ಧಾರವಾಡ: ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರುವ (Drown in Quarry) ಘಟನೆ ತಾಲೂಕಿನ ಮನಸೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿಯ ಶ್ರೇಯಸ್ ಸೇರಿ ಇಬ್ಬರು ಮೃತರು. ಶ್ರೇಯಸ್ ಮೃತದೇಹ ಸಿಕ್ಕಿದ್ದು, ಮತ್ತೊಬ್ಬನ ದೇಹಕ್ಕೆ ಹುಡುಕಾಟ ನಡೆಸಲಾಗುತ್ತಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿದ್ಯುತ್ ತಗುಲಿ ಯುವಕ ಸಾವು
ಮಂಗಳೂರು: ವಿದ್ಯುತ್ ಕಂಬ ಏರಿ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಅವಘಡ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್‌ನ ಪ್ರಕಾಶ್ (29) ಮೃತ.
ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್‌ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ಮಾಡುತ್ತಿದ್ದಾಗ ಯುವಕನಿಗೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!
ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ
ಬೆಳಗಾವಿ: ಕಾರೊಂದು ಹರಿದ ಪರಿಣಾಮ (Road Accident) ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವಿನಯ್ ಲಕ್ಷ್ಮಣ ಕೆಂಚನ್ನವರ್(8) ಮೃತ ದುರ್ದೈವಿ.
ಅಂದಹಾಗೇ ವಿನಯ್ ನಾಗನೂರು ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿನಯ್ ತೀವ್ರ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ. ಇತ್ತ ಅಪಘಾತವಾಗುತ್ತಿದ್ದಂತೆ ಕಾರು ಚಾಲಕನೇ ಬಾಲಕನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ.
ಇದನ್ನೂ ಓದಿ | Road Accident : ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ
ಆದರೆ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿದ್ದಾಗಿ ಖಚಿತ ಪಡಿಸಿದ್ದಾರೆ. ಬಳಿಕ ಆಸ್ಪತ್ರೆಯಿಂದ ಚಾಲಕ ನೇರ ಠಾಣೆಗೆ ಹಾಜರಾಗಿದ್ದಾನೆ. ಸದ್ಯ ಬಾಲಕನ ಮೃತದೇಹವು ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.