Site icon Vistara News

Drown in lake: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಮಕ್ಕಳ ಸಾವು

children drown in lake

ಹಾಸನ: ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಮಕ್ಕಳು ಮೃತಪಟ್ಟಿರುವ ಘಟನೆ (Drown in lake) ಜಿಲ್ಲೆಯ ಬೇಲೂರು ತಾಲೂಕಿನ ನರಸಿಪುರ ಭೋವಿ ಕಾಲೋನಿಯಲ್ಲಿ ನಡೆದಿದೆ. ದೀಕ್ಷಾ(10), ನಿತ್ಯ(12), ಕುಸುಮ (8) ಮೃತರು. ಮೃತರೆಲ್ಲರೂ ಒಂದೇ ಮನೆಯ ಮಕ್ಕಳಾಗಿದ್ದಾರೆ.

ಕುಸಿದು ಬಿದ್ದ ಮನೆಯ ಚಾವಣಿ; ಮಣ್ಣಿನಡಿ ಸಿಲುಕಿ ಮಕ್ಕಳಿಬ್ಬರು ಸಾವು

ಬಾಗಲಕೋಟೆ: ಮನೆಯ ಚಾವಣಿ ಕುಸಿದ ಪರಿಣಾಮ ಇಬ್ಬರು ಮಕ್ಕಳು ದಾರುಣವಾಗಿ (Rooftop collapse) ಮೃತಪಟ್ಟಿದ್ದಾರೆ. ಬಾಗಲಕೋಟೆಯ ಕಂದಗಲ್ಲ ಗ್ರಾಮದಲ್ಲಿ ಘಟನೆ ನಡೆದಿದೆ. ಗೀತಾ ಈಶ್ವರಯ್ಯಾ ಆದಾರಪುರಮಠ (15), ರುದ್ರಯ್ಯಾ ಈಶ್ವರಯ್ಯಾ ಆದಾಪುರಮಠ (10) ಮೃತ ದುರ್ದೈವಿಗಳು.

40-50 ವರ್ಷಗಳಷ್ಟು ಹಳೆಯ ಮನೆಗೆ ಮಣ್ಣಿನ ಚಾವಣಿ ಇತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮನೆ ಸೋರಿಕೆಯಾಗಿತ್ತು. ಈ ವೇಳೆ ಚಾವಣಿಗೆ ಮಣ್ಣು ಹಾಕಿ ತಟ್ಟಿ ಸರಿಮಾಡಿಕೊಂಡಿದ್ದರು. ಆದರೆ ಶುಕ್ರವಾರ ಏಕಾಏಕಿ ಮನೆ ಚಾವಣಿ ಕುಸಿದಿದೆ. ಮನೆಯೊಳಗೆ ಇದ್ದ ಮಕ್ಕಳಿಬ್ಬರ ಮೇಲೆ ರಭಸವಾಗಿ ಮಣ್ಣು ಬಿದ್ದಿದೆ.

ಈ ದುರ್ಘಟನೆ ನಡೆದಾಗ ಮನೆಯಲ್ಲಿ ಮಕ್ಕಳ ತಂದೆ-ತಾಯಿ ಇರಲಿಲ್ಲ. ಮಕ್ಕಳ ಮೇಲೆ ಚಾವಣಿ ಬಿದ್ದ ಪರಿಣಾಮ ಹೊರಬರಲು ಆಗದೆ ಮಣ್ಣಲ್ಲಿ ಸಿಲುಕಿದ್ದಾರೆ. ಇತ್ತ ಕೂಡಲೇ ಸ್ಥಳೀಯರ ಸಹಾಯದಿಂದ ಮಕ್ಕಳನ್ನು ಹೊರತೆಗೆಯಲಾಯಿತು. ಇಳಕಲ್ಲ ತಾಲ್ಲೂಕಾಸ್ಪತ್ರೆಗೆ ಸಾಗಿಸಲಾಯಿತಾದರೂ ಮಕ್ಕಳಿಬ್ಬರು ಬದುಕುಳಿಯಲಿಲ್ಲ.

