Site icon Vistara News

Drought Situation: ಉಪಸಮಿತಿ ಸಭೆ ಬಳಿಕ ಬರ ಘೋಷಣೆ ಬಗ್ಗೆ ತೀರ್ಮಾನ ಎಂದ ಸಿದ್ದರಾಮಯ್ಯ, ಮೋಡ ಬಿತ್ತನೆ ಇಲ್ಲ

Drought sitation

ಮೈಸೂರು: ʻʻರಾಜ್ಯದಲ್ಲಿ ಬರದ ಛಾಯೆಯಿರುವ (Drought Situarion) ಬಗ್ಗೆ ಸಚಿವ ಸಂಪುಟ ಉಪ ಸಮಿತಿಯ (Cabinet Sub committee) ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ, ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಸೋಮವಾರ ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು

ʻʻಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರದವರಿಗೆ ತಿಳಿಸಲಾಗುವುದು. ಕೇಂದ್ರ ಸರ್ಕಾರದವರು ಪರಿಶೀಲಿಸಿದ ನಂತರ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ನೆರವು ನೀಡುತ್ತಾರೆ ಎಂದರು. ಬರಗಾಲ ಎಂದು ಘೋಷಣೆಯಾದ ನಂತರ ಆ ತಾಲ್ಲೂಕುಗಳಲ್ಲಿ ಬರ ಪರಿಹಾರವಾಗಿ ಜನರಿಗೆ ಕೆಲಸ, ಮುಂತಾದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದುʼʼ ಎಂದು ಹೇಳಿದ ಸಿದ್ದರಾಮಯ್ಯ, ʻʻಮೋಡ ಬಿತ್ತನೆ ಇಂದಿನವರೆಗೂ ಎಲ್ಲಿಯೂ ಯಶಸ್ವಿಯಾಗಿಲ್ಲ. ಹಾಗಾಗಿ ರಾಜ್ಯದಲೂ ಸದ್ಯಕ್ಕೆ ಅದರ ಬಗ್ಗೆ ಚಿಂತನೆ ಇಲ್ಲʼʼ ಎಂದರು.

ಒಂದು ಲಕ್ಷ ಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ

ಆಗಸ್ಟ್ 30ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 3 ಗ್ಯಾರಂಟಿಗಳನ್ನು ಕಾರಿ ಮಾಡಿದ್ದು, ನಾಲ್ಕನೇ ಗ್ಯಾರಂಟಿಯನ್ನು ಜಾರಿ ಮಾಡಲಿದ್ದೇವೆ ಎಂದರು.

ಒಂದು ಲಕ್ಷ ಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ಇದ್ದು, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಆಗಮಿಸಲಿದ್ದಾರೆ. ಖರ್ಗೆಯವರು ಉದ್ಘಾಟಿಸಿ, ನನ್ನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ ಎಂದರು. ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ನಾಲ್ಕು ಜಿಲ್ಲೆಗಳು ಸೇರಿ ಕಾರ್ಯಕ್ರಮ ಆಯೋಜಿಸಿದೆ. ಎಲ್ಲಾ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ: Yathindra siddaramaiah : ಪುತ್ರನಿಗೆ ರಾಜಕೀಯ ಆಶ್ರಯ ನೀಡಿದ ಸಿದ್ದರಾಮಯ್ಯ; ಎರಡು ಹುದ್ದೆಗೆ ಯತೀಂದ್ರ ನೇಮಕ

ಗೃಹಲಕ್ಷ್ಮೀ ದೇಶದಲ್ಲಿಯೇ ದೊಡ್ಡ ಕಾರ್ಯಕ್ರಮ

ʻʻಗೃಹಲಕ್ಷ್ಮಿ ಯೋಜನೆ ದೇಶದಲ್ಲಿಯೇ ಇದು ದೊಡ್ಡ ಕಾರ್ಯಕ್ರಮ. ವರ್ಷದಲ್ಲಿ ಸುಮಾರು 32 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಈ ವರ್ಷ ಸುಮಾರು 18 ಸಾವಿರ ಕೋಟಿ ರೂ.ಗಳು ವೆಚ್ಚವಾಗಲಿದೆ. 1.33 ಕೋಟಿ ಲಕ್ಷ ಕುಟುಂಬಗಳ ಯಜಮಾನಿಗೆ 2000 ರೂ. ನೀಡಲಾಗುತ್ತಿದೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದ ಒಂದು ತಿಂಗಳಿಗೆ 4-5 ಸಾವಿರ ರೂ.ಗಳು ಒಂದು ಕುಟುಂಬಕ್ಕೆ ದೊರೆಯಲಿದೆ. ಇದರಿಂದ ಅವರ ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚುತ್ತದೆ. ಅವರ ಕೈಯಲ್ಲಿ ದುಡ್ಡು ಇರುವುದರಿಂದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ಎಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಿರುತ್ತದೆಯೋ ಅಲ್ಲಿ ಜಿಡಿಪಿ ಕೂಡ ಬೆಳವಣಿಗೆ ಆಗುತ್ತದೆ ವರ್ಷಕ್ಕೆ
ಉದ್ಯೋಗ ಸೃಷ್ಟಿಯೂ ಆಗುತ್ತದೆʼʼ ಎಂದರು ಸಿದ್ದರಾಮಯ್ಯ.

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲಾ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ಜಾರಿಯಾಗಲಿದೆ. ಬೆಳಗಾವಿಗೆ ಬದಲಾಗಿ ಮೈಸೂರಿನಲ್ಲಿ ಏರ್ಪಾಡಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

Exit mobile version