Site icon Vistara News

Drowned in river: ಆಟವಾಡುತ್ತಾ ಕೆರೆ ಬಳಿ ಹೋದ ಬಾಲಕ; ನೀರಲ್ಲಿ ಮುಳುಗಿ ದಾರುಣ ಸಾವು

Drowned in river

Drowned in river

ಆನೇಕಲ್: ಅಜ್ಜಿ ಮನೆಗೆ ಬಂದಿದ್ದ ನಾಲ್ಕು ವರ್ಷದ ಬಾಲಕನೋರ್ವ ಗೆಳೆಯರೊಂದಿಗೆ ಆಟವಾಡುತ್ತಾ ಆಯತಪ್ಪಿ ಕೆರೆಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ (Drowned in river) ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗಟ್ಟಹಳ್ಳಿ ಕೆರೆಯಲ್ಲಿ ನಡೆದಿದೆ.

ಶೋಧ ಕಾರ್ಯ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ ಅಗ್ನಿಶಾಮಕ ದಳ ಸಿಬ್ಬಂದಿ

ಶಕ್ತಿ (4) ಮೃತ ದುರ್ದೈವಿ. ಪರಪ್ಪನ ಅಗ್ರಹಾರ ಸಮೀಪದ ನಾಗನಾಥಪುರದಲ್ಲಿರುವ ಅಜ್ಜಿ ಮನೆಗೆ ಶಕ್ತಿ ಬಂದಿದ್ದ. ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಾ ಗಟ್ಟಹಳ್ಳಿ ಕೆರೆ ಸಮೀಪ ಬಂದಿದ್ದ. ಈ ವೇಳೆ ಆಯತಪ್ಪಿ ಕೆರೆಗೆ ಬಿದ್ದಿದ್ದಾನೆ. ಕೆರೆಯಲ್ಲಿ ಗಿಡಗಂಟೆಗಳು ಹೆಚ್ಚಾಗಿ ಬೆಳೆದಿದ್ದರಿಂದ ಹೊರಗೆ ಬರಲು ಆಗದೆ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 24 ಗಂಟೆಗಳ ಕಾಲ ನಿರಂತರ ಶೋಧ ಕಾರ್ಯ ನಡೆಸಿ ಬಾಲಕನ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಇತ್ತ ಬಾಲಕನ ಮೃತದೇಹವನ್ನು ಕಂಡ ಕೂಡಲೇ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.

ಇದನ್ನೂ ಓದಿ: Weather Report : ರಾಜ್ಯದಲ್ಲಿ ದುರ್ಬಲಗೊಂಡ ಮೋಚಾ; ಈ ಜಿಲ್ಲೆಗಳಿಗಷ್ಟೆ ಮಳೆ ಸೀಮಿತ

ಸದ್ಯ, ಮರಣೋತ್ತರ ಪರೀಕ್ಷೆಗಾಗಿ ಬಾಲಕನ ಮೃತ ದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version