Dog Missing | ಮನೆ ಸದಸ್ಯನಂತಿದ್ದ ಪ್ರೀತಿಯ ಶ್ವಾನ ಮಿಸ್ಸಿಂಗ್; ಹುಡುಕಿಕೊಟ್ಟವರಿಗೆ 20 ಸಾವಿರ ರೂ. ಬಹುಮಾನ ಘೋಷಿಸಿದ ಮಾಲೀಕರು - Vistara News

ಕರ್ನಾಟಕ

Dog Missing | ಮನೆ ಸದಸ್ಯನಂತಿದ್ದ ಪ್ರೀತಿಯ ಶ್ವಾನ ಮಿಸ್ಸಿಂಗ್; ಹುಡುಕಿಕೊಟ್ಟವರಿಗೆ 20 ಸಾವಿರ ರೂ. ಬಹುಮಾನ ಘೋಷಿಸಿದ ಮಾಲೀಕರು

ಕುಟುಂಬದ ಸದಸ್ಯನಾಗಿದ್ದ ಶ್ವಾನವೊಂದು (Dog Missing) ತಪ್ಪಿಸಿಕೊಂಡಿದ್ದು, ಹುಡುಕಿ ಕೊಟ್ಟವರಿಗೆ 20 ಸಾವಿರ ರೂ. ಬಹುಮಾನವನ್ನು ಕೊಡುವುದಾಗಿ ಬೆಂಗಳೂರು ನಿವಾಸಿಯೊಬ್ಬರು ಘೋಷಣೆ ಮಾಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಾಕಿಂಗ್​ಗೆ ಕರೆದುಕೊಂಡು ಹೋಗಿದ್ದಾಗ ತಪ್ಪಿಸಿಕೊಂಡ (Dog Missing) ಶ್ವಾನಕ್ಕಾಗಿ ಸತತ ಒಂದು ತಿಂಗಳಿನಿಂದ ಕುಟುಂಬವೊಂದು ಹುಡುಕಾಟ ನಡೆಸುತ್ತಿದೆ. ಉಡುಗೊರೆಯಾಗಿ ಬಂದಿದ್ದ ಶ್ವಾನವನ್ನು ಕಳೆದುಕೊಂಡ ಕುಟುಂಬದವರು ದುಃಖದಲ್ಲೇ ದಿನದೂಡುತ್ತಿದ್ದಾರೆ. ಸದ್ಯ ನಮ್ಮ ಶ್ವಾನವನ್ನು ಹುಡುಕಿಕೊಟ್ಟರೆ 20 ಸಾವಿರ ರೂ. ಬಹುಮಾನ ಕೊಡುವುದಾಗಿ ಘೋಷಿಸಿದ್ದಾರೆ.

Dog Missing

ಇಲ್ಲಿನ ಬಾಣಸವಾಡಿಯ ಓಎಂಬಿಆರ್‌ ಲೇಔಟ್‌ನ ನಿವಾಸಿ ಅರುಣ್​ ಹಾಗೂ ಡೀನಾ ದಂಪತಿ ತಮ್ಮ ಮುದ್ದಾದ ಶ್ವಾನ ಲುಕಾವನ್ನು ಹುಡುಕಿಕೊಂಡುವಂತೆ ಮನವಿ ಮಾಡಿದ್ದಾರೆ. ಡಿಸೆಂಬರ್​ 7ರ ಬೆಳಗಿನ ಜಾವ ಬೀದಿಯಲ್ಲಿ ವಾಕಿಂಗ್‌ ಮಾಡಲು ಹೋದ ಲುಕಾ ಮತ್ತೆ ಮರಳಿ ಮನೆಗೆ ಬರಲಿಲ್ಲ. ಒಂದು ತಿಂಗಳವರೆಗೂ ಈ ಕುಟುಂಬ ಇಡೀ ಲೇಔಟ್​ ಹುಡುಕಾಡಿದರೂ ಶ್ವಾನದ ಸುಳಿವು ಮಾತ್ರ ಸಿಕ್ಕಿಲ್ಲ.

