Site icon Vistara News

DK Shivakumar : ಡಿ.ಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌; ಹೈಕೋರ್ಟ್‌ ತೀರ್ಪು ಎತ್ತಿಹಿಡಿದ ಸುಪ್ರೀಂಕೋರ್ಟ್‌

DK Shivakumar Big relief

ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ, (Deputy Chief minister) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರಿಗೆ ಸಿಬಿಐ ವಿಚಾರಣೆಗೆ ಸಂಬಂಧಿಸಿ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ (Supreme court big Relief) ನೀಡಿದೆ. ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದ (Enforcement directorate) ತನಿಖೆ ನಡೆಯುತ್ತಿರುವಾಗಲೇ ಇನ್ನೊಂದು ಕಡೆ ಅದೇ ವಿಚಾರದಲ್ಲಿ ಸಿಬಿಐ ತನಿಖೆಗೆ (Central bureau of Investigation) ಆದೇಶ ನೀಡಿದ್ದನ್ನು ಹೈಕೋರ್ಟ್‌ ತಡೆ (Karnataka High court) ಹಿಡಿದಿತ್ತು. ಈ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್‌ ಈಗ ಎತ್ತಿಹಿಡಿದಿದೆ.

ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ, ಸಿ.ಟಿ. ರವಿ ಕುಮಾರ್‌ ಮತ್ತು ಸಂಜಯ್‌ ಕುಮಾರ್‌ ಅವರನ್ನು ಒಳಗೊಂಡ ಪೀಠವು ಈ ಆದೇಶ ನೀಡಿದೆ. ಸಿಬಿಐ ತನಿಖೆಯನ್ನು ತಡೆ ಹಿಡಿದ ರಾಜ್ಯ ಹೈಕೋರ್ಟ್‌ನ ಫೆಬ್ರವರಿ 10ರ ಆದೇಶದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಪೀಠ ಹೇಳಿತು. ಈ ಮೂಲಕ ಅದು ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ರದ್ದುಪಡಿಸಿದೆ.

ಗೊತ್ತಾದ ಆದಾಯ ಮೂಲಕ್ಕಿಂತ ಹೆಚ್ಚಿನ ಆಸ್ತಿ ಸಂಗ್ರಹ ಮಾಡಿದ ಆರೋಪಕ್ಕೆ ಸಂಬಂಧಿಸಿ ಡಿ.ಕೆ. ಶಿವಕುಮಾರ್‌ ವಿರುದ್ಧ ತನಿಖೆಗೆ ಸಿಬಿಐ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ನಾನಾ ಹಂತಗಳಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್‌ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯ ತೆರವಿಗೆ ಹೈಕೋರ್ಟ್‌ಗೆ ಸಿಬಿಐ ಮನವಿ ಸಲ್ಲಿಸಿದೆ. ಆದರೆ, ಹೈಕೋರ್ಟ್‌ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ ಮೊರೆ ಹೊಕ್ಕಿತ್ತು.

ಈ ನಡುವೆ ಒಂದು ಬಾರಿ ಸಿಬಿಐ ಸುಪ್ರೀಂಕೋರ್ಟ್‌ ಮೊರೆ ಹೊಕ್ಕಾಗ ಇದನ್ನು ಹೈಕೋರ್ಟ್‌ನಲ್ಲೇ ಪರಿಹರಿಸಿಕೊಳ್ಳಿ ಎಂದು ಹೇಳಲಾಗಿತ್ತು. ಆಗ ಯಾವುದೇ ತಡೆಯಾಜ್ಞೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್‌ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಲಾಗಿತ್ತು. ಇದೀಗ ಮುಂದಿನ ಹಂತದ ವಿಚಾರಣೆಯಲ್ಲಿ ಸಿಬಿಐಯ ಅರ್ಜಿಯನ್ನೇ ರದ್ದುಪಡಿಸಲಾಗಿದೆ.

ಸಿಬಿಐ ತನಿಖೆಯನ್ನು ಡಿಕೆಶಿ ವಿರೋಧಿಸುತ್ತಿರುವುದೇಕೆ?

1. ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿತ್ತು.

2. ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ಅನುಮತಿಸಿದ್ದನ್ನು ಆಧರಿಸಿ, ತನಿಖಾ ಸಂಸ್ಥೆಯು 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯಿದೆ ಸೆಕ್ಷನ್‌ 13 (2), 13 (1)(ಇ) ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

3. ಇದನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್‌ ಅವರು ಹಿರಿಯ ವಕೀಲ ಉದಯ ಹೊಳ್ಳ ಅವರ ಮೂಲಕ ಕೋರ್ಟ್‌ ಮೊರೆ ಹೊಕ್ಕಿದ್ದರು. ಇದು ರಾಜಕೀಯಪ್ರೇರಿತ ಎಫ್‌ಐಆರ್‌ ಎಂದು ವಾದಿಸಿದ್ದರು.

4. ಈಗಾಗಲೇ ಆದಾಯ ತೆರಿಗೆಗೆ ಸಂಬಂಧಿಸಿದ ಮೂರು ಪ್ರಕರಣಗಳು ಶಿವಕುಮಾರ್ ಅವರ ಪರವಾಗಿವೆ. ಇದು ನಾಲ್ಕನೇ ಎಫ್‌ಐಆರ್. ಜನಪ್ರತಿನಿಧಿಗಳ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಿಸುವ ಮುನ್ನ ವಿಧಾನಸಭಾಧ್ಯಕ್ಷರ ಅನುಮತಿ ಪಡೆಯಬೇಕಿತ್ತು. ಅಂತೆಯೇ, ತನಿಖೆಗೆ ನೀಡಲಾಗಿರುವ ಆಡಳಿತಾತ್ಮಕ ನಿರ್ಧಾರದಲ್ಲಿ ಸಕಾರಣವೂ ಇಲ್ಲ. ಹೀಗಾಗಿ, ತನಿಖೆಗೆ ಶಿಫಾರಸ್ಸು ಮಾಡಲಾದ ಕ್ರಮವನ್ನು ರದ್ದುಗೊಳಿಸಬೇಕು ಎಂದು ಕೋರಿದ್ದರು.

5. ಆರಂಭದಲ್ಲಿ ತಡೆಯಾಜ್ಞೆ ನೀಡದ ಹೈಕೋರ್ಟ್‌ ಬಳಿಕ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಇದನ್ನು ಸಿಬಿಐ ಪ್ರಶ್ನಿಸಿದ್ದರೂ ತಡೆಯಾಜ್ಞೆ ತೆರವಾಗಿರಲಿಲ್ಲ. ಇದಾದ ಬಳಿಕ ಸಿಬಿಐ ಸುಪ್ರೀಂಕೋರ್ಟ್‌ ಮೊರೆ ಹೊಕ್ಕಿತ್ತು. ಈಗ ಅಲ್ಲಿಯೂ ಅರ್ಜಿ ವಜಾ ಆಗಿದೆ.

ಹಿಂದಿನ ಸುದ್ದಿ : DK Shivakumar: ಡಿ.ಕೆ. ಶಿವಕುಮಾರ್‌ಗೆ ಬಿಗ್‌ ರಿಲೀಫ್‌; ಆದಾಯ ಮೀರಿ ಆಸ್ತಿ ಪ್ರಕರಣದ ತಡೆಯಾಜ್ಞೆ ವಿಸ್ತರಣೆ

Exit mobile version