Dr. CR Rao : ಖ್ಯಾತ ಗಣಿತಜ್ಞ, ಸಂಖ್ಯಾಶಾಸ್ತ್ರ ಪ್ರವೀಣ ಡಾ. ಸಿ.ಆರ್‌ ರಾವ್‌ ಇನ್ನಿಲ್ಲ, ಅಮೆರಿಕದಲ್ಲಿ ನಿಧನರಾದ ಶತಾಯುಷಿ - Vistara News

ಕರ್ನಾಟಕ

Dr. CR Rao : ಖ್ಯಾತ ಗಣಿತಜ್ಞ, ಸಂಖ್ಯಾಶಾಸ್ತ್ರ ಪ್ರವೀಣ ಡಾ. ಸಿ.ಆರ್‌ ರಾವ್‌ ಇನ್ನಿಲ್ಲ, ಅಮೆರಿಕದಲ್ಲಿ ನಿಧನರಾದ ಶತಾಯುಷಿ

Dr. CR Rao : ಕರ್ನಾಟಕ ಮೂಲದ, ಈಗ ಅಮೆರಿಕದಲ್ಲಿ ವಾಸವಾಗಿರುವ ಖ್ಯಾತ ಗಣಿತಜ್ಞ ಡಾ.ಸಿ ಆರ್‌ ರಾವ್‌ ನಿಧನರಾಗಿದ್ದಾರೆ. ಅವರು ಪದ್ಮಭೂಷಣ, ಪದ್ಮವಿಭೂಷಣ ಮತ್ತು ಹಲವು ಅಂತಾರಾಷ್ಟ್ರಿಯ ಪ್ರಶಸ್ತಿ ಪಡೆದಿದ್ದಾರೆ.

VISTARANEWS.COM


on

Dr CR Rao No more
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖ್ಯಾತ ಗಣಿತಜ್ಞ (Renowned Mathematician), ಸಂಖ್ಯಾಶಾಸ್ತ್ರದಲ್ಲಿ (Statistics) ಅಪಾರ ಜ್ಞಾನವನ್ನು ಹೊಂದಿದ್ದ ಡಾ. ಸಿ.ಆರ್. ರಾವ್ (Dr. CR Rao) ಇನ್ನಿಲ್ಲ. ಶತಾಯುಷಿಗಳಾಗಿದ್ದ ಅವರಿಗೆ 102 ವರ್ಷವಾಗಿತ್ತು. ಭಾರತೀಯ-ಅಮೆರಿಕನ್‌ (Indo-American) ಆಗಿರುವ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅಮೆರಿಕದಲ್ಲಿ ನಿಧನರಾಗಿದ್ದಾರೆ. ಕರ್ನಾಟಕದ ಬಳ್ಳಾರಿ ಮೂಲದವರಾದ ಡಾ. ಸಿ.ಆರ್‌ ರಾವ್‌ ಅವರು ಅಂತಾರಾಷ್ಟ್ರೀಯ ಖ್ಯಾತಿಯನ್ನು ಹೊಂದಿದ್ದರು.

ಕಲ್ಯಂಪುಡಿ ರಾಧಾಕೃಷ್ಣ ರಾವ್‌ ಅವರು ಹುಟ್ಟಿದ್ದು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ. ಗುಡೂರು, ನೂಜಿವಿಡು, ನಂದಿ ಗಾಮದಲ್ಲಿ ಶಾಲಾ ಶಿಕ್ಷಣವನ್ನು ಪಡೆದ ಅವರು ಬಳಿಕ ಆಂಧ್ರ ಪ್ರದೇಶ ವಿಶ್ವವಿದ್ಯಾಲಯದಿಂದ ಗಣಿತ ಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದಿದ್ದರು. ಮುಂದೆ 1943ರಲ್ಲಿ ಕೋಲ್ಕೊತಾ ವಿವಿಯಿಂದ ಸಂಖ್ಯಾ ಶಾಸ್ತ್ರದಲ್ಲಿ ಎಂಎ ಪದವಿ ಪಡೆದರು. 1948ರಲ್ಲಿ ಕೇಂಬ್ರಿಜ್‌ ವಿಶ್ವವಿದ್ಯಾಲಯದ ಕಿಂಗ್ಸ್‌ ಕಾಲೇಜಿನಲ್ಲಿ ಆರ್‌ಎ ಫಿಷರ್‌ ಅವರ ಮಾರ್ಗದರ್ಶನದಲ್ಲಿ ಪಿಎಚ್‌ಡಿ ಮಾಡಿದ್ದರು. 1965ರಲ್ಲಿ ಕೇಂಬ್ರಿಜ್‌ ವಿವಿಯಿಂದ ಡಿಎಸ್ಸಿ ಡಿಗ್ರಿಯನ್ನು ಪಡೆದರು.

Dr CR Rao No More

ಸಂಖ್ಯಾಶಾಸ್ತ್ರ ಕ್ಷೇತ್ರದಲ್ಲಿನ ವಿಶೇಷ ಸಾಧನೆಗಾಗಿ ಕೇಂದ್ರ ಸರ್ಕಾರ 1968ರಲ್ಲಿ ಪದ್ಮಭೂಷಣ, 2001ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 75 ವರ್ಷಗಳ ಹಿಂದೆ ಸಂಖ್ಯಾಶಾಸ್ತ್ರದಲ್ಲಿ ಕ್ರಾಂತಿಯನ್ನು ಮಾಡಿದ್ದ ರಾವ್ ಅವರ ಕೊಡುಗೆಗಾಗಿ 2023ರ ಸಾಲಿನ ‘ಇಂಟರ್‌ನ್ಯಾಷನಲ್ ಪ್ರೈಸ್‌ ಆಫ್ ಸ್ಟ್ಯಾಟಿಸ್ಟಿಕ್ಸ್ 2023’ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಈ ಪ್ರಶಸ್ತಿ ನೊಬೆಲ್‌ಗೆ ಸರಿಸಮಾನ ಗೌರವವನ್ನು ಹೊಂದಿದೆ. ಕೆನಡಾದ ಒಂಟಾರಿಯೊದಲ್ಲಿ ನಡೆದಿದ್ದ ದ್ವೈವಾರ್ಷಿಕ ಇಂಟರ್‌ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್ ವರ್ಲ್ಡ್ ಸ್ಟ್ಯಾಟಿಸ್ಟಿಕ್ಸ್ ಕಾಂಗ್ರೆಸ್‌ನಲ್ಲಿ ಸಿಆರ್ ರಾವ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಪ್ರಶಸ್ತಿಯೊಂದಿಗೆ 80,000 ಡಾಲರ್ ನಗದು ನೀಡಲಾಗಿತ್ತು.

DR CR Rao

2002ರಲ್ಲಿ ಆಗ ಅಮೆರಿಕದ ಅಧ್ಯಕ್ಷರಾಗಿದ್ದ ಜಾರ್ಜ್‌ ಬುಷ್‌ ಅವರು ದೇಶದ ಅತ್ಯುನ್ನತ ʻನ್ಯಾಷನಲ್‌ ಮೆಡಲ್‌ ಆಫ್‌ ಸೈನ್ಸ್‌ʼ ನೀಡಿ ಗೌರವಿಸಿದ್ದರು.

ಡಾ. ಸಿ.ಆರ್‌ ರಾವ್‌ ಅವರು ತಮ್ಮ ಆಳ ಅಧ್ಯಯನಕ್ಕಾಗಿ 19 ದೇಶಗಳಿಂದ 39 ಡಾಕ್ಟರೇಟ್‌ಗಳನ್ನು ಪಡೆದುಕೊಂಡಿದ್ದಾರೆ. 477 ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುವ ಅವರು ಬರೆದಿರುವ ಪುಸ್ತಕಗಳ ಸಂಖ್ಯೆ 15.