Dog Missing

ಮಕ್ಕಳೊಂದಿಗೆ ಮಗುವಾಗಿ, ಮನೆ ಮಂದಿಗೆಲ್ಲ ಅಚ್ಚುಮೆಚ್ಚಾಗಿದ್ದ ಲುಕಾ ಈಗ ಮನೆಯಲ್ಲಿ ಇಲ್ಲದೇ ಇರುವುದರಿಂದ ಮಕ್ಕಳು ಸೇರಿ ಎಲ್ಲರೂ ದುಃಖದಲ್ಲಿದ್ದಾರೆ. ಪೊಲೀಸ್​ ಠಾಣೆಗೂ ಈ ಸಂಬಂಧ ದೂರು​ ನೀಡಿರುವ ಕುಟುಂಬ, ತಮ್ಮ ಪ್ರೀತಿಯ ನಾಯಿಯನ್ನು ಹುಡುಕಿ ಕೊಟ್ಟವರಿಗೆ 20 ಸಾವಿರ ಬಹುಮಾನ ಕೊಡುವುದಾಗಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ | Organ Donation | ಬೈಕ್‌ ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

Murder Case: ದೊಡ್ಡವರ ಜಗಳದಲ್ಲಿ ಪ್ರಪಂಚ ನೋಡದ ಮಗುವೊಂದು ಕಣ್ಮುಚ್ಚಿದೆ. ಹಣಕಾಸಿನ ವಿಷಯಕ್ಕೆ ನಡೆದ ಎರಡು ಕುಟುಂಬಗಳ ನಡುವಿನ ಗಲಾಟೆಯು ತಾರಕಕ್ಕೇರಿದ್ದು, ಮೂರು ವರ್ಷದ ಮಗುವಿನ ಮೇಲೆ ಕಾಲಿಟ್ಟು ಹತ್ಯೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

VISTARANEWS.COM


on

By

Murder case in Belgavi
Koo

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು (murder Case) ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ.

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

ಧಾರವಾಡ: ಪತ್ನಿ ಮೇಲೆ ಸಂಶಯ ಪಟ್ಟ ಪಾಪಿ ಪತಿಯೊಬ್ಬ ಕೊಂದೆ (Murder Case) ಬಿಟ್ಟಿದ್ದಾನೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದವನು.

ಶುಕ್ರವಾರ ರಾತ್ರಿ ಕುಡಿದು ಬಂದ ಶಿವಪ್ಪ ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ನಂತರ ಶನಿವಾರ ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ನಿತ್ಯ ಪತ್ನಿ ಮೇಲೆ ಸಂಶಯ ಪಡುತ್ತಿದ್ದ. ಶುಕ್ರವಾರ ರಾತ್ರಿಯಿಡೀ ಜಗಳ ಮಾಡಿ ಬೆಳಗ್ಗೆ ಸಿಟ್ಟಿನಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿಯೇ ಇದ್ದ.

ಅಕ್ಕ-ಪಕ್ಕದ ಮನೆಯವರು ಬಂದು ನೋಡಿದಾಗ ರಕ್ತಸಿಕ್ತವಾಗಿ ಬಿದ್ದಿದ್ದ ಮಲ್ಲವ್ವಳನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಯಾದ ಜಾಗದಲ್ಲೇ ಕುಳಿತಿದ್ದ ಶಿವಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ

ತುಮಕೂರಿನಲ್ಲಿ ಮಹಿಳೆ ಶವ ಪತ್ತೆ

ತಲೆ ಜಜ್ಜಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಮಲಮ್ಮ (35) ಕೊಲೆಯಾದವರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಕರೆಮಾದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕರೆಮಾದೇನಹಳ್ಳಿ ಗ್ರಾಮದ ಚಂದ್ರಣ್ಣನ ಪತ್ನಿ ಕಮಲಮ್ಮ ತಡರಾತ್ರಿ ಹೊರಗೆ ಹೋಗಿದ್ದರು. ಈ ವೇಳೆ ಯಾರೋ ಹಂತಕರು ಕಲ್ಲಿನಿಂದಲ್ಲೋ ಅಥವಾ ಮಾರಾಕಸ್ತ್ರದಿಂದಲ್ಲೋ ತಲೆ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈ ಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಏಪ್ರಿಲ್‌ 29ರಂದು ಮರು ಮತದಾನ ನಡೆಸಲು ಚುನಾವಣೆ ಆಯೋಗ ಆದೇಶಿಸಿದೆ. ಏಪ್ರಿಲ್‌ 26ರಂದು ಮತಗಟ್ಟೆಯಲ್ಲಿ ಗಲಾಟೆ ನಡೆದು, ಇವಿಎಂ ಧ್ವಂಸಗೊಳಿಸಿದ ಕಾರಣ ಮತದಾನ ನಡೆದಿರಲಿಲ್ಲ. ಹಾಗಾಗಿ, ಮರು ಮತದಾನ ಘೋಷಿಸಲಾಗಿದೆ.

