Site icon Vistara News

Guest Lecturer | ಶೈಕ್ಷಣಿಕ ಅವಧಿ ಮಧ್ಯೆಯೇ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಕೈ ಬಿಡಬೇಡಿ: ಪ್ರತಿಭಟನೆ

Guest Lecturer protest National Education Policy

ಶಿವಮೊಗ್ಗ: ಕಾಲೇಜು ಶಿಕ್ಷಣ ಇಲಾಖೆಯ ಶೈಕ್ಷಣಿಕ ಅವಧಿ ಮಧ್ಯದಲ್ಲಿ ಅತಿಥಿ ಉಪನ್ಯಾಸಕರನ್ನು (Guest Lecturer) ಸೇವೆಯಿಂದ ಬಿಡುಗಡೆ ಮಾಡುವುದನ್ನು ವಿರೋಧಿಸಿ ಮತ್ತು ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಬೆಂಗಳೂರು ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಂಗಳವಾರ (ಡಿ.೨೭) ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ 430 ಸರ್ಕಾರಿ ಕಾಲೇಜುಗಳಿದ್ದು, 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ 2 ದಶಕಗಳಿಂದ ಶೇ.80ರಷ್ಟು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಸರ್ಕಾರ ಕಾಯಂ ಪ್ರಾಧ್ಯಾಪಕರ ನೇಮಕಾತಿ ಸಂದರ್ಭದಲ್ಲಿ 1977ರ 14ರ ನೇಮಕಾತಿ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ತರಗತಿಯನ್ನು 40-60ರ ಪ್ರಕಾರ ವಿಭಜಿಸಿ ಕಾರ್ಯಭಾರ ಹೆಚ್ಚಿಸಬೇಕು. ಈ ಬೇಡಿಕೆಗಳನ್ನು ಈಡೇರಿಸುವ ತನಕ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಕೈ ಬಿಡಬಾರದು ಎಂದು ಸಮಿತಿ ಒತ್ತಾಯಿಸಿತು. ಸಮಿತಿಯ ರಾಜ್ಯಾಧ್ಯಕ್ಷ ಡಾ.ಸೋಮಶೇಖರ ಎಚ್. ಶಿಮೊಗ್ಗಿ, ರಾಜ್ಯ ಖಜಾಂಚಿ ರಾಜೇಶ್ ಕುಮಾರ್ ಕೆ., ಸರ್ವಜ್ಞ, ಮೂರ್ತಿ ಎಸ್., ಕವಿತಾ, ಪರಿಮಳ ಶಿಕಾರಿಪುರ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ | Prahlad Modi | ಬಂಡೀಪುರಕ್ಕೆ ಹೊರಟಿದ್ದ ಪ್ರಹ್ಲಾದ್‌ ಮೋದಿ ಕುಟುಂಬದ ಕಾರು ಅಪಘಾತ; ಮಗುವಿನ ಕಾಲು ಮೂಳೆ ಕಟ್‌, ಉಳಿದವರು ಪಾರು

Exit mobile version