ದಾವಣಗೆರೆ: ಸಚಿವರಾದ ಕೆ.ಸಿ. ನಾರಾಯಣಗೌಡ (Narayana Gowda) ಹಾಗೂ ವಿ. ಸೋಮಣ್ಣ (V Somanna) ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ನಾನು ಉತ್ತರಿಸಲ್ಲ. ಈ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ಕೇಳಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಕಾಂಗ್ರೆಸ್ ಮೊದಲ ಪಟ್ಟಿ ಮಾರ್ಚ್ 17ಕ್ಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು.
ಹೊನ್ನಾಳಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಏನೂ ಆಗುವುದಿಲ್ಲ. ಕಳೆದ ಬಾರಿ ಕೂಡಾ ಬಂದಿದ್ದರು ಎಂದು ಹೇಳಿದರು.
ಇದನ್ನೂ ಓದಿ: Ramesh Jarkiholi: ಡಿಕೆಶಿ ಸಿಡಿ ಇಟ್ಟುಕೊಂಡು ಕೂತಿದ್ದಾನೆ; ಸಚಿವರನ್ನೂ ಬ್ಲ್ಯಾಕ್‌ಮೇಲ್ ಮಾಡ್ತಿದ್ದಾನೆ: ರಮೇಶ್ ಜಾರಕಿಹೊಳಿ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮಂಜೂರು ಮಾಡಿಸಿದ್ದು ನಾನೇ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಜೂರು ಮಾಡಿಸಿದ್ದು ನಾನು. ಆಸ್ಕರ್ ಫರ್ನಾಂಡಿಸ್ ಅವರು ಕೇಂದ್ರದಲ್ಲಿ ಸಚಿವರಾಗಿದ್ದಾಗ ನಾನೇ ಮಂಜೂರು ಮಾಡಿಸಿದ್ದೆ. ಈಗ ಬಿಜೆಪಿಯವರು ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯ ಹೆದ್ದಾರಿ ಇರುವುದು ರಾಷ್ಟ್ರೀಯ ಹೆದ್ದಾರಿ ಆಗಿದ್ದು ಯಾವಾಗ ಎಂಬ ಚರ್ಚೆಗೆ ಬಿಜೆಪಿಯವರು ಬರಲಿ. ಗೊತ್ತಿಲ್ಲ ಅಂದರೆ ಎನು ಮಾಡೋಕೆ ಆಗುತ್ತದೆ. ರಾಷ್ಟ್ರೀಯ ಹೆದ್ದಾರಿಗೆ ಅಡಿಗಲ್ಲು ಹಾಕಿದ್ದು ನಾನೇ. ಆದರೆ, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅಪೂರ್ಣವಾಗಿದೆ. ಆದರೂ ಚುನಾವಣೆ ಕಾರಣಕ್ಕೆ ಈಗ ಉದ್ಘಾಟನೆ ಮಾಡಿದ್ದಾರೆ. ಪ್ರತಾಪ್ ಸಿಂಹಗೆ ಹೈವೇ ಬರುವುದು ಕೇವಲ ಏಳು ಕಿಲೋ ಮೀಟರ್ ಮಾತ್ರ. ಮಾತು ಎತ್ತಿದ್ದರೆ ಪ್ರತಾಪ್ ಸಿಂಹ.. ಪ್ರತಾಪ್ ಸಿಂಹ ಎನ್ನುತ್ತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ರಾಹುಲ್ ಬಿಜೆಪಿ ಬೈದರೆ ದೇಶದ ಮಾನ ಹೇಗೆ ಹೋಗತ್ತೆ?
ಕಾಂಗ್ರೆಸ್ ರಾಹುಲ್ ಗಾಂಧಿ ಹೊರ ದೇಶದಲ್ಲಿ ಬೈದಿದ್ದು ಬಿಜೆಪಿಯವರನ್ನು ಮಾತ್ರ. ಬಿಜೆಪಿಯವರನ್ನು ಬೈದರೆ ದೇಶದ ಮಾನ ಹೇಗೆ ಹೋಗುತ್ತದೆ? ಮೇಲಾಗಿ ಇವರ ಆಳ್ವಿಕೆಯಲ್ಲಿ ದೇಶದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದಿದೆ. ಇವರಿಗೆ ಮಾನ ಮಾರ್ಯಾದೆ ಇದೆಯಾ? ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕಿತ್ತು. ಜತೆಗೆ ಪಕ್ಷದಿಂದ ಉಚ್ಚಾಟನೆ ಮಾಡಬೇಕಿತ್ತು. ಆದರೂ ಇವರು ಏಕೆ ಮಾಡಿಲ್ಲ? ಇವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ. ಅವರಿಗೆ ರಕ್ಷಣೆ ಕೊಡುತ್ತಿದ್ದಾರೆ. ಬಿಜೆಪಿಯವರು ಭ್ರಷ್ಟಾಚಾರದ ಪರ ಇದ್ದಾರೆ. ಏನು ಅಭಿವೃದ್ಧಿ ಆಗಿದೆ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಇದನ್ನೂ ಓದಿ: Illicit relationship: ಪೊಲೀಸ್ ಕಾನ್ಸ್‌ಟೇಬಲ್ ಪತ್ನಿಯೊಂದಿಗೆ IPS ಅಧಿಕಾರಿಯ ಅನೈತಿಕ ಸಂಬಂಧ; ದೂರು ದಾಖಲು
ಸಂಸದೆ ಸುಮಲತಾಗೆ ಸಿದ್ದರಾಮಯ್ಯ ಸವಾಲು
ಸಂಸದೆ ಸುಮಲತಾ ಅವರು ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿಯಾಗಿದೆ ಎಂದು ಹೇಳುತ್ತಿದ್ದಾರೆ. ಅವರು ಹೇಳುವ ಪ್ರಕಾರ ಏನು ಅಭಿವೃದ್ಧಿ ಆಗಿದೆ? ಬೇಕಾದರೆ ಚರ್ಚೆಗೆ ಬರಲಿ, ದಾಖಲಾತಿ ತರುತ್ತೇವೆ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.