Site icon Vistara News

Young Scientist Award: ಡಾ.ಬಿ.ಜೆ.ಗಿರೀಶ್‌ಗೆ ಸರ್‌ ಸಿ.ವಿ.ರಾಮನ್ ಯುವ ವಿಜ್ಞಾನಿ ಪ್ರಶಸ್ತಿ

Dr B J Girish conferred with Sir C V Raman Young Scientist Award

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಗಣಿತಶಾಸ್ತ್ರ ಮತ್ತು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಜೆ. ಗಿರೀಶ್ ಅವರು ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸರ್ ಸಿ. ವಿ. ರಾಮನ್ ಯುವ ವಿಜ್ಞಾನಿ ರಾಜ್ಯ ಪ್ರಶಸ್ತಿಗೆ (Young Scientist Award) ಭಾಜನರಾಗಿದ್ದಾರೆ.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಈ ಬಗ್ಗೆ ಮಾಹಿತಿ ನೀಡಿದ್ದು, ಭೌತಿಕ ವಿಜ್ಞಾನ ಕ್ಷೇತ್ರದ ಸಂಶೋಧನಾ ಚಟುವಟಿಕೆಗಳನ್ನು ಗುರುತಿಸಿ ಕರ್ನಾಟಕ ಸರ್ಕಾರ, ಬಿ.ಜೆ. ಗಿರೀಶ್‌ ಅವರನ್ನು 2020ನೇ ಸಾಲಿನ ಸರ್. ಸಿ. ವಿ. ರಾಮನ್ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಮಾರ್ಚ್ 23ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISc) ಜೆ ಎನ್ ಟಾಟಾ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಸಿ. ಎನ್. ಅಶ್ವತ್ಥನಾರಾಯಣ, ಪ್ರೊ. ಸಿ. ಎನ್. ಆರ್. ರಾವ್ ಭಾಗವಹಿಸಲಿದ್ದಾರೆ.

ಇದನ್ನೂ ಓದಿ | ರಾಜ ಮಾರ್ಗ ಅಂಕಣ : ಲಸಿಕಾ ವಿಜ್ಞಾನದ ಪಿತಾಮಹ ಎಡ್ವರ್ಡ್ ಜೆನ್ನರ್; ಅವನು ಯುದ್ಧವನ್ನೇ ನಿಲ್ಲಿಸಿದ ಶಸ್ತ್ರರಹಿತ ಸೇನಾನಿ!

ಈ ಬಗ್ಗೆ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಪ್ರತಿಕ್ರಿಯಿಸಿ, ಡಾ. ಗಿರೀಶ್ ಅವರು ಕಳೆದ ಹಲವು ವರ್ಷಗಳಿಂದ ರಾಜ್ಯದ ಮುಂಚೂಣಿಯ ಸಂಶೋಧಕರಾಗಿ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾನದಂಡಗಳಲ್ಲಿ ಗುರುತಿಸಲ್ಪಟ್ಟಿದ್ದಾರೆ. ಈಗ ಅವರ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸದ ವಿಚಾರ. ಇದು ವಿಶ್ವವಿದ್ಯಾಲಯದ ಇತರೆ ಅಧ್ಯಾಪಕರಿಗೆ ಸ್ಫೂರ್ತಿಯಾಗಲಿ ತಿಳಿಸಿದ್ದಾರೆ.

Exit mobile version