Site icon Vistara News

Drowned in river: ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲು

Neerupalu

#image_title

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿ ದುರ್ಘಟನೆ ಸಂಭವಿಸಿದೆ.

ಮೃತರನ್ನು ಸಂತೋಷ ಬಾಬು ಇಟಗಿ (18), ಅಜಯ್ ಬಾಬು ಜೋರೆ (18), ಕೃಷ್ಣಾ ಬಾಬು ಜೋರೆ(22), ಆನಂದ ಕೋಕರೆ(19) ಎಂದು ಗುರುತಿಸಲಾಗಿದೆ. ಇವರು ನಾಲ್ವರೂ ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದವರು ಎನ್ನಲಾಗಿದೆ.

ಈ ಯುವಕರು ಘಟಪ್ರಭಾದ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಾರ್‌ ಗೆ ರಜೆ ಇದ್ದಿದ್ದರಿಂದ ಅವರು ಈಜಲು ಹೋಗಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಸ್ವಿಫ್ಟ್‌ ಕಾರು-ಕೆಎಸ್ಸಾರ್ಟಿಸಿ ಬಸ್‌ ಅಪಘಾತ; ಕಾರಿನಲ್ಲಿದ್ದ ಆರು ಮಂದಿ ಮೃತ್ಯು

ಮಡಿಕೇರಿ: ಮಡಿಕೇರಿ-ಮಂಗಳೂರು ಹೆದ್ದಾರಿಯ ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಸ್ವಿಫ್ಟ್‌ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಕಾರು

ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರೆ ಬಸ್ಸು ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿತ್ತು. ಕಾರಿನಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದರು.

ಕಾರಿನಲ್ಲಿದ್ದವರೆಲ್ಲ ಮೂಲತಃ ಮಂಡ್ಯ ಜಿಲ್ಲೆಯವರು. ಅವರು ಎಲ್ಲಿಗೆ ಹೋಗುತ್ತಿದ್ದರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ದ.ಕನ್ನಡ ಜಿಲ್ಲೆಯ ಸುಳ್ಯ ಕೆವಿಜಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ : Karnataka Election: ಪಕ್ಷ ಬಿಟ್ಟಿದ್ದು ದುಃಖವಾಗಿದೆ ಎಂದ ಸಿಎಂ ಬೊಮ್ಮಾಯಿ; ನಾನೇನು ಕಣ್ಣೀರು ಒರೆಸಲೇ ಎಂದ ಲಕ್ಷ್ಮಣ ಸವದಿ

Exit mobile version