ಇದನ್ನೂ ಓದಿ : Death News: ರಾಜವಂಶಸ್ಥ, ಮಾಜಿ ಸಚಿವ ಶ್ರೀರಂಗದೇವರಾಯಲು ಇನ್ನಿಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ

ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು. ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ಮಾತ್ರವಲ್ಲದೆ, ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಇನ್ನು ಮುಂತಾದ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಭಾರತದ ಕೀರ್ತಿ ಹೆಚ್ಚಿಸಿದ್ದರು. ಇಂತಹ ಮೇರು ಸಾಧಕರ ನಿಧನ ನಾಡಿಗೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Heavy Rain: ಬೆಂಗಳೂರು ನಗರದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. ಶುಕ್ರವಾರ ರಾತ್ರಿಯೂ ನಗರದಲ್ಲಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಜತೆಗೆ ಸಂಚಾರ ವ್ಯವಸ್ಥೆಯೂ ಅಸ್ತವ್ಯಸ್ತವಾಗಿದೆ. ಆರ್‌.ಆರ್.ನಗರ, ಜ್ಞಾನ ಭಾರತಿ, ಏರ್‌ಪೋರ್ಟ್‌ ರಸ್ತೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ನೀರು ತುಂಬಿ ಹರಿಯಿತು. ಕೆಲವೆಡೆ ಮರದ ಕೊಂಬೆಗಳು ರಸ್ತೆಗೆ ಉರುಳಿ ಬಿದ್ದವು.

VISTARANEWS.COM


on

Heavy Rain
Koo

ಬೆಂಗಳೂರು: ಬೆಂಗಳೂರು ನಗರದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. ಶುಕ್ರವಾರ ರಾತ್ರಿಯೂ ನಗರದಲ್ಲಿ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಜತೆಗೆ ಸಂಚಾರ ವ್ಯವಸ್ಥೆಯೂ ಅಸ್ತವ್ಯಸ್ತವಾಗಿದೆ. ಆರ್‌.ಆರ್.ನಗರ, ಜ್ಞಾನ ಭಾರತಿ, ಏರ್‌ಪೋರ್ಟ್‌ ರಸ್ತೆ ಸೇರಿದಂತೆ ಹಲವೆಡೆ ರಸ್ತೆಗಳಲ್ಲಿ ನೀರು ತುಂಬಿ ಹರಿಯಿತು. ಕೆಲವೆಡೆ ಮರದ ಕೊಂಬೆಗಳು ರಸ್ತೆಗೆ ಉರುಳಿ ಬಿದ್ದವು (Heavy Rain).

ರಸ್ತೆಯಲ್ಲಿ ಸಿಲುಕಿದ ವಾಹನಗಳು

ಬೆಂಗಳೂರಲ್ಲಿ ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ ಮೈಸೂರು ರಸ್ತೆಯಲ್ಲಿ ವಾಹನ ಸವಾರರು ಸಿಲುಕಿ ಹಾಕಿಕೊಂಡಿದ್ದರು. ಆರ್‌.ಆರ್. ನಗರ ಆರ್ಚ್ ಬಳಿ ರಸ್ತೆಯಲ್ಲಿ ನೀರು ಉಕ್ಕಿ ಹರಿದು 25ಕ್ಕೂ ಹೆಚ್ಚು ವಾಹನಗಳು ಸಿಲುಕಿಕೊಂಡು ಸವಾರರು ಪರದಾಡಿದರು. ರಸ್ತೆಯಲ್ಲಿ ಸುಮಾರು ಮೂರು ಅಡಿಯಷ್ಟು ನೀರು ನಿಂತುಕೊಂಡಿತ್ತು.

