Site icon Vistara News

Dr JG Manjunatha: ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಮಡಿಕೇರಿಯ ಡಾ.ಜೆ.ಜಿ. ಮಂಜುನಾಥ

Dr JG manjunatha

ಮಡಿಕೇರಿ: ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಡಾ.ಜೆ.ಜಿ. ಮಂಜುನಾಥ ಅವರು ಸ್ಥಾನ ಪಡೆದಿದ್ದಾರೆ. ಯು.ಎಸ್.ಎ.ಯ ಸ್ಟ್ಯಾನ್‍ಫೋರ್ಡ್‌ ವಿಶ್ವವಿದ್ಯಾಲಯ ಮತ್ತು ಎಲ್ಸ್‌ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಡಾ.ಜೆ.ಜಿ.ಮಂಜುನಾಥ (Dr JG Manjunatha) ಅವರು ಸತತ ನಾಲ್ಕನೇ ಬಾರಿ ಸ್ಥಾನ ಪಡೆದಿದ್ದಾರೆ.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ. ಮಂಜುನಾಥ ಅವರು “ಅನಲಿಟಿಕಲ್ ಮತ್ತು ಎನರ್ಜಿ” ವಿಷಯಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿರುವ ಸಂಶೋಧನಾ ಲೇಖನಗಳ ಆಧಾರದ ಮೇಲೆ ಇವರು 2023ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 4,509ನೇ ಸ್ಥಾನವನ್ನು ಮತ್ತು ವಿಶ್ವದ ವೃತ್ತಿ ಜೀವಮಾನ ಸಾಧಕರ ಪಟ್ಟಿಯಲ್ಲಿ 89,561 ನೇ ಸ್ಥಾನವನ್ನು ಪಡೆದಿದ್ದಾರೆ(ಸಂಯೋಜಿತ ಅಂಕಗಳ ಆಧಾರದ ಮೇಲೆ ಶ್ರೇಣಿ).

rajyotsava-award-2023 : Sewa sindhu portal will be open for for Public Nominations

ಡಾ.ಜೆ.ಜಿ. ಮಂಜುನಾಥ ಅವರ ಸಾಧನೆಯೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ಹೆಮ್ಮೆ ತಂದಿದೆ ಎಂದು ವಿ.ವಿಯ ಕುಲಪತಿ, ಕುಲಸಚಿವರು ಮತ್ತು ಕಾಲೇಜಿನ ಪ್ರಾಂಶುಪಾಲರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಸಮಸ್ತ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

ಇದನ್ನೂ ಓದಿ | Nobel Peace Prize: ಇರಾನ್‌ನ ಮಹಿಳಾ ಹೋರಾಟಗಾರ್ತಿ ನರ್ಗೀಸ್ ಮೊಹಮ್ಮದಿಗೆ ನೊಬೆಲ್ ಶಾಂತಿ ಪ್ರಶಸ್ತಿ

ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಹೆಸರು ನಾಮನಿರ್ದೇಶನ ಮಾಡಿ; ಅ. 15 ಕೊನೆ ದಿನ

rajyotsava-award-2023 : Sewa sindhu portal will be open for for Public Nominations

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ (Kannada Rajyotsava) ಸಂದರ್ಭದಲ್ಲಿ ನಾಡಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ 2023 (Rajyotsava Award 2023) ನೀಡಲಾಗುತ್ತದೆ. ಈ ಪ್ರಶಸ್ತಿಗೆ ವಿವಿಧ ಕ್ಷೇತ್ರದ ಸಾಧಕರ ಹೆಸರನ್ನು ಶಿಫಾರಸು ಮಾಡಲು ಸಾರ್ವಜನಿಕರಿಗೆ ಅವಕಾಶ (Public Nomination) ನೀಡಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿ ಗೆ ಅರ್ಹರನ್ನು ಆಯ್ಕೆ ಮಾಡುವ ಉದ್ದೇಶದಿಂದ ಕಳೆದ ಕೆಲವು ವರ್ಷದಿಂದ ಆನ್‌ಲೈನ್‌ನಲ್ಲಿ ಸಾಧಕರ ಹೆಸರು ಮತ್ತು ವಿವರವನ್ನು ನೀಡಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಅದರಂತೆ ಈ ಬಾರಿಯೂ ಶಿಫಾರಸಿಗೆ ಮನವಿ ಮಾಡಲಾಗಿದ್ದು, ಸೇವಾ ಸಿಂಧು ಪೋರ್ಟಲ್‌ (Sewa Sindhu Portal) ಮೂಲಕ ಅಕ್ಟೋಬರ್‌ 1ರಿಂದ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಕ್ಟೋಬರ್‌ 15ರಂದು ನಾಮ ನಿರ್ದೇಶನಕ್ಕೆ ಕೊನೆಯ ದಿನವಾಗಿರುತ್ತದೆ.

ಸೇವಾ ಸಿಂಧು ಪೋರ್ಟಲ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಿದ್ಧಪಡಿಸಲಾಗಿರುವ ವಿಶೇಷ ನಮೂನೆ ಇರುತ್ತದೆ. ಅದರಲ್ಲಿ ಸಾಧಕರ ಹೆಸರು, ಅವರು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ, ಅವರ ಊರು , ವಿಳಾಸ, ಸಂಪರ್ಕ ಸಂಖ್ಯೆ ಇತ್ಯಾದಿ ವಿವರಗಳನ್ನು ಒದಗಿಸಬೇಕಾಗುತ್ತದೆ.

ರಾಜ್ಯದ ಮೂಲೆ ಮೂಲೆಯಲ್ಲಿ ಎಲೆಮರೆಕಾಯಿಯಂತೆ ತಮ್ಮ, ತಮ್ಮ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ, ಮಾಡುತ್ತಿರುವ ವ್ಯಕ್ತಿಗಳನ್ನು ಗುರುತಿಸುವ ಉದ್ದೇಶದಿಂದ ಈ ನಾಮ ನಿರ್ದೇಶನ ಅವಕಾಶ ನೀಡಲಾಗಿದೆ.

ಪ್ರತಿ ವರ್ಷವೂ ಈ ನಾಮಕರಣಕ್ಕೆ ಅವಕಾಶವಿರುತ್ತದೆ. ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷ ಮೇಲ್ಪಟ್ಟವರನ್ನು ಮಾತ್ರ ಶಿಫಾರಸು ಮಾಡಬಹುದಾಗಿರುತ್ತದೆ. ಇದರಲ್ಲಿ ಕ್ರೀಡಾ ವಿಭಾಗರದಲ್ಲಿ ವಯಸ್ಸಿನ ವಿನಾಯಿತಿ ಇರುತ್ತದೆ.

2022ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ, ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದಾಗ ಸುಮಾರು 28000ಕ್ಕಿಂತಲೂ ಹೆಚ್ಚು ಅರ್ಜಿಗಳು ಬಂದಿದ್ದವು. ಅವರ ಪೈಕಿ ಸಾಧನೆ, ಜಿಲ್ಲಾವಾರು ಮಾನದಂಡಗಳನ್ನು ಪರಿಗಣಿಸಿ 67 ಸಾಧಕರನ್ನು ಆಯ್ಕೆ ಮಾಡಿ ಗೌರವಿಸಲಾಗಿತ್ತು.

ಇದನ್ನೂ ಓದಿ | Nobel Prize 2023: ನಾರ್ವೆ ನಾಟಕಕಾರ ಜಾನ್ ಫೋಸ್ಸೆಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ, ಸಲ್ಮಾನ್ ರಶ್ದಿಗೆ ಮಿಸ್!

ಈ ಬಾರಿ 68 ಮಂದಿ ಸಾಧಕರಿಗೆ ಪ್ರಶಸ್ತಿ

ಈ ಬಾರಿ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಆಗಿರುವುದರಿಂದ 68 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಆನ್‌ಲೈನ್‌ ಮೂಲಕ ಬಂದಿರುವ ಅರ್ಜಿಗಳನ್ನು ಪ್ರತ್ಯೇಕಿಸಿ ಅವುಗಳನ್ನು ತಜ್ಞರ ತಂಡದ ಮುಂದೆ ಇಟ್ಟು ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಇದಕ್ಕಾಗಿಯೇ ಪ್ರಶಸ್ತಿ ಆಯ್ಕೆ ಸಮಿತಿಯನ್ನು ಮಾಡಲಾಗುತ್ತದೆ.

Exit mobile version