ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಸಿಕ್ಕ ಸಿಕ್ಕವರ ಮೇಲೆ ಎರಗಿ ದಾಳಿ ಮಾಡಿದ್ದ ಹುಚ್ಚುನಾಯಿಯನ್ನು (Dog menace) ಸ್ಥಳೀಯರು ಕೊಂದು ಹಾಕಿರುವ ಘಟನೆ ನಡೆದಿದೆ. ಬೀದಿ ನಾಯಿಗಳ ಕಾಟ ಒಂದು ಕಡೆಯಾದರೆ ಮತ್ತೊಂದು ಕಡೆ ಹುಚ್ಚುನಾಯಿ ಹಾವಳಿಗೆ ಜನರು ಬೇಸತ್ತು ಹೋಗಿದ್ದರು.
ಡಿ.23ರ ಶುಕ್ರವಾರ ಒಂದೇ ಏರಿಯಾದ 21 ಜನರ ಮೇಲೆ ಹುಚ್ಚು ನಾಯಿಯೊಂದು ದಾಳಿ ಮಾಡಿತ್ತು. ನಾಯಿ ದಾಳಿಯಿಂದ ಸ್ಥಳೀಯರು ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿತ್ತು. ಶುಕ್ರವಾರ ಸಂಜೆ ಸರಣಿ ದಾಳಿ ಬಳಿಕ ಸ್ಥಳೀಯರೆಲ್ಲೂ ಸೇರಿ ಹುಚ್ಚು ನಾಯಿಗಾಗಿ ಹುಡುಕಾಡಿದರೂ ಸಿಗದೆ ಓಡಾಡುತ್ತಿತ್ತು. ಶನಿವಾರ ಬೆಳಗ್ಗೆ ಹುಚ್ಚು ನಾಯಿಯನ್ನು ಕಂಡ ಕೂಡಲೆ ಹಿಡಿದು ಕೊಂದಿದ್ದಾರೆ.
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ
ಚಿಕ್ಕನಾಯಕನಹಳ್ಳಿ ಪಟ್ಟಣದ ವಿದ್ಯಾನಗರದಲ್ಲಿ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಎಗರಿ ಹುಚ್ಚು ನಾಯಿಯೊಂದು ದಾಳಿ ಮಾಡಿತ್ತು. ಸರ್ಕಾರಿ ಶಾಲೆಯ ಮೂವರು ಹಾಗೂ ಎಸ್‌ಎಂಎಸ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 21 ಜನರಿಗೆ ಹುಚ್ಚು ನಾಯಿ ಕಡಿದಿದೆ. ಗಾಯಾಳುಗಳನ್ನು ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ | Karnataka Election | ಜೆಡಿಎಸ್ ಹೈಕಮಾಂಡ್‌ಗೆ ಬಗ್ಗದ ಹಾಸನ ಹೈಕಮಾಂಡ್: ರೇವಣ್ಣ ಹಠಕ್ಕೆ ಕುಮಾರಸ್ವಾಮಿ ಸುಸ್ತು !