ಇನ್ನು ನಾಗರಭಾವಿ ಎನ್‌ಜಿಎಫ್‌ ಬಡಾವಣೆಯ 9ನೇ ಕ್ರಾಸ್‌ನಲ್ಲಿ ಬೆಸ್ಕಾಂ ಲೈಟ್ ಕಂಬ ಹಾಗೂ ಬೃಹತ್ ಮರವೊಂದು ಶೆಡ್ ಮನೆಯ ಮುಂದೆ ಬಿದ್ದಿದೆ. ಅದೃಷ್ಟವಶಾತ್‌ ಯಾರಿಗೂ ಗಾಯಗಳಾಗಿಲ್ಲ. ಚಾಮರಾಜಪೇಟೆಯಲ್ಲೂ ಮನೆಗಳಿಗೆ ನೀರು ನುಗ್ಗಿದೆ‌.‌ ಬಿನ್ನಿ ಮಿಲ್ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಿಂದ ಹರಿಯುವ ನೀರು ಗೋಡೆಯಿಂದ ಸೋರಿ ರಾಯಪುರ ಅಕ್ಕಪಕ್ಕದಲ್ಲಿರುವ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು.

ಎಲ್ಲೆಲ್ಲಿ ಎಷ್ಟೆಷ್ಟು ಮಳೆ?

ಕೆಂಗೇರಿ – 89 ಮಿ.ಮೀ.
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ – 62ಮಿ.ಮೀ.
ನಾಯಂಡನಹಳ್ಳಿ – 61.5 ಮಿ.ಮೀ.
ಹೆಮ್ಮಿಗೆಪುರ – 61 ಮಿ.ಮೀ.
ಆರ್ ಆರ್ ನಗರ – 60 ಮಿ.ಮೀ.
ಮಾರುತಿ ಮಂದಿರ – 51.50 ಮಿ.ಮೀ.
ವಿದ್ಯಾಪೀಠ – 50 ಮಿ.ಮೀ.
ಉತ್ತರಹಳ್ಳಿ – 42 ಮಿ.ಮೀ.
ಹಂಪಿನಗರ – 39 ಮಿ.ಮೀ.
ಯಲಹಂಕ – 38.50 ಮಿ.ಮೀ.
ಜಕ್ಕೂರು – 38 ಮಿ.ಮೀ.
ಕೊಟ್ಟಿಗೆಪಾಳ್ಯ – 33 ಮಿ.ಮೀ.
ಕೊಡಿಗೆಹಳ್ಳಿ – 28.50 ಮಿ.ಮೀ.
ನಂದಿನಿ ಲೇಔಟ್ – 28 ಮಿ.ಮೀ.

ಇನ್ನೂ ಮೂರ್ನಾಲ್ಕು ದಿನಗಳ ಕಾಲ ರಾಜಧಾನಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರದಲ್ಲೂ ಮಳೆಯು ಅಬ್ಬರಿಸಲಿದೆ. ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾದರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಇದನ್ನೂ ಓದಿ: Terminal 2: ಭಾರಿ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಸೋರಿಕೆ; ವಿಮಾನ ಹಾರಾಟ ಅಸ್ತವ್ಯಸ್ತ

Continue Reading

ಕ್ರೈಂ

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

Dharwad News: ಬಸವ ಜಯಂತಿ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ನಡೆದ ರಥೋತ್ಸವ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬಾಬುಸಾಬ ಮಕಾಸಿ ಎಂದು ಗುರುತಿಸಲಾಗಿದೆ. ರಥಕ್ಕೆ ಎಸೆಯುವ ಉತ್ತುತ್ತಿ ಅರಸಿಕೊಳ್ಳುವ ವೇಳೆ ಬಾಬುಸಾಬ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಥದ ಚಕ್ರ ಅವರ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

VISTARANEWS.COM


on

Dharwad News
Koo

ಧಾರವಾಡ: ಬಸವ ಜಯಂತಿ (Basava Jayanti) ಹಿನ್ನೆಲೆಯಲ್ಲಿ ಶುಕ್ರವಾರ ನಡೆದ ಬಸವೇಶ್ವರ ಜಾತ್ರೆಯಲ್ಲಿ ದುರಂತವೊಂದು ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ (Dharwad News). ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಮಜ್ಜಿಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಾಬುಸಾಬ ಮಕಾಸಿ ಎಂದು ಗುರುತಿಸಲಾಗಿದೆ.