VISTARANEWS.COM


on

Chamarajanagar
Koo

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಶುಕ್ರವಾರ (ಏಪ್ರಿಲ್‌ 26) ಗಲಾಟೆ ನಡೆದು, ಚುನಾವಣೆ ಮತಯಂತ್ರವನ್ನು (EVM) ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು (Election Commission) ಏಪ್ರಿಲ್‌ 29ರಂದು ಮರು ಮತದಾನ ನಡೆಸಲು ತೀರ್ಮಾನಿಸಿದೆ. ಕ್ಷೇತ್ರ ಚುನಾವಣಾಧಿಕಾರಿಗಳ ಬಳಿ ವರದಿ ಪಡೆದ ಚುನಾವಣಾ ಆಯೋಗವು, ಮರು ಮತದಾನ (Re-election) ನಡೆಸಲು ತೀರ್ಮಾನಿಸಿದೆ. ಹಾಗಾಗಿ, ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ ನಡೆಯಲಿದೆ.

ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು

ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದರು. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿತ್ತು. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದರು. ಇದರಿಂದಾಗಿ ಚುನಾವಣೆ ನಡೆದಿರಲಿಲ್ಲ.

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿತ್ತು. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದರು. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿದ್ದವು. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸಿಕೆರೆ ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರ ಮಾಡಲಾಗಿದೆ. ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಕೇವಲ ಇಬ್ಬರು ಮತದಾನ ಮಾಡಿದ್ದಾರೆ. ಉಳಿದಂತೆ ಮತಗಟ್ಟೆಗಳತ್ತ ಯಾರೊಬ್ಬರೂ ಸುಳಿದಿಲ್ಲ. ಎಷ್ಟೇ ಬಾರಿ ಮನವಿ ಮಾಡಿದರೂ ಈ ಗ್ರಾಮಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಅದಾದ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದರು. ಇದೇ ವೇಳೆ ಗಲಾಟೆ ನಡೆದಿತ್ತು.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Continue Reading

ಬೆಂಗಳೂರು

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Film festival: ಮೇ 4 ಮತ್ತು 5ರಂದು‌ ಬೆಂಗಳೂರಿನ ಭಾರತೀಯ ವಿದ್ಯಾಭವನ ಹಾಗೂ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಪ್ಯಾಸಾ, ಕಾಗಜ್‌ ಕೆ ಫೂಲ್‌, Mr&Mrs 55, ಆರ್‌ ಪಾರ್‌ ಚಿತ್ರಗಳ ಪ್ರದರ್ಶನ ನಡೆಯಲಿದೆ. ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Film Festival
Koo

ಬೆಂಗಳೂರು: ರೋಟರಿ ನೀಡೀ ಹಾರ್ಟ್‌ ಫೌಂಡೇಶನ್‌ ವತಿಯಿಂದ ಮೇ 4 ಮತ್ತು 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ (Film festival) ಕಾರ್ಯಕ್ರಮವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಹಿಂದಿ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಚಲನಚಿತ್ರಗಳ ಕಲೆ ಮತ್ತು ಆತ್ಮಾವಲೋಕನ ನಡೆಯಲಿದೆ.

ಭಾರತೀಯ ವಿದ್ಯಾಭವನದಲ್ಲಿ ಮೇ 4ರಂದು ಬೆಳಗ್ಗೆ 10ಗಂಟೆಯಿಂದ ವಿ.ಕೆ.ಮೂರ್ತಿಯವರ ಛಾಯಾಗ್ರಹಣ ಕುರಿತು ಜಿ.ಎಸ್‌.ಭಾಸ್ಕರ್‌ ಅವರ ಸಂವಾದ ಇರಲಿದೆ. ಭಾರತೀಯ ವಿದ್ಯಾಭವನ ಹಾಗೂ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಪ್ಯಾಸಾ, ಕಾಗಜ್‌ ಕೆ ಫೂಲ್‌, Mr&Mrs 55, ಆರ್‌ ಪಾರ್‌ ಚಿತ್ರಗಳ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್ ಮಾಧ್ಯಮ ಸಹಯೋಗ ನೀಡಿದೆ.

ನಿರ್ಗತಿಕರು ಹಾಗೂ ಬಡವರ ಹೃದಯ ಶಸ್ತ್ರಚಿಕಿತ್ಸೆಗಳಿಗೆ ನೆರವಾಗುವ ಉದ್ದೇಶದಿಂದ ರೋಟರಿ ನೀಡೀ ಹಾರ್ಟ್‌ ಫೌಂಡೇಶನ್‌ ಈ ಕಾರ್ಯಕ್ರಮ ಆಯೋಜಿಸಿದ್ದು, ಪ್ರವೇಶದ ಡೋನರ್‌ ಪಾಸ್‌ಗಳ ದರ 2000 ರೂ., 1500 ರೂ. ಹಾಗೂ 800 ರೂ., ಡೆಲಿಗೇಟ್‌ ಪಾಸ್‌ 500 ರೂ. ಇರಲಿದೆ.

ಸಂಗೀತ ರಸ ಸಂಜೆ

ಭಾರತೀಯ ವಿದ್ಯಾಭವನದಲ್ಲಿ ಶನಿವಾರ (ಮೇ 4ರಂದು) ಸಂಜೆ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ. ನಿರ್ವಾಹಕರಾದ ನರಸಿಂಹನ್‌ ಕಣ್ಣನ್‌, ಶಾರದಾ ಶೆನೊಯ್‌, ಗಾಯಕರಾದ ರಾಮ ತೀರಥ್‌, ಸಮನ್ವಿತಾ ಶರ್ಮಾ, ಶ್ರುತಿ ಬಿಡೆ, ಗೋವಿಂದ್‌ ಕರ್ನೂಲ್‌, ನರಸಿಮ್ಮನ್‌ ಕಣ್ಣನ್‌, ವಾದ್ಯ ವೃಂದ ಕಲಾವಿದರಾದ ಪ್ರದೀಪ್‌ ಪಾಟ್ಕರ್‌ ಮತ್ತು ಸಂಘವು ಕಾರ್ಯಕ್ರಮ ನಡೆಸಿಕೊಡಲಿದೆ. ಕಾರ್ಯಕ್ರಮದ ಡೋನರ್‌ ಪಾಸ್‌ ದರ 2000 ರೂ., 1500 ರೂ. ಹಾಗೂ 800 ರೂ. ಇದೆ.

ಕಾರ್ಯಕ್ರಮಕ್ಕೆ ಆಗಮಿಸುವವರು ಪಾಸ್‌ಗಳಿಗಾಗಿ ರೋ.ಮನೋಜ್‌ ಅಗರ್ವಾಲ್-9845012716‌, ರೋ. ಹರಿ ಪಬ್ಬತ್ತಿ-9663305911, ರೋ.ರಾಜಾರಾಂ ಕೃಷ್ಣಮೂರ್ತಿ-9980009398 ಸಂಪರ್ಕಿಸಬಹುದು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
karnataka weather Forecast
ಮಳೆ11 mins ago

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Home Remedy For Cracked Heels
ಆರೋಗ್ಯ23 mins ago

Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

IPL 2024
ಕ್ರೀಡೆ31 mins ago

IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

Ujjwal Nikam
ದೇಶ32 mins ago

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Money Guide
ಮನಿ-ಗೈಡ್39 mins ago

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Murder case in Belgavi
ಬೆಳಗಾವಿ47 mins ago

Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

Chamarajanagar
ಪ್ರಮುಖ ಸುದ್ದಿ1 hour ago

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

Film Festival
ಬೆಂಗಳೂರು1 hour ago

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Parineeti Chopra talks about initial struggles in the Industry
ಬಾಲಿವುಡ್1 hour ago

Parineeti Chopra: ವೃತ್ತಿ ಜೀವನದ ಆರಂಭಿಕ ದಿನಗಳನ್ನು ನೆನೆದು ಭಾವುಕರಾದ ಪರಿಣಿತಿ ಚೋಪ್ರಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20242 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ6 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