ತುಮಕೂರು: ಕುಣಿಗಲ್ನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಮಗುವಿನ ಮೇಲೆ ಏಕಾಏಕಿ ಬೀದಿನಾಯಿಯೊಂದು (Dog Attack) ದಾಳಿ ಮಾಡಿದೆ. ನಾಯಿ ದಾಳಿ ಮಾಡುವ ದೃಶ್ಯ ಸಿಸಿಟಿವಿ (CCtv Footage) ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸುಪೀಯಾ (4) ಬೀದಿನಾಯಿ ದಾಳಿಗೊಳಗಾದ ಮಗು. ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ 17ನೇ ವಾರ್ಡ್ನಲ್ಲಿ ಈ ಘಟನೆ ನಡೆದಿದೆ. ಸುಪ್ರೀಯಾ ಮನೆ ಮುಂದೆ ಆಟವಾಡುತ್ತಾ ನಿಂತಿದ್ದಳು.
ಈ ವೇಳೆ ಪಕ್ಕದ ರಸ್ತೆಯಿಂದ ನಾಯಿ ಓಡಿ ಬಂದಿದೆ. ನಾಯಿ ಕಂಡು ಸುಪ್ರೀಯಾ ಪಕ್ಕಕ್ಕೆ ಸರಿದು ನಿಲ್ಲಲು ಮುಂದಾಗಿದ್ದು, ಈ ವೇಳೆ ಏಕಾಏಕಿ ಆಕೆ ಮೇಲೆ ದಾಳಿ ನಡೆಸಿದೆ.
ಮಗುವಿನ ಕೂಗಾಟ ಕೇಳಿ ಅಲ್ಲೆ ಇದ್ದ ಇತರೆ ಮಕ್ಕಳು ಹಾಗೂ ಸ್ಥಳೀಯರು ಕೂಡಲೇ ನಾಯಿಯನ್ನು ಓಡಿಸಿದ್ದಾರೆ. ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಗಂಭೀರ ಗಾಯಗೊಂಡಿರುವ ಸುಪ್ರೀಯಾಗೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೀದಿನಾಯಿಗಳನ್ನು ಹಿಡಿಯುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
ನಾಯಿ ದಾಳಿ ವಿಡಿಯೊ ಇಲ್ಲಿ ನೋಡಿ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