ಮಜ್ಜಿಗುಡ್ಡ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಆಯೋಜಿಸಲಾಗಿತ್ತು. ಸಂಜೆ ನಡೆದ ರಥೋತ್ಸವ ವೇಳೆ ರಥಕ್ಕೆ ಎಸೆಯುವ ಉತ್ತುತ್ತಿ ಅರಸಿಕೊಳ್ಳುವ ವೇಳೆ ಬಾಬುಸಾಬ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಥದ ಚಕ್ರ ಅವರ ಮೇಲೆ ಹರಿದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ದುರ್ಮರಣ

ಕೆಲವು ದಿನಗಳ ಹಿಂದೆ ಕಲಬುರಗಿಯಲ್ಲಿಯೂ ಇಂತಹದ್ದೇ ಘಟನೆ ನಡೆದಿತ್ತು. ರಥದ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ ಮೃತಪಟ್ಟಿದ್ದರು. ಕಲಬುರಗಿ ನಗರದಲ್ಲಿ ನಡೆದ ಶ್ರೀ ಶರಣ ಬಸವೇಶ್ವರ ಜಾತ್ರಾ ಮಹೋತ್ಸವದ ಭಾಗವಾಗಿ ಆಯೋಜಿಸಿದ್ದ ಉಚ್ಚಾಯಿ ರಥೋತ್ಸವದಲ್ಲಿ ತೇರಿನ ಚಕ್ರಕ್ಕೆ ಸಿಲುಕಿ ಹೋಂಗಾರ್ಡ್ ಸಿಬ್ಬಂದಿ, ಬೀದರ್ ಜಿಲ್ಲೆ ಇಟಗಾ ಗ್ರಾಮದ ರಾಮು ಸಿದ್ದಪ್ಪ (28) ದುರ್ಮರಣ ಹೊಂದಿದ್ದರು. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಉಂಟಾದ ಗದ್ದಲದ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕು ಕೊಲೆ‌ ಮಾಡಿರುವ ಘಟನೆ ನಗರದ ಹೊರವಲಯದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ಮನೆ ಬಾಡಿಗೆ ಕೇಳುವ ನೆಪದಲ್ಲಿ ದುಷ್ಕರ್ಮಿಯೊಬ್ಬ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಿವ್ಯಾ (32) ಕೊಲೆಯಾದ ಮಹಿಳೆ. ಮಹಿಳೆಯ ಗಂಡ ಗುರುಮೂರ್ತಿ ಕೆಲಸಕ್ಕೆಂದು ಸಲೂನ್‌ ಹೋಗಿದ್ದರು. ಈ ವೇಳೆ ಆರೋಪಿ, ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಕುತ್ತಿಯಲ್ಲಿದ್ದ ಚೈನ್ ಕದ್ದು ಪರಾರಿಯಾಗಿದ್ದಾನೆ. ಮಹಿಳೆಯ ಮೃತದೇಹವನ್ನು ಆರ್.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ‌

ಕಲಬುರಗಿ: ಪ್ರಿಯಕರ ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಮನನೊಂದು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೋಟನೂರು (ಡಿ) ಬಳಿ ಶುಕ್ರವಾರ ನಡೆದಿದೆ. ಪುಷ್ಪಾ (26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ ಪದವಿ ವ್ಯಾಸಂಗ ಮುಗಿಸಿದ್ದು, ಆಳಂದ ತಾಲೂಕಿನ ಕೌಲಗಾ ಗ್ರಾಮದಿಂದ ಕಲಬುರಗಿ ನಗರಕ್ಕೆ ಬಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು. ಹೀಗಾಗಿ ಕೋಟನೂರು ಬಳಿ ಬಾಡಿಗೆ ರೂಮ್‌ ಪಡೆದು ವಾಸವಾಗಿದ್ದಳು. ಈಕೆಯು ಕಳೆದ ನಾಲ್ಕು‌ ವರ್ಷದಿಂದ ಕಲಬುರಗಿಯ ಗಾಂಧಿನಗರದ ನಿವಾಸಿ ಕಿರಣ್ ಎಂಬುವರೊಂದಿಗೆ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

Continue Reading

ಕ್ರೈಂ

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

Murder Case: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದಿತ್ತು. ಬಾಲಕಿಯನ್ನು ಹತ್ಯೆ ಮಾಡಿ ಪ್ರಕಾಶ್‌ ತಲೆ ಮರೆಸಿಕೊಂಡು ಕಾಡಿನಲ್ಲಿ ಅಡಗಿ ಕುಳಿತ್ತಿದ್ದ.

VISTARANEWS.COM


on

Murder Case
Koo

ಸೋಮವಾರಪೇಟೆ: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯೊಬ್ಬಳನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ (Murder Case) ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ಗುರುವಾರ ನಡೆದು ರಾಜ್ಯವೇ ಬೆಚ್ಚಿ ಬಿದ್ದಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಮೀನಾಳನ್ನು ಕೊಲೆ ಮಾಡಿದ್ದ ಆರೋಪಿ ಪ್ರಕಾಶ್‌ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಕಾಶ್‌ ಕಾಡಿನಲ್ಲಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಸೋಮವಾರಪೇಟೆ ಠಾಣೆಗೆ ಪೊಲೀಸರು ಕರೆ ತರುತ್ತಿದ್ದಾರೆ. ಬಾಲಕಿಯನ್ನು ಹತ್ಯೆ ಮಾಡಿದ ಬಳಿಕ ಈತ ರುಂಡ ಹಾಗೂ ಕೋವಿಯೊಂದಿಗೆ ಪರಾರಿಯಾಗಿದ್ದ. ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿತ್ತು. ಬಳಿಕ ಪೊಲೀಸರು ಸ್ಪಷ್ಟನೆ ನೀಡಿ ಆತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದರು. ಇದೀಗ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

ಇದನ್ನೂ ಓದಿ: Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Continue Reading

ಮಳೆ

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Karnataka Weather Forecast : ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಿರುಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರದಲ್ಲೂ ಮಳೆಯು ಅಬ್ಬರಿಸಲಿದೆ.

ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾದರೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂಜಾನೆ ಮೋಡ ಕವಿದ ವಾತಾವರಣದೊಂದಿಗೆ ತಂಪು ಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 32 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
CAA
ದೇಶ18 mins ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Heavy Rain
ಕರ್ನಾಟಕ20 mins ago

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Dharwad News
ಕ್ರೈಂ53 mins ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

cyber crime
ದೇಶ1 hour ago

Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

Murder Case
ಕ್ರೈಂ1 hour ago

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

karnataka Weather Forecast
ಮಳೆ3 hours ago

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Joe Biden
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

Cotton Candy
ಆರೋಗ್ಯ3 hours ago

Cotton Candy: ಕಾಟನ್‌ ಕ್ಯಾಂಡಿ ಯಾಕೆ ಎಷ್ಟೊಂದು ಅಪಾಯಕಾರಿ ಗೊತ್ತೆ?

Vitamin Side Effects
ಆರೋಗ್ಯ4 hours ago

Vitamin Side Effects: ವಿಟಮಿನ್‌ ಮಾತ್ರೆಗಳನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ?

Dina Bhavishya
ಭವಿಷ್ಯ4 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ19 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ20 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ22 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