Site icon Vistara News

Drowned in Lake: ಈಜಾಡಲು ಹೋಗಿದ್ದ ಇಬ್ಬರು ಕುರಿಗಾಹಿ ಯುವಕರು ನೀರಿನಲ್ಲಿ ಮುಳುಗಿ ಸಾವು

Drowned in Lake updates Two shepherd youths drown while swimming

ದಾವಣಗೆರೆ: ಈಜಾಡಲು ಹೋಗಿದ್ದ ಇಬ್ಬರು ಕುರಿಗಾಹಿ ಯುವಕರು ನೀರಿನಲ್ಲಿ ಮುಳುಗಿ (Drowned in Lake) ಮೃತಪಟ್ಟ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಕೆರೆಯಲ್ಲಿ ನಡೆದಿದೆ.

ಅಲೂರು ಗ್ರಾಮದ ರಾಜು (19), ಚಿಕ್ಕಮಲ್ಲನಹೊಳೆ ಗ್ರಾಮದ ವಿಜಯ್ (19) ಮೃತ ಯುವಕರು. ಬೇಸಿಗೆ ರಜೆ ಇದ್ದ ಕಾರಣ ಕುರಿ ಮೇಯಿಸಲು ಕೆರೆಯ ಬಳಿ ಬಂದಿದ್ದ ಯುವಕರು, ಬಿಸಿಲು ಜಾಸ್ತಿ ಇದ್ದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಾಡಲು ಹೋಗಿದ್ದಾರೆ.

ಈ ವೇಳೆ ಚೆನ್ನಾಗಿಯೇ ಈಜಾಡುತ್ತಿದ್ದ ರಾಜು ಸುಸ್ತಾಗಿ ನೀರಿನಲ್ಲಿ ಮುಳುಗಳು ಪ್ರಾರಂಭಿಸಿದ್ದಾನೆ. ಹೀಗಾಗಿ ಆತ ರಕ್ಷಣೆಗೆ ಕೂಗಿಕೊಂಡಿದ್ದಾನೆ. ಸ್ನೇಹಿತನಿಗೆ ತೊಂದರೆಯಾಗಿರುವುದನ್ನು ಗಮನಿಸಿದ ವಿಜಯ್‌ ಆತನನ್ನು ಕಾಪಾಡುವ ಸಂಬಂಧ ಸಮೀಪ ಹೋಗಿದ್ದಾನೆ. ಆದರೆ, ಈ ವೇಳೆ ಆತನಿಂದ ರಾಜುವಿನ ರಕ್ಷಣೆ ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Suicide case: ನೆರೆಮನೆಯ ಮಹಿಳೆ ಜತೆಗಿನ ಅಕ್ರಮ ಸಂಬಂಧ ಬಹಿರಂಗ; ಮರ್ಯಾದೆಗೆ ಅಂಜಿ ನೇಣು ಬಿಗಿದುಕೊಂಡ ವಿವಾಹಿತ

ಮೊದಲೇ ಭಯದಲ್ಲಿದ್ದ ರಾಜು, ರಕ್ಷಿಸಲು ಬಂದಿದ್ದ ವಿಜಯ್‌ನನ್ನು ಗಟ್ಟಿಯಾಗಿ ಹಿಡಿದು ಕೊಂಡಿದ್ದರಿಂದ ಆತನಿಗೂ ತಪ್ಪಿಸಿಕೊಂಡು ಬರಲಾಗದೆ, ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ಸ್ಥಳೀಯರು ಸ್ಥಳಕ್ಕಾಗಮಿಸಿ ಇಬ್ಬರ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏಪ್ರಿಲ್‌ 1ರಂದು ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೃತಪಟ್ಟಿದ್ದ ಮೂವರು

ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಏಪ್ರಿಲ್‌ 1ರಂದು ಈಜಲು ಹೋದ ಸಂದರ್ಭದಲ್ಲಿ ಇಬ್ಬರು ಯುವತಿರು ಸೇರಿ ಒಬ್ಬ ಯುವಕ ಮುಳುಗಿ (Drowned in Reservoir) ಮೃತಪಟ್ಟಿದ್ದರು. ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಡಿ ಫಾರ್ಮಸಿ ವಿದ್ಯಾರ್ಥಿಗಳಾಗಿದ್ದರು. ರಾಧಿಕಾ, ಪೂಜಾ ಹಾಗೂ ಇಮ್ರಾನ್ ಮೃತರು.

ಬೆಂಗಳೂರಿನಿಂದ ಶ್ರೀನಿವಾಸ ಸಾಗರ ಜಲಾಶಯಕ್ಕೆ ಆರು ಜನರ ತಂಡವು ಪ್ರವಾಸಕ್ಕಾಗಿ ಬಂದಿತ್ತು. ಈ ವೇಳೆ ಜಲಾಶಯದಲ್ಲಿ ಇಳಿದಾಗ ಇವರಲ್ಲಿ ಒಬ್ಬರಿಗೆ ನೀರಿನಲ್ಲಿ ಕಾಲು ಜಾರಿದೆ. ಆಗ ಒಬರನ್ನೊಬ್ಬರು ಮೇಲೆತ್ತಲು ಹೋಗಿ ಈ ಅವಘಡ ಸಂಭವಿಸಿದೆ. ಚನ್ನಾರಾಮ್, ಸುನಿತಾ, ಬಿಕಾಷ್ ಬಚಾವಾಗಿದ್ದಾರೆ. ಇವರೆಲ್ಲರೂ ಬೆಂಗಳೂರಿನ‌ ಸಾರಾಯಿ ಪಾಳ್ಯದ ನಿವಾಸಿಗಳಾಗಿದ್ದಾರೆ.

ಇದನ್ನೂ ಓದಿ: Karnataka: ಜನರಿಗೆ ಕಾನೂನು ಸೇವೆ; ದೇಶದಲ್ಲೇ ಕರ್ನಾಟಕ ನಂ.1, ಟಾಪ್‌ 5 ಪಟ್ಟಿಯಲ್ಲಿ ದಕ್ಷಿಣ ಭಾರತದ 4 ರಾಜ್ಯಗಳು

ಈ ಮೂವರು ಮುಳುಗುತ್ತಿದ್ದಂತೆ ಗಾಬರಿಗೊಂಡ ಉಳಿದ ಮೂವರು ಕೂಡಲೇ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದು ಪೊಲೀಸರು ಶೋಧ ನಡೆಸಿ ಶವಗಳನ್ನು ಮೇಲಕ್ಕೆ ಎತ್ತಿದ್ದಾರೆ.

Exit mobile version