ಬೆಂಗಳೂರು: ಅಕ್ರಮವಾಗಿ ಹಣ ಸಂಗ್ರಹಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ದೆಹಲಿಯಲ್ಲಿರುವ ಇ.ಡಿ ಕಚೇರಿಯಲ್ಲಿ ಡಿಕೆಶಿ ವಿಚಾರಣೆ ಎದುರಿಸಲಿದ್ದಾರೆ.
ಭಾರತ್ ಜೋಡೊ ಯಾತ್ರೆ, ಮೈಸೂರು ಪ್ರವಾಸದ ಬೆನ್ನಲ್ಲಿಯೇ ಇ.ಡಿ ನೋಟಿಸ್ ನೀಡಿದ ಕಾರಣ ಡಿಕೆಶಿ ಅವರು ವಿಚಾರಣೆಗೆ ಹಾಜರಾಗುವುದು ಅನಿವಾರ್ಯವಾಗಿದೆ. ಹಾಗಾಗಿ, ಮೈಸೂರು ಪ್ರವಾಸದಲ್ಲಿರುವ ಅವರು ಬೆಂಗಳೂರಿಗೆ ಆಗಮಿಸಿ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಬಂಧನಕ್ಕೊಳಗಾಗಿದ್ದರು ಹಾಗೂ ಅನೇಕ ಬಾರಿ ವಿಚಾರಣೆಗೂ ಹಾಜರಾಗಿದ್ದರು. ಈಗ ಮತ್ತೆ ವಿಚಾರಣೆಗೆ ಹಾಜರಾಗಬೇಕು ಎಂದು ಇ.ಡಿ ನೋಟಿಸ್ ಜಾರಿ ಮಾಡಿತ್ತು. ನೋಟಿಸ್ ಬಳಿಕ ಡಿ.ಕೆ.ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ | ಡಿ.ಕೆ. ಶಿವಕುಮಾರ್‌ಗೆ ED ಸಂಕಷ್ಟ | ವಾರದಲ್ಲಿ ಹಾಜರಾಗಲು ಸಮನ್ಸ್: ಖಾರವಾಗಿ ಪ್ರತಿಕ್ರಿಯಿಸಿದ ಡಿಕೆಶಿ