ರಾಮನಗರ: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿದ್ದರಿಂದ ಚಾಲಕ ಮೃತಪಟ್ಟಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಭಾನುವಾರ ನಡೆದಿದೆ. ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಮದ್ದೂರು ಮೂಲದ ಚಾಲಕ ಮಂಜೇಶ್ (28) ಮೃತ ವ್ಯಕ್ತಿ. ರಾಮನಗರದ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ | ಇದೆಂಥ ಕೇಡುಗಾಲ; ಮೇಕೆ ಮೇಲೆಯೇ ಗ್ಯಾಂಗ್‌ರೇಪ್ ಮಾಡಿದ ವಿಕೃತ ಕಾಮಿಗಳು
ಬೈಕ್-ಟಂಟಂ ನಡುವೆ ಅಪಘಾತ; ಮಹಿಳೆ ಸಾವು, ಐವರಿಗೆ ಗಾಯ
ವಿಜಯಪುರ: ಬೈಕ್ ಹಾಗೂ ಟಂಟಂ ವಾಹನ ನಡುವೆ ಡಿಕ್ಕಿಯಾಗಿದ್ದರಿಂದ ಒಬ್ಬ ಮಹಿಳೆ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದ ಗೊಳಸಂಗಿ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟಿರುವ ಮಹಿಳೆಯ ಹೆಸರು ಲಭ್ಯವಾಗಿಲ್ಲ. ಇನ್ನು ಅಪಘಾತದಲ್ಲಿ ಗಾಯಗೊಂಡ ನಾಲ್ವರು ಮಹಿಳೆಯರು, ಬೈಕ್ ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.