ಇದನ್ನೂ ಓದಿ: Viral Video: ತನ್ನಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ಯುವತಿಯ ಅಪಹರಣಕ್ಕೆ ಯತ್ನ; ಕತ್ತಿ ಝಳಪಿಸಿ ಕಿಡಿಗೇಡಿಯ ಅಟ್ಟಹಾಸ-ವಿಡಿಯೋ ಇದೆ

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆಸ್ಪತ್ರೆಗೆ ಶಾಸಕ ವಿಜಯಾನಂದ ಕಾಶಪ್ಪನರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಳೆದು ನಿಂತ ಮಕ್ಕಳನ್ನು ಕಳೆದುಕೊಂಡಿದ್ದಕ್ಕೆ ಕಣ್ಣೀರು ಹಾಕಿದರು. ಬಾಗಲಕೋಟೆಯ ಇಳಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಈ ದುರಂತ ನಡೆದಿದೆ.

ಹುಲಿಗೆಮ್ಮ ದೇವಿ ಜಾತ್ರೆಗೆ ಹೊರಟಿದ್ದ ಪಾದಯಾತ್ರಿ ಮೇಲೆ ಹರಿದ ಲಾರಿ; ಓರ್ವ ಸಾವು, ಮತ್ತೋರ್ವ ಗಂಭೀರ

ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರೆ (Huligemma Temple) ನಿಮಿತ್ತ ಪಾದಯಾತ್ರೆ ಕೈಗೊಂಡಿದ್ದ ಭಕ್ತರ ಮೇಲೆ ಲಾರಿಯೊಂದು (Lorry Hit) ಹರಿದಿದೆ. ಪಾದಯಾತ್ರೆ ಹೊರಟಿದ್ದವರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ಓರ್ವ ಭಕ್ತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಕೊಪ್ಪಳ ತಾಲೂಕಿನ ಕೆರಳ್ಳಿ ಫ್ಲೈಓವರ್ ಬಳಿ ಘಟನೆ ನಡೆದಿದೆ. ಯಮನೂರಪ್ಪ ಸಣ್ಣಮನಿ (34) ಮೃತ ದುರ್ದೈವಿ. ಯಮನೂರಪ್ಪ ಬಾಗಲಕೋಟಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಆಗಿದ್ದಾರೆ. ಯಮನೂರಪ್ಪ ಹಾಗೂ ಮಹಾಂತೇಶ್‌ ಹುಲಿಗೆಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ದೇವಸ್ಥಾನಕ್ಕೆ ಹೊರಟ್ಟಿದ್ದರು.

ಈ ವೇಳೆ ಹಿಂಬದಿಯಿಂದ ಬಂದ ಲಾರಿಯು ಪಾದಯಾತ್ರಿಗಳಿಗೆ ಡಿಕ್ಕಿ ಹೊಡೆದಿದೆ. ಯಮನೂರಪ್ಪ ಮೇಲೆ ಲಾರಿ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟರೆ, ಮಹಾಂತೇಶ್‌ ಫ್ಲೈಓವರ್‌ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಬಿದ್ದ ರಭಸಕ್ಕೆ ಅವರ ಕಾಲಿನ ಪಾದವೇ ತುಂಡಾಗಿ ಬಿದ್ದಿತ್ತು. ಸದ್ಯ ಸಾವು- ಬದುಕಿನ ಮಧ್ಯೆ ಹೋರಾಡುತ್ತಿರುವ ಗಾಯಾಳು ಮಹಾಂತೇಶ್‌ನನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Kukke Subramanya: ಹೊಳೆ ಉಕ್ಕಿ ಹರಿದು ಕೊಚ್ಚಿ ಹೋದ ಪಿಕ್ಅಪ್ ವಾಹನ; ಚಾಲಕನ ರಕ್ಷಣೆ

ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

Exit mobile version