೈ ಹಿಡಿಯಲಿದ್ದಾರೆ ಎಂಬುದು ಮಾತ್ರ ನಿಗೂಢವಾಗಿದೆ.

Continue Reading
Advertisement
india poverty
ದೇಶ18 mins ago

India Poverty: ದೇಶದಲ್ಲಿ ಬಡವರ ಸಂಖ್ಯೆ 5%ಕ್ಕಿಂತ ಇಳಿಕೆ; ಆಹಾರಕ್ಕಿಂತ ಓಡಾಟ, ಮನರಂಜನೆಗೇ ಹೆಚ್ಚು ಖರ್ಚು!

Janardhana Reddy meets CM Siddaramaiah and DCM DK Shivakumar
ರಾಜಕೀಯ27 mins ago

Rajya Sabha Election: ಸಿಎಂ, ಡಿಸಿಎಂ ಭೇಟಿ ಮಾಡಿದ ಜನಾರ್ದನ ರೆಡ್ಡಿ; ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ?

Namma Metro Farmer
ಬೆಂಗಳೂರು28 mins ago

Namma Metro : ಬಟ್ಟೆ ಕ್ಲೀನ್‌ ಇಲ್ಲ ಎಂದು ರೈತನಿಗೆ ಪ್ರವೇಶ ನಿರಾಕರಿಸಿದ ಮೆಟ್ರೋ; ನೆಟ್ಟಿಗರ ಆಕ್ರೋಶ

Siddharth Bodke and Titeeksha Tawade to get married
ಸಿನಿಮಾ31 mins ago

Siddharth Bodke: ಮರಾಠಿ ನಟಿ ತಿತೀಕ್ಷಾ- ʻದೃಶ್ಯಂʼ ನಟ ಸಿದ್ಧಾರ್ಥ್ ಬೋಡ್ಕೆ ಜೋಡಿಯ ಅದ್ಧೂರಿ ಮದುವೆ ಇಂದು

Adani Group- Uber talks for electric passenger cars in India
ದೇಶ35 mins ago

Adani Group: ಎಲೆಕ್ಟ್ರಿಕ್‌ ಪ್ರಯಾಣಿಕ ಕಾರುಗಳಿಗಾಗಿ ಅದಾನಿ ಗ್ರೂಪ್‌- ಉಬರ್ ನಡುವೆ ಮಾತುಕತೆ

FIR against parents of children for bike wheeling
ಬೆಂಗಳೂರು1 hour ago

Bike Wheeling : ಮಕ್ಕಳ ವ್ಹೀಲಿಂಗ್‌ ಶೋಕಿಗೆ ಪೋಷಕರಿಗೆ ದಂಡ

Rajya Sabha Election tomorrow cross voting Fear for congress
ರಾಜಕೀಯ1 hour ago

Rajya Sabha Election: ನಾಳೆ ರಾಜ್ಯಸಭಾ ಕದನ; ಅಡ್ಡಮತದಾನ ಭೀತಿ, ಕೈಗೆ ಫಜೀತಿ! ಲೆಕ್ಕಾಚಾರ ಹೇಗೆ?

Namma Metro purple line
ಬೆಂಗಳೂರು1 hour ago

Namma Metro : ಮೆಟ್ರೋ ಪ್ರಯಾಣಿಕರಿಗೆ ‌Good News; ಈಗ 3 ನಿಮಿಷಕ್ಕೊಂದು ರೈಲು!

Kenneth Mitchell Dies at 49
ಬಾಲಿವುಡ್1 hour ago

Kenneth Mitchell: ‘ಸ್ಟಾರ್ ಟ್ರೆಕ್’, ‘ಕ್ಯಾಪ್ಟನ್ ಮಾರ್ವೆಲ್’ ಖ್ಯಾತಿಯ ನಟ ಕೆನ್ನೆತ್ ಮಿಚೆಲ್ ಇನ್ನಿಲ್ಲ

SRK flaunts his ripped body as he promotes son Aryan
ಬಾಲಿವುಡ್2 hours ago

Shah Rukh Khan: ಬಟ್ಟೆ ಬಿಚ್ಚಿ ಮಗನ ಬ್ರ್ಯಾಂಡ್ ಪ್ರಚಾರ ಮಾಡಿದ ಶಾರುಖ್‌ ಖಾನ್‌!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for february 26 2024
ಭವಿಷ್ಯ7 hours ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್2 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

Varthur Santhosh
ಮಂಡ್ಯ2 days ago

Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

read your daily horoscope predictions for february 24 2024
ಭವಿಷ್ಯ2 days ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಸಿಗಲಿದೆ ಸಂಗಾತಿ ಸಾಥ್‌

Staff nurses attempt to convert at health centre in Ratagal village
ಕಲಬುರಗಿ3 days ago

Forced Conversion : ಆಪರೇಶನ್‌ ಮತಾಂತರ; ನರ್ಸ್‌ಗಳಿಂದ ಹಿಂದೂಗಳ ಬ್ರೈನ್‌ ವಾಶ್‌

Fire breaks out in auto shed Burnt autos
ಬೆಂಗಳೂರು3 days ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

He sent a private photo video of his girlfriend
ಬೆಳಗಾವಿ3 days ago

Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ!

read your daily horoscope predictions for february 23 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು4 days ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

ಟ್ರೆಂಡಿಂಗ್‌