Site icon Vistara News

Drown In River: ನೇತ್ರಾವತಿ ನದಿಯಲ್ಲಿ‌ ಈಜಲು ಹೋದ ಯುವಕ‌ ನೀರುಪಾಲು

Drown in River

ಮಂಗಳೂರು: ಈಜಲು ಹೋದ ಯುವಕ‌ ನೇತ್ರಾವತಿ ನದಿಯಲ್ಲಿ‌ ಮುಳುಗಿ ಮೃತಪಟ್ಟಿರುವ ಘಟನೆ ಬಂಟ್ವಾಳದ ಶಂಭೂರು ಬಳಿಯ ನೇತ್ರಾವತಿ ನದಿಯಲ್ಲಿ ನಡೆದಿದೆ. ಸ್ಥಳೀಯ ಮೂವರು ಯುವಕರು ಈಜಲು ನದಿಗೆ ತೆರಳಿದ್ದರು. ಈ ವೇಳೆ ಒಬ್ಬ ಯುವಕ ನೀರಲ್ಲಿ ಮುಳುಗಿ‌ ಮೃತಪಟ್ಟಿದ್ದು, ಇಬ್ಬರನ್ನು ಸ್ಥಳೀಯ ನಿವಾಸಿ ಮೊಹಮ್ಮದ್ ಎಂಬುವವರರು ರಕ್ಷಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1 ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ

road Accident

ಮಂಗಳೂರು: ಒಂದು ವರ್ಷದ ಮಗುವಿನೊಂದಿಗೆ ನೇತ್ರಾವತಿ ನದಿಗೆ ಹಾರಿ ತಾಯಿ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾರೆ. ಮಂಗಳೂರು (Mangaluru News) ಹೊರವಲಯದ ಅಡ್ಯಾರ್ ಡ್ಯಾಂ ಬಳಿಯ ನೇತ್ರಾವತಿ ನದಿಯಲ್ಲಿ (Netravathi River) ಘಟನೆ ನಡೆದಿದೆ.

ಅಡ್ಯಾರ್ ಪದವು ನಿವಾಸಿ ಚೈತ್ರಾ ಹಾಗೂ ಒಂದು ವರ್ಷದ ಮಗು ದಿಯಾಂಶ್ ಮೃತ ದುರ್ದೈವಿಗಳು. ಇಬ್ಬರ ಮೃತದೇಹಗಳು ಹರೇಕಳ ಸೇತುವೆ ಬಳಿ ಪತ್ತೆಯಾಗಿದೆ. ಗುರುವಾರವಷ್ಟೇ ಚೈತ್ರ ಮಗುವಿನ ಹುಟ್ಟುಹಬ್ಬವನ್ನು ದೇರಳಕಟ್ಟೆಯ ಸೇವಾಶ್ರಮದಲ್ಲಿ ಆಚರಿಸಿದ್ದರು. ನಂತರ ನಿನ್ನೆ ಶುಕ್ರವಾರ ಮಧ್ಯಾಹ್ನದ ನಂತರ ತಾಯಿ-ಮಗು ನಾಪತ್ತೆಯಾಗಿದ್ದರು.

ಇದನ್ನೂ ಓದಿ:Wild Animals Attack : ಕರುಗಳ ಹೊಟ್ಟೆ ಬಗೆದು ಕೊಂದ ಚಿರತೆ; ರೈತರ ಅಟ್ಟಾಡಿಸಿದ ಕರಡಿಗಳು

ಸಂಬಂಧಿಕರು ಮನೆ ಸುತ್ತಮುತ್ತ ಹುಡಕಾಡಿದ್ದರು. ಕಾಣದಿದ್ದಾಗ ಸಾಮಾಜಿಕ ಜಾಲತಾಣದ ಮೂಲಕ ಹುಡುಕಾಟಕ್ಕೆ ಮನವಿ ಮಾಡಿದ್ದರು. ಆದರೆ ಇಂದು ಹರೇಕಳ ಸೇತುವೆ ಸಮೀಪ ತಾಯಿ-ಮಗುವಿನ ಮೃತದೇಹ ಪತ್ತೆಯಾಗಿದೆ. ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಡ್‌ ಕಾನ್ಸ್‌ಟೇಬಲ್‌ ಪ್ರಾಣ ತೆಗೆದ ರೋಡ್‌ ಹಂಪ್‌; ಕಾರು ಅಪಘಾತದಲ್ಲಿ ಚಾಲಕ ಸಾವು

road Accident

ಹಾಸನ: ರೋಡ್‌ ಹಂಪ್‌ ಇರುವುದು ಗೊತ್ತಾಗದೆ ಬೈಕ್‌ನಿಂದ ಹಾರಿ ಬಿದ್ದು (Road Accident) ಹೆಡ್‌ ಕಾನ್ಸ್‌ಟೇಬಲ್‌ (Head Constable) ದಾರುಣವಾಗಿ ಮೃತಪಟ್ಟಿದ್ದಾರೆ. ಹಾಸನ (Hasana News) ಜಿಲ್ಲೆಯ ಅರಕಲಗೂಡು ತಾಲೂಕಿನ ಜೋಡಿಗುಬ್ಬಿ ಕ್ರಾಸ್ ಬಳಿ ಘಟನೆ ನಡೆದಿದೆ. ವೆಂಕಟೇಶ್ (55) ಮೃತ ದುರ್ದೈವಿ.

ಕೊಣನೂರು ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್‌ಟೇಬಲ್ ಆಗಿದ್ದ ವೆಂಕಟೇಶ್ ಅವರು ಸಮನ್ಸ್ ನೀಡಿ ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ವಾಪಾಸ್ಸಾಗುತ್ತಿದ್ದರು. ಜೋಡಿಗುಬ್ಬಿ ಕ್ರಾಸ್‌ನಲ್ಲಿ ಹಂಪ್ಸ್‌ ಕಾಣದೆ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದೆ. ಗಂಭೀರ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Road Accident: ನಿಂತಿದ್ದ ಟ್ರಕ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

Exit mobile version