Site icon Vistara News

Ayushman Bharath: ಆಯುಷ್ಮಾನ್‌ ಭಾರತ್‌ ಹೆಲ್ತ್‌ ಕಾರ್ಡ್‌ಗೆ ಈ ದಾಖಲೆಗಳು ಕಡ್ಡಾಯ; 5 ಲಕ್ಷ ರೂ. ಸೌಲಭ್ಯಕ್ಕೆ ಕೂಡಲೇ ನೋಂದಾಯಿಸಿ!

Karnataka government health card

ಬೆಂಗಳೂರು: ಬಡವರಿಗೆ, ಮಧ್ಯಮ ವರ್ಗದವರಿಗೆ ಅನುಕೂಲವಾಗಲೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ಕಾರ್ಡ್‌ ಯೋಜನೆಗಳನ್ನು ಹೊರತಂದಿವೆ. ಈಗಾಗಲೇ ಇರುವ ಆಯುಷ್ಮಾನ್ ಭಾರತ್ (Ayushman Bharath) – ಆರೋಗ್ಯ ಕರ್ನಾಟಕ (Arogya Karnataka) ಹೆಲ್ತ್ ಕಾರ್ಡ್‌ಗಳಿಗೆ (Health Card) ಈಗ ಹೊಸ ರೂಪ ಸಿಕ್ಕಿದೆ. ಅಲ್ಲದೆ, ಬರೋಬ್ಬರಿ 5 ಲಕ್ಷ ರೂಪಾಯಿವರೆಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಹೀಗಾಗಿ ನೋಂದಣಿ ಮಾಡಿಸದೇ ಇದ್ದವರು ಕೂಡಲೇ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಹೇಳಿದೆ. ಇದಕ್ಕೆ ಕೆಲವೊಂದು ದಾಖಲೆಗಳನ್ನು ಕಡ್ಡಾಯಗೊಳಿಸಲಾಗಿದೆ.

ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಮರು ನಾಮಕರಣಗೊಂಡಿರುವ ಈ ಕಾರ್ಡ್‌ನ ವೈಶಿಷ್ಟ್ಯತೆ ಎಂದರೆ, ಇದರ ಮೂಲಕ ದೇಶದ ಯಾವುದೇ ಕಡೆ (ನೋಂದಾಯಿತ) ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.

ಈ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಡಿಸೆಂಬರ್‌ 6ರಂದು ಬಿಡುಗಡೆ ಮಾಡಿದ್ದಾರೆ. ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಹೆಲ್ತ್ ಕಾರ್ಡ್‌ ಅನ್ನು ರಾಜ್ಯದ 5.9 ಕೋಟಿ ಜನರಿಗೆ ವಿತರಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದೆ.‌

Ayushman Bharat Arogya Karnataka Health Card

ಯಾವೆಲ್ಲ ದಾಖಲೆಗಳು ಬೇಕು?

ಸುಲಭವಾಗಿ ನೋಂದಾಯಿಸಿ

ಆಯುಷ್ಮಾನ್‌ ಭಾರತ್‌ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-branded ಗುರುತಿನ ಚೀಟಿಗಳಾಗಿದ್ದು, Co-branded ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.‌ ‌

ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ.

ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರಿಕ ಸೇವಾ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೋಂದಾಯಿಸಿ ಪಡೆಯಬಹುದಾಗಿರುತ್ತದೆ. ಹೀಗಾಗಿ ಅಗತ್ಯ ದಾಖಲೆಗಳೊಂದಿಗೆ ಕೂಡಲೇ ಹೋಗಿ ಆರೋಗ್ಯ ಕಾರ್ಡ್‌ ಅನ್ನು ಉಚಿತವಾಗಿ ಪಡೆಯಿರಿ.

ಇತರೆ ರಾಜ್ಯಗಳಲ್ಲಿ ಚಿಕಿತ್ಸೆ ಪಡೆಯಬಹುದು

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್‌ಗೆ ನೂತನ ಹೆಲ್ತ್ ಕಾರ್ಡ್‌ಗಳನ್ನು ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್‌ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

6 ತಿಂಗಳಲ್ಲಿ 5.09 ಕೋಟಿ ಮಂದಿಗೆ ಕಾರ್ಡ್‌ ವಿತರಣೆ ಗುರಿ

ರಾಜ್ಯದಲ್ಲಿರುವ ಒಟ್ಟು 5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಕಾರ್ಡ್‌ ಸೃಜನೆ ಮತ್ತು ವಿತರಣಾ ಗುರಿಯನ್ನು ಹೊಂದಲಾಗಿದೆ.

ರಾಜ್ಯದ ಪಾಲು ಶೇ.66 ಮತ್ತು ಕೇಂದ್ರದ ಪಾಲು ಶೇ. 34

ಈ ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು ಶೇ.66 ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು 34% ನೀಡುತ್ತಿದೆ.

Ayushman Bharat Arogya Karnataka Health Card

ವಾರ್ಷಿಕ 5 ಲಕ್ಷ ರೂ. ಮೌಲ್ಯದ ಚಿಕಿತ್ಸೆ ಪಡೆಯಬಹುದು

ಈ ಯೋಜನೆಯಡಿಯಲ್ಲಿ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ರೂ. ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌

ಎಪಿಎಲ್‌ನವರಿಗೆ ಗರಿಷ್ಠ ರೂ.1.5 ಲಕ್ಷ ವೆಚ್ಚ ಪಾವತಿ

APL ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, APL ಕುಟುಂಬಗಳಿಗೆ 5 ಲಕ್ಷದ ರೂ. ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನು ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡುದಾರರು ಶೇ. 70 ರಷ್ಟು ಚಿಕಿತ್ಸಾ ವೆಚ್ಚವನ್ನು ಪಾವತಿಸಿದರೆ, ಶೇ.30ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

1650 ಚಿಕಿತ್ಸಾ ಪ್ಯಾಕೇಜ್‌ಗಳು ಲಭ್ಯ

ಪ್ರಸ್ತುತ ರಾಜ್ಯದಲ್ಲಿ 3450ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು “ಆಯುಷ್ಮಾನ್‌ ಭಾರತ್- “ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಯೋಜನೆಯಲ್ಲಿ ಸೇವೆ ನೀಡಲು ನೋಂದಾಯಿಸಿಕೊಂಡಿರುತ್ತಾರೆ. ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲ ಸಾರ್ವಜನಿಕ ಆಸ್ಪತ್ರೆ ಮತ್ತು 540 ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ. 171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಹಾಕಿಸಿಲ್ವಾ? ಕೂಡಲೇ ಈ ಕೆಲಸ ಮಾಡಿ!

60:40 ಅನುಪಾತದಲ್ಲಿ ಅನುದಾನ

ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಎಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.

Exit mobile version