ತುಮಕೂರು: ವಿಧಾನಸಭಾ ಚುನಾವಣೆ (Kunigal Election Results) ಮತ ಎಣಿಕೆ ಕಾರ್ಯ ಶನಿವಾರ ನಡೆದಿದ್ದು, ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎಚ್.ಡಿ. ರಂಗನಾಥ್ ಅವರು ಗೆದ್ದಿದ್ದಾರೆ. ಇವರು 26,573 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಕೃಷ್ಣಕುಮಾರ್ ವಿರುದ್ಧ ಗೆಲುವು ಪಡೆದಿದ್ದಾರೆ.
ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎಚ್.ಡಿ.ರಂಗನಾಥ್ 74,724 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಡಿ.ಕೃಷ್ಣಕುಮಾರ್ 48,151 ಹಾಗೂ ಜೆಡಿಎಸ್ ಅಭ್ಯರ್ಥಿ ಡಾ.ರವಿ ನಾಗರಾಜಯ್ಯ 46,974 ಮತಗಳನ್ನು ಪಡೆದಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎಚ್.ಡಿ.ರಂಗನಾಥ್ 58,697 ಮತಗಳನ್ನು ಪಡೆದಿದ್ದರು. ಜೆಡಿಎಸ್ ಡಿ.ನಾಗರಾಜಯ್ಯ 53,097 ಮತಗಳನ್ನು ಪಡೆದಿದ್ದರು.
ಇದನ್ನೂ ಓದಿ | Chiknayakanhalli Election Results: ಚಿಕ್ಕನಾಯಕನಹಳ್ಳಿಯಲ್ಲಿ ಮಾಧುಸ್ವಾಮಿಗೆ ಮುಖಭಂಗ, ಜೆಡಿಎಸ್‌ನ ಸುರೇಶ್ ಬಾಬುಗೆ ಜಯ
ಕಳೆದ ಮೂರೂ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋಲುಂಡಿದ್ದ, ರಾಜ್ಯ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಡಿ.ಕೃಷ್ಣಕುಮಾರ್ ಸತತ ನಾಲ್ಕನೇ ಬಾರಿಗೆ ಬಿಜೆಪಿ ಟಿಕೆಟ್ ಪಡೆದು ಕಣಕ್ಕಿಳಿದಿದ್ದರು. ಕಾಂಗ್ರೆಸ್‌ನಿಂದ ಹಾಲಿ ಶಾಸಕ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಂಬಂಧಿ ಡಾ.ರಂಗನಾಥ್ ಮತ್ತೆ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದಾರೆ.