Chitradurga Plane Crash: ಚಿತ್ರದುರ್ಗದಲ್ಲಿ ಡಿಆರ್‌ಡಿಒ ತಪಸ್‌ ವಿಮಾನ ಪತನ; ನೋಡಲು ಮುಗಿಬಿದ್ದ ಜನ - Vistara News

ಕರ್ನಾಟಕ

Chitradurga Plane Crash: ಚಿತ್ರದುರ್ಗದಲ್ಲಿ ಡಿಆರ್‌ಡಿಒ ತಪಸ್‌ ವಿಮಾನ ಪತನ; ನೋಡಲು ಮುಗಿಬಿದ್ದ ಜನ

Chitradurga Plane Crash: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (DRDO) ಮಾನವರಹಿತ ಲಘುವಿಮಾನ ಪತನಗೊಂಡಿದೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

DRDO Plane Crash In Chitradurga
ಜಮೀನಿನಲ್ಲಿ ಪತನಗೊಂಡಿರುವ ಲಘು ವಿಮಾನ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಭಾನುವಾರ ಬೆಳಗ್ಗೆ (ಆಗಸ್ಟ್‌ 20) ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮಾನವರಹಿತ ಲಘುವಿಮಾನ (Chitradurga Plane Crash) ಪತನಗೊಂಡಿದೆ. ಪ್ರಾಯೋಗಿಕ ಹಾರಾಟದ ವೇಳೆ ತಪಸ್‌ 07A-14 ವಿಮಾನವು ಜಮೀನಿನಲ್ಲಿ ಪತನಗೊಂಡಿದೆ. ಗ್ರಾಮದ ಸಿದ್ದಪ್ಪ ಎಂಬುವರ ಜಮೀನಿನಲ್ಲಿ ಲಘು ವಿಮಾನ ಪತನಗೊಂಡಿದ್ದು, ಅದನ್ನು ನೋಡಲು ಜನ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.

ನಾಯಕನಹಟ್ಟಿ ಬಳಿಯ ಡಿಆರ್‌ಡಿಒ ಘಟಕದಲ್ಲಿ ತಪಸ್‌ ಲಘು ವಿಮಾನವನ್ನು ತಯಾರಿಸಲಾಗಿದೆ. ಪ್ರಾಯೋಗಿಕವಾಗಿ ವಿಮಾನದ ಹಾರಾಟ ನಡೆಸುವ ವೇಳೆ ಅದು ಪತನಗೊಂಡಿದೆ. ವಿಮಾನ ಪತನವಾಗಲು ಇದುವರೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರೆಕ್ಕೆ ಕಳಚಿಕೊಂಡು ವಿಮಾನ ಪತನವಾದ ಕಾರಣ ಸುತ್ತಮುತ್ತಲಿನ ಗ್ರಾಮಸ್ಥರು ನೋಡಲು ಆಗಮಿಸುತ್ತಿದ್ದಾರೆ.

ಜಮೀನಿನಲ್ಲಿ ಪತನಗೊಂಡಿರುವ ವಿಮಾನ

ವಿಮಾನ ಪತನವಾದ ಸ್ಥಳಕ್ಕೆ ಡಿಆರ್‌ಡಿಒ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಿಮಾನ ಪತನವಾಗುತ್ತಲೇ ಬೆಂಕಿ ಹೊತ್ತಿಕೊಳ್ಳದ ಕಾರಣ ಯಾವುದೇ ಅಪಾಯ ಎದುರಾಗಿಲ್ಲ. ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲೆಯಲ್ಲಿ ಎರಡನೇ ವಿಮಾನ ಪತನ

ಚಿತ್ರದುರ್ಗ ಜಿಲ್ಲೆಯಲ್ಲಿ ಡಿಆರ್‌ಡಿಒದ ವಿಮಾನ ಪತನವಾಗುತ್ತಿರುವುದು ಎರಡನೇ ಬಾರಿ ಆಗಿದೆ. 2019ರ ಸೆಪ್ಟೆಂಬರ್‌ನಲ್ಲಿ ಡಿಆರ್‌ಡಿಒದ ರುಸ್ತುಂ 2 ಎಂಬ ಮಾನವರಹಿತ ಲಘು ವಿಮಾನ ಪತನವಾಗಿತ್ತು. ಚಳ್ಳಕೆರೆ ತಾಲೂಕಿನ ಚಿಕ್ಕೇನಹಳ್ಳಿಯಲ್ಲಿ ಪತನಗೊಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Murder Case: ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲ್ಲಲಾಗಿದೆ.

VISTARANEWS.COM


on

Murder Case
Koo

ಬೆಂಗಳೂರು: ನಡು ರಸ್ತೆಯಲ್ಲೇ ರೌಡಿಶೀಟರ್‌ನ ಅಟ್ಟಾಡಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಭೀಕರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ರೌಡಿಶೀಟರ್‌ ಪ್ರಾಣ ಬಿಟ್ಟಿದ್ದು, ಘಟನಾ ಸ್ಥಳಕ್ಕೆ ಬಾಣಸವಾಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರ್ತಿಗೇಯನ್ (40) ಕೊಲೆಯಾದವ. ಮೃತ ವ್ಯಕ್ತಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ | Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Theft Case In Bengaluru

ಬೆಂಗಳೂರು: ಈಗೀನ ಕಾಲದಲ್ಲಿ ಯಾರನ್ನಾ ನಂಬೋದು ಬಿಡೋದು? ಅಕ್ಕನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ತಂಗಿಯ (Theft Case) ಬಂಧನವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮಾ ಬಂಧಿತ ಆರೋಪಿಯಾಗಿದ್ದಾಳೆ. ಬಂಧಿಯಾಗಿರುವ ಉಮಾಳಿಂದ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ‌ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.

ಇನ್ನೂ ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಅವರು ಕೊಟ್ಟಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದೇ ಕಾರಣಕ್ಕೆ ಅಕ್ಕ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಳು. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್‌ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.

Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

Prajwal Revanna case: ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

VISTARANEWS.COM


on

Prajwal Revanna case Interpol issues messages against Prajwal to 196 countries
Koo

ಬೆಂಗಳೂರು: ಲೈಂಗಿಕ ಹಗರಣದ (Pen Drive Case) ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna case) ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್‌ (Blue Corner Notice) ಜಾರಿ ಮಾಡಲು ಎಸ್ಐಟಿ (SIT) ಅಧಿಕಾರಿಗಳು ಮಾಡಿದ್ದ ಮನವಿಗೆ ಸ್ಪಂದಿಸಿರುವ ಸಿಬಿಐ (CBI), ಈ ಕುರಿತು ಇಂಟರ್‌ಪೋಲ್‌ (Interpol) ಮೂಲಕ 196 ದೇಶಗಳಿಗೆ ಮೆಸೇಜ್‌ ರವಾನೆ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್‌ ಎಲ್ಲಿಯೇ ಕಂಡರೂ, ಯಾವ ದೇಶದಿಂದ ಯಾವ ದೇಶಕ್ಕೆ ಹೋದರೂ ಎಸ್‌ಐಟಿಗೆ ಮಾಹಿತಿ ಸಿಗಲಿದೆ.

ಈ ಸಂಬಂಧ ಎಸ್‌ಐಟಿ ಅಧಿಕಾರಿಗಳಿಗೆ ಇಂಟರ್‌ಪೋಲ್‌ನಿಂದ ಮಾಹಿತಿ ಬಂದಿದೆ. ಹೀಗಾಗಿ ಇನ್ನು ಮುಂದೆ ಎಸ್‌ಐಟಿ ಸಹ ಪ್ರಜ್ವಲ್‌ ವಿರುದ್ಧ ಕಾನೂನು ಸಮರ ಸಾರಲು ಹೆಚ್ಚಿನ ಅನುಕೂಲವಾದಂತೆ ಆಗಲಿದೆ. ಅಲ್ಲದೆ, ಅವರ ಪ್ರತಿ ಚಲನವಲನಗಳು, ಸಂಚಾರದ ಮಾಹಿತಿಗಳು ಲಭ್ಯವಾಗಲಿವೆ.

ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟಿಸ್‌ ಅನ್ನು ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೋಟಿಸ್ ಪಡೆಯಲಿದೆ.

ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

ಬ್ಲೂ ಕಾರ್ನರ್ ನೊಟೀಸ್ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತದೆ. ಯಾವ ದೇಶದಲ್ಲಿ ಇದ್ದಾರೆ, ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಸುಳಿವು ಪಡೆಯಲು ಈ ನೋಟಿಸ್‌ ಮುಖ್ಯವಾಗಿದೆ.

ಇನ್ನಷ್ಟು ಸಿಬ್ಬಂದಿ

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತ್ತೆ ಎಂಟು ಮಂದಿ ಅಧಿಕಾರಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಮೂವರು ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಸಿಬ್ಬಂದಿ ಸೇರಿದಂತೆ ಐವರು ಸಿಬ್ಬಂದಿ ನಿಯೋಜಿಸಲಾಗಿದ್ದು, ಕೂಡಲೇ ಸಿಐಡಿ ಕಚೇರಿಯ ಎಸ್ಐಟಿಯಲ್ಲಿ ವರದಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಓರ್ವ ಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ ಗಳು, ಒರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ನಾಲ್ವರು ಸಿಬ್ಬಂದಿ ಸೇರಿ ಎಂಟು ಜನರ ನೇಮಕ ಮಾಡಲಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟಿಸ್‌

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading

ರಾಜಕೀಯ

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Prajwal Revanna Case: ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಆರೋಗ್ಯ ಸುಧಾರಿಸಿದೆ ಎಂದು ಆರಂಭದಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದರು. ಆದರೆ, ರೇವಣ್ಣ ತೀವ್ರ ಬಳಲಿದಂತೆ ಕಂಡ ಹಿನ್ನೆಲೆಯಲ್ಲಿ ಅವರಿಗೆ ಡ್ರಿಪ್‌ (ಸಲೈನ್) ಹಾಕಲಾಗಿದೆ.

VISTARANEWS.COM


on

Prajwal Revanna Case HD Revanna has severe chest pain Admission in Victoria
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಕೇಸ್‌ ಅಡಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೆ ಹೊಟ್ಟೆನೋವು ಹಾಗೂ ಎದೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತಾದರೂ ಡಿಹೈಡ್ರೇಶನ್‌ ಆಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಸಲೈನ್‌ ಹಾಕಿ ಕಳಿಸಲಾಗಿದೆ.

ಸಂಜೆ ವೇಳೆಗೆ ಎಚ್.ಡಿ. ರೇವಣ್ಣ ಅವರು ಹೊಟ್ಟೆ ನೋವು ಹಾಗೂ ಎದೆ ಉರಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮೊದಲು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಗಿತ್ತು. ಅಲ್ಲಿ ಮೊದಲು ಬಿಪಿ, ಶುಗರ್ ಹಾಗೂ ಇಸಿಜಿ ತಪಾಸಣೆಯನ್ನು ನಡೆಸಲಾಗಿದೆ. ಇವು ನಾರ್ಮಲ್‌ ಇದ್ದ ಕಾರಣದಿಂದ ಅಲ್ಲಿಂದ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ.

ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಆರೋಗ್ಯ ಸುಧಾರಿಸಿದೆ ಎಂದು ಆರಂಭದಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದರು. ಆದರೆ, ರೇವಣ್ಣ ತೀವ್ರ ಬಳಲಿದಂತೆ ಕಂಡ ಹಿನ್ನೆಲೆಯಲ್ಲಿ ಅವರಿಗೆ ಡ್ರಿಪ್‌ (ಸಲೈನ್) ಹಾಕಲಾಗಿತ್ತು.

ಆದರೆ, ಎಚ್.ಡಿ. ರೇವಣ್ಣ ಅವರಿಗೆ ಎದೆ ನೋವು ಹಾಗೂ ಹೊಟ್ಟೆ ಉರಿ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಅಡ್ಮಿಟ್ ಮಾಡುವುದು ಸೂಕ್ತ ಎಂದು ವೈದ್ಯರು ಸೂಚನೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸೂಚನೆ ಬೆನ್ನಲ್ಲೇ ಅಡ್ಮಿಟ್ ಮಾಡಲು ಎಸ್‌ಐಟಿ ಅಧಿಕಾರಿಗಳು ತೀರ್ಮಾನ ಮಾಡಿದ್ದರು. ಇದಕ್ಕೂ ಮೊದಲು ಡ್ರಿಪ್‌ ಮುಗಿದ ಬಳಿಕ ಅವರನ್ನು ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದರು. ಪುನಃ ಇದೇ ತೀರ್ಮಾನಕ್ಕೆ ವೈದ್ಯರು ಬಂದಿದ್ದಾರೆನ್ನಲಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟಿಸ್‌

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading

ಕ್ರೈಂ

Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Prajwal Revanna Case: ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರೇವಣ್ಣ ಅವರಿಗೆ ಜೈಲಾಗುತ್ತದೆಯೋ? ಅಥವಾ ಜಾಮೀನು ಸಿಗುತ್ತದೆಯೋ ಎಂಬ ಪ್ರಶ್ನೆ ಎದುರಾಗಿದೆ.

VISTARANEWS.COM


on

Prajwal Revanna Case HD Revanna bail plea to be heard tomorrow Jail or Bela
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ನಾಳೆ (ಬುಧವಾರ – ಮೇ 8) ವಿಚಾರಣೆಗೆ ಬರಲಿದೆ.

ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ.

ಇನ್ನು ಜಾಮೀನು ಅರ್ಜಿ ವಿಚಾರಣೆ ಸಂಬಂಧ ನ್ಯಾಯಾಲಯ ಸಹ ಒಂದು ಪ್ರಶ್ನೆ ಎತ್ತಿದೆ. ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಮಂಗಳವಾರ ನಡೆದ ವಿಚಾರಣೆ ವೇಳೆ ಪ್ರಶ್ನೆ ಮಾಡಿದೆ. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ವೇಳೆ ರೇವಣ್ಣ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಕ್ಕಿಲ್ಲವಾದರೆ, ಪುನಃ ಕಸ್ಟಡಿಗೆ ನೀಡಲಾಗುತ್ತದೆಯೋ? ಅಥವಾ ನ್ಯಾಯಾಂಗ ಬಂಧನಕ್ಕೊಳಪಟ್ಟು ಪರಪ್ಪನ ಅಗ್ರಹಾರ ಸೇರಲಿದ್ದಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟೀಸ್‌

ಎಚ್‌.ಡಿ. ರೇವಣ್ಣ ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading
Advertisement
IPL 2024
ಕ್ರೀಡೆ37 mins ago

IPL 2024 : ಅಭಿಮಾನಿಯ 80 ಸಾವಿರ ರೂಪಾಯಿ ಮೊಬೈಲ್​ ಒಡೆದು ಹಾಕಿದ ಚೆನ್ನೈ ಸ್ಟಾರ್​; ಇಲ್ಲಿದೆ ವಿಡಿಯೊ

Murder Case
ಕರ್ನಾಟಕ39 mins ago

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Prajwal Revanna case Interpol issues messages against Prajwal to 196 countries
ಕ್ರೈಂ57 mins ago

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

PM Modi
ಪ್ರಮುಖ ಸುದ್ದಿ1 hour ago

PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 hour ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Air Purifier
ಆಟೋಮೊಬೈಲ್1 hour ago

Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

Prajwal Revanna Case HD Revanna bail plea to be heard tomorrow Jail or Bela
ಕ್ರೈಂ2 hours ago

Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Ujjivan Small Finance Bank
ವಾಣಿಜ್ಯ2 hours ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

Lok Sabha Election 2024
ಕರ್ನಾಟಕ2 hours ago

Lok Sabha Election 2024: ಜಿ.ಎಂ.ಸಿದ್ದೇಶ್ವರ್‌ ಮಹಾ ಎಡವಟ್ಟು, ಪತ್ನಿ ಮತವನ್ನೂ ತಾವೇ ಹಾಕಿದ ಸಂಸದ

Nirav modi
ದೇಶ2 hours ago

Nirav Modi: ನೀರವ್‌ ಮೋದಿಗೆ ಲಂಡನ್‌ ಜೈಲೇ ಗತಿ; 5ನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ1 hour ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ4 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ6 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